logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಐಟಿ ಇಲಾಖೆಯಿಂದ ಕಾಂಗ್ರೆಸ್ ಪಕ್ಷದ 4 ಬ್ಯಾಂಕ್ ಖಾತೆಗಳು ಸ್ಥಗಿತ; ವಿದ್ಯುತ್ ಬಿಲ್, ವೇತನ ನೀಡಲು ಹಣವಿಲ್ಲ ಎಂದ ಕೈ ನಾಯಕರು

ಐಟಿ ಇಲಾಖೆಯಿಂದ ಕಾಂಗ್ರೆಸ್ ಪಕ್ಷದ 4 ಬ್ಯಾಂಕ್ ಖಾತೆಗಳು ಸ್ಥಗಿತ; ವಿದ್ಯುತ್ ಬಿಲ್, ವೇತನ ನೀಡಲು ಹಣವಿಲ್ಲ ಎಂದ ಕೈ ನಾಯಕರು

Raghavendra M Y HT Kannada

Feb 16, 2024 02:27 PM IST

ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷದ 4 ಬ್ಯಾಂಕ್ ಖಾತೆಗಳ ವಹಿವಾಟನ್ನು ಸ್ಥಗಿತಗೊಳಿಸಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದ್ದಾರೆ.

    • ಲೋಕಸಭಾ ಚುನಾವಣೆಗೆ ಕೆಲವು ದಿನಗಳ ಮುನ್ನವೇ ಐಟಿ ಇಲಾಖೆ ಕಾಂಗ್ರೆಸ್‌ನ 4 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಇದು ಭಾರತೀಯ ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷದ 4 ಬ್ಯಾಂಕ್ ಖಾತೆಗಳ ವಹಿವಾಟನ್ನು ಸ್ಥಗಿತಗೊಳಿಸಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದ್ದಾರೆ.
ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷದ 4 ಬ್ಯಾಂಕ್ ಖಾತೆಗಳ ವಹಿವಾಟನ್ನು ಸ್ಥಗಿತಗೊಳಿಸಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದ್ದಾರೆ. (ANI)

ದೆಹಲಿ: ಆದಾಯ ತೆರಿಗೆ ರಿಟರ್ನ್ ಅನ್ನು ತಡವಾಗಿ ಸಲ್ಲಿಸಿದೆ ಎಂಬ ಕಾರಣಕ್ಕಾಗಿ ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್‌ನ ನಾಲ್ಕು ಪ್ರಮುಖ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಆ ಪಕ್ಷದ ನಾಯಕರು ಆರೋಪಿಸಿದ್ದಾರೆ. ಕ್ಷುಲ್ಲಕ ಕಾರಣಗಳಿಗಾಗಿ ಆದಾಯ ತೆರಿಗೆ ಇಲಾಖೆ ತನ್ನ ನಾಲ್ಕು ಪ್ರಮುಖ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಟ್ರೆಂಡಿಂಗ್​ ಸುದ್ದಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

SBI FD Rate Hike: ಸ್ಥಿರ ಠೇವಣಿಗಳ ಬಡ್ಡಿದರ ಹೆಚ್ಚಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ; ಎಸ್‌ಬಿಐ ಎಫ್‌ಡಿಗಳ ಬಡ್ಡಿದರ ವಿವರ ಹೀಗಿದೆ

2018-19ನೇ ಸಾಲಿನ 210 ಕೋಟಿ ರೂಪಾಯಿಗಳ ಆದಾಯ ತೆರಿಗೆ ಬೇಡಿಕೆಯ ಮೇರೆಗೆ ಭಾರತೀಯ ಯುವ ಕಾಂಗ್ರೆಸ್ ಸೇರಿದಂತೆ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಾಂಗ್ರೆಸ್ ಖಜಾಂಚಿ ಅಜಯ್ ಮಾಕೆನ್ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಬಂಧಪಟ್ಟ ಆದಾಯ ತೆರಿಗೆ ರಿಟರ್ನ್ ಅನ್ನು ತಡವಾಗಿ ಸಲ್ಲಿಸಿದೆ ಮತ್ತು ಅದಕ್ಕಾಗಿಯೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಈ ಬಗ್ಗೆ ಎಐಸಿಸಿ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ದೇಶದ ಅತಿದೊಡ್ಡ ವಿರೋಧ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸುವ ಕ್ರಮವು ಭಾರತೀಯ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಖರ್ಗೆ ಅವರು, ಅಧಿಕಾರದ ಅಮಲಿನಲ್ಲಿ ಮೋದಿ ಸರ್ಕಾರವು ಲೋಕಸಭಾ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ದೇಶದ ಅತಿದೊಡ್ಡ ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದಿದ್ದಾರೆ.

ಬಿಜೆಪಿ ಸಂಗ್ರಹಿಸಿದ "ಅಸಂವಿಧಾನಿಕ" ಹಣವನ್ನು ಅವರು ಚುನಾವಣೆಗೆ ಬಳಸುತ್ತಾರೆ ಎಂದು ಖರ್ಗೆ ಆರೋಪಿಸಿದ್ದಾರೆ. ಆದರೆ ಕ್ರೌಡ್ ಫಂಡಿಂಗ್ ಮೂಲಕ ಕಾಂಗ್ರೆಸ್ ಸಂಗ್ರಹಿಸಿದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ದೇಶದಲ್ಲಿ ಬಹುಪಕ್ಷೀಯ ವ್ಯವಸ್ಥೆಯನ್ನು ಉಳಿಸಲು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾವು ನ್ಯಾಯಾಂಗಕ್ಕೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

‘ನಿರಂಕುಶ ಪ್ರಭುತ್ವದ ವಿರುದ್ಧ ಬಲವಾಗಿ ಹೋರಾಡುತ್ತೇವೆ’

ಕಾಂಗ್ರೆಸ್ ನ ನಾಲ್ಕು ಖಾತೆಗಳನ್ನು ಐಟಿ ಇಲಾಖೆ ಸ್ಥಗಿತಗೊಳಿಸಿರುವ ಬಗ್ಗೆ ನಾವು ಬೀದಿಗಿಳಿದು ಈ ನಿರಂಕುಶ ಪ್ರಭುತ್ವದ ವಿರುದ್ಧ ಬಲವಾಗಿ ಹೋರಾಡುತ್ತೇವೆ ಎಂದು ಖರ್ಗೆ ಅವರು ತಿಳಿಸಿದ್ದಾರೆ.

‘ಐಟಿ ಇಲಾಖೆಯ ಕ್ರಮದ ಹಿಂದೆ ನರೇಂದ್ರ ಮೋದಿ ಸರ್ಕಾರವಿದೆ’

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, ಐಟಿ ಇಲಾಖೆಯ ಕ್ರಮದ ಹಿಂದೆ ನರೇಂದ್ರ ಮೋದಿ ಸರ್ಕಾರವಿದೆ ಎಂದು ಆರೋಪಿಸಿದ್ದಾರೆ. "ಹೆದರಬೇಡಿ ಮೋದಿ ಜೀ, ಕಾಂಗ್ರೆಸ್ ಹಣದ ಶಕ್ತಿಯ ಬಗ್ಗೆ ಅಲ್ಲ, ಜನರ ಶಕ್ತಿಗೆ ಸಂಬಂಧಿಸಿದೆ. ನಾವು ಎಂದಿಗೂ ಸರ್ವಾಧಿಕಾರಕ್ಕೆ ತಲೆಬಾಗಿಲ್ಲ, ಎಂದಿಗೂ ತಲೆಬಾಗುವುದಿಲ್ಲ. ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಹಗಲು ರಾತ್ರಿ ಹೋರಾಡುತ್ತಾರೆ" ಎಂದು ಅವರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್, ಭಾರತದಲ್ಲಿ ಪ್ರಜಾಪ್ರಭುತ್ವವು ಸಂಪೂರ್ಣವಾಗಿ ಕೊನೆಗೊಂಡಿದೆ. ದೇಶದ ಪ್ರಮುಖ ವಿರೋಧ ಪಕ್ಷದ ಎಲ್ಲಾ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಿಡಿಕಾರಿದ್ದಾರೆ. ಪಕ್ಷವು ನೀಡಿದ ಚೆಕ್ ಗಳನ್ನು ಬ್ಯಾಂಕುಗಳು ಗೌರವಿಸುತ್ತಿಲ್ಲ ಎಂದು ಗುರುವಾರ ಪಕ್ಷಕ್ಕೆ ತಿಳಿಸಲಾಗಿದೆ.

"ಹೆಚ್ಚಿನ ತನಿಖೆಯ ನಂತರ, ಯುವ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ನಮಗೆ ತಿಳಿದುಬಂದಿದೆ. ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ" ಎಂದು ಮಾಕೆನ್ ಎಎನ್ಐಗೆ ತಿಳಿಸಿದ್ದಾರೆ. "ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷದಿಂದ 210 ಕೋಟಿ ರೂ.ಗಳನ್ನು ವಸೂಲಿ ಮಾಡಲು ಆದಾಯ ತೆರಿಗೆ ಕೇಳಿದೆ. ನಮ್ಮ ಖಾತೆಗಳಲ್ಲಿನ ಕ್ರೌಡ್ ಫಂಡಿಂಗ್ ಹಣವನ್ನು ಸ್ಥಗಿತಗೊಳಿಸಲಾಗಿದೆ. ಚುನಾವಣೆಗೆ ಕೇವಲ 2 ವಾರಗಳ ಮೊದಲು, ಪ್ರತಿಪಕ್ಷಗಳ ಖಾತೆಗಳನ್ನು ಸ್ಥಗಿತಗೊಳಿಸಿದಾಗ, ಅದು ಪ್ರಜಾಪ್ರಭುತ್ವವನ್ನು ಸ್ಥಗಿತಗೊಳಿಸುವುದಕ್ಕೆ ಸಮಾನವಾಗಿದೆ. ಖರ್ಚು ಮಾಡಲು, ಬಿಲ್‌ಗಳನ್ನು ಪಾವತಿಸಲು ಅಥವಾ ಉದ್ಯೋಗಿಗಳಿಗೆ ಸಂಬಳವನ್ನು ಪಾವತಿಸಲು ಪಕ್ಷಕ್ಕೆ ಪ್ರಸ್ತುತ ಹಣದ ಕೊರತೆಯಿದೆ ಎಂದು ಮಾಕೆನ್ ಹೇಳಿದರು.

ಖರ್ಚು ಮಾಡಲು, ವಿದ್ಯುತ್ ಬಿಲ್ ಪಾವತಿಸಲು, ನಮ್ಮ ಉದ್ಯೋಗಿಗಳಿಗೆ ಸಂಬಳ ನೀಡಲು ನಮ್ಮ ಬಳಿ ಹಣವಿಲ್ಲ. ಎಲ್ಲದರ ಮೇಲೂ ಪರಿಣಾಮ ಬೀರುತ್ತದೆ, ನ್ಯಾಯ್ ಯಾತ್ರೆ ಮಾತ್ರವಲ್ಲ, ಎಲ್ಲಾ ರಾಜಕೀಯ ಚಟುವಟಿಕೆಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ದೂರಿದ್ದಾರೆ.

ಕಾಂಗ್ರೆಸ್ ಮುಖಂಡ ಶಶಿ ತರೂರ್ ಕೂಡ ಆದಾಯ ತೆರಿಗೆ ಇಲಾಖೆಯ ಕ್ರಮವನ್ನು "ಆಘಾತಕಾರಿ" ಮತ್ತು "ಸಂಪೂರ್ಣವಾಗಿ ನಾಚಿಕೆಗೇಡಿನ" ಎಂದು ಕರೆದಿದ್ದಾರೆ. ಇದು ಆಘಾತಕಾರಿ ಮತ್ತು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. (This copy first appeared in Hindustan Times Kannada website. To read more like this please logon to kannada.hindustantimes.com).

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ