logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಮಧ್ಯಪ್ರದೇಶಕ್ಕೆ ನೂತನ ಸಾರಥಿ; ಮೋಹನ್ ಯಾದವ್ ಎಂಪಿ ಮುಖ್ಯಮಂತ್ರಿಯಾಗಿ ಆಯ್ಕೆ

ಮಧ್ಯಪ್ರದೇಶಕ್ಕೆ ನೂತನ ಸಾರಥಿ; ಮೋಹನ್ ಯಾದವ್ ಎಂಪಿ ಮುಖ್ಯಮಂತ್ರಿಯಾಗಿ ಆಯ್ಕೆ

Raghavendra M Y HT Kannada

Dec 11, 2023 05:02 PM IST

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾದ ಬಳಿಕ ಬಿಜೆಪಿ ನಾಯಕರು ಯಾದವ್ ಅವರನ್ನು ಅಭಿನಂದಿಸಿದರು.

  • ಮಧ್ಯಪ್ರದೇಶದಲ್ಲಿ ಹಾಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್‌ಗೆ ಮಣೆ ಹಾಕದ ಬಿಜೆಪಿ ಹೈಕಮಾಂಡ್ , ಮೋಹನ್ ಯಾದವ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಘೋಷಣೆ ಮಾಡಿದೆ.

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾದ ಬಳಿಕ ಬಿಜೆಪಿ ನಾಯಕರು ಯಾದವ್ ಅವರನ್ನು ಅಭಿನಂದಿಸಿದರು.
ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾದ ಬಳಿಕ ಬಿಜೆಪಿ ನಾಯಕರು ಯಾದವ್ ಅವರನ್ನು ಅಭಿನಂದಿಸಿದರು. (ANI)

ದೆಹಲಿ: ಮಧ್ಯಪ್ರದೇಶ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿ 10 ದಿನಗಳ ಬಳಿಕ ಬಿಜೆಪಿ ಮುಖ್ಯಮಂತ್ರಿ ಹೆಸರನ್ನು ಘೋಷಣೆ ಮಾಡಿದೆ. ಉಜ್ಜಯಿನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್ ಯಾದವ್ ಅವರನ್ನು ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಘೋಷಣೆ ಮಾಡಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ; ಕಾಪ್ಟರ್ ಅಪಘಾತಕ್ಕೆ ಸಂಬಂಧಿಸಿದ 10 ಅಪ್ಡೇಟ್ಸ್‌

ಪ್ರಧಾನಿ ಮೋದಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿದರೆ, ಯಾವ ವಲಯದ ಷೇರುಗಳು ಲಾಭದಾಯಕವಾಗಲಿವೆ, ಇಲ್ಲಿದೆ ಪರಿಣತರ ಅಭಿಪ್ರಾಯದ ನೋಟ

ತರಗತಿ ವೇಳೆ ಸ್ನೇಹಿತನೊಂದಿಗೆ ಮಾತು, ಕಿವಿ ಕೇಳಿಸದ ಹಾಗೆ ಬಾರಿಸಿದ ಶಿಕ್ಷಕನ ವಿರುದ್ದ ಎಫ್‌ಐಆರ್

Crime News: ಪ್ರೀತಿ ನಿರಾಕರಣೆ, ಪ್ರಿಯತಮೆ ಜತೆಗೆ ಇಡೀ ಕುಟುಂಬವನ್ನೇ ಕೊಂದು ಹಾಕಿದ ಯುವಕ ಆತ್ಮಹತ್ಯೆ!

ಶಿವರಾಜ್ ಸಿಂಗ್ ಚೌಹಾಣ್ ಅವರ ಹಿಂದಿನ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಮಂಡಸೌರ್‌ನಿಂದ ಎರಡು ಭಾರಿ ಆಯ್ಕೆಯಾಗಿದ್ದ ಜಗದೀಶ್ ದೇವದಾ ಹಾಗೂ ಸಾರ್ವಜನಿಕ ಸಂಪರ್ಕ ಸಚಿವರಾಗಿದ್ದ ರಾಜೇಂದ್ರ ಶುಕ್ಲಾ ಅವರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡಲಾಗಿದೆ.

ವಿಧಾಸನಭೆಗೆ ಆಯ್ಕೆಯಾದ ನಂತರ ಕೇಂದ್ರದ ಕೃಷಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನರೇಂದ್ರ ಸಿಂಗ್ ತೋಮರ್ ಅವರು ಮಧ್ಯಪ್ರದೇಶ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

2013ರಲ್ಲಿ ಉಜ್ಜಯಿನಿ ಜಿಲ್ಲೆಯ ಉಜ್ಜಯಿನಿ ದಕ್ಷಿಣ ವಿಧಾನಸಭೆ ಚುನಾವಣೆಗೆ ಮೊದಲ ಬಾರಿಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಮೋಹನ್ ಯಾದವ್ ಅವರು, 2018 ಹಾಗೂ 2023ರಲ್ಲೂ ಇದೇ ಕ್ಷೇತ್ರದಿಂದ ಗೆದ್ದು ಶಾಸಕರಾಗಿ ಆಯ್ಕೆಯಾಗಿ ಬಂದಿದ್ದಾರೆ. ಈ ಭಾರಿಯ ಚುನಾವಣೆಯಲ್ಲಿ 13,000 ಮತಗಳ ಅಂತರದ ದೊಡ್ಡ ಗೆಲುವು ಪಡೆದಿದ್ದರು. ಶಿವರಾಜ್ ಸಿಂಗ್ ಚೌಹಾಣ್ ಅವರ ಸಚಿವ ಸಂಪುಟದಲ್ಲಿ ಉತನ್ನ ಶಿಕ್ಷಣ ಸಚಿವರಾಗಿ ಮೋಹನ್ ಯಾದವ್ ಸೇವೆ ಸಲ್ಲಿಸಿದ್ದರು.

ನನ್ನ ಜವಾಬ್ದಾರಿಗಳನ್ನು ಪೂರೈಸಲು ಪ್ರಮಾಣವಾಗಿ ಪ್ರಯತ್ನಿಸುತ್ತೇನೆ

ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ. ರಾಜ್ಯ ನಾಯಕತ್ವ ನೀಡಿದ ಕೇಂದ್ರ ನಾಯಕರು ಹಾಗೂ ನೂತನ ಶಾಸಕರಿಗೆ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಬೆಂಬಲದೊಂದಿಗೆ ನಾನು ನನ್ನ ಜವಾಬ್ದಾರಿಗಳನ್ನು ಪೂರೈಸಲು ಪ್ರಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಯಾದವ್ ಅವರು ಸಿಎಂ ಆಗಿ ಆಯ್ಕೆದ ನಂತರ ಪ್ರತಿಕ್ರಿಯಿಸಿದ್ದಾರೆ.

ಸಿಎಂ ಮೋಹನ್ ಯಾದವ್ ಅವರು ಕ್ಲೀನ್ ಇಮೇಜ್ ಹೊಂದಿರುವ ವ್ಯಕ್ತಿ. ಜೊತೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಬಲ ಕೂಡ ಇವರಿಗಿದೆ. ಮಧ್ಯಪ್ರದೇಶ ಕುಸ್ತಿ ಸಂಘಗಳಲ್ಲೂ ಇವರು ಸಕ್ರಿಯರಾಗಿದ್ದಾರೆ. ಯಾದವ್ ಅವರಿಗೆ ಹಿಂದುಳಿದ ವರ್ಗಕ್ಕೆ ಸೇರಿದವರು. ಮಧ್ಯಪ್ರದೇಶದಲ್ಲಿ ಅರ್ಧದಷ್ಟು ಮತದಾರರನ್ನು ಹೊಂದಿರುವ ಒಬಿಸಿ ಸಮುದಾಯವನ್ನು ಒಲೈಸಿಕೊಳ್ಳಲು ಬಿಜೆಪಿ ಮೋಹನ್ ಯಾದವ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

ಬಿಜೆಪಿ ನೂತನ ಶಾಸಕರ ಸಭೆಯಲ್ಲಿ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್ ಖಟ್ಟರ್, ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಕೆ ಲಕ್ಷ್ಮಣ್ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಸೇರಿದಂತೆ ಬಿಜೆಪಿ ವೀಕ್ಷಕರ ತಂಡ ನೂತನ ಶಾಸಕರೊಂದಿಗೆ ಚರ್ಚೆ ನಡೆಸಿದ್ದರು.

ಮಧ್ಯಪ್ರದೇಶದ 230 ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆದ್ದುಕೊಂಡಿತ್ತು. 20 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೆ ಬಿಜೆಪಿ ಮಧ್ಯಪ್ರದೇಶದಲ್ಲಿ ಚುನಾವಣೆ ಎದುರಿಸಿತ್ತು. ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 14ಕ್ಕೂ ಹೆಚ್ಚು ರಾಲಿಗಳನ್ನು ನಡೆಸುತ್ತಿದ್ದರು.

ಮಧ್ಯಪ್ರದೇಶದಲ್ಲಿ ಬಿಜೆಪಿಯಿಂದ ಆಯ್ಕೆಯಾದ 5ನೇ ಮುಖ್ಯಮಂತ್ರಿ

ಸುಂದರ್‌ಲಾಲ್ ಪಟ್ಟಾ, ಉಮಾಭಾರತಿ, ಬಾಬುಲಾಲ್ ಗೌರ್ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ನಂತರ ಬಿಜೆಪಿಯಿಂದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲಿರುವ 5ನೇ ವ್ಯಕ್ತಿ ಮೋಹನ್ ಯಾದವ್ ಆಗಲಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳ ಪೈಕಿ ಚೌಹಾಣ್ ಬರೋಬ್ಬರಿ 16 ವರ್ಷಗಳಿಗೂ ಅಧಿಕ ಕಾಲ ಸಿಎಂ ಆಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಈ ಬಾರಿ ಅವರಿಗೆ ಬಿಜೆಪಿ ಮಣೆ ಹಾಕದೆ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಹಿಂದುಳಿದ ವರ್ಗದ ನಾಯಕನಿಗೆ ಆದ್ಯತೆ ನೀಡಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ