logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Maharashtra Politics: ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್‌ ಚೌಹಾಣ್‌ ಕಾಂಗ್ರೆಸ್‌ಗೆ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ

Maharashtra Politics: ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್‌ ಚೌಹಾಣ್‌ ಕಾಂಗ್ರೆಸ್‌ಗೆ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ

HT Kannada Desk HT Kannada

Feb 12, 2024 03:51 PM IST

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್‌ ಚೌಹಾಣ್‌ ಕಾಂಗ್ರೆಸ್‌ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    • ಮಹಾರಾಷ್ಟ್ರ ಕಾಂಗ್ರೆಸ್‌ನಲ್ಲಿ ಸಾಲು ಸಾಲು ನಾಯಕರು ಅನ್ಯಪಕ್ಷಗಳಿಗೆ ವಲಸೆ ಹೋಗುತ್ತಿದ್ದಾರೆ. ಈಗ ಮಾಜಿ ಸಿಎಂ ಅಶೋಕ್‌ ಚೌಹಾಣ್‌ ಸರದಿ. ಅಶೋಕ್‌ ಬಿಜೆಪಿ ಸೇರುವ ಸಾಧ್ಯತೆ ದಟ್ಟವಾಗಿದೆ.
ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್‌ ಚೌಹಾಣ್‌ ಕಾಂಗ್ರೆಸ್‌ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್‌ ಚೌಹಾಣ್‌ ಕಾಂಗ್ರೆಸ್‌ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. (PTI)

ಮುಂಬೈ: ತಿಂಗಳ ಹಿಂದೆಯಷ್ಟೇ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ನಾಯಕ ಮಿಲಿಂದ್‌ ದಿಯೋರಾ ಪಕ್ಷ ತೊರೆದು ಶಿಂದೆ ಬಣದ ಶಿವಸೇನೆ ಸೇರಿದ್ದರು. ಈಗ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್‌ ಚೌಹಾಣ್‌ ಕೂಡ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಶಾಸಕ ಸ್ಥಾನಕ್ಕೂ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಮುಂದಿನ ಎಂಟು ತಿಂಗಳಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುಂಚೆಯೇ ಶಾಸಕ ಸ್ಥಾನ ತೊರೆದಿದ್ದಾರೆ. ಬಿಜೆಪಿ ಸೇರಿ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ.

ಟ್ರೆಂಡಿಂಗ್​ ಸುದ್ದಿ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

Gold Rate Today: ವಾರಾಂತ್ಯದಲ್ಲಿ ತುಸು ಇಳಿಕೆಯಾದ ಹಳದಿ ಲೋಹದ ಬೆಲೆ; ಶನಿವಾರ ಬೆಳ್ಳಿ ದರ ತಟಸ್ಥ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಭೋಕರ್‌ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದ ಚೌಹಾಣ್‌ ಅವರು ಸೋಮವಾರ ಬೆಳಿಗ್ಗೆಯೇ ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅಲ್ಲದೇ ಕಾಂಗ್ರೆಸ್‌ ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದರು.

ಕಾಂಗ್ರೆಸ್‌ ಹಿನ್ನೆಲೆಯ ಕುಟುಂಬದಿಂದಲೇ ಬಂದಿರುವ ಅಶೋಕ್‌ ಚೌಹಾಣ್‌ ಅವರು ಮುಂಬರುವ ವಿಧಾನಸಭೆ ಚುನಾವಣೆಗೆ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಪಕ್ಷದ ಮಹಾರಾಷ್ಟ್ರ ಘಟಕದ ಅಧ್ಯಕ್ಷ ನಾನಾ ಪಾಟೋಲೆ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದರು. ಇದನ್ನು ಪಕ್ಷದ ವರಿಷ್ಠರ ಗಮನಕ್ಕೂ ತಂದಿದ್ದರು. ಆದರೆ ನಾಯಕರಿಗೆ ಸ್ಪಂದನೆ ಸಿಗದೇ ಇದ್ದಾಗ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.

ಇವರ ತಂದೆ ಶಂಕರರಾವ್‌ ಚೌಹಾಣ್‌ ಕೂಡ ಮುಖ್ಯಮಂತ್ರಿಯಾಗಿದ್ದರು. ವಿದ್ಯಾರ್ಥಿ ದೆಸೆಯಿಂದಲೂ ಕಾಂಗ್ರೆಸ್‌ನಲ್ಲಿಯೇ ಸಕ್ರಿಯವಾಗಿದ್ದ ಅಶೋಕ್‌ ಚೌಹಾಣ್‌ ಈ ಹಿಂದೆ ನಾಂದೇಡ್‌ ಸಂಸದರೂ ಆಗಿದ್ದರು. ವಿಲಾಸ್‌ರಾವ್‌ ದೇಶಮುಖ್‌ ರಾಜೀನಾಮೆ ನೀಡಿದಾಗ 2008 ರಲ್ಲಿ ಅಶೋಕ್‌ ಚೌಹಾಣ್‌ ಅವರನ್ನು ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ ನೇಮಿಸಿತ್ತು. ಮರು ವರ್ಷವೇ ಆದರ್ಶ ಹೌಸಿಂಗ್‌ ಹಗರಣದಲ್ಲಿ ಸಿಲುಕಿದ ಚೌಹಾಣ್‌ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆದರೂ ಪಕ್ಷದಲ್ಲೇ ಮುಂದುವರೆದಿದ್ದರು.

ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಡಿಸಿಎಂ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌, ಅಶೋಕ್‌ ಚೌಹಾಣ್‌ ಅವರು ಬಿಜೆಪಿ ಸೇರುವ ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಹಲವಾರು ಹಿರಿಯ ಕಾಂಗ್ರೆಸ್‌ ನಾಯಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿ ಇದ್ದಾರೆ. ಕಾಂಗ್ರೆಸ್‌ ನಲ್ಲಿ ಉಸಿರುಗಟ್ಟಿಸುವ ವಾತಾವರಣದಿಂದ ಹಲ ನಾಯಕರು ಪಕ್ಷ ಬಿಡುತ್ತಿದ್ದಾರೆ ಎಂದು ಹೇಳಿದರು.

ಪಕ್ಷದಲ್ಲಿ ಎಲ್ಲವನ್ನೂ ಅನುಭವಿಸಿ ಹೊರ ಹೋಗುವವರಿಂದ ಒಳ್ಳೆಯದೇ ಆಗಲಿದೆ. ಹೊಸ ನಾಯಕತ್ವವೂ ಬೆಳೆಯಲಿದೆ. ಹಗರಣದಲ್ಲಿ ಸಿಲುಕಿ ಬಿಜೆಪಿ ಸೇರುವವರು ಅಲ್ಲಿ ಸ್ವಚ್ಛವಾಗಲಿದ್ಧಾರೆ. ಅಶೋಕ್‌ ಚೌಹಾಣ್‌ ಕೂಡ ಅದೇ ಪಟ್ಟಿಗೆ ಸೇರಿದವರು ಎಂದು ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ವ್ಯಂಗ್ಯವಾಡಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ