logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Rahul Gandhi:ಯಾವ ಶಕ್ತಿಯಿಂದಲೂ ಭಾರತ್‌ ಜೋಡೋ ಯಾತ್ರೆ ತಡೆಯಲು ಸಾಧ್ಯವಿಲ್ಲ: ಶ್ರೀನಗರ ತಲುಪುವುದು ಖಚಿತ ಎಂದ ರಾಹುಲ್!

Rahul Gandhi:ಯಾವ ಶಕ್ತಿಯಿಂದಲೂ ಭಾರತ್‌ ಜೋಡೋ ಯಾತ್ರೆ ತಡೆಯಲು ಸಾಧ್ಯವಿಲ್ಲ: ಶ್ರೀನಗರ ತಲುಪುವುದು ಖಚಿತ ಎಂದ ರಾಹುಲ್!

HT Kannada Desk HT Kannada

Nov 08, 2022 07:30 AM IST

ರಾಹುಲ್‌ ಗಾಂಧಿ (ಸಂಗ್ರಹ ಚಿತ್ರ)

    • ದೇಶದ ಕೋಮು ಸೌಹಾರ್ದತೆ ಕಾಪಾಡಲು ಕಾಂಗ್ರೆಸ್‌ ಪಕ್ಷ ಹಮ್ಮಿಕೊಂಡಿರುವ ಭಾರತ್‌ ಜೋಡೋ ಯಾತ್ರೆಯನ್ನು, ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಮಹಾರಾಷ್ಟ್ರದ ದೇಗ್ಲೂರ್‌ನಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಭಾರತ್‌ ಜೋಡೋ ಯಾತ್ರೆಯು ಶ್ರೀನಗರ ತಲುಪವುದು ಖಚಿತ ಎಂದು ಘೋಷಿಸಿದರು. ಯಾತ್ರೆಗೆ ಮಹಾರಾಷ್ಟ್ರದಲ್ಲೂ ಬೆಂಬಲ ದೊರೆಯಲಿದೆ ಎಂದು ರಾಹುಲ್‌ ವಿಶ್ವಾಸ ವ್ಯಕ್ತಪಡಿಸಿದರು.
ರಾಹುಲ್‌ ಗಾಂಧಿ (ಸಂಗ್ರಹ ಚಿತ್ರ)
ರಾಹುಲ್‌ ಗಾಂಧಿ (ಸಂಗ್ರಹ ಚಿತ್ರ) (Congress Twitter)

ದೇಗ್ಲೂರ್‌: ದೇಶದ ಕೋಮು ಸೌಹಾರ್ದತೆ ಕಾಪಾಡಲು ಕಾಂಗ್ರೆಸ್‌ ಪಕ್ಷ ಹಮ್ಮಿಕೊಂಡಿರುವ ಭಾರತ್‌ ಜೋಡೋ ಯಾತ್ರೆಯನ್ನು, ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಮಹಾರಾಷ್ಟ್ರದ ದೇಗ್ಲೂರ್‌ನಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಭಾರತ್‌ ಜೋಡೋ ಯಾತ್ರೆಯು ಶ್ರೀನಗರ ತಲುಪವುದು ಖಚಿತ ಎಂದು ಘೋಷಿಸಿದರು.

ಟ್ರೆಂಡಿಂಗ್​ ಸುದ್ದಿ

ಪತಂಜಲಿಯ ಸೋನ್ ಪಾಪಡಿ ಗುಣಮಟ್ಟ ಪರೀಕ್ಷೆ ಫೇಲು; ಬಾಬಾ ರಾಮ್‌ದೇವ್ ಕಂಪನಿಯ ಇಬ್ಬರು ಅಧಿಕಾರಿಗಳ ಬಂಧನ

ತಿರುಮಲ ತಿರುಪತಿ ಶ್ರೀವಾರಿ ಆರ್ಜಿತ ಸೇವಾ ದರ್ಶನ ಟಿಕೆಟ್ ಬಿಡುಗಡೆ, ಆಗಸ್ಟ್‌ ತಿಂಗಳ ಕೋಟಾ ಹಂಚಿಕೆಗೆ ಅರ್ಜಿ ಸಲ್ಲಿಕೆ ಶುರು

Gold Rate Today: ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಎರಡು ತಿಂಗಳ ಹಿಂದೆ ಆರಂಭವಾದ ಭಾರತ್ ಜೋಡೋ ಯಾತ್ರೆಯು, ಯಾವುದೇ ಅಡೆತಡೆಗಳನ್ನು ಲೆಕ್ಕಿಸದೆ ನಿಗದಿತ ರೀತಿಯಲ್ಲಿ ಶ್ರೀನಗರದಲ್ಲಿ ಮುಕ್ತಾಯಗೊಳ್ಳಲಿದೆ. "ಯಾತ್ರೆಯ ಉದ್ದೇಶವು ದೇಶದ ಜನರನ್ನು ಒಟ್ಟುಗೂಡಿಸುವುದು ಮತ್ತು ದೇಶದಲ್ಲಿ ಬಿತ್ತಲಾಗುತ್ತಿರುವ ವಿಭಜನೆ ಮತ್ತು ದ್ವೇಷದ ವಿರುದ್ಧ ಧ್ವನಿ ಎತ್ತುವುದು.." ಎಂದು ರಾಹುಲ್‌ ಗಾಂಧಿ ಸ್ಪಷ್ಟಪಡಿಸಿದರು.

ರೈತರು, ಕಾರ್ಮಿಕರು, ಹಿರಿಯ ನಾಗರಿಕರು, ಮಹಿಳೆಯರು, ಯುವಕರು, ವ್ಯಾಪಾರಿಗಳು, ಹೀಗೆ ಸಮಾಜದ ಎಲ್ಲಾ ವರ್ಗಗಳ ಜನತೆ ಭಾರತ್‌ ಜೋಡೋ ಯಾತ್ರೆಯಲ್ಲಿ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳುತ್ತಿದ್ಧಾರೆ. ನಮ್ಮ ಹೃದಯದ ಬಾಗಿಲು ಸದಾಕಾಲ ಎಲ್ಲರಿಗೂ ತೆರೆದಿರುತ್ತದೆ. ನಾವು ಮಹಾರಾಷ್ಟ್ರದ ಧ್ವನಿ ಮತ್ತು ನೋವನ್ನು ಕೇಳಲು ಬಯಸುತ್ತೇವೆ ಎಂದು ರಾಹುಲ್‌ ಗಾಂಧಿ ನುಡಿದರು.

ಭಾರತದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ. ದೇಶವನ್ನು ಬಾಧಿಸುತ್ತಿರುವ ದುಷ್ಪರಿಣಾಮಗಳಿಗೆ ಪ್ರಧಾನಿ ನರೇಂದ್ರ ಮೋದಿಯವರ ನೋಟು ಅಮಾನ್ಯೀಕರಣ ಪ್ರಮುಖ ಕಾರಣ ಎಂದು ರಾಹುಲ್‌ ಗಾಂಧಿ ಇದೇ ವೇಳೆ ಗಂಭೀರ ಆರೋಪ ಮಾಡಿದರು. "ನೋಟು ನಿಷೇಧದಂತಹ ಪ್ರಧಾನಿ ಮೋದಿಯವರ ದುರ್ಬಲ ನೀತಿಗಳು ನಿರುದ್ಯೋಗ ಮತ್ತು ಹಣದುಬ್ಬರದೊಂದಿಗೆ ಹೋರಾಡುತ್ತಿರುವ ಜನರ ಬೆನ್ನುಹುರಿಯನ್ನು ಮುರಿದಿದೆ" ಎಂದು ರಾಹುಲ್ ಕಿಡಿಕಾರಿದ್ದಾರೆ.

"ಮೊದಲು ಪ್ರಧಾನಿ ಡೀಸೆಲ್ ಮತ್ತು ಪೆಟ್ರೋಲ್ ಬಗ್ಗೆ ಮಾತನಾಡುತ್ತಿದ್ದರು. ಆದರೆ ಈಗ ಇಂಧನ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದ್ದರೂ, ಅವರು ಏನೂ ಮಾತನಾಡುತ್ತಿಲ್ಲ. ಪ್ರಧಾನಿ ಎಲ್ಲಾ ವಿಷಯದಲ್ಲೂ ಮೌನಧಾರಣೆ ಮಾಡಿಕೊಂಡಿರುವುದು ಸರಿಯಲ್ಲ ಎಂದು ರಾಹುಲ್‌ ಗಾಂಧಿ ಇದೇ ವೇಳೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ನಿರುದ್ಯೋಗ, ಹಣದುಬ್ಬರ, ಬೆಲೆ ಏರಿಕೆಯಿಂದ ದೇಶದ ಜನ ತತ್ತರಿಸಿ ಹೋಗಿದ್ದಾರೆ. ಆದರೆ ಈ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ದೇಶದಲ್ಲಿ ಕೋಮು ವಿಷಬೀಜ ಬಿತ್ತಲಾಗುತ್ತಿದೆ. ಆದರೆ ಕೋಮುಗಳ ನಡುವಿನ ಸಂಘರ್ಷಕ್ಕೆ ಕಾಂಗ್ರೆಸ್‌ ಎಂದಿಗೂ ಆಸ್ಪದ ಕೊಡದು. ದೇಶದ ಕೋಮು ಸೌಹಾರ್ದತೆಗಾಗಿ ಹಮ್ಮಿಕೊಂಡಿರುವ ಭಾರತ್‌ ಜೋಡೋ ಯಾತ್ರೆ, ತನ್ನ ಗುರಿಯನ್ನು ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ರಾಹುಲ್‌ ಗಾಂಧಿ ಭರವಸೆ ವ್ಯಕ್ತಪಡಿಸಿದ್ದಾರೆ.

ಯಾತ್ರೆ ಇದುವರೆಗೂ ಸಾಗಿದ ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ ರಾಜ್ಯಗಳಲ್ಲಿ ನಮಗೆ ಅಭೂತಪೂರ್ವ ಬೆಂಬಲ ದೊರೆತಿದೆ. ಮಹಾರಾಷ್ಟ್ರದಲ್ಲೂ ನಮಗೆ ಇಂತದ್ದೇ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸವಿದೆ. ದೇಶದ ಕೋಮು ಸಾಮರಸ್ಯವನ್ನು ಗಟ್ಟಿಗೊಳಿಸಲು ಜನರು ನಮಗೆ ಬೆಂಬಲ ನೀಡಲಿದ್ದಾರೆ. ನಾವೆಲ್ಲರೂ ಒಂದಾಗಿ ಈ ದೇಶವನ್ನು ಉಳಿಸುತ್ತೇವೆ ಎಂದು ರಾಹುಲ್‌ ಗಾಂಧಿ ಘೋಷಿಸಿದರು.

ಸದ್ಯ ತೆಲಂಗಾಣದಿಂದ ಮಹಾರಾಷ್ಟ್ರ ತಲುಪಿರುವ ಭಾರತ್‌ ಜೋಡೋ ಯಾತ್ರೆಗೆ, ಪ್ರದೇಶ ಕಾಂಗ್ರೆಸ್‌ ಸಮಿತಿಯು ಭವ್ಯ ಸ್ವಾಗತ ಕೋರಿದೆ. ರಾಹುಲ್‌ ಗಾಂಧಿ ಮಹಾರಾಷ್ಟ್ರದಲ್ಲಿ ಎರಡು ಬೃಹತ್‌ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಕಳೆದ ಸೆಪ್ಟೆಂಬರ್ 7 ರಂದು ತಮಿಳುನಾಡಿನಿಂದ ಪ್ರಾರಂಭವಾದ ಭಾರತ್‌ ಜೋಡೋ ಯಾತ್ರೆ, 61 ನೇ ದಿನದಂದು ತೆಲಂಗಾಣದಿಂದ ಮಧ್ಯ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ದೆಗ್ಲೂರ್ ತಲುಪಿದೆ. ಒಟ್ಟು 3,570-ಕಿಮೀ ಉದ್ದದ ಭಾರತ್‌ ಜೋಡೋ ಯಾತ್ರೆ, ದೇಶದ ರಾಜಕಾರಣದಲ್ಲಿ ಕಾಂಗ್ರೆಸ್‌ನ ಪುನರುಜ್ಜೀವನಕ್ಕೆ ನಾಂದಿ ಹಾಡಲಿದೆ ಎಂದು ನಿರೀಕ್ಷಿಸಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ