logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Haryana Assembly Elections: ಹರಿಯಾಣದಲ್ಲಿ ಹಾವು ಏಣಿಯಾಟ, ಕಾಂಗ್ರೆಸ್‌ ಹಿಂದಿಕ್ಕಿ ಮುನ್ನಡೆ ಸಾಧಿಸಿದ ಬಿಜೆಪಿ, ಹ್ಯಾಟ್ರಿಕ್‌ನತ್ತ ಹೆಜ್ಜೆ

Haryana Assembly Elections: ಹರಿಯಾಣದಲ್ಲಿ ಹಾವು ಏಣಿಯಾಟ, ಕಾಂಗ್ರೆಸ್‌ ಹಿಂದಿಕ್ಕಿ ಮುನ್ನಡೆ ಸಾಧಿಸಿದ ಬಿಜೆಪಿ, ಹ್ಯಾಟ್ರಿಕ್‌ನತ್ತ ಹೆಜ್ಜೆ

Umesha Bhatta P H HT Kannada

Oct 08, 2024 02:29 PM IST

google News

ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆದಿದ್ದು. ಫಲಿತಾಂಶ ಕುತೂಹಲ ಮೂಡಿಸಿದೆ,

    • Haryana Assembly Elections ಹರಿಯಾಣ ವಿಧಾನಸಭೆಗೆ ನಡೆದಿದ್ದ ಚುನಾವಣೆ ಫಲಿತಾಂಶ ಬಾಕಿ ಇದ್ದರೂ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತುರುಸಿನ ಸ್ಪರ್ಧೆ ಕಂಡು ಬಂದಿದೆ. ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದರೂ ಈಗ ಬಿಜೆಪಿ ಕೆಲವು ಕ್ಷೇತ್ರದಲ್ಲಿ ಹೆಚ್ಚು ಮತ ಪಡೆದು ಮುನ್ನಡೆ ಕಾಯ್ದುಕೊಂಡಿದೆ.
ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆದಿದ್ದು. ಫಲಿತಾಂಶ ಕುತೂಹಲ ಮೂಡಿಸಿದೆ,
ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆದಿದ್ದು. ಫಲಿತಾಂಶ ಕುತೂಹಲ ಮೂಡಿಸಿದೆ,

ಚಂಡೀಗಢ: ಒಮ್ಮೆ ಕಾಂಗ್ರೆಸ್‌, ಮತ್ತೊಮ್ಮೆ ಬಿಜೆಪಿ.. ಎರಡು ಪಕ್ಷದವರ ಸಂಭ್ರಮ, ಕೊನೆಗೆ ಯಾರಿಗೆ ಅಧಿಕಾರದ ಚುಕ್ಕಾಣಿ ಎನ್ನುವ ಕ್ಷಣ ಕ್ಷಣದ ಕುತೂಹಲ ಇದು ಹರಿಯಾಣ ರಾಜ್ಯ ವಿಧಾನಸಭೆಗೆ ನಡೆದಿರುವ ಚುನಾವಣೆಯ ಮತ ಎಣಿಕೆಯ ಹಾವು ಏಣಿಯಾಟದಂತಹ ಸನ್ನಿವೇಶ. ಇನ್ನೂ ಅಂತಿಮ ಫಲಿತಾಂಶ ಬರುವುದು ಬಾಕಿ ಇರುವ ನಡುವೆ ಈ ಕ್ಷಣದ ಮಾಹಿತಿಯಂತೆ ಬಿಜೆಪಿ ಅರ್ಧಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯುವ ಹಂತಕ್ಕೆ ಬಂದಿದೆ. ಒಟ್ಟು 90 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 50 ರಲ್ಲಿ ಮುನ್ನಡೆ ಕಂಡು ಕಂಡುಕೊಂಡರೆ, ಕಾಂಗ್ರೆಸ್‌ 34 ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ. ಬಹುತೇಕ ಎರಡು ಗಂಟೆ ಕಾಲ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್‌ ಹಲವು ಕ್ಷೇತ್ರದಲ್ಲಿ ಹಿನ್ನಡೆ ಕಂಡಿದೆ. ಬಿಜೆಪಿ ಸತತ ಮೂರನೇ ಬಾರಿಗೆ ಹರಿಯಾಣದಲ್ಲಿ ಅಧಿಕಾರ ಹಿಡಿಯುವತ್ತ ಹೆಜ್ಜೆ ಹಾಕಿದೆ. ಆದರೂ ಅಂತಿಮ ಫಲಿತಾಂಶದ ನಂತರವೇ ಚಿತ್ರಣ ಸಿಗಲಿದೆ.

ಬೆಳಿಗ್ಗೆ ಮತ ಎಣಿಕೆ ಶುರುವಾದಾಗಿನಿಂದ ಬಹುತೇಕ ಹೆಚ್ಚಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿತ್ತು. ಅರ್ಧಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಹೊಂದಿತ್ತು. ದೆಹಲಿಯ ಕಾಂಗ್ರೆಸ್‌ ಕಚೇರಿಯಲ್ಲಿ ಸಂಭ್ರಮಾಚರಣೆಯೂ ನಡೆದಿತ್ತು. ಅಲ್ಲದೇ ಎರಡು ದಿನದ ಹಿಂದೆ ಪ್ರಕಟವಾಗಿದ್ದ ಚುನಾವಣೋತ್ತರ ಸಮೀಕ್ಷೆಯಲ್ಲೂ ಕಾಂಗ್ರೆಸ್‌ ಅಧಿಕಾರ ಹಿಡಿಯುವ ಮುನ್ಸೂಚನೆಯಿತ್ತು. ಆದರೆ ಮತ ಎಣಿಕೆಯ ಪ್ರಕ್ರಿಯೆ ನಡುವೆಯೇ ಲೀಡ್‌ಗಳಲ್ಲಿ ವ್ಯತ್ಯಾಸ ಕಂಡು ಬಂದು ಬಿಜೆಪಿ ಮುನ್ನಡೆ ಸಾಧಿಸಿತು. ಕಾಂಗ್ರೆಸ್‌ ಸ್ಥಾನಗಳಲ್ಲಿ ಕುಸಿತ ಕಂಡು ಬಂದು ಹಿನ್ನಡೆ ಆಗಿರುವುದು ಕಂಡು ಬಂದಿತು.

ಹರ್ಯಾಣದಲ್ಲಿ ಕಾಂಗ್ರೆಸ್‌ ಗೆಲುವಿನ ಮುಂಚೂಣಿಯಲ್ಲಿದ್ದು, ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸುತ್ತಿದೆ ಎಂಬುದನ್ನು ತೋರಿಸುತ್ತಿದೆ. ಬೆಳಗ್ಗೆ2.26 ರ ವೇಳೆಗೆ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 50ರಲ್ಲಿ ಬಿಜೆಪಿ ಮುಂದಿದ್ದು, 34ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಈಗಾಗಲೇ ಎರಡು ಬಾರಿ ಬಿಜೆಪಿ ಹರಿಯಾಣದಲ್ಲಿ ಅಧಿಕಾರದಲ್ಲಿದ್ದು, ಆರು ತಿಂಗಳ ಹಿಂದೆಯಷ್ಟೇ ಸಿಎಂ ಬದಲಾಯಿಸಲಾಗಿತ್ತು. ಮನೋಹರ್‌ ಖಟ್ಟರ್‌ ಬದಲು ನಯಾಬ್‌ ಸಿಂಗ್‌ ಸೈನಿ ಸಿಎಂ ಆಗಿದ್ದರು. ಹರಿಯಾಣದಲ್ಲಿ ಆಡಳಿತ ವಿರೋಧಿ ಅಲೆ ಇದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಎಕ್ಸಿಟ್‌ ಪೋಲ್‌ ಕೂಡ ಇದನ್ನೇ ಬಿಂಬಿಸಿದ್ದರು. ಇದರ ನಡುವೆ ಫಲಿತಾಂಶದಲ್ಲಿ ಬದಲಾವಣೆ ಕಂಡು ಬಂದಿದ್ದು. ಮತ್ತೆ ಬಿಜೆಪಿ ಅಧಿಕಾರ ಹಿಡಿಯಬಹುದು ಎನ್ನಲಾಗುತ್ತಿದೆ.

ಮತ ಎಣಿಕೆ ಆರಂಭವಾಗುವ ಮುನ್ನವೇ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಸಂಭ್ರಮಾಚರಣೆ ಆರಂಭವಾಗಿದ್ದು, ಪಕ್ಷದ ಬೆಂಬಲಿಗರು ಧೋಲ್ ಬಾರಿಸುತ್ತ ಕುಣಿದು ಕುಪ್ಪಳಿಸುತ್ತಿದ್ದರೆ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಹರಿಯಾಣದಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ನಡುವೆ ಹಾಲಿ ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ ಸಹಿತ ಹಲವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಕುಸ್ತಿಪಟು ವಿನೇಶ್‌ ಪೋಗಟ್‌ ಕಾಂಗ್ರೆಸ್‌ನಿಂದ ಕಣದಲ್ಲಿದ್ದು ಅವರೂ ಮುನ್ನಡೆ ಸಾಧಿಸಿದ್ದಾರೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ