logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Opposition Meet Bengaluru: ಅಧಿಕಾರ ಅಥವಾ ಪ್ರಧಾನಿ ಹುದ್ದೆ ಬಗ್ಗೆ ಕಾಂಗ್ರೆಸ್‌ ಪಕ್ಷಕ್ಕೆ ಆಸಕ್ತಿ ಇಲ್ಲಎಂದ ಮಲ್ಲಿಕಾರ್ಜುನ ಖರ್ಗೆ

Opposition Meet Bengaluru: ಅಧಿಕಾರ ಅಥವಾ ಪ್ರಧಾನಿ ಹುದ್ದೆ ಬಗ್ಗೆ ಕಾಂಗ್ರೆಸ್‌ ಪಕ್ಷಕ್ಕೆ ಆಸಕ್ತಿ ಇಲ್ಲಎಂದ ಮಲ್ಲಿಕಾರ್ಜುನ ಖರ್ಗೆ

Umesh Kumar S HT Kannada

Jul 31, 2023 01:26 PM IST

google News

ವಿಪಕ್ಷ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

  • Opposition Meet: ಜನಪರ ಆಲೋಚನೆಗಳೊಂದಿಗೆ ಮುನ್ನಡೆಯುವಾಗ, ಸೈದ್ಧಾಂತಿಕವಲ್ಲದ ಭಿನ್ನಾಭಿಪ್ರಾಯಗಳನ್ನು ನಿರ್ಲಕ್ಷಿಸಬೇಕಾದ್ದು ಅವಶ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ವಿಪಕ್ಷ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ವಿಪಕ್ಷ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (PTI)

ಬೆಂಗಳೂರು: ರಾಜ್ಯ ಮಟ್ಟದಲ್ಲಿ "ನಮ್ಮಲ್ಲಿ ಕೆಲವರ ನಡುವೆ" ಭಿನ್ನಾಭಿಪ್ರಾಯಗಳಿವೆ, ಆದರೆ ಅವು ಸೈದ್ಧಾಂತಿಕವಾಗಿಲ್ಲ. ಆದರೆ ಜನಪರವಾಗಿ ಆಲೋಚಿಸುವಾಗ ನಾವು ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗಿಲ್ಲ. ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ನೀತಿಗಳಿಂದಾಗಿ ಅವರು "ನೊಂದಿದ್ದಾರೆ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಅವರು ಮಂಗಳವಾರ ಇಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಈ ವಿಚಾರ ಹೇಳಿರುವುದಾಗಿ ಮೂಲಗಳು ತಿಳಿಸಿವೆ. ಇದೇ ಸಂದರ್ಭದಲ್ಲಿ ಕಳೆದ ಮಾರ್ಚ್‌ನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಜನ್ಮದಿನದಂದು ತಾವು ಹೇಳಿದ ಮಾತುಗಳನ್ನು ಉಲ್ಲೇಖಿಸಿದರು.

ಪ್ರಧಾನಿ ಅಭ್ಯರ್ಥಿಯ ಪ್ರಶ್ನೆಗೆ ತಾವು ಅಂದು, "ಪ್ರಶ್ನೆ ಅಲ್ಲ" ಮತ್ತು " ವಿಭಜಕ ಶಕ್ತಿಗಳ ವಿರುದ್ಧದ ಹೋರಾಟದಲ್ಲಿ ಸಮಾನ ಮನಸ್ಕ ಪಕ್ಷಗಳು ಒಗ್ಗೂಡಬೇಕು" ಎಂದು ಸೂಚಿಸಿದ್ದರು. ಇದು ಮು‍ಖ್ಯವಾಗಬೇಕು ಎಂದು ಖರ್ಗೆ ಹೇಳಿದ್ದಾಗಿ ಎಎನ್‌ಐ ವರದಿ ವಿವರಿಸಿದೆ.

“ಕಾಂಗ್ರೆಸ್‌ಗೆ ಅಧಿಕಾರ ಅಥವಾ ಪ್ರಧಾನಿ ಹುದ್ದೆಯಲ್ಲಿ ಆಸಕ್ತಿ ಇಲ್ಲ ಎಂದು ಸ್ಟಾಲಿನ್ ಅವರ ಜನ್ಮದಿನದಂದು ನಾನು ಈ ಹಿಂದೆಯೇ ಚೆನ್ನೈನಲ್ಲಿ ಹೇಳಿದ್ದೆ. ಈ ಸಭೆಯಲ್ಲಿ ನಮ್ಮ ಉದ್ದೇಶ ನಮಗಾಗಿ ಅಧಿಕಾರ ಗಳಿಸುವುದಲ್ಲ. ಇದು ನಮ್ಮ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸುವುದು ಎಂದು ಖರ್ಗೆ ಸಭೆಯಲ್ಲಿ ಹೇಳಿದ್ದಾಗಿ ಎಂದು ಮೂಲಗಳು ತಿಳಿಸಿವೆ.

ಜನರ ಸಮಸ್ಯೆ ಅರ್ಥಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸೋಣ ಎಂದ ಖರ್ಗೆ

ಹಣದುಬ್ಬರದಿಂದ ಸಾಮಾನ್ಯ ಜನರು ಮತ್ತು ಮಧ್ಯಮ ವರ್ಗದವರು ತೊಂದರೆ ಅನುಭವಿಸುತ್ತಿದ್ದಾರೆ, ಯುವಕರು ನಿರುದ್ಯೋಗದಿಂದ ಬಳಲುತ್ತಿದ್ದಾರೆ ಮತ್ತು ಬಡವರು, ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು "ತೆರೆಮರೆಯಲ್ಲಿ ಮೌನವಾಗಿ" ಹತ್ತಿಕ್ಕಲಾಗುತ್ತಿದೆ ಎಂದು ಖರ್ಗೆ ವಿರೋಧ ಪಕ್ಷಗಳ ಸಭೆಯಲ್ಲಿ ಹೇಳಿದರು.

“ರಾಜ್ಯ ಮಟ್ಟದಲ್ಲಿ, ನಮ್ಮಲ್ಲಿ ಕೆಲವರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂದು ನಮಗೆ ತಿಳಿದಿದೆ. ಈ ಭಿನ್ನಾಭಿಪ್ರಾಯಗಳು ಸೈದ್ಧಾಂತಿಕವಲ್ಲ. 26 ಪಕ್ಷಗಳು ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುತ್ತಿವೆ ಮತ್ತು ಅವರು 11 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದಾರೆ ಎಂದು ಖರ್ಗೆ ಹೇಳಿದರು.

ಎನ್‌ಡಿಎ ಸಭೆ ಮತ್ತು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಖರ್ಗೆ

ಎನ್‌ಡಿಎ ಸಭೆಯ ಬಗ್ಗೆ ಖರ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ಪಕ್ಷವು ತನ್ನ ಮಿತ್ರಪಕ್ಷಗಳ ಮೌಲ್ಯವನ್ನು ಇದ್ದಕ್ಕಿದ್ದಂತೆ ಅರಿತುಕೊಂಡಿದೆ. ಅದು ತನ್ನ ಮಿತ್ರಪಕ್ಷಗಳ ಮತಗಳನ್ನು ಬಳಸಿಕೊಂಡಿತು ಮತ್ತು ಅಧಿಕಾರಕ್ಕೆ ಬಂದಿತು ಮತ್ತು ನಂತರ ಅವುಗಳನ್ನು ತಿರಸ್ಕರಿಸಿತು. ಇಂದು ಬಿಜೆಪಿ ಅಧ್ಯಕ್ಷರು ಮತ್ತು ಅವರ ನಾಯಕರು ತಮ್ಮ ಹಳೆಯ ಮಿತ್ರರನ್ನು ತಿದ್ದಿಕೊಳ್ಳಲು ರಾಜ್ಯದಿಂದ ರಾಜ್ಯಕ್ಕೆ ಓಡುತ್ತಿದ್ದಾರೆ ಎಂದು ಖರ್ಗೆ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಪ್ರತಿಯೊಂದು ಸಂಸ್ಥೆಯನ್ನು ಪ್ರತಿಪಕ್ಷಗಳ ವಿರುದ್ಧದ ಅಸ್ತ್ರವನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ಖರ್ಗೆ, ಸಿಬಿಐ, ಇಡಿ, ಆದಾಯ ತೆರಿಗೆಯನ್ನು ವಾಡಿಕೆಯಂತೆ ಬಳಸಲಾಗುತ್ತಿದೆ. ನಮ್ಮ ನಾಯಕರ ವಿರುದ್ಧ ಸುಳ್ಳು ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿ ಅವರು ಕಾನೂನು ಪ್ರಕ್ರಿಯೆಯಲ್ಲಿ ಸಿಲುಕಿಕೊಳ್ಳುತ್ತಾರೆ. ನಮ್ಮ ಸಂಸದರನ್ನು ಅಮಾನತುಗೊಳಿಸಲು ಸಾಂವಿಧಾನಿಕ ಅಧಿಕಾರಿಗಳನ್ನು ಬಳಸಲಾಗುತ್ತದೆ. ಬಿಜೆಪಿಗೆ ತೆರಳಲು ಮತ್ತು ಸರ್ಕಾರಗಳನ್ನು ಉರುಳಿಸಲು ಶಾಸಕರನ್ನು ಬ್ಲಾಕ್‌ಮೇಲ್ ಮಾಡಲಾಗುತ್ತಿದೆ ಅಥವಾ ಲಂಚ ನೀಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವ ಯೋಜನೆಗಳ ಬಗ್ಗೆ ವಿರೋಧ ಪಕ್ಷದ ನಾಯಕರು ಚರ್ಚಿಸಲಿದ್ದಾರೆ. ಎರಡು ದಿನಗಳ ಸಭೆ ಇಂದು ಮಂಗಳವಾರ (ಜು.18) ಮುಕ್ತಾಯವಾಗಲಿದೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ