logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Narendra Modi: 4 ದಿನಗಳಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಕಿ.ಮೀ. ಪ್ರಯಾಣ, ಬಿಡುವಿಲ್ಲದ ಪ್ರಧಾನಿ ನರೇಂದ್ರ ಮೋದಿಯ ಅಚ್ಚರಿಯ ದಿನಚರಿ

Narendra Modi: 4 ದಿನಗಳಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಕಿ.ಮೀ. ಪ್ರಯಾಣ, ಬಿಡುವಿಲ್ಲದ ಪ್ರಧಾನಿ ನರೇಂದ್ರ ಮೋದಿಯ ಅಚ್ಚರಿಯ ದಿನಚರಿ

Praveen Chandra B HT Kannada

Feb 12, 2023 12:18 PM IST

Narendra Modi: 4 ದಿನಗಳಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಕಿ.ಮೀ. ಪ್ರಯಾಣ, ಬಿಡುವಿಲ್ಲದಂತೆ ಪ್ರಧಾನಿ ನರೇಂದ್ರ ಮೋದಿಯ ಅಚ್ಚರಿಯ ದಿನಚರಿ

    • ನಾಳೆ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿ ಏರ್‌ ಶೋ ಉದ್ಘಾಟಿಸಲಿದ್ದಾರೆ. ಅಂದಹಾಗೆ, ಕಳೆದ ಎರಡು ದಿನ ಸೇರಿದಂತೆ ನಾಲ್ಕು ದಿನ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಿಡುವಿಲ್ಲದ ದಿನಚರಿ. ಈ ಕುರಿತು ಹೆಚ್ಚಿನ ವಿವರ ಇಲ್ಲಿದೆ.
Narendra Modi: 4 ದಿನಗಳಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಕಿ.ಮೀ. ಪ್ರಯಾಣ, ಬಿಡುವಿಲ್ಲದಂತೆ ಪ್ರಧಾನಿ ನರೇಂದ್ರ ಮೋದಿಯ ಅಚ್ಚರಿಯ ದಿನಚರಿ
Narendra Modi: 4 ದಿನಗಳಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಕಿ.ಮೀ. ಪ್ರಯಾಣ, ಬಿಡುವಿಲ್ಲದಂತೆ ಪ್ರಧಾನಿ ನರೇಂದ್ರ ಮೋದಿಯ ಅಚ್ಚರಿಯ ದಿನಚರಿ (PTI)

ನವದೆಹಲಿ: ವಿವಿಧ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆ ಕೇಂದ್ರ ನಾಯಕರುಗಳು, ವಿರೋಧ ಪಕ್ಷಗಳ ಪ್ರಮುಖ ನಾಯಕರು ಮತದಾರರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ. ನಿನ್ನೆಯಷ್ಟೇ ಅಮಿತ್‌ ಶಾ ಅವರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದರು. ನಾಳೆ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿ ಏರ್‌ ಶೋ ಉದ್ಘಾಟಿಸಲಿದ್ದಾರೆ. ಅಂದಹಾಗೆ, ಕಳೆದ ಎರಡು ದಿನ ಸೇರಿದಂತೆ ನಾಲ್ಕು ದಿನ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಿಡುವಿಲ್ಲದ ದಿನಚರಿ. ನಾಲ್ಕು ದಿನಗಳ ಕಾಲ ಇವರು ವಿವಿಧ ರಾಜ್ಯಗಳ 10 ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

Gold Rate Today: ವಾರಾಂತ್ಯದಲ್ಲಿ ತುಸು ಇಳಿಕೆಯಾದ ಹಳದಿ ಲೋಹದ ಬೆಲೆ; ಶನಿವಾರ ಬೆಳ್ಳಿ ದರ ತಟಸ್ಥ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಪ್ರಧಾನಿ ನರೇಂದ್ರ ಮೋದಿಯವರು ನಾಲ್ಕು ದಿನಗಳ ಕಾಲ 10,000 ಕಿ.ಮೀ.ಗೂ ಹೆಚ್ಚು ಪ್ರಯಾಣಿಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದಲೇ ಇವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಪ್ರಯಾಣದಲ್ಲಿ ನಿರತರಾಗಿದ್ದಾರೆ. ಈ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ/ನೀಡಲಿದ್ದಾರೆ. ಹಲವು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬೆಂಗಳೂರು, ಲಖನೌ, ಮುಂಬೈ, ಅಗರ್ತಲಾ ಸೇರಿದಂತೆ ವಿವಿಧಡೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಮಾತ್ರವಲ್ಲದೆ ಅಮಿತ್‌ ಶಾ ಸೇರಿದಂತೆ ಉಳಿದ ನಾಯಕರುಗಳೂ ಬಿಡುವಿಲ್ಲದ ಶೆಡ್ಯೂಲ್‌ ಹಾಕಿಕೊಂಡಿದ್ದು, ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ವಿವಿಧ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.

ಕಳೆದ ಕೆಲವು ದಿನಗಳಿಂದ ಪ್ರಧಾನಿ ಮೋದಿಯವರು ಬಿಡುವಿಲ್ಲದ ಶೆಡ್ಯೂಲ್‌ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಫೆಬ್ರವರಿ 10ರಂದು ಪ್ರಧಾನಿ ಮೋಇಯವರು ಉತ್ತರ ಪ್ರದೇಶದ ಜಾಗತಿಕ ಹೂಡಿಕೆಆರರ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಬಳಿಕ ಮುಂಬೈಗೆ ಹೋಗಿದ್ದರು. ಅಲ್ಲಿ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದ್ದರು. ಬಳಿಕ ರಸ್ತೆ ಪ್ರಾಜೆಕ್ಟ್‌ಗಳಿಗೆ ಚಾಲನೆ ನೀಡಿದ್ದರು. ಅಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದರು. ಅವರ ಅಂದಿನ ಪ್ರಯಾಣ ಸುಮಾರು 2700 ಕಿ.ಮೀ. ಆಗಿತ್ತು.

ನಿನ್ನೆ ಅವರು ತ್ರಿಪುರಕ್ಕೆ ಭೇಟಿ ನೀಡಿದ್ದರು. ಅಲ್ಲಿ ಎರಡು ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಂಡಿದ್ದರು. ನಿನ್ನೆ ಸುಮಾರು ಮೂರು ಸಾವಿರ ಕಿ.ಮೀ. ಪ್ರಯಾಣಿಸಿದ್ದರು. ಇಂದು ಅವರು ಮಹರ್ಷಿ ದಯಾನಂದ ಸರಸ್ವತಿ ಅವರ 200ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ಕಾರ್ಯಕ್ರಮವು ದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದೆ. ಇಲ್ಲಿಂದ ಅವರು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇಂದು ರಾತ್ರಿ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ನಾಳೆ ಬೆಂಗಳೂರಿನಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಬೆಂಗಳೂರಿನಿಂದ ಅವರ ವಿಮಾನವು ನೇರ ತ್ರಿಪುರಕ್ಕೆ ಹೋಗಲಿದೆ. ಅಲ್ಲಿ ಅಗರ್ತಲಾದಲ್ಲಿ ಸಾರ್ವಜನಿಕ ರಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಅಲ್ಲಿಂದ ದೆಹಲಿಗೆ ವಾಪಸ್‌ ಆಗಲಿದ್ದಾರೆ. ಹೀಗೆ, ನಾಳೆಯದ್ದು ಸೇರಿದಂತೆ ನಾಲ್ಕು ದಿನಗಳಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಕಿ.ಮೀ. ಪ್ರಯಾಣಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೆ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಈಗ ಬಿಡುವಿಲ್ಲದ ಶೆಡ್ಯೂಲ್‌ ಹಾಕಿಕೊಂಡಿದ್ದಾರೆ. ಕರ್ನಾಟಕದಲ್ಲಿ ಜೆಡಿಎಸ್‌ನ ಹೆಚ್‌ಡಿ ಕುಮಾರಸ್ವಾಮಿ, ಕಾಂಗ್ರೆಸ್‌ನ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಸೇರಿದಂತೆ ಹಲವು ರಾಜಕಾರಣಿಗಳು ವಿವಿಧ ರಾಜಕೀಯ ಯಾತ್ರೆಗಳಲ್ಲಿ ಬ್ಯುಸಿಯಾಗಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ