logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Odisha News: ಒಡಿಶಾದಲ್ಲಿ ಮತ್ತೊಂದು ದುರಂತ; ಗೂಡ್ಸ್ ರೈಲು ಹರಿದು ನಾಲ್ವರು ಕಾರ್ಮಿಕರು ಸಾವು

Odisha News: ಒಡಿಶಾದಲ್ಲಿ ಮತ್ತೊಂದು ದುರಂತ; ಗೂಡ್ಸ್ ರೈಲು ಹರಿದು ನಾಲ್ವರು ಕಾರ್ಮಿಕರು ಸಾವು

Meghana B HT Kannada

Jun 07, 2023 07:08 PM IST

ಪ್ರಾತಿನಿಧಿಕ ಚಿತ್ರ

    • Odisha train accident: ಒಡಿಶಾದ ಜಾಜ್‌ಪುರದ ರೋಡ್​ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಜಾಜ್‌ಪುರ (ಒಡಿಶಾ): ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ನಡೆದಿದೆ. ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Explainer: ಪ್ರಜ್ವಲ್ ರೇವಣ್ಣ ಪಲಾಯನಕ್ಕೆ ಪವರ್‌ ತುಂಬಿದ ರಾಜತಾಂತ್ರಿಕ ಪಾಸ್‌ಪೋರ್ಟ್; ಏನಿದರ ವಿಶೇಷ?

ತಿರುಮಲ ತಿರುಪತಿ ಜುಲೈ ತಿಂಗಳ ವಿಶೇಷ ಪ್ರವೇಶ ಟಿಕೆಟ್, ಟಿಟಿಡಿ ವೆಬ್‌ಸೈಟ್ ಮೂಲಕ 300 ರೂಪಾಯಿ ಟಿಕೆಟ್‌

ಚೆನ್ನೈನಲ್ಲಿ ವಂದೇ ಮೆಟ್ರೋ ರೈಲು ಅನಾವರಣ; ಭಾರತೀಯ ರೈಲ್ವೆ ಮಹತ್ವದ ಮೈಲಿಗಲ್ಲು, ಜುಲೈನಲ್ಲಿ ಮೊದಲ ಪ್ರಾಯೋಗಿಕ ಸಂಚಾರ

ರಣಬಿಸಿಲಿನಿಂದ ರಕ್ಷಣೆಗೆ ಟ್ರಾಫಿಕ್‌ ಸಿಗ್ನಲ್ ಸಮೀಪ ಹಸಿರು ನೆರಳು ಬಲೆ; ಪುದುಚೇರಿ ಪಿಡಬ್ಲ್ಯುಡಿ ಇಲಾಖೆ ಉಪಕ್ರಮಕ್ಕೆ ವ್ಯಾಪಕ ಮೆಚ್ಚುಗೆ

ಒಡಿಶಾದ ಜಾಜ್‌ಪುರದ ರೋಡ್​ ರೈಲು ನಿಲ್ದಾಣದಲ್ಲಿ ಇಂದು (ಜೂನ್​ 7, ಬುಧವಾರ) ಘಟನೆ ನಡೆದಿದ್ದು, ಅಪಘಾತದಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. ಜಾಜ್‌ಪುರ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್​ ರೈಲಿನ ಬೋಗಿಗಳ ಕೆಳಗೆ ಕಾರ್ಮಿಕರು ವಿಶ್ರಾಂತಿ ಪಡೆಯುತ್ತಿದ್ದರು.

ಹವಾಮಾನ ವೈಪರೀತ್ಯದಿಂದ ಜೋರಾಗಿ ಗಾಳಿ ಬೀಸಿದ್ದು, ರೈಲು ಚಲಿಸಿದ್ದರಿಂದ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಹಾಗೂ ಗಾಯಾಳುಗಳು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.

ಬಾಲಾಸೋರ್​ ದುರಂತ

ಜೂನ್​ 2, ಶುಕ್ರವಾರ ಒಡಿಶಾದ ಬಾಲಾಸೋರ್​ನಲ್ಲಿ ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್, ಗೂಡ್ಸ್ ರೈಲು ಮತ್ತು ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳ ನಡುವೆ ಅಪಘಾತ ಸಂಭವಿಸಿತ್ತು. ಗೂಡ್ಸ್​ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿತ್ತು. ಭೀಕರ ರೈಲು ಅಪಘಾತದಲ್ಲಿ 288 ಜನರು ಬಲಿಯಾಗಿದ್ದು, 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮೃತರ ಪ್ರತಿ ಕುಟುಂಬಕ್ಕೆ ಕೇಂದ್ರ ರೈಲ್ವೆ ಸಚಿವಾಲಯ 10 ಲಕ್ಷ ರೂಪಾಯಿ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 5 ಲಕ್ಷ ರೂಪಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ 2 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಒಟ್ಟು 17 ಲಕ್ಷ ಪರಿಹಾರ ಘೋಷಿಸಿದ್ದಾರೆ. ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ.

    ಹಂಚಿಕೊಳ್ಳಲು ಲೇಖನಗಳು