logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Odisha Tragedy: ಒಡಿಶಾ ರೈಲು ದುರಂತ ಉನ್ನತ ಮಟ್ಟದ ತನಿಖೆ, ರೈಲ್ವೆ ಸುರಕ್ಷತಾ ಆಯುಕ್ತರಿಂದಲೂ ವಿಚಾರಣೆ

Odisha Tragedy: ಒಡಿಶಾ ರೈಲು ದುರಂತ ಉನ್ನತ ಮಟ್ಟದ ತನಿಖೆ, ರೈಲ್ವೆ ಸುರಕ್ಷತಾ ಆಯುಕ್ತರಿಂದಲೂ ವಿಚಾರಣೆ

HT Kannada Desk HT Kannada

Jun 03, 2023 09:28 AM IST

ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ.

    • ಘಟನೆ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯೇ ಸ್ಥಳಕ್ಕೆ ಧಾವಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಈಗಾಗಲೇ ಭೀಕರ ರೈಲು ದುರಂತದ ಕುರಿತು ಸತ್ಯಾಸತ್ಯತೆಗಳನ್ನು ಅರಿಯಲು ರೈಲ್ವೆ ಇಲಾಖೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.
ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ.
ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ.

ಭುವನೇಶ್ವರ: ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಟ್ರೆಂಡಿಂಗ್​ ಸುದ್ದಿ

ಪ್ರಜ್ವಲ್‌ ದೇಶ ಬಿಟ್ಟು ಹೋಗಲು ಕರ್ನಾಟಕದ ಕಾಂಗ್ರೆಸ್‌ ಸರ್ಕಾರವೇ ಕಾರಣ, ಇಂತವರ ಪರ ಸಹನೆ ಬೇಕಿಲ್ಲ: ಪ್ರಧಾನಿ ಮೋದಿ

Viral Video: ತೂಕ ಇಳಿಸುವ ಹುಚ್ಚು, ಜಿಮ್‌ನಲ್ಲಿ ಚಿತ್ರಹಿಂಸೆ ಕೊಟ್ಟು ಪುತ್ರನನ್ನು ಕೊಂದ ಪಾಪಿ ಪತಿ, ಕಣ್ಣೀರು ಹಾಕಿದ ತಾಯಿ

ಐಸಿಎಸ್‌ಇ ಐಎಸ್‌ಸಿ ಫಲಿತಾಂಶ ಪ್ರಕಟ, 10ನೇ ತರಗತಿ ಪ್ರಮಾಣ ಶೇ 99.47, ಐಎಸ್‌ಸಿ ಫಲಿತಾಂಶ ಶೇ 98.19

ಇಂದು ಬೆಳಗ್ಗೆ 11 ಗಂಟೆಗೆ ಸಿಐಎಸ್‌ಇ 10, 12ನೇ ತರಗತಿ ಫಲಿತಾಂಶ ಪ್ರಕಟ; ಲಿಂಕ್, ವೆಬ್‌ಸೈಟ್ ವಿವರ ಇಲ್ಲಿದೆ -ICSE Result

ಘಟನೆ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯೇ ಸ್ಥಳಕ್ಕೆ ಧಾವಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಈಗಾಗಲೇ ಭೀಕರ ರೈಲು ದುರಂತದ ಕುರಿತು ಸತ್ಯಾಸತ್ಯತೆಗಳನ್ನು ಅರಿಯಲು ರೈಲ್ವೆ ಇಲಾಖೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.

ರೈಲ್ವೆ ಸುರಕ್ಷತಾ ಆಯುಕ್ತರಿಗೆ ಘಟನೆಗೆ ಆಗಿರುವ ಲೋಪವೇನು, ನಿರ್ಲಕ್ಷ್ಯ ಎಲ್ಲಿ ಆಯಿತು ಎನ್ನುವ ಕುರಿತು ಮಾಹಿತಿ ಕಲೆ ಹಾಕಿ ವಿವರವಾದ ವರದಿ ನೀಡುವಂತೆಯೂ ಸೂಚನೆ ನೀಡಲಾಗಿದೆ ಎಂದು ಅಶ್ವಿನಿ ತಿಳಿಸಿದರು.

ಇಂತಹ ಘಟನೆ ಆಗಬಾರದಿತ್ತು. ಇದಕ್ಕೂ ನಿಜಕ್ಕೂ ಬೇಸರದಾಯಕ. ಮೃತಪಟ್ಟವರ ವಿವರವನ್ನು ಕಲೆ ಹಾಕಿ ಸಂಬಂಧಿಸಿದ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಗಾಯಗೊಂಡವರಿಗೆ ಎಲ್ಲಾ ರೀತಿಯ ಚಿಕಿತ್ಸೆಗಳನ್ನು ನೀಡಲಾಗುವುದು. ಪ್ರಯಾಣಿಕರ ರಕ್ಷಣೆ ಹಾಗೂ ಸುರಕ್ಷತೆ ನಮ್ಮ ಮೊದಲ ಆದ್ಯತೆ. ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಬೇರೆ ಬೇರೆ ತಂಡಗಳು ಯುದ್ದೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಒಂದೆರಡು ದಿನದಲ್ಲಿ ರೈಲು ಸಂಚಾರ ಸಂಪೂರ್ಣ ಸಹಜ ಸ್ಥಿತಿಗೆ ಬರಲಿದೆ ಎನ್ನುವುದು ಅವರ ವಿವರಣೆ.

ಶುಕ್ರವಾರ ಸಂಜೆ ಒಡಿಶಾ ರಾಜ್ಯದ ಬಾಲಸೋರ್‌ ಸಮೀಪದ ಬಹನಾಗಾ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರು ಹೌರಾ ಸೂಪರ್‌ ಫಾಸ್ಟ್‌, ಶಾಲಿಮಾರ್‌ ಚೆನ್ನೈ ಕೋರಮಂಡಲ್‌ ಎಕ್ಸ್‌ಪ್ರೆಸ್‌ ರೈಲು ಹಾಗೂ ಗೂಡ್ಸ್‌ ರೈಲುಗಳು ಡಿಕ್ಕಿಯಾಗಿ ಭೀಕರ ದುರಂತ ಸಂಭವಿಸಿದೆ. ಇದರಲ್ಲಿ 238 ಮೃತಪಟ್ಟು 900ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಒಡಿಶಾದಲ್ಲಿ ಶನಿವಾರ ಶೋಕಾಚರಣೆ ಘೋಷಿಸಲಾಗಿದೆ.

ರೈಲ್ವೆ ಸಚಿವಾಲಯವೂ ಮೃತರ ಕುಟುಂಬಗಳಿಗೆ 10 ಲಕ್ಷ ರೂ ಗಂಭೀರ. ಗಾಯಾಳುಗಳ ಕುಟುಂಬಕ್ಕೆ 2 ಲಕ್ಷ ರೂ. ಇತರೆ ಗಾಯಾಗಳುಗಳ ಕುಟುಂಬಕ್ಕೆ 50ಸಾವಿರ ರೂ. ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಗಾಯಾಳುಗಳಿಗೆ 50ಸಾವಿರ ರೂ. ಘೋಷಿಸಿದ್ಧಾರೆ.

ಇದನ್ನೂ ಓದಿರಿ…

ವಿಭಾಗ

    ಹಂಚಿಕೊಳ್ಳಲು ಲೇಖನಗಳು