logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Chandrayaan 3: ಹೀಗಿದ್ರೆ ಮಾತ್ರ ಆಗಸ್ಟ್ 23 ರಂದು ಚಂದ್ರನ ಮೇಲೆ ಲ್ಯಾಂಡ್​ ಆಗೋದು, ಇಲ್ಲ ಅಂದ್ರೆ?

Chandrayaan 3: ಹೀಗಿದ್ರೆ ಮಾತ್ರ ಆಗಸ್ಟ್ 23 ರಂದು ಚಂದ್ರನ ಮೇಲೆ ಲ್ಯಾಂಡ್​ ಆಗೋದು, ಇಲ್ಲ ಅಂದ್ರೆ?

Meghana B HT Kannada

Aug 21, 2023 09:06 PM IST

google News

ಚಂದ್ರಯಾನ 3 (ಇಸ್ರೋ)

    • Chandrayaan 3: ಇದೀಗ ಸಿಕ್ಕ ಮಾಹಿತಿಯ ಪ್ರಕಾರ ಎಲ್ಲವೂ ಅಂದುಕೊಂಡಂತೆ ಇದ್ದರೆ ಮಾತ್ರ ಆಗಸ್ಟ್ 23 ರಂದು ಚಂದ್ರನ ಮೇಲೆ ಇಳಿಯಲು ಸಾಧ್ಯ. ಇಲ್ಲ ಅಂದ್ರೆ ಏನು ಕಥೆ ಅಂತ ಯೋಚಿಸ್ತಾ ಇದೀರಾ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.
ಚಂದ್ರಯಾನ 3 (ಇಸ್ರೋ)
ಚಂದ್ರಯಾನ 3 (ಇಸ್ರೋ)

ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್​ ಲ್ಯಾಂಡರ್​ ಇಳಿಯಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗಾಗಲೇ ತಿಳಿಸಿದೆ. ಆದರೆ ಇದೀಗ ಸಿಕ್ಕ ಮಾಹಿತಿಯ ಪ್ರಕಾರ ಎಲ್ಲವೂ ಅಂದುಕೊಂಡಂತೆ ಇದ್ದರೆ ಮಾತ್ರ ಅಂದು ಚಂದ್ರನ ಮೇಲೆ ಇಳಿಯಲು ಸಾಧ್ಯ. ಇಲ್ಲ ಅಂದ್ರೆ ಏನು ಕಥೆ ಅಂತ ಯೋಚಿಸ್ತಾ ಇದೀರಾ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಎಲ್ಲವೂ ಅಂದುಕೊಂಡಂತೆ ಅಂದರೆ ಆ ದಿನ ಬಾಹ್ಯಾಕಾಶದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿದ್ದರೆ ಮಾತ್ರ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡ್​ ಆಗಬಹುದು. ಇಲ್ಲವಾದಲ್ಲಿ ಇದನ್ನು ಮುಂದೂಡಿ ಆಗಸ್ಟ್ 27 ರಂದು ಹೊಸ ಪ್ರಯತ್ನವನ್ನು ಮಾಡಲಾಗುವುದು ಎಂದು ಇಸ್ರೋ ಹಿರಿಯ ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಇಸ್ರೋದ ಸ್ಪೇಸ್​ ಅಪ್ಲಿಕೇಶನ್ ಸೆಂಟರ್​ನ ನಿರ್ದೇಶಕ ನಿಲೇಶ್ ಎಂ ದೇಸಾಯಿ, ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಎರಡು ಗಂಟೆಗಳ ಮೊದಲು ಲ್ಯಾಂಡರ್ ಮಾಡ್ಯೂಲ್‌ನ ಆರೋಗ್ಯ (ಪರಿಸ್ಥಿತಿ) ಮತ್ತು ಚಂದ್ರನ ಮೇಲಿನ ಪರಿಸ್ಥಿತಿಗಳ ಆಧಾರದ ಮೇಲೆ ಆ ಸಮಯದಲ್ಲಿ ಅದನ್ನು ಇಳಿಸುವುದು ಸೂಕ್ತವೇ ಅಥವಾ ಬೇಡವೇ ಎಂಬುದರ ಕುರಿತು ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ಒಂದು ವೇಳೆ, ಯಾವುದೇ ಒಂದು ಅಂಶವು ಅನುಕೂಲಕರವಾಗಿಲ್ಲ ಎಂದು ತೋರಿದರೆ, ನಾವು ಆಗಸ್ಟ್ 27 ರಂದು ಮಾಡ್ಯೂಲ್ ಅನ್ನು ಚಂದ್ರನ ಮೇಲೆ ಇಳಿಸುತ್ತೇವೆ ಎಂದು ಸುದ್ದಿ ಸಂಸ್ಥೆ ಎಎನ್​​ಐಗೆ ತಿಳಿಸಿದ್ದಾರೆ.

ಆದರೆ ಚಂದ್ರಯಾನ-3 ಮಿಷನ್‌ನ ಮಾಡ್ಯೂಲ್ ವಿಕ್ರಮ್ ಲ್ಯಾಂಡರ್ ಮೂಲ ವೇಳಾಪಟ್ಟಿಯಂತೆ ಚಂದ್ರನ ಮೇಲ್ಮೈಯನ್ನು ತಲುಪಲಿದೆ ಎಂದು ದೇಸಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜುಲೈ 14 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಇಸ್ರೋದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಉಡಾವಣೆ ಆಗಿತ್ತು. ಇಸ್ರೋ ಪ್ರಕಾರ ಆಗಸ್ಟ್ 23 ರಂದು (ಬುಧವಾರ) ಸಂಜೆ 6:04 ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಇಳಿಯಲಿದೆ.

ಇದು ಯಶಸ್ವಿಯಾದರೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ನಾಲ್ಕನೇ ದೇಶ ಮತ್ತು ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್​ ಮಾಡಿದ ಮೊದಲ ದೇಶ ಭಾರತವಾಗುತ್ತದೆ. ಈಗಾಗಲೇ ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾ ರಾಷ್ಟ್ರಗಳು ಚಂದ್ರನ ಮೇಲೆ ಸಾಫ್ಟ್ ಲ್ಯಾಂಡ್​ ಮಾಡಿವೆ. ಮತ್ತೊಂದು ಬಾರಿ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಮಾಡಲು ಹೊರಟಿದ್ದ ರಷ್ಯಾ ಪ್ರಯತ್ನ ವಿಫಲವಾಗಿದ್ದು, ಚಂದ್ರನ ಮೇಲ್ಮೈಗೆ ರಷ್ಯಾದ ಬಾಹ್ಯಾಕಾಶ ನೌಕೆ ಲೂನಾ -25 ಡಿಕ್ಕಿ ಹೊಡೆದಿದೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ