logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Rahul Gandhi In London: 'ಆರ್‌ಎಸ್‌ಎಸ್ ಭಾರತದ ಎಲ್ಲಾ ಸಂಸ್ಥೆಗಳನ್ನು ವಶಪಡಿಸಿಕೊಂಡಿದೆ' - ರಾಹುಲ್ ಗಾಂಧಿ

Rahul Gandhi in London: 'ಆರ್‌ಎಸ್‌ಎಸ್ ಭಾರತದ ಎಲ್ಲಾ ಸಂಸ್ಥೆಗಳನ್ನು ವಶಪಡಿಸಿಕೊಂಡಿದೆ' - ರಾಹುಲ್ ಗಾಂಧಿ

HT Kannada Desk HT Kannada

Mar 07, 2023 10:00 AM IST

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

    • ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಒಂದು ಮೂಲಭೂತವಾದಿ, ಪ್ರತಿಗಾಮಿ ಸಂಘಟನೆಯಾಗಿದ್ದು, ಭಾರತದ ಎಲ್ಲಾ ಸಂಸ್ಥೆಗಳನ್ನು ಅದು ವಶಪಡಿಸಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಒಂದು ಮೂಲಭೂತವಾದಿ, ಪ್ರತಿಗಾಮಿ ಸಂಘಟನೆಯಾಗಿದ್ದು, ಭಾರತದ ಎಲ್ಲಾ ಸಂಸ್ಥೆಗಳನ್ನು ಅದು ವಶಪಡಿಸಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

ಲಂಡನ್‌ನ ಚಥಮ್ ಹೌಸ್‌ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ರಾಹುಲ್ ಗಾಂಧಿ, "ಭಾರತದಲ್ಲಿ ಪ್ರಜಾಸತ್ತಾತ್ಮಕ ಸ್ಪರ್ಧೆಯ ಸ್ವರೂಪ ಸಂಪೂರ್ಣವಾಗಿ ಬದಲಾಗಿದೆ. ಇದಕ್ಕೆ ಕಾರಣ ಆರ್‌ಎಸ್‌ಎಸ್ ಎಂಬ ಒಂದು ಸಂಘಟನೆ. ಇದು ಮೂಲಭೂತವಾದಿ, ಪ್ರತಿಗಾಮಿ ಸಂಘಟನೆಯಾಗಿದ್ದು, ಭಾರತದ ಎಲ್ಲಾ ಸಂಸ್ಥೆಗಳನ್ನು ವಶಪಡಿಸಿಕೊಂಡಿದೆ" ಎಂದು ಹೇಳಿದರು.

"ಭಾರತದಲ್ಲಿ ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರಿಗೆ ಏನು ಮಾಡಲಾಗುತ್ತಿದೆ ಎಂಬುದನ್ನು ನೀವು ನೋಡಬಹುದು. ಇದನ್ನು ಕೇವಲ ಕಾಂಗ್ರೆಸ್ ಹೇಳುತ್ತಿಲ್ಲ, ಭಾರತೀಯ ಪ್ರಜಾಪ್ರಭುತ್ವದಲ್ಲಿ ಗಂಭೀರ ಸಮಸ್ಯೆ ಇದೆ ಎಂದು ವಿದೇಶಿ ಪತ್ರಿಕೆಗಳಲ್ಲೇ ನಿರಂತರವಾಗಿ ಲೇಖನಗಳು ಬರುತ್ತಿವೆ" ಎಂದರು.

"ನಮ್ಮ ದೇಶದ ವಿವಿಧ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವಲ್ಲಿ ಅವರು ಎಷ್ಟು ಯಶಸ್ವಿಯಾಗಿದ್ದಾರೆ ಎಂಬುದು ನನಗೆ ಆಘಾತವನ್ನುಂಟು ಮಾಡಿದೆ. ಪತ್ರಿಕೆ, ನ್ಯಾಯಾಂಗ, ಸಂಸತ್ತು ಮತ್ತು ಚುನಾವಣಾ ಆಯೋಗಗಳು ಬೆದರಿಕೆಗೆ ಒಳಗಾಗಿವೆ ಮತ್ತು ಒಂದಲ್ಲ ಒಂದು ರೀತಿಯಲ್ಲಿ ನಿಯಂತ್ರಿಸಲ್ಪಡುತ್ತವೆ" ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಆರ್‌ಎಸ್‌ಎಸ್ ಒಂದು ರಹಸ್ಯ ಸಮಾಜ. ಇದನ್ನು ಮುಸ್ಲಿಂ ಭ್ರಾತೃತ್ವದ ಮಾದರಿಯಲ್ಲಿ ನಿರ್ಮಿಸಲಾಗಿದೆ ಮತ್ತು ಅಧಿಕಾರಕ್ಕೆ ಬರಲು ಪ್ರಜಾಸತ್ತಾತ್ಮಕ ಸ್ಪರ್ಧೆಯನ್ನು ಬಳಸುವುದು ಮತ್ತು ನಂತರ ಪ್ರಜಾಸತ್ತಾತ್ಮಕ ಸ್ಪರ್ಧೆಯನ್ನು ಬುಡಮೇಲು ಮಾಡುವುದು ಇದರ ಉದ್ದೇಶವಾಗಿದೆ ಎಂದರು.

"ಕೇಂದ್ರೀಯ ಏಜೆನ್ಸಿಗಳನ್ನು ಹೇಗೆ ಬಳಸುತ್ತಾರೆ ಎಂದು ನೀವು ಯಾವುದೇ ವಿರೋಧ ಪಕ್ಷದ ನಾಯಕನನ್ನು ಕೇಳಬಹುದು. ನನ್ನ ಫೋನ್‌ನಲ್ಲಿ ಪೆಗಾಸಸ್ ಇತ್ತು, ಅದು ನಾವು ಅಧಿಕಾರದಲ್ಲಿದ್ದಾಗ ನಡೆಯಲಿಲ್ಲ" ಎಂದು ಅವರು ಹೇಳಿದರು.

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಉಪನ್ಯಾಸದ ಸಂದರ್ಭದಲ್ಲಿ ಮಾತನಾಡಿದ್ದ ರಾಹುಲ್​ ಗಾಂಧಿ, ಕೇಂದ್ರ ಸರ್ಕಾರದ ಮೇಲೆ ಕಟುವಾದ ದಾಳಿ ನಡೆಸಿದರು. ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನು ತನ್ನ ಫೋನ್ ಅನ್ನು ಸ್ನೂಪ್ ಮಾಡಲು (ರಹಸ್ಯವಾಗಿ ಮಾಹಿತಿ ತಿಳಿಯಲು) ಬಳಸಲಾಗುತ್ತಿದೆ ಎಂದು ಆರೋಪಿಸಿದರು. ನಮ್ಮ ಕರೆಗಳು ರೆಕಾರ್ಡ್ ಆಗುತ್ತಿರುವುದರಿಂದ ಫೋನ್‌ನಲ್ಲಿ ಮಾತನಾಡುವಾಗ ಜಾಗರೂಕರಾಗಿರಿ ಎಂದು ಗುಪ್ತಚರ ಅಧಿಕಾರಿಗಳು ತನಗೆ ಎಚ್ಚರಿಕೆ ನೀಡಿದ್ದಾರೆ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ವಿಪಕ್ಷ ರಾಜಕಾರಣಿಗಳ ಫೋನ್‌ಗಳನ್ನು ಕದ್ದಾಲಿಸಲು ಭಾರತ ಸರ್ಕಾರ ಪೆಗಾಸಸ್‌ ಸ್ಪೈವೇರ್‌ನ್ನು ಬಳಸಿಕೊಂಡಿತ್ತು. ನಾನೂ ಕೂಡ ಈ ಬೇಹುಗಾರಿಕೆಯ ಬಲಿಪಶು. ಪೆಗಾಸಸ್‌ ಮೂಲಕ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಒತ್ತಡ ಹೇರಿ, ಕೇಂದ್ರ ಸರ್ಕಾರ ಪ್ರತಿಪಕ್ಷ ನಾಯಕರ ಫೋನ್‌ ಕದ್ದಾಲಿಸಿದೆ. ಅಲ್ಲದೇ ವಿಪಕ್ಷಗಳ ಧ್ವನಿಯನ್ನು ಅಡಗಿಸಲು ಹಲವಾರು ಕ್ರಿಮಿನಲ್‌ ಮೊಕದ್ದಮೆಗಳನ್ನು ಹಾಕಲಾಗಿದೆ. ನನ್ನ ಮೇಲೂ ಹಲವು ಸುಳ್ಳು ಮೊಕದ್ದಮೆಗಳು ದಾಖಲಾಗಿವೆ ಎಂದು ರಾಹುಲ್‌ ಗಾಂಧಿ ಅಸಮಾಧಾನ ಹೊರಹಾಕಿದರು

ನಾನೇ ನನ್ನ ಫೋನ್‌ನಲ್ಲಿ ಪೆಗಾಸಸ್ ಹೊಂದಿದ್ದೇನೆ. ಹೆಚ್ಚಿನ ಸಂಖ್ಯೆಯ ರಾಜಕಾರಣಿಗಳ ಫೋನ್‌ಗಳಲ್ಲಿ ಪೆಗಾಸಸ್ ಇತ್ತು. ನನಗೆ ಗುಪ್ತಚರ ಅಧಿಕಾರಿಗಳು ಕರೆ ಮಾಡಿದ್ದಾರೆ, 'ದಯವಿಟ್ಟು ನೀವು ಫೋನ್‌ನಲ್ಲಿ ಏನು ಮಾತನಾಡುತ್ತಿದ್ದೀರಿ ಎಂಬುದರ ಕುರಿತು ಜಾಗರೂಕರಾಗಿರಿ ಏಕೆಂದರೆ ನಾವು ರೆಕಾರ್ಡ್ ಮಾಡುತ್ತಿದ್ದೇವೆ' ಎಂದು ಹೇಳಿದರು. ಆದ್ದರಿಂದ ಇದು ನಾವು ಅನುಭವಿಸುವ ನಿರಂತರ ಒತ್ತಡ ಎಂದು ತಮ್ಮ ಭಾಷಣದಲ್ಲಿ ತಿಳಿಸಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ