logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Covid News: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ, ಈ ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid News: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ, ಈ ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Praveen Chandra B HT Kannada

Apr 09, 2023 10:35 AM IST

google News

Covid News: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ, ಈ 3 ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

  • ದೇಶದ ವಿವಿಧೆಡೆ ಕೋವಿಡ್‌ 19 ಪ್ರಕರಣಗಳು (rapid spike in Covid cases ) ಹೆಚ್ಚುತ್ತಿವೆ. ಇದೇ ಕಾರಣಕ್ಕೆ ಕೇರಳ, ಪಾಂಡಿಚೇರಿ ಮತ್ತು ಹರ್ಯಾಣದಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

Covid News: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ, ಈ 3 ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ
Covid News: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ, ಈ 3 ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ (PTI)

ನವದೆಹಲಿ: ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್‌ 19 ಪ್ರಕರಣಗಳು ಹೆಚ್ಚಾಗುತ್ತಿದೆ. ಹಲವು ರಾಜ್ಯಗಳು ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸಿವೆ. ಕೆಲವೊಂದು ರಾಜ್ಯಗಳು ಈಗಾಗಲೇ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿವೆ.

ಭಾರತವು ಭಾನುವಾರ 5,357 ಹೊಸ ಕೊರೊನಾ ಸೋಂಕುಗಳು ದಾಖಲಾಗಿದೆ. ಇದು ಶನಿವಾರದ ಅಂಕಿಅಂಶಗಳಿಂದ ಸ್ವಲ್ಪ ಕಡಿಮೆ. ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 44,756,616 ಕ್ಕೆ ತಲುಪಿದೆ. ಶನಿವಾರ 6,155 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿತ್ತು. ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ 32,814 ಸಕ್ರಿಯ ಕೋವಿಡ್‌ ಸೋಂಕುಗಳು ಇವೆ. ಕಳೆದ 24 ಗಂಟೆಗಳಲ್ಲಿ 11 ಸಾವು ದಾಖಲಾಗಿದ್ದು, ಸಾವಿನ ಸಂಖ್ಯೆ 53,09,65 ಕ್ಕೆ ತಲುಪಿದೆ. ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ.

ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದರು. ಕೋವಿಡ್ ಪ್ರಕರಣಗಳ ಉಲ್ಬಣವನ್ನು ನಿಭಾಯಿಸುವಲ್ಲಿ ಅವರ ಸನ್ನದ್ಧತೆಯನ್ನು ನಿರ್ಣಯಿಸಲು ಏಪ್ರಿಲ್ 10 ಮತ್ತು 11 ರಂದು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ ನಡೆಸುವಂತೆ ಸೂಚಿಸಿದ್ದಾರೆ.

ಕೇರಳ

ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವುದರಿಂದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಕೋವಿಡ್‌ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದಾರೆ. ಗರ್ಭಿಣಿಯರು, ವೃದ್ಧರು ಮತ್ತು ಜೀವನಶೈಲಿ ಕಾಯಿಲೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವುದಾಗಿ ಅವರು ಶನಿವಾರ ಘೋಷಿಸಿದ್ದಾರೆ. ಕೇರಳದಲ್ಲಿ ಶನಿವಾರ 1,801 ಕೋವಿಡ್ ಪ್ರಕರಣಗಳು ವರದಿಯಾಗಿವೆ. 60 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಮತ್ತು ಮಧುಮೇಹದಂತಹ ಜೀವನಶೈಲಿ ಕಾಯಿಲೆ ಇರುವವರಲ್ಲಿ ಕೋವಿಡ್‌ ಸಂಬಂಧಿತ ಸಾವು ಪ್ರಕರಣಗಳು ಹೆಚ್ಚುತ್ತಿವೆ ಎಂದು ಅವರು ಹೇಳಿದ್ದಾರೆ.

ಹರ್ಯಾಣ

ಹರ್ಯಾಣ ಸರಕಾರವು ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ ನೂರು ಜನರಿಗಿಂತ ಹೆಚ್ಚು ಜನರು ಸೇರುವಲ್ಲಿ, ಸರಕಾರಿ ಕಚೇರಿಗಳಲ್ಲಿ, ಮಾಲ್‌ ಮುಂತಾದ ಕಡೆ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಹರ್ಯಾಣದಲ್ಲಿ 407 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಜನರು ಕಡ್ಡಾಯವಾಗಿ ಕೊರೊನಾ ನಿಯಂತ್ರಣ ಮಾರ್ಗಸೂಚಿ ಮತ್ತು ಜೀವನಶೈಲಿಯನ್ನು ಅನುಸರಿಸುವಂತೆ ಸೂಚಿಸಿದೆ.

ಪಾಂಡಿಚೇರಿ

ಇಲ್ಲಿನ ಸರಕಾರವು ಬೀಚ್‌ ರಸ್ತೆ, ಪಾರ್ಕ್‌ಗಳು, ಸಿನಿಮಾ ಥಿಯೇಟರ್‌ ಇತ್ಯಾದಿ ಸ್ಥಳಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಆಸ್ಪತ್ರೆಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಮದ್ಯದ ಅಂಗಡಿಗಳು, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳು, ಸರ್ಕಾರಿ ಕಚೇರಿಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿದೆ.

ಎಲ್ಲಾ ಶಿಕ್ಷಣ ಸಂಸ್ಥೆಗಳು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್‌ಗಳನ್ನು (ಎಸ್‌ಒಪಿ) ಸೂಕ್ಷ್ಮವಾಗಿ ಅನುಸರಿಸಲು ಮತ್ತು ಶೇಕಡಾವಾರು ವ್ಯಾಕ್ಸಿನೇಷನ್ ಅನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿದೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ