logo
ಕನ್ನಡ ಸುದ್ದಿ  /  Nation And-world  /  Petrol And Diesel Prices Of Cities In India Today

Petrol Rate Today: ದೇಶ ಮತ್ತು ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್‌ ಬೆಲೆ ಇಷ್ಟು

Jayaraj HT Kannada

Jul 25, 2022 10:06 AM IST

ಸಾಂದರ್ಭಿಕ ಚಿತ್ರ

    • ದೇಶ ಮತ್ತು ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ದರ ವಿವರ ಹೀಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯಲ್ಲಿ ಏರಿಳಿತ ಕಂಡುಬರುತ್ತಿದೆ. ಕೇಂದ್ರ ಸರ್ಕಾರವು ತೈಲದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಕಳೆದ ಮೇ 22ರಿಂದ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್ ದರ ಪ್ರತಿ ಲೀಟರ್‌ ಮೇಲೆ 6 ರೂಪಾಯಿ ಕಡಿಮೆಯಾಗಿತ್ತು. ಆ ಬಳಿಕ ಕೆಲವೆಡೆ ಪೈಸೆ ಲೆಕ್ಕದಲ್ಲಿ ಮತ್ತೆ ಬೆಲೆ ಏರಿಳಿಕೆ ಕಂಡರೂ ಸದ್ಯ ಬೆಲೆಯಲ್ಲಿ ಮತ್ತೆ ಸ್ಥಿರತೆ ಕಾಣುತ್ತಿದೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಸೋಮವಾರ ತಟಸ್ಥವಾಗುವ ಮೂಲಕ ಕೊಂಚ ನೆಮ್ಮದಿ ಮೂಡಿಸಿದ ಹಳದಿ ಲೋಹ, ಇಂದು ಬೆಳ್ಳಿ ದರವೂ ಇಳಿಕೆ

Tik Tok Star Murder: ಖ್ಯಾತ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ಭೀಕರ ಹತ್ಯೆ, ಕಾರಣವೇನು

Gold Rate: ಬಡವರಿಗೆ ಗಗನ ಕುಸುಮವಾಯ್ತು ಚಿನ್ನ; ಮತ್ತಷ್ಟು ಹೆಚ್ಚಾಯ್ತು ಬೆಳ್ಳಿ , ಬಂಗಾರದ ಬೆಲೆ

ಇವಿಎಂ ವಿವಿಪ್ಯಾಟ್ ಪ್ರಕರಣ; ಅಡ್ಡ ಪರಿಶೀಲನೆ ಮಾಡಿ ಎಂದವರ ವಿರುದ್ಧ ಸುಪ್ರೀಂ ಕೋರ್ಟ್ ಗರಂ, ಎಲ್ಲಾ ಅರ್ಜಿಗಳು ವಜಾ

ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ ಮತ್ತು ಡೀಸೆಲ್‌ನ ಇಂದಿನ ಬೆಲೆ ವಿವರ ಇಲ್ಲಿದೆ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂಪಾಯಿ ಇದೆ. ಇದೇ ವೇಳೆ ಡೀಸೆಲ್ ಬೆಲೆ ಲೀಟರ್‌ಗೆ 89.62 ರೂಪಾಯಿ ಇದೆ. ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ ಬೆಲೆ ಸದ್ಯ 101.94 ರೂಪಾಯಿ ಇದ್ದು, ಡೀಸೆಲ್ ಬೆಲೆ 87.89 ರೂಪಾಯಿ ಇದೆ. ನಿನ್ನೆಯ ದರವೇ ಇಂದು ಕೂಡ ಬಹುತೇಕ ಎಲ್ಲಾ ನಗರಗಳಲ್ಲಿ ಮುಂದುವರಿದಿದೆ.

ದೇಶದ ವಾಣಿಜ್ಯ ನಗರಿಯಲ್ಲಿ ಪೆಟ್ರೋಲ್‌ ಬೆಲೆ111.35 ರೂಪಾಯಿ ಇದ್ದರೆ, ಡೀಸೆಲ್ ಬೆಲೆ 97.28 ರೂಪಾಯಿ ಇದೆ. ಬೆಂಗಳೂರಿಗಿಂತ ಮುಂಬೈನಲ್ಲಿ ಬೆಲೆ ದುಬಾರಿಯಾಗಿದೆ. ಮತ್ತೊಂದೆಡೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂಪಾಯಿ ಇದ್ದರೆ, ಡೀಸೆಲ್ ಬೆಲೆ 92.76 ರೂಪಾಯಿ ಇದೆ. ಉಳಿದಂತೆ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 102.63 ರೂಪಾಯಿ ಇದ್ದರೆ, ಡೀಸೆಲ್ ಬೆಲೆ 94.24 ರೂಪಾಯಿ ಇದೆ.

ಕರ್ನಾಟಕದ ಪ್ರಮುಖ ನಗರಗಳ ಬೆಲೆ ವಿವರ ನೋಡುವುದಾದರೆ, ಮಂಗಳೂರು ಮತ್ತು ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್ ಬೆಲೆ 101.13 ರೂಪಾಯಿ ಇದ್ದರೆ, ಡೀಸೆಲ್ ಬೆಲೆ 87.13 ರೂಪಾಯಿ ಇದೆ. ಬೆಂಗಳೂರಿಗಿಂತ ಕಡಲ ನಗರಿಯಲ್ಲಿ ಇಂಧನ ಬೆಲೆ ಕಡಿಮೆ ಇದೆ. ಅರಬ್‌ ರಾಷ್ಟ್ರಗಳಿಂದ ಮಂಗಳೂರಿಗೆ ತೈಲಗಳು ಬಂದು, ಅಲ್ಲಿನ ಎಂಆರ್‌ಪಿಎಲ್‌ನಲ್ಲಿ ವಿಂಗಡಣೆಗೊಂಡು ರಾಜ್ಯದ ಇತರ ಭಾಗಗಳಿಗೆ ಇಂಧನ ಪೂರೈಕೆ ಆಗುತ್ತದೆ. ಹೀಗಾಗಿ ಸಹಜವಾಗಿಯೇ ಕರಾವಳಿಯಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಕಡಿಮೆ ಇದೆ. ರಾಜ್ಯದ ಇತರ ಭಾಗಗಳಿಗೆ ಮಂಗಳೂರಿನಿಂದಲೇ ಇಂಧನ ಸಾಗಾಟ ಮಾಡಲಾಗುತ್ತದೆ.

ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ ಬೆಲೆ

ಧಾರವಾಡ : ಪೆಟ್ರೋಲ್ ಬೆಲೆ 102.02, ಡೀಸೆಲ್ -87.98 ರೂಪಾಯಿ

ಮೈಸೂರು : ಪೆಟ್ರೋಲ್‌ ಬೆಲೆ 101.46, ಡೀಸೆಲ್‌ -87.45 ರೂಪಾಯಿ

ಪೆಟ್ರೋಲ್‌ ಬೆಲೆ ನಿತ್ಯ ಬದಲಾಗುವುದು ಯಾಕೆ ಮತ್ತು ಹೇಗೆ?

ಭಾರತದಲ್ಲಿ ಪೆಟ್ರೋಲ್ ದರವನ್ನು ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ. ಪ್ರತಿ ದಿನ ಬೆಳಗ್ಗೆ 6:00 ಗಂಟೆಗೆ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜಾಗತಿಕ ತೈಲ ಬೆಲೆಗಳಲ್ಲಿ ಒಂದು ನಿಮಿಷದೊಳಗೆ ಆಗುವ ವ್ಯತ್ಯಾಸ ಕೂಡಾ ಇಂಧನ ಬಳಕೆದಾರರಿಗೂ ಅನ್ವಯವಾಗುತ್ತದೆ. ಈ ಇಂಧನದ ಬೆಲೆ ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (VAT) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ.

ಈ ಮೌಲ್ಯವರ್ಧಿತ ತೆರಿಗೆ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ. ಪೆಟ್ರೋಲ್‌ನ ನೈಜ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ವ್ಯಾಟ್ ಸೇರಿಸಿದ ನಂತರ, ಅದರ ಚಿಲ್ಲರೆ ಮಾರಾಟದ ಬೆಲೆ ಸರಿಸುಮಾರು ದ್ವಿಗುಣಗೊಳ್ಳುತ್ತದೆ. ವಿವಿಧ ಅಂಶಗಳು ಇಂಧನ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ. ಇವುಗಳಲ್ಲಿ ಯುಎಸ್ ಡಾಲರ್ ಎದುರು ರೂಪಾಯಿ ಮೌಲ್ಯ, ಕಚ್ಚಾ ತೈಲದ ಬೆಲೆ, ಜಾಗತಿಕ ಪ್ರಮುಖ ಘಟನಾವಳಿಗಳು, ಇಂಧನ ಬೇಡಿಕೆ ಇತ್ಯಾದಿಗಳು ಸೇರಿವೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಏರಿದಾಗ, ಭಾರತದಲ್ಲಿ ಬೆಲೆಗಳು ಹೆಚ್ಚಾಗುತ್ತವೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು