logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Supreme Court On Jk:ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು, ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌: 9 ತಿಂಗಳೊಳಗೆ ಚುನಾವಣೆ

Supreme court on JK:ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು, ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌: 9 ತಿಂಗಳೊಳಗೆ ಚುನಾವಣೆ

HT Kannada Desk HT Kannada

Dec 11, 2023 12:43 PM IST

ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಐವರು ಸದಸ್ಯರ ಪೀಠದಿಂದ ಅಂತಿಮ ತೀರ್ಪು ಪ್ರಕಟಿಸಲಾಯಿತು.

    • jammu and kashmir issue ಜಮ್ಮು ಮತ್ತು ಕಾಶ್ಮೀರದ ಆಡಳಿತ ವಿಚಾರದಲ್ಲಿ ಇದ್ದ ವಿಶೇಷ ಸ್ಥಾನಮಾನ( Special Status) ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್‌( supreme court) ಸಾಂವಿಧಾನಿಕ ಪೀಠ ಎತ್ತಿ ಹಿಡಿದಿದೆ. ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದು, ಚುನಾವಣೆ ನಡೆಸುವಂತೆ ಆದೇಶಿಸಿದೆ.
ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಐವರು ಸದಸ್ಯರ ಪೀಠದಿಂದ ಅಂತಿಮ ತೀರ್ಪು ಪ್ರಕಟಿಸಲಾಯಿತು.
ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಐವರು ಸದಸ್ಯರ ಪೀಠದಿಂದ ಅಂತಿಮ ತೀರ್ಪು ಪ್ರಕಟಿಸಲಾಯಿತು.

ದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನ ಮಾನ ರದ್ದುಪಡಿಸಿದ್ದ ಕೇಂದ್ರ ಸರ್ಕಾರದ ತೀರ್ಮಾನವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರದ ಭಾಗವಾಗಿದ್ದ ಲಡಾಕ್‌ಗೂ ಚುನಾವಣೆ ನಡೆಸುವಂತೆ ಸೂಚನೆ ನೀಡಿದೆ.

ಟ್ರೆಂಡಿಂಗ್​ ಸುದ್ದಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

SBI FD Rate Hike: ಸ್ಥಿರ ಠೇವಣಿಗಳ ಬಡ್ಡಿದರ ಹೆಚ್ಚಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ; ಎಸ್‌ಬಿಐ ಎಫ್‌ಡಿಗಳ ಬಡ್ಡಿದರ ವಿವರ ಹೀಗಿದೆ

ಸಂವಿಧಾನದ 370 ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನವನ್ನು ಕೇಂದ್ರ ಸರ್ಕಾರ ರದ್ದುಪಡಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳ ವಿಚಾರಣೆ ಸೋಮವಾರ ನಡೆಯಿತು.

ತೀರ್ಪಿನಲ್ಲಿ ಏನಿದೆ

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಡಿ. ವೈ. ಚಂದ್ರಚೂಡ್‌ ನೇತೃತ್ವದಲ್ಲಿ ರಚಿಸಲಾಗಿದ್ದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯನ್ನು 2024 ಸೆಪ್ಟಂಬರ್ 30ರೊಳಗೆ ನಡೆಸುವಂತೆಯೂ ಆದೇಶದಲ್ಲಿ ಉಲ್ಲೇಖಿಸಿದೆ.

ಮುಖ್ಯನ್ಯಾಯಮೂರ್ತಿಗಳ ಜತೆಗೆ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರಿದ್ದ ಪೀಠವು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಹಿಂದೆಯೇ ಆರಂಭಿಸಿತ್ತು. ಕೇಂದ್ರ ಸರ್ಕಾರ, ಅರ್ಜಿದಾರರ ಸಹಿತ ಎಲ್ಲ ಅಭಿಪ್ರಾಯವನ್ನು ಸಾಂವಿಧಾನಿಕ ಪೀಠವು ಆಲಿಸಿತ್ತು. ಅಂತಿಮ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಲಾಗಿತ್ತು.

ಸುಪ್ರೀಂ ಸಮರ್ಥನೆ ಏಕೆ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನದ ಆದೇಶವನ್ನು ರದ್ದು ಮಾಡಿರುವ ಕೇಂದ್ರ ಸರ್ಕಾರದ ಆದೇಶವನ್ನು ನಾವು ಪ್ರಶ್ನೆ ಮಾಡಲು ಆಗುವುದಿಲ್ಲ ಸಂಸತ್ ಮತ್ತು ರಾಷ್ಟ್ರಪತಿ ಅವರು ಮಾತ್ರ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದು. ಜಮ್ಮು ಕಾಶ್ಮೀರಕ್ಕೆ ರಾಷ್ಟ್ರಪತಿಗಳು ಕೈಗೊಂಡಿರುವ 370(3) ಅಡಿಯ ಕ್ರಮ ದುರುದ್ದೇಶಪೂರಿತವಲ್ಲ. 370ನೇ ವಿಧಿ ರದ್ದು ಸುಪ್ರೀಂಕೋರ್ಟ್ ಕ್ರಮ ಸರಿಯಾಗಿದೆ ಎಂದು ನ್ಯಾಯಮೂರ್ತಿಗಳು ತಮ್ಮ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಕೇಂದ್ರ ಸರಕಾರವು ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು 2019ರ ಆಗಸ್ಟ್‌ 5ರಂದು ಹಿಂಪಡೆದಿತ್ತು. ಕಣಿವೆಯಲ್ಲಿ ಭಯೋತ್ಪಾದನೆ ಹತ್ತಿಕ್ಕಲು ಈ ಕ್ರಮದ ಅಗತ್ಯವಿತ್ತು ಎಂದು ಕೇಂದ್ರ ಸರಕಾರ ಸಮರ್ಥಿಸಿಕೊಂಡಿತ್ತು. ಇದಕ್ಕೆ ಪರ ವಿರೋಧದ ಅಭಿಪ್ರಾಯ ವ್ಯಕ್ತವಾಗಿತ್ತು.

ಈಗ ಸುಪ್ರೀಂಕೋರ್ಟ್‌ ತೀರ್ಪಿನ ನಂತರ ಜಮ್ಮು ಕಾಶ್ಮೀರಕ್ಕೆ ಇದ್ದ ಹಲವಾರು ವಿಶೇಷ ಸ್ಥಾನಮಾನದ ಸೌಲಭ್ಯಗಳು ರದ್ದಾಗಲಿವೆ. ಎಲ್ಲಾ ರಾಜ್ಯಗಳಂತೆ ಜಮ್ಮು ಕಾಶ್ಮೀರವೂ ಏಕರೂಪದ ಕಾನೂನು ಹೊಂದಲಿದೆ. ಈಗಾಗಲೇ ಜಮ್ಮು ಕಾಶ್ಮೀರದಲ್ಲಿ ಕೆಲವು ವಿಧಾನಸಭೆ ಕ್ಷೇತ್ರಗಳನ್ನು ಹೆಚ್ಚಿಸಿ ಚುನಾವಣೆ ನಡೆಸುವುದಕ್ಕೆ ಬೇಕಾದ ತಯಾರಿಯನ್ನು ಆಯೋಗ ಮಾಡಿಕೊಂಡಿದೆ. ಲೋಕಸಭೆ ಚುನಾವಣೆಯೊಂದಿಗೆ ವಿಧಾನಸಭೆಗೂ ಚುನಾವಣೆ ನಡೆಯಬಹುದು.

ಲಡಾಖ್‌ ಚುನಾವಣೆ

ಇದೇ ವೇಳೆ ಹಲವಾರು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದ ಭಾಗವಾಗಿದ್ದ ಲಡಾಕ್‌ ಅನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ ಮಾಡಿ ಆದೇಶಿಸಲಾಗಿತ್ತು. ಇದಕ್ಕೂ ಸುಪ್ರೀಂಕೋರ್ಟ್‌ ಅನುಮತಿ ನೀಡಿ ಅಲ್ಲಿಯೂ ಚುನಾವಣೆ ನಡೆಸಲು ಸಿದ್ದತೆ ಮಾಡಿಕೊಳ್ಳಿ ಎಂದು ಕೇಂದ್ರ ಚುನಾವಣೆ ಆಯೋಗಕ್ಕೆ ಐವರು ಸದಸ್ಯರ ಪೀಠವು ಆದೇಶಿಸಿತು.

ಬೊಮ್ಮಾಯಿ ಸ್ವಾಗತ

ಸುಪ್ರೀಂ ಕೋರ್ಟ್ ಇವತ್ತು ನೀಡಿರುವ ಅತ್ಯಂತ ಮಹತ್ವದ ತೀರ್ಪು ಐತಿಹಾಸಿಕವಾಗಿದ್ದು, ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸಾರಿದೆ. ಹಾಗೂ ಕೇಂದ್ರ ಸರ್ಕಾರ ಆರ್ಟಿಕಲ್ 370 ಯನ್ನು ರದ್ದುಪಡಿಸಿರುವುದನ್ನು ಎತ್ತಿ ಹಿಡಿದಿದೆ ಎಂದು ಕರ್ನಾಟಕ ಮಾಜಿ ಸಿಎಂ ಬಿ.ಎಸ್‌.ಬೊಮ್ಮಾಯಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಾನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ದೂರದೃಷ್ಟಿ ಇರುವ ಭಾರತದ ಏಕತೆ ಮತ್ತು ಅಖಂಡತೆ ಎತ್ತಿ ಹಿಡಿಯುವ ದಿಟ್ಟ ನಿರ್ಧಾರ ಮಾಡಿ ಜಮ್ಮು ಕಾರ್ಶಿರದಲ್ಲಿ ಶಾಂತಿ, ನೆಮ್ಮದಿ ಸ್ಥಾಪನೆಗೆ ನಾಂದಿ ಹಾಡಿರುವ ನಿರ್ಣಯಕ್ಕೆ ಸುಪ್ರೀಂ ಕೋರ್ಟ್ ಸಹಮತ ಮುದ್ರೆ ಒತ್ತಿದ್ದು ಮೋದಿ ಸರ್ಕಾರದ ಸಾಧನೆಗೆ ಮತ್ತೊಂದು ಗರಿ ಇಟ್ಟಂತಾಗಿದೆ.‌ ಎಂದು ತಿಳಿಸಿದ್ದಾರೆ.

==========

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ