logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Madhya Pradesh: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ ಶಿಕ್ಷಕನಿಗೆ ಅಮಾನತು ಶಿಕ್ಷೆ!

Madhya Pradesh: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ ಶಿಕ್ಷಕನಿಗೆ ಅಮಾನತು ಶಿಕ್ಷೆ!

HT Kannada Desk HT Kannada

Dec 03, 2022 06:25 PM IST

ಕಾಂಗ್ರೆಸ್ ನ ‘ಕಾಶ್ಮೀರದಿಂದ ಕನ್ಯಾಕುಮಾರಿ’ ಯಾತ್ರೆಯು ನವೆಂಬರ್ 23ರಂದು ಮಧ್ಯಪ್ರದೇಶ ಪ್ರವೇಶಿಸಿದೆ.

    • ರಾಜ್ಯದ ಕನಸ್ಯ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಶಿಕ್ಷಕ ರಾಜೇಶ್ ಕನ್ನೋಜೆ ಎಂಬವರು, 'ಮುಖ್ಯವಾದ ಕೆಲಸವೊಂದಿದೆ' ಎಂದು ಉಲ್ಲೇಖಿಸಿ ರಜೆ ಕೋರಿದ್ದರು. ಆದರೆ, ಅವರು ಯಾತ್ರೆಯಲ್ಲಿ ಭಾಗವಹಿಸಿದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಬಳಿಕ, ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗವಹಿಸುವ ಸಲುವಾಗಿ ರಜೆ ತೆಗೆದುಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ.
ಕಾಂಗ್ರೆಸ್ ನ ‘ಕಾಶ್ಮೀರದಿಂದ ಕನ್ಯಾಕುಮಾರಿ’ ಯಾತ್ರೆಯು ನವೆಂಬರ್ 23ರಂದು ಮಧ್ಯಪ್ರದೇಶ ಪ್ರವೇಶಿಸಿದೆ.
ಕಾಂಗ್ರೆಸ್ ನ ‘ಕಾಶ್ಮೀರದಿಂದ ಕನ್ಯಾಕುಮಾರಿ’ ಯಾತ್ರೆಯು ನವೆಂಬರ್ 23ರಂದು ಮಧ್ಯಪ್ರದೇಶ ಪ್ರವೇಶಿಸಿದೆ. (PTI)

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ಮಧ್ಯಪ್ರದೇಶದ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಭಾನುವಾರ ಚಿನ್ನ, ಬೆಳ್ಳಿ ಎರಡರ ದರವೂ ಹೆಚ್ಚಳ; ಆಭರಣ ಖರೀದಿಸುವ ಯೋಚನೆ ಇದ್ದರೆ ಇಂದಿನ ಬೆಲೆ ಗಮನಿಸಿ

ಭಾರತದ ಅತಿದೊಡ್ಡ ಬಜಾಜ್ ಪಲ್ಸರ್‌ ಮಾರುಕಟ್ಟೆಗೆ; ಪಲ್ಸರ್ NS400Z ಬೈಕ್‌ ದರ 1.85 ಲಕ್ಷ ರೂ, ವಿನ್ಯಾಸ ವಿಶೇಷ ವಿವರ ಹೀಗಿದೆ

ತಿರುಮಲ ತಿರುಪತಿಯಲ್ಲಿ ನವದಂಪತಿಗೆ ವಿಶೇಷ ಶ್ರೀವಾರಿ ದರ್ಶನ ಟಿಕೆಟ್ ಪ್ರಕಟಿಸಿದ ಟಿಟಿಡಿ; ಎಷ್ಟಿವೆ ಕೋಟಾ, ದರ ಇತ್ಯಾದಿ ವಿವರ

Gold Rate Today: ಮತ್ತೆ ಆರಂಭವಾಯ್ತು ಚಿನ್ನ, ಬೆಳ್ಳಿ ದರದಲ್ಲಿನ ಏರಿಳಿತ; ಶನಿವಾರ ಚಿನ್ನದ ದರ ಇಳಿಕೆ, ಬೆಳ್ಳಿ ಏರಿಕೆ

ರಾಜ್ಯದ ಕನಸ್ಯ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಶಿಕ್ಷಕ ರಾಜೇಶ್ ಕನ್ನೋಜೆ ಎಂಬವರು, 'ಮುಖ್ಯವಾದ ಕೆಲಸವೊಂದಿದೆ' ಎಂದು ಉಲ್ಲೇಖಿಸಿ ರಜೆ ಕೋರಿದ್ದರು. ಆದರೆ, ಅವರು ಯಾತ್ರೆಯಲ್ಲಿ ಭಾಗವಹಿಸಿದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಬಳಿಕ, ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗವಹಿಸುವ ಸಲುವಾಗಿ ರಜೆ ತೆಗೆದುಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ. ಈ ಬಗ್ಗೆ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಬಿಜೆಪಿ ರಾಜ್ಯ ಸರ್ಕಾರದ ಬುಡಕಟ್ಟು ವ್ಯವಹಾರಗಳ ಇಲಾಖೆಯ ಶಿಕ್ಷಣತಜ್ಞ ಕನ್ನೋಜೆ ಅವರು, ವೃತ್ತಿಪರ ನಡವಳಿಕೆಯನ್ನು ನಿಯಂತ್ರಿಸುವ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ರಾಜಕೀಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ನವೆಂಬರ್ 25ರಿಂದ ಅನ್ವಯವಾಗುವಂತೆ ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ಈ ಆದೇಶದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಹರಿದಾಡಿದ ಬಳಿಕವಷ್ಟೇ ವಿಷಯ ಬೆಳಕಿಗೆ ಬಂದಿದೆ.

ಕಾಂಗ್ರೆಸ್‌ನ ಪ್ರಮುಖ ಕಾರ್ಯಕ್ರಮವಾದ 'ಕಾಶ್ಮೀರದಿಂದ ಕನ್ಯಾಕುಮಾರಿ' ಯಾತ್ರೆಯು ನವೆಂಬರ್ 23ರಂದು ಮಧ್ಯಪ್ರದೇಶವನ್ನು ಪ್ರವೇಶಿಸಿದೆ. ಇಂದು ಬೆಳಗ್ಗೆ ಮಹುದಿಯಾ ಗ್ರಾಮದಿಂದ ನಡಿಗೆ ಪುನರಾರಂಭವಾಗಿದೆ. ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ನಾಮದೇವ್ ದಾಸ್ ತ್ಯಾಗಿ ಅವರು ರಾಹುಲ್‌ ಗಾಂಧಿ ಅವರನ್ನು ಯಾತ್ರೆಯಲ್ಲಿ‌ ಸೇರಿಕೊಂಡಿದ್ದಾರೆ.

ಯಾತ್ರೆಯಲ್ಲಿ ಖ್ಯಾತ ಸಂಗೀತ ಸಂಯೋಜಕ ಟಿಎಂ ಕೃಷ್ಣ ಕೂಡ ಭಾಗವಹಿಸುವ ನಿರೀಕ್ಷೆಯಿದೆ ಎಂದು ಪಿಟಿಐ ಹೇಳಿದೆ.

ಕಳೆದ ಸೆಪ್ಟೆಂಬರ್ 7ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಯಾತ್ರೆಯನ್ನು ಆರಂಭಿಸಲಾಯಿತು. ನಂತರ ದಕ್ಷಿಣ ಭಾರತದ ರಾಜ್ಯಗಳಾದ ಕೇರಳ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ, ಹಾಗೆಯೇ ಮಹಾರಾಷ್ಟ್ರ ಬಳಿಕ ಈಗ ಮಧ್ಯಪ್ರದೇಶದ ಮೂಲಕ ಯಾತ್ರೆ ಮುಂದುವರೆದಿದೆ.

ಕಾಂಗ್ರೆಸ್ ಈ ಹಿಂದೆ ಘೋಷಿಸಿದ ವೇಳಾಪಟ್ಟಿಯ ಪ್ರಕಾರ, ಡಿಸೆಂಬರ್ 4ರಂದು ರಾಜಸ್ಥಾನಕ್ಕೆ ಯಾತ್ರೆ ಪ್ರವೇಶಿಸುವ ಮುನ್ನ; 12 ದಿನಗಳಲ್ಲಿ ಪಶ್ಚಿಮ ಮಧ್ಯಪ್ರದೇಶದ ಮಾಲ್ವಾ ನಿಮಾರ್ ಪ್ರದೇಶದಲ್ಲಿ 380 ಕಿಲೋ ಮೀಟರ್ ಪಾದಯಾತ್ರೆಯನ್ನು ಕ್ರಮಿಸಲಿದೆ.

ಗಮನಿಸಬಹುದಾದ ಇತರೆ ಸುದ್ದಿಗಳು

4-5 ವರ್ಷಗಳಲ್ಲಿ ಕರ್ನಾಟಕ ವಿಶ್ವದ ಅತಿ ದೊಡ್ಡ ಉಕ್ಕು ಉತ್ಪಾದಿಸುವ ರಾಜ್ಯವಾಗಲಿದೆ: ಸಿಎಂ ಬೊಮ್ಮಾಯಿ

ಕರ್ನಾಟಕದಲ್ಲಿ ಅತಿ ದೊಡ್ಡ ಕಬ್ಬಿಣದ ಕಾರ್ಖಾನೆ ಇದ್ದು 4-5 ವರ್ಷಗಳಲ್ಲಿ ವಿಶ್ವದ ಅತಿ ದೊಡ್ಡ ಕಬ್ಬಿಣ ಅದಿರು ಉತ್ಪಾದನೆ ಮಾಡುವ ರಾಜ್ಯವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಭಾರತ ಸರ್ಕಾರದ ಕಲ್ಲಿದ್ದಲು ಮತ್ತು ಗಣಿ ಸಚಿವಾಲಯದಿಂದ ಇಂದು ಹಮ್ಮಿಕೊಂಡಿದ್ದ ವಾಣಿಜ್ಯ ಕಲ್ಲಿದ್ದಲು ಗಣಿ ಹರಾಜು ಮತ್ತು ಗಣಿಗಾರಿಕೆ ವಲಯದಲ್ಲಿನ ಅವಕಾಶಗಳ ಕುರಿತ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಸಿಎಂ ಮಾತನಾಡಿದರು. ವಿವರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಕಾಂಗ್ರೆಸ್‌ ಮಾಜಿ ನಾಯಕರಿಗೆ ಬಿಜೆಪಿಯಲ್ಲಿ ಉನ್ನತ ಸ್ಥಾನ; ನಡ್ಡಾ ಹೊಸ ಘೋಷಣೆ ಏನು?

ಎರಡು ರಾಜ್ಯಗಳಲ್ಲಿ ಚುನಾವಣೆ ಕಣ ರಂಗೇರಿರುವ ನಡುವೆ ಬಿಜೆಪಿಯಲ್ಲಿ ಆಂತರಿಕ ರಾಜಕೀಯ ಚಟುವಟಿಕೆಯೂ ಗರಿಗೆದರಿದೆ. ಇಂದು ಕಾಂಗ್ರೆಸ್ ಮಾಜಿ ವಕ್ತಾರ ಜೈವೀರ್ ಶೆರ್ಗಿಲ್ ಅವರನ್ನು ತನ್ನ ರಾಷ್ಟ್ರೀಯ ವಕ್ತಾರರನ್ನಾಗಿ ಬಿಜೆಪಿ ನೇಮಿಸಿದೆ. ಇನ್ನೊಂದೆಡೆ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಸುನೀಲ್ ಜಾಖರ್ ಹಾಗೂ ಉತ್ತರ ಪ್ರದೇಶದ ಮಾಜಿ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷ ತಿಳಿಸಿದೆ. ವಿವರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

    ಹಂಚಿಕೊಳ್ಳಲು ಲೇಖನಗಳು