logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Himachal Pradesh Election: ಇಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ, 30 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳ ನಿಯೋಜನೆ

Himachal pradesh election: ಇಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ, 30 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳ ನಿಯೋಜನೆ

HT Kannada Desk HT Kannada

Nov 25, 2022 01:37 PM IST

google News

Himachal pradesh election: ಇಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ, 30 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳ ನಿಯೋಜನೆ

    • ಹಿಮಾಚಲ ಪ್ರದೇಶದಲ್ಲಿ 7881 ಮತಗಟ್ಟೆಗಳಿದ್ದು, ಇವುಗಳಲ್ಲಿ 980 ಅತಿ ಕಠಿಣ ಮತ್ತು 901 ದುರ್ಬಲ ಮತಗಟ್ಟೆಗಳು ಎಂದು ವರ್ಗೀಕರಿಸಲಾಗಿದೆ. ಚಸ್ಕ್‌ ಭಟೋರಿಯ ಮತಗಟ್ಟೆಗೆ  ಹದಿನಾಲ್ಕು ಕಿ.ಮೀ. ದೂರ ನಡೆದುಕೊಂಡು ಹೋಗಬೇಕು.
Himachal pradesh election: ಇಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ, 30 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳ ನಿಯೋಜನೆ
Himachal pradesh election: ಇಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ, 30 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳ ನಿಯೋಜನೆ (HT_PRINT)

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಜೆಪಿ ಅಧಿಕಾರ ಉಳಿಸಿಕೊಳ್ಳುವತ್ತ ಗಮನ ಹರಿಸಿದೆ. ಇದೇ ಸಮಯದಲ್ಲಿ ಆಡಳಿತ ವಿರೋಧಿ ಅಲೆಯ ನೆರವು ಪಡೆದು ಗೆಲುವು ಪಡೆಯುವ ಕನಸಿನಲ್ಲಿ ಕಾಂಗ್ರೆಸ್‌ ಪಕ್ಷವಿದೆ. ಲೋಕ ಸಭಾ ಚುನಾವಣೆಗೆ ಮುನ್ನುಡಿ ಬರೆಯಲಿರುವ ಈ ಚುನಾವಣೆಯನ್ನು ಸುಗಮವಾಗಿ ನಡೆಸಲು ಚುನಾವಣಾ ಆಯೋಗ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಹಿಮಾಚಲ ಪ್ರದೇಶದ ಚುನಾವಣೆ ಸುಗಮವಾಗಿ ನಡೆಯುವಂತಾಗಲು ಭದ್ರತೆಗಾಗಿ ಸಿಎಪಿಎಫ್‌ನ 67 ತುಕಡಿಗಳು ಮತ್ತು 11, 500 ರಾಜ್ಯ ಪೊಲೀಸ್‌ ಸಿಬ್ಬಂದಿಗಳು ಸೇರಿದಂತೆ 30 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 68 ಅಸೆಂಬ್ಲಿಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣಾ ಕರ್ತವ್ಯಕ್ಕಾಗಿ ಸುಮಾರು 50 ಸಾವಿರ ಸರಕಾರಿ ಉದ್ಯೋಗಿಗಳನ್ನು ನಿಯೋಜಿಸಲಾಗಿದೆ.

ಹಿಮಾಚಲ ಪ್ರದೇಶದಲ್ಲಿ 7881 ಮತಗಟ್ಟೆಗಳಿದ್ದು, ಇವುಗಳಲ್ಲಿ 980 ಅತಿ ಕಠಿಣ ಮತ್ತು 901 ದುರ್ಬಲ ಮತಗಟ್ಟೆಗಳು ಎಂದು ವರ್ಗೀಕರಿಸಲಾಗಿದೆ. ಚಂಬಾ ಜಿಲ್ಲೆಯ ಭರ್ಮೂರ್‌ನ ಚಸ್ಕ್‌ ಭಟೋರಿಯು ಅಂತಹ ಮತಗಟ್ಟೆಗಳಲ್ಲಿ ಒಂದಾಗಿದ್ದು, ಆ ಮತಗಟ್ಟೆಗೆ ಹದಿನಾಲ್ಕು ಕಿ.ಮೀ. ದೂರ ನಡೆದುಕೊಂಡು ಹೋಗಬೇಕು.

ಒಟ್ಟು 55,92,828 ಮತದಾರರು ಮತದಾನದ ಅರ್ಹತೆ ಪಡೆದಿದ್ದಾರೆ. ಇವರಲ್ಲಿ 67,559 ಸೇವಾ ಮತದಾರರು ಮತ್ತು 22 ಎನ್‌ಆರ್‌ಐ ಮತದಾರರಾಗಿದ್ದಾರೆ. ಒಟ್ಟು ಅರ್ಹ ಮತದಾರರಲ್ಲಿ 27,37,845 ಮಹಿಳೆಯರು, 28,54,945 ಪುರುಷರು ಹಾಗೂ 38 ತೃತೀಯ ಲಿಂಗಿ ಮತದಾರರು ಇದ್ದಾರೆ. ಇವರಲ್ಲಿ 1.93 ಲಕ್ಷ ಮತದಾರರ ವಯಸ್ಸು 18-19 ವರ್ಷದವರಾಗಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣೆಯ ಯೋಜನೆಗಳೊಂದಿಗೆ ರಾಜ್ಯ ವಿಪತ್ತು ನಿರ್ವಹಣಾ ಘಟಕಗಳು ಸಿದ್ಧವಾಗಿರಲು ಮುಖ್ಯ ಚುನಾವಣಾಧಿಕಾರಿಗಳು ಸೂಚಿಸಿದ್ದಾರೆ. 800 ಸಿಬ್ಬಂದಿಗಳನ್ನು ಒಳಗೊಂಡ ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (ಎನ್‌ಡಿಆರ್‌ಎಫ್‌) ಮತ್ತು ರಾಜ್ಯ ವಿಪತ್ತು ಪರಿಹಾರ ಪಡೆ (ಎಸ್‌ಡಿಆರ್‌ಎಫ್‌) ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

ಹಿಮಾಚಲ ಪ್ರದೇಶದಲ್ಲಿ ಶನಿವಾರ ಮತದಾನ ನಡೆಯಲಿದ್ದು, 68 ಕ್ಷೇತ್ರಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಮಾಜಿ ಸಿಎಂ ವೀರಭದ್ರ ಸಿಂಗ್ ಪುತ್ರ ವಿಕ್ರಮಾದಿತ್ಯ ಸಿಂಗ್ ಮತ್ತು ಬಿಜೆಪಿಯ ಮಾಜಿ ಮುಖ್ಯಸ್ಥ ಸತ್ಪಾಲ್ ಸಿಂಗ್ ಸತ್ತಿ ಸೇರಿದಂತೆ 412 ಅಭ್ಯರ್ಥಿಗಳ ಭವಿಷ್ಯವನ್ನು 55 ಲಕ್ಷಕ್ಕೂ ಹೆಚ್ಚು ಮತದಾರರು ನಿರ್ಧರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ನೇತೃತ್ವದಲ್ಲಿ ಬಿಜೆಪಿ ಸರಣಿ ಚುನಾವಣಾ ಸಮಾವೇಶಗಳನ್ನು ನಡೆಸಿದೆ. ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ಪಕ್ಷದ ಬಹುತೇಕ ಪ್ರಚಾರ ಸಮಾವೇಶಗಳು ನಡೆದಿವೆ.

ಶನಿವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಗದಿಯಾಗಿದ್ದ ಮತದಾನದಲ್ಲಿ ದೂರದ ಪ್ರದೇಶಗಳಲ್ಲಿ ಮೂರು ಸಹಾಯಕ ಮತಗಟ್ಟೆಗಳು ಸೇರಿದಂತೆ ಒಟ್ಟು 7,884 ಮತಗಟ್ಟೆಗಳನ್ನು ಚುನಾವಣಾ ಆಯೋಗ ಸ್ಥಾಪಿಸಿದೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ