logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Revanth Reddy: ರೇವಂತ್ ರೆಡ್ಡಿ ತೆಲಂಗಾಣ ಸಿಎಂ ಪದಗ್ರಹಣಕ್ಕೆ ಕ್ಷಣಗಣನೆ; ಜಗನ್, ಕೆಸಿಆರ್, ಸ್ಟಾಲಿನ್ ಸೇರಿ ಗಣ್ಯರ ಪಟ್ಟಿ ಹೀಗಿದೆ

Revanth Reddy: ರೇವಂತ್ ರೆಡ್ಡಿ ತೆಲಂಗಾಣ ಸಿಎಂ ಪದಗ್ರಹಣಕ್ಕೆ ಕ್ಷಣಗಣನೆ; ಜಗನ್, ಕೆಸಿಆರ್, ಸ್ಟಾಲಿನ್ ಸೇರಿ ಗಣ್ಯರ ಪಟ್ಟಿ ಹೀಗಿದೆ

Raghavendra M Y HT Kannada

Dec 06, 2023 06:24 PM IST

ರೇವಂತ್ ರೆಡ್ಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ತೆಲುಗು ರಾಜ್ಯಗಳ ಪ್ರಮುಖ ರಾಜಕೀಯ ನಾಯರು ಭಾಗವಹಿಸಲಿದ್ದಾರೆ.

  • ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನಕ್ಕೆ ತೆಲುಗು ರಾಜ್ಯಗಳ ನಾಯಕರು ಸಾಕ್ಷಿಯಾಗಲಿದ್ದಾರೆ. ಬೇರೆ ಯಾರೆಲ್ಲಾ ಭಾಗವಹಿಸಲಿದ್ದಾರೆ ಅನ್ನೋದರ ಪಟ್ಟಿ ಇಲ್ಲಿದೆ.

ರೇವಂತ್ ರೆಡ್ಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ತೆಲುಗು ರಾಜ್ಯಗಳ ಪ್ರಮುಖ ರಾಜಕೀಯ ನಾಯರು ಭಾಗವಹಿಸಲಿದ್ದಾರೆ.
ರೇವಂತ್ ರೆಡ್ಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ತೆಲುಗು ರಾಜ್ಯಗಳ ಪ್ರಮುಖ ರಾಜಕೀಯ ನಾಯರು ಭಾಗವಹಿಸಲಿದ್ದಾರೆ.

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ, ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ-ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಅವರು ನಾಳೆ (ಡಿಸೆಂಬರ್ 7, ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಟ್ರೆಂಡಿಂಗ್​ ಸುದ್ದಿ

ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ; ಕಾಪ್ಟರ್ ಅಪಘಾತಕ್ಕೆ ಸಂಬಂಧಿಸಿದ 10 ಅಪ್ಡೇಟ್ಸ್‌

ಪ್ರಧಾನಿ ಮೋದಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿದರೆ, ಯಾವ ವಲಯದ ಷೇರುಗಳು ಲಾಭದಾಯಕವಾಗಲಿವೆ, ಇಲ್ಲಿದೆ ಪರಿಣತರ ಅಭಿಪ್ರಾಯದ ನೋಟ

ತರಗತಿ ವೇಳೆ ಸ್ನೇಹಿತನೊಂದಿಗೆ ಮಾತು, ಕಿವಿ ಕೇಳಿಸದ ಹಾಗೆ ಬಾರಿಸಿದ ಶಿಕ್ಷಕನ ವಿರುದ್ದ ಎಫ್‌ಐಆರ್

Crime News: ಪ್ರೀತಿ ನಿರಾಕರಣೆ, ಪ್ರಿಯತಮೆ ಜತೆಗೆ ಇಡೀ ಕುಟುಂಬವನ್ನೇ ಕೊಂದು ಹಾಕಿದ ಯುವಕ ಆತ್ಮಹತ್ಯೆ!

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. ನಿನ್ನೆಯಷ್ಟೇ (ಡಿಸೆಂಬರ್ 5, ಮಂಗಳವಾರ) ನಡೆದಿದ್ದ ನೂತನ ಶಾಸಕರ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ರೇವಂತ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿತ್ತು. ಇದಾದ ಬಳಿಕ ರಾಜ್ಯಪಾಲರಾದ ತಮಿಳಿಸೈ ಅವರನ್ನು ಭೇಟಿ ಮಾಡಿದ್ದ ನಾಯಕರು ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ.

ರೇವಂತ್ ರೆಡ್ಡಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಐಸಿಸಿ ನಾಯಕರು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಹಲವು ರಾಜ್ಯಗಳ ಸಿಎಂಗಳು, ಮಾಜಿ ಸಿಎಂಗಳು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಹಾಗೂ ಸಿನಿ ಕ್ಷೇತ್ರದ ಸೆಲೆಬ್ರಿಟಿಗಳನ್ನು ತೆಲಂಗಾಣದ ಕಾಂಗ್ರೆಸ್ ನಾಯಕರು ಆಹ್ವಾನಿಸಿದ್ದಾರೆ.

ಆಹ್ವಾನಿತ ಗಣ್ಯರ ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ?

ಕೈ ನಾಯಕರ ಆಹ್ವಾನಿಸಿರುವ ಗಣ್ಯರ ಪೈಕಿ ನೆರೆಯ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ತೆಲಂಗಾಣ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್, ತಮಿಳನಾಡು ಸಿಎಂ ಎಂಕೆ ಸ್ಟಾಲಿನ್ ಕೂಡ ಸೇರಿದ್ದಾರೆ.

ಸಿಎಲ್‌ಪಿ ನಾಯಕರಾಗಿ ಆಯ್ಕೆಯಾದ ಬಳಿಕ ದೆಹಲಿಗೆ ತೆರಳಿದ್ದ ನಿಯೋಜಿತ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಅಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಪ್ರಮಾಣವ ವಚನ ಸಮಾರಂಭಕ್ಕೆ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ಇವರ ಜೊತೆಗೆ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಇತರೆ ಸಚಿವರಿಗೂ ಆಹ್ವಾನ ಬಂದಿದೆ.

ಇವರಷ್ಟೇ ಅಲ್ಲದೆ, ಕಾಂಗ್ರೆಸ್ ಹಿರಿಯ ನಾಯಕರಾದ ಪಿ ಚಿದಂಬರಂ, ರಾಜಸ್ಥಾನ ಮಾಜಿ ಸಿಎಂ ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್, ಲೋಕಸಭಾ ಮಾಜಿ ಸ್ಪೀಕರ್ ಮೀರಾ ಕುಮಾರ್, ಕರ್ನಾಟಕ ಮಾಜಿ ಸಿಎಂ, ಮಾಜಿ ಎಂಪಿ ವೀರಪ್ಪ ಮೊಯ್ಲಿ ಅವರನ್ನು ಪದಗ್ರಹಣ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

ಸಿನಿ ಸ್ಟಾರ್‌ಗಳು, ವಿವಿಧ ಸಂಘಟನೆಗಳ ನಾಯಕರಿಗೂ ಆಹ್ವಾನ

ತೆಲಂಗಾಣದ ವಿವಿಧ ಸಂಘಟನೆಗಳ ನಾಯಕರನ್ನು ಆಹ್ವಾನಿಸಲಾಗಿದೆ. ಟಿಜೆಎಸ್ ಅಧ್ಯಕ್ಷ ಪ್ರೊ ಕೋದಂಡರಾಮ್, ಗಾದೆ ಇನಯ್ಯ, ಪ್ರೊ ಹರಗೋಪಾಲ್, ಕಾಂಚೆ ಇಳಯ್ಯ, ತೆಲಂಗಾಣದಲ್ಲಿ ಹುತಾತ್ಮರಾದವರ ಕುಟುಂಬ ಸದಸ್ಯರು ಹಾಗೂ ಸಿನಿಮಾ ರಂಗದ ಸೆಲೆಬ್ರಿಟಿಗಳಿಗೂ ಆಹ್ವಾನ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಡಿಸೆಂಬರ್ 7ರ ಗುರುವಾರ ಮಧ್ಯಾಹ್ನ 1.04 ಗಂಟೆಗೆ ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ರೇವಂತ್ ರೆಡ್ಡಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪದಗ್ರಹಣದ ನಂತರ ಚುನಾವಣೆಯಲ್ಲಿ ಘೋಷಣೆ ಮಾಡಲಾಗಿದ್ದ ಆರು ಗ್ಯಾರಂಟಿಗಳ ಜಾರಿಗೆ ಸಹಿ ಹಾಕಲಿದ್ದಾರೆ. ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ರೇವಂತ್ ರೆಡ್ಡಿ ಅವರೇ ಹೇಳಿದ್ದರು. 6 ಗ್ಯಾರಂಟಿಗಳಿಗೆ ಸಾಕಷ್ಟು ಹಣ ಬೇಕಾಗುತ್ತದೆ. ಸಿಎಂ ಆಗಿ ರೇವಂತ್ ರೆಡ್ಡಿ ಅವರು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ