logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  New Governors: ಮಹಾರಾಷ್ಟ್ರ ರಾಜ್ಯಪಾಲರ ರಾಜೀನಾಮೆ ಬೆನ್ನಲ್ಲೇ ರಾಷ್ಟ್ರಪತಿಗಳಿಂದ 12 ಗವರ್ನರ್‌ಗಳ ನೇಮಕ

New Governors: ಮಹಾರಾಷ್ಟ್ರ ರಾಜ್ಯಪಾಲರ ರಾಜೀನಾಮೆ ಬೆನ್ನಲ್ಲೇ ರಾಷ್ಟ್ರಪತಿಗಳಿಂದ 12 ಗವರ್ನರ್‌ಗಳ ನೇಮಕ

HT Kannada Desk HT Kannada

Feb 12, 2023 11:57 AM IST

ರಾಷ್ಟ್ರಪತಿ ದ್ರೌಪದಿ ಮುರ್ಮು

    • ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೊಶ್ಯಾರಿ ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಇವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ 12 ರಾಜ್ಯಗಳಿಗೆ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಡಾಖ್​ಗೆ ಒಬ್ಬ ಲೆಫ್ಟಿನೆಂಟ್ ಗವರ್ನರ್ ಅನ್ನು ನೇಮಕ ಮಾಡಿದ್ದಾರೆ. 
ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೊಶ್ಯಾರಿ ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಇವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ 12 ರಾಜ್ಯಗಳಿಗೆ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಡಾಖ್​ಗೆ ಒಬ್ಬ ಲೆಫ್ಟಿನೆಂಟ್ ಗವರ್ನರ್ ಅನ್ನು ನೇಮಕ ಮಾಡಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಭಾನುವಾರ ಚಿನ್ನ, ಬೆಳ್ಳಿ ಎರಡರ ದರವೂ ಹೆಚ್ಚಳ; ಆಭರಣ ಖರೀದಿಸುವ ಯೋಚನೆ ಇದ್ದರೆ ಇಂದಿನ ಬೆಲೆ ಗಮನಿಸಿ

ಭಾರತದ ಅತಿದೊಡ್ಡ ಬಜಾಜ್ ಪಲ್ಸರ್‌ ಮಾರುಕಟ್ಟೆಗೆ; ಪಲ್ಸರ್ NS400Z ಬೈಕ್‌ ದರ 1.85 ಲಕ್ಷ ರೂ, ವಿನ್ಯಾಸ ವಿಶೇಷ ವಿವರ ಹೀಗಿದೆ

ತಿರುಮಲ ತಿರುಪತಿಯಲ್ಲಿ ನವದಂಪತಿಗೆ ವಿಶೇಷ ಶ್ರೀವಾರಿ ದರ್ಶನ ಟಿಕೆಟ್ ಪ್ರಕಟಿಸಿದ ಟಿಟಿಡಿ; ಎಷ್ಟಿವೆ ಕೋಟಾ, ದರ ಇತ್ಯಾದಿ ವಿವರ

Gold Rate Today: ಮತ್ತೆ ಆರಂಭವಾಯ್ತು ಚಿನ್ನ, ಬೆಳ್ಳಿ ದರದಲ್ಲಿನ ಏರಿಳಿತ; ಶನಿವಾರ ಚಿನ್ನದ ದರ ಇಳಿಕೆ, ಬೆಳ್ಳಿ ಏರಿಕೆ

ಜಾರ್ಖಂಡ್‌ನ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಈಗ ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ಅರುಣಾಚಲ ಪ್ರದೇಶದ ಗವರ್ನರ್ ಆಗಿರುವ ಬಿ.ಡಿ. ಮಿಶ್ರಾ ಅವರು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡಿದ್ದಾರೆ.

ಸುಪ್ರೀಂ ಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಎಸ್.ಅಬ್ದುಲ್ ನಜೀರ್ ಅವರು ದಕ್ಷಿಣ ಕನ್ನಡದ ಬೆಳುವಾಯಿ ಮೂಲದವರು. ಇವರು ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು ನೀಡಿದ ಬೆಂಚ್ ಸದಸ್ಯರಾಗಿದ್ದರು.

ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ನಾಯಕ್ ಅವರನ್ನು ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ, ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಸಿಕ್ಕಿಂ ರಾಜ್ಯಪಾಲರಾಗಿ, ಸಿಪಿ ರಾಧಾಕೃಷ್ಣನ್ ಅವರನ್ನು ಜಾರ್ಖಂಡ್ ರಾಜ್ಯಪಾಲರಾಗಿ, ಶಿವ ಪ್ರತಾಪ್ ಶುಕ್ಲಾ ಅವರನ್ನು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ, ಅಸ್ಸಾಂ ರಾಜ್ಯಪಾಲರಾಗಿ ಗುಲಾಬ್ ಚಂದ್ ಕಟಾರಿಯಾ ಅವರನ್ನು ನೇಮಿಸಲಾಗಿದೆ.

ಆಂಧ್ರಪ್ರದೇಶದ ರಾಜ್ಯಪಾಲರಾದ ಬಿಸ್ವ ಭೂಷಣ್ ಹರಿಚಂದನ್ ಅವರನ್ನು ಈಗ ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಛತ್ತೀಸ್‌ಗಢದ ರಾಜ್ಯಪಾಲರಾದ ಸುಶ್ರೀ ಅನುಸೂಯಾ ಉಯಿಕ್ಯೆ ಅವರನ್ನು ಮಣಿಪುರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಮಣಿಪುರದ ರಾಜ್ಯಪಾಲರಾದ ಲಾ ಗಣೇಶನ್ ಅವರನ್ನು ನಾಗಾಲ್ಯಾಂಡ್ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಬಿಹಾರದ ರಾಜ್ಯಪಾಲರಾದ ಫಾಗು ಚೌಹಾಣ್ ಅವರನ್ನು ಈಗ ಮೇಘಾಲಯದ ರಾಜ್ಯಪಾಲರನ್ನಾಗಿ ಮತ್ತು ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಈಗ ಬಿಹಾರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಇವುಗಳ ಜೊತೆಗೆ ಹಲವಾರು ರಾಜ್ಯಪಾಲರಿಗೆ ವಿವಿಧ ರಾಜ್ಯಗಳ ಉಸ್ತುವಾರಿ ನೀಡಲಾಗಿದೆ. ನೇಮಕಾತಿಗಳು ಅವರು ತಮ್ಮ ತಮ್ಮ ಕಚೇರಿಗಳ ಉಸ್ತುವಾರಿ ವಹಿಸಿಕೊಂಡ ದಿನಾಂಕಗಳಿಂದ ಜಾರಿಗೆ ಬರುತ್ತವೆ ಎಂದು ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಇಂದಿನ ಪ್ರಮುಖ ಸುದ್ದಿ

Abdul Nazeer Andhra Governor: ಆಂಧ್ರ ರಾಜ್ಯಪಾಲರಾಗಿ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ ಮಂಗಳೂರಿನ ಅಬ್ದುಲ್‌ ನಜೀರ್‌ ಪರಿಚಯ

ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್‌. ಅಬ್ದುಲ್‌ ನಜೀರ್‌ ಅವರನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ನೇಮಕ ಮಾಡಿದ್ದಾರೆ. ದಕ್ಷಿಣ ಕನ್ನಡದ ಬೆಳುವಾಯಿ ಮೂಲದ ಇವರ ಬಗ್ಗೆ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

    ಹಂಚಿಕೊಳ್ಳಲು ಲೇಖನಗಳು