logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Shobha Karandlaje: ವಿವಾದಾತ್ಮಕ ಹೇಳಿಕೆ; ತಮಿಳುನಾಡು ಜನರ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Shobha Karandlaje: ವಿವಾದಾತ್ಮಕ ಹೇಳಿಕೆ; ತಮಿಳುನಾಡು ಜನರ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Prasanna Kumar P N HT Kannada

Sep 04, 2024 09:07 AM IST

google News

ತಮಿಳುನಾಡು ಜನರ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

    • Shobha Karandlaje: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ತಮಿಳುನಾಡಿನ ಜನತೆಗೆ ಕ್ಷಮೆಯಾಚಿಸಿದ್ದಾರೆ.
ತಮಿಳುನಾಡು ಜನರ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ತಮಿಳುನಾಡು ಜನರ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಚೆನ್ನೈ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದಲ್ಲಿ ಭಾಗಿಯಾದವರು ತಮಿಳುನಾಡಿನಲ್ಲಿ ತರಬೇತಿ ಪಡೆದವರು ಎಂಬ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರು ತಮಿಳುನಾಡಿನ ಜನರ ಕ್ಷಮೆಯಾಚಿಸಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಕುರಿತು ಮಾತನಾಡಿದ ಶೋಭಾ, ತಮಿಳುನಾಡು ಜನರ (Tamil Nadu people) ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ನಾನು ಈ ಹೇಳಿಕೆ ನೀಡಲಿಲ್ಲ. ನಾನು ಮಾಡಿದ ಆಪಾದಿತ ಹೇಳಿಕೆಯಿಂದಾಗಿ ಅವರ ಕ್ಷಮೆ ಕೋರುತ್ತೇನೆ ಎಂದು ಕೇಂದ್ರ ಸಚಿವೆ ಹೇಳಿದ್ದಾರೆ.

ತಮಿಳುನಾಡಿನ ಇತಿಹಾಸ, ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ಮತ್ತು ಜನರ ಬಗ್ಗೆ ನನಗೆ ಹೆಚ್ಚಿನ ಗೌರವ ಇದೆ. ತಮಿಳುನಾಡಿನ ಜನರ ಭಾವನೆಗಳನ್ನು ನೋಯಿಸುವ ಯಾವುದೇ ಉದ್ದೇಶ ನನ್ನದಾಗಿರಲಿಲ್ಲ. ಆದ್ದರಿಂದ, ನನ್ನ ಹೇಳಿಕೆಯಿಂದ ಯಾವುದೇ ನೋವನ್ನು ಉಂಟು ಮಾಡಿದ್ದಕ್ಕಾಗಿ ನಾನು ಮತ್ತೊಮ್ಮೆ ತಮಿಳುನಾಡಿನ ಜನತೆಗೆ ಕ್ಷಮೆಯಾಚಿಸುತ್ತೇನೆ. ನ್ಯಾಯದ ಹಿತಾಸಕ್ತಿಯಿಂದ ಈ ಹೇಳಿಕೆ ನೀಡಿದ್ದೇನೆ, ಹಾಗಂತ ಉದ್ದೇಶಿತವಲ್ಲ ಎಂದು ಹೇಳಿದ್ದಾರೆ.

ಈ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಮದ್ರಾಸ್ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಅದರ ವಿಚಾರಣೆ ಸೆಪ್ಟೆಂಬರ್​ 3 ರಂದು ನಡೆಯಿತು. ಶೋಭಾ ಪರ ವಾದ ಮಂಡಿಸಿದ ವಕೀಲರು, ಸಚಿವರ ಹೇಳಿಕೆಗೆ ಸಂಬಂಧಿಸಿ ತಮಿಳುನಾಡು ಜನರ ಕ್ಷಮೆಯಾಚಿಸುವುದಾಗಿ ಅಫಿಡವಿಟ್ ಸಲ್ಲಿಸಲಾಗಿದೆ. ತಮಿಳುನಾಡಿನ ಮುಖ್ಯ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರದಿಂದ ಸೂಕ್ತ ಸೂಚನೆ ಪಡೆದ ನಂತರ ತಿಳಿಸುವೆ ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

ಕರ್ನಾಟಕದ ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿ ತಮಿಳುನಾಡಿನ ವ್ಯಕ್ತಿಗೆ ಸಂಬಂಧ ಇದೆ ಎಂದು ಶೋಭಾ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬಿಎಂಕೆ ಪಕ್ಷದ ತ್ಯಾಗರಾಜನ್ ಅವರು ಎಫ್​ಐಆರ್​​ ದಾಖಲಿಸಿದ್ದರು. ಈ ದೂರಿನಲ್ಲಿ ಆಧಾರದ ಮೇಲೆ ಕರಂದ್ಲಾಜೆ ವಿರುದ್ಧ ಮಧುರೈನಲ್ಲಿ ಕೋಮುಗಲಭೆ, ಪ್ರಚೋದನೆ ಮತ್ತು ಸಾರ್ವಜನಿಕ ಶಾಂತಿ ಕದಡುವುದು ಸೇರಿದಂತೆ ಪ್ರಮುಖ 4 ಸೆಕ್ಷನ್​​ಗಳ ಪ್ರಕರಣ ದಾಖಲಾಗಿತ್ತು. ಈ ಕುರಿತು ವಿಚಾರಣೆ ಸೆಪ್ಟೆಂಬರ್ 3ರಂದು ನಡೆದಿತ್ತು.

ಶೋಭಾ ಅವರು ಈ ಪ್ರಕರಣಕ್ಕೆ ಸಂಬಂಧಿಸಿ ದೂರು ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಕೆ ಮಾಡಿರುವ ಎಫ್​ಐಆರ್ ಮೇಲೆ ಅಫಿಡವಿಟ್ ಸಲ್ಲಿಸಲಾಗಿದೆ. ಅಹವಾಲು ದಾಖಲಿಸಿದ ನ್ಯಾಯಮೂರ್ತಿ ಜಯಚಂದ್ರನ್ ಅವರು ಸೆಪ್ಟೆಂಬರ್​​ 5ಕ್ಕೆ ವಿಚಾರಣೆ ಮುಂದೂಡಿದರು.

ಸುಕನ್ಯಾ ಸಮೃದ್ಧಿ ಯೋಜನೆ ಖಾತೆಗೆ ಹೊಸ ನಿಯಮ

ನವದೆಹಲಿ: ಜನಪ್ರಿಯ ಸುಕನ್ಯಾ ಸಮೃದ್ಧಿ ಯೋಜನೆ ಸೇರಿ ರಾಷ್ಟ್ರೀಯ ಸಣ್ಣ ಉಳಿತಾಯ ಯೋಜನೆಗಳಲ್ಲಿ ಅನಿಯಂತ್ರಿತವಾಗಿ ತೆರೆಯಲಾದ ಉಳಿತಾಯ ಖಾತೆಗಳನ್ನು ಕ್ರಮಬದ್ಧಗೊಳಿಸಲು ಆರ್ಥಿಕ ವ್ಯವಹಾರಗಳ ಇಲಾಖೆಯು ಇತ್ತೀಚೆಗೆ ಹೊಸ ಮಾರ್ಗಸೂಚಿಗಳನ್ನು ಪರಿಚಯಿಸಿದೆ. ಯೋಜನೆ ಪ್ರಾರಂಭಿಸಿದ ಬಳಿಕ ಸಾರ್ವಜನಿಕರು ಈ ಖಾತೆ ಶುರು ಮಾಡುವಾಗ ಖಾತೆಗಳ ಮಾಲೀಕತ್ವಕ್ಕೆ ಸಂಬಂಧಿಸಿ ಅನುಸರಿಸಬೇಕಾದ ಸರಿಯಾದ ಮಾರ್ಗಸೂಚಿಗಳನ್ನು ಸರ್ಕಾರ ನೀಡಿರಲಿಲ್ಲ. ಈ ನಿಯಮಗಳು ಮುಂದಿನ ತಿಂಗಳು 1 ರಿಂದ ಅಂದರೆ 2024ರ ಅಕ್ಟೋಬರ್ 1 ರಿಂದ ಜಾರಿಗೆ ಬರಲಿವೆ. ಈ ಕುರಿತ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ