logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Phulwari Sharif Pfi Case: ಫುಲ್ವಾರಿ ಷರೀಫ್ ಪಿಎಫ್‌ಐ ಪ್ರಕರಣ; ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಎನ್‌ಐಎ

Phulwari Sharif PFI case: ಫುಲ್ವಾರಿ ಷರೀಫ್ ಪಿಎಫ್‌ಐ ಪ್ರಕರಣ; ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಎನ್‌ಐಎ

HT Kannada Desk HT Kannada

Feb 05, 2023 08:36 PM IST

ಸಾಂದರ್ಭಿಕ ಚಿತ್ರ

    • ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಚಿಗೆ ಸಂಬಂಧಿಸಿದ ಫುಲ್ವಾರಿ ಷರೀಫ್ ಭಯೋತ್ಪಾದನಾ ಘಟಕದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಿಹಾರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಚಿಗೆ ಸಂಬಂಧಿಸಿದ ಫುಲ್ವಾರಿ ಷರೀಫ್ ಭಯೋತ್ಪಾದನಾ ಘಟಕದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಭಾನುವಾರ ಚಿನ್ನ, ಬೆಳ್ಳಿ ಎರಡರ ದರವೂ ಹೆಚ್ಚಳ; ಆಭರಣ ಖರೀದಿಸುವ ಯೋಚನೆ ಇದ್ದರೆ ಇಂದಿನ ಬೆಲೆ ಗಮನಿಸಿ

ತಿರುಮಲ ತಿರುಪತಿಯಲ್ಲಿ ನವದಂಪತಿಗೆ ವಿಶೇಷ ಶ್ರೀವಾರಿ ದರ್ಶನ ಟಿಕೆಟ್ ಪ್ರಕಟಿಸಿದ ಟಿಟಿಡಿ; ಎಷ್ಟಿವೆ ಕೋಟಾ, ದರ ಇತ್ಯಾದಿ ವಿವರ

Gold Rate Today: ಮತ್ತೆ ಆರಂಭವಾಯ್ತು ಚಿನ್ನ, ಬೆಳ್ಳಿ ದರದಲ್ಲಿನ ಏರಿಳಿತ; ಶನಿವಾರ ಚಿನ್ನದ ದರ ಇಳಿಕೆ, ಬೆಳ್ಳಿ ಏರಿಕೆ

Explainer: ಪ್ರಜ್ವಲ್ ರೇವಣ್ಣ ಪಲಾಯನಕ್ಕೆ ಪವರ್‌ ತುಂಬಿದ ರಾಜತಾಂತ್ರಿಕ ಪಾಸ್‌ಪೋರ್ಟ್; ಏನಿದರ ವಿಶೇಷ?

ಫೆಬ್ರವರಿ 4 ರಂದು ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಉದ್ದೇಶಿತ ಹತ್ಯೆಯನ್ನು ನಡೆಸಲು ಪಿಎಫ್‌ಐ ಕಾರ್ಯಕರ್ತರು ರೂಪಿಸಿದ ಸಂಚಿನ ಬೆನ್ನಲ್ಲೇ ತನಿಖಾ ಸಂಸ್ಥೆಯು ಎಂಟು ಸ್ಥಳಗಳಲ್ಲಿ ದಾಳಿ ನಡೆಸಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.

ಬಂಧಿತರನ್ನು ಪೂರ್ವ ಚಂಪಾರಣ್ ಜಿಲ್ಲೆಯ ನಿವಾಸಿಗಳಾದ ತನ್ವೀರ್ ರಜಾ ಅಲಿಯಾಸ್ ಬರ್ಕತಿ ಮತ್ತು ಎಂಡಿ ಅಬಿದ್ ಅಲಿಯಾಸ್ ಆರ್ಯನ್ ಎಂದು ಗುರುತಿಸಲಾಗಿದೆ. ಎನ್‌ಐಎ ಪ್ರಕಾರ, ಆರೋಪಿಗಳು ಉದ್ದೇಶಿತ ಹತ್ಯೆಗಳನ್ನು ನಡೆಸಲು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸಿದ್ದಪಡಿಸಿಕೊಂಡಿದ್ದರು.

"ಹತ್ಯೆ ನಡೆಸಲು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸಿದ್ದಪಡಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಎನ್‌ಐಎ ಇಂದು ಬಂಧಿಸಿದೆ. ಈ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಪಿಎಫ್‌ಐ ತರಬೇತುದಾರರಾದ ಯಾಕೂಬ್ ಎಂಬಾತನಿಗೆ ಹಸ್ತಾಂತರಿಸಲಾಗಿದೆ. ಅವರು ಪಿಎಫ್‌ಐ ಕಾರ್ಯಕರ್ತರಿಗೆ ತರಬೇತಿ ಸೆಷನ್‌ಗಳನ್ನು ನಡೆಸುತ್ತಿದ್ದರು" ಎನ್‌ಐಎ ಹೇಳಿಕೆಯಲ್ಲಿ ತಿಳಿಸಿದೆ.

ಕೆಲವು ದಿನಗಳ ಹಿಂದೆ, ಪಿಎಫ್‌ಐ ತರಬೇತುದಾರ ಯಾಕೂಬ್ ಅವರು ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಮತ್ತು ಪ್ರಚೋದಕ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ಇದು ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡುವ ಗುರಿಯನ್ನು ಹೊಂದಿತ್ತು. ಫೇಸ್‌ಬುಕ್‌ನ ಇತರ ಬಳಕೆದಾರರು ಈ ಪೋಸ್ಟ್ ಅನ್ನು ನಿಂದಿಸಿ ಕಾಮೆಂಟ್ ಮಾಡಿದ್ದಾರೆ ಮತ್ತು ಟ್ರೋಲ್ ಮಾಡಿದ್ದರು. ತಲೆಮರೆಸಿಕೊಂಡಿದ್ದ ಆರೋಪಿ ಯಾಕೂಬ್ ಮತ್ತು ಇದೀಗ ಬಂಧಿತರಾಗಿರುವ ಇಬ್ಬರು ಆರೋಪಿಗಳು ಅವರಲ್ಲಿ ಕೆಲವರನ್ನು ಗುರುತಿಸಿದ್ದರು ಮತ್ತು ಹತ್ಯೆಗೆ ಸಂಚು ರೂಪಿಸಿದ್ದರು. ಪಿಎಫ್‌ಐ ನಾಯಕರು ಮತ್ತು ಕಾರ್ಯಕರ್ತರು ಹಿಂಸಾತ್ಮಕ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಪಾಟ್ನಾದ ಫುಲ್ವಾರಿ ಷರೀಫ್ ಪ್ರದೇಶದಲ್ಲಿ ಆ ಉದ್ದೇಶಕ್ಕಾಗಿ ಒಟ್ಟುಗೂಡಿದ್ದಾರೆ ಎಂದು ಎನ್‌ಐಎ ತಿಳಿಸಿದೆ.

ಈ ಪ್ರಕರಣವನ್ನು ಆರಂಭದಲ್ಲಿ ಜುಲೈ 12, 2022 ರಂದು ಫುಲ್ವಾರಿ ಷರೀಫ್‌ ಪೊಲೀಸ್​ ಠಾಣೆಯಲ್ಲಿ ದಾಖಲಿಸಲಾಯಿತು. ಜುಲೈ 22,2022 ರಂದು ಎನ್​ಐಎ ತನಿಖೆಯ ಹೊಣೆ ಹೊತ್ತುಕೊಂಡಿತು. ಈ ಮೊದಲು, ನಾಲ್ವರನ್ನು ಬಂಧಿಸಲಾಗಿತ್ತು ಮತ್ತು ಪ್ರಕರಣದಲ್ಲಿ PFIಗೆ ಸಂಬಂಧಿಸಿದ ಹಲವಾರು ದೋಷಾರೋಪಣೆಯ ಲೇಖನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಯಿತು. ಪ್ರಕರಣದ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

ಹೈದರಾಬಾದ್‌ನಲ್ಲಿ ಮೂವರು ಶಂಕಿತ ಉಗ್ರರನ್ನು ಬಂಧಿಸಿದ ಎನ್‌ಐಎ

ಹೈದರಾಬಾದ್‌ನಲ್ಲಿ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ ಮೂವರನ್ನು ಎನ್‌ಐಎ ತಂಡ ಬಂಧಿಸಿದೆ. ಅಬ್ದುಲ್‌ ಜಾಹೀದ್‌ ಸೇರಿದಂತೆ ಮೂವರನ್ನು ಬಂಧಿಸಿ ಯುಎಪಿಎ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಎನ್‌ಐಎಯು ಈ ಮೂವರ ವಿರುದ್ಧ ಕಳೆದ ತಿಂಗಳು ಅಂದರೆ ಜನವರಿ 25ರಂದು ಎಫ್‌ಐಆರ್‌ ದಾಖಲಿಸಿತ್ತು. ಇವರಲ್ಲಿ ಝಹೀದ್‌ ಎಂಬಾತ ಹೈದರಾಬಾದ್‌ನಲ್ಲಿ ಹಲವು ಭಯೋತ್ಪಾದನಾ ಕೃತ್ಯಗಳಲ್ಲಿ ಶಾಮೀಲಾಗಿದ್ದ. ಉಗ್ರ ಚಟುವಟಿಕೆಗಳಿಗೆ ಯುವಕರನ್ನು ಪ್ರೋತ್ಸಾಹಿಸುತ್ತಿದ್ದ ಎನ್ನಲಾಗಿದೆ. ಈ ಉಗ್ರರಿಗೆ ಪಾಕಿಸ್ತಾನದ ಲಿಂಕ್‌ ಇದೆ ಎನ್ನಲಾಗಿದ್ದು, ಈ ಕುರಿತು ಎನ್‌ಐಎ ತನಿಖೆ ನಡೆಸುತ್ತಿದೆ.

ಮೊಹಮ್ಮದ್‌ ಝಹೀದ್‌, ಮಾಝ್‌ ಹಸನ್‌ ಫಾರೂಕ್‌ ಮತ್ತು ಸಮಿದ್ದೀನ್‌ ಎಂಬ ಹೆಸರಿನ ಮೂವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAFA)ಯಡಿ ಬಂಧಿಸಲಾಗಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ. ಇವರು ಅಕ್ಟೋಬರ್‌ 2022ರಲ್ಲಿ ಹೈದರಾಬಾದ್‌ನಲ್ಲಿ ಉಗ್ರ ದಾಳಿಗೆ ಯೋಜನೆ ರೂಪಿಸಿದ್ದರು. 2005 ರಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟ ಪ್ರಕರಣದಲ್ಲಿ ಝಹೀದ್‌ನನ್ನು ಬಂಧಿಸಲಾಗಿತ್ತು. ಆದರೆ, ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 2017ರಲ್ಲಿ ಬಿಡುಗಡೆ ಮಾಡಲಾಗಿತ್ತು ಎಂದು ವರದಿಗಳು ತಿಳಿಸಿವೆ. ಅಬ್ದುಲ್ ಜಾಹೀದ್ (ಝಹೀದ್‌) ಪಾಕಿಸ್ತಾನದ ಹ್ಯಾಂಡ್ಲರ್‌ಗಳ ಸೂಚನೆಯ ಮೇರೆಗೆ ಹೈದರಾಬಾದ್‌ನಲ್ಲಿ ಹಲವು ಭಯೋತ್ಪಾದನಾ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದ ಎನ್ನಲಾಗಿದೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು