logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Sonia Gandhi: ಸೋನಿಯಾ ಗಾಂಧಿ ರಾಜಕೀಯದಿಂದ ನಿವೃತ್ತಿಯಾಗುತ್ತಿಲ್ಲ: ಕಾಂಗ್ರೆಸ್‌ ನಾಯಕಿಯ ಸ್ಪಷ್ಟನೆ

Sonia Gandhi: ಸೋನಿಯಾ ಗಾಂಧಿ ರಾಜಕೀಯದಿಂದ ನಿವೃತ್ತಿಯಾಗುತ್ತಿಲ್ಲ: ಕಾಂಗ್ರೆಸ್‌ ನಾಯಕಿಯ ಸ್ಪಷ್ಟನೆ

HT Kannada Desk HT Kannada

Feb 26, 2023 05:34 PM IST

ಸಂಗ್ರಹ ಚಿತ್ರ

    • ಭಾರತ್‌ ಜೋಡೋ ಯಾತ್ರೆಯೊಂದಿಗೆ ತಮ್ಮ ರಾಜಕೀಯ ಪಯಣ ಅಂತ್ಯಗೊಂಡಿದೆ ಎಂದು ಹೇಳಿದ್ದ ಸೋನಿಯಾ ಗಾಂಧಿ, ಈ ಮೂಲಕ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುವ ಬಯಕೆ ವ್ಯಕ್ತಪಡಿಸಿದ್ದರು. ಆದರೆ ಸೋನಿಯಾ ಗಾಂಧಿ ರಾಜಕೀಯದಿಂದ ಯಾವುದೇ ಕಾರಣಕ್ಕೂ ನಿವೃತ್ತಿಯಾಗುತ್ತಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಅಲ್ಕಾ ಲಂಬಾ ಸ್ಪಷ್ಟಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ (PTI)

ರಾಯ್‌ಪುರ್:‌ ಭಾರತ್‌ ಜೋಡೋ ಯಾತ್ರೆಯೊಂದಿಗೆ ತಮ್ಮ ರಾಜಕೀಯ ಪಯಣ ಅಂತ್ಯಗೊಂಡಿದೆ ಎಂದು ಹೇಳಿದ್ದ ಸೋನಿಯಾ ಗಾಂಧಿ, ಈ ಮೂಲಕ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುವ ಬಯಕೆ ವ್ಯಕ್ತಪಡಿಸಿದ್ದರು. ಆದರೆ ಸೋನಿಯಾ ಗಾಂಧಿ ರಾಜಕೀಯದಿಂದ ಯಾವುದೇ ಕಾರಣಕ್ಕೂ ನಿವೃತ್ತಿಯಾಗುತ್ತಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಅಲ್ಕಾ ಲಂಬಾ ಸ್ಪಷ್ಟಪಡಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ತಿರುಮಲ ತಿರುಪತಿ ಶ್ರೀವಾರಿ ಆರ್ಜಿತ ಸೇವಾ ದರ್ಶನ ಟಿಕೆಟ್ ಬಿಡುಗಡೆ, ಆಗಸ್ಟ್‌ ತಿಂಗಳ ಕೋಟಾ ಹಂಚಿಕೆಗೆ ಅರ್ಜಿ ಸಲ್ಲಿಕೆ ಶುರು

Gold Rate Today: ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

ಸೋನಿಯಾ ಗಾಂಧಿ ಅವರು ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಹೇಳಿಲ್ಲ. ಬದಲಿಗೆ ಪಕ್ಷದ ಮಾರ್ಗದರ್ಶಕ ಶಕ್ತಿಯಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ. ಸೋನಿಯಾ ಅವರ ಸುದೀರ್ಘ ರಾಜಕೀಯ ಅನುಭವ ಪಕ್ಷಕ್ಕೆ ಅತ್ಯವಶ್ಯವಾಗಿದೆ ಎಂದು ಅಲ್ಕಾ ಲಂಬಾ ಸ್ಪಷ್ಟಪಡಿಸಿದ್ದಾರೆ.

ಸೋನಿಯಾ ಗಾಂಧಿ ಅವರ ಹೇಳಿಕೆಯನ್ನು ಕೆಲವು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ. ಕಾಂಗ್ರೆಸ್‌ ಪಕ್ಷದ ಸೋನಿಯಾ ಗಾಂಧಿ ಅವರ ಮಾರ್ಗದರ್ಶನ ಹಿಂದೆಂದಿಗಿಂತಲೂ ಅವಶ್ಯಕವಾಗಿದೆ. ಹೀಗಾಗಿ ಸೋನಿಯಾ ಗಾಂಧಿ ರಾಜಕಾರಣದಿಂದ ನಿವೃತ್ತಿ ಹೊಂದುವ ಪ್ರಶ್ನೆಯೇ ಇಲ್ಲ ಎಂದು ಅಲ್ಕಾ ಲಂಬಾ ಹೇಳಿದ್ದಾರೆ.

ಛತ್ತೀಸ್‌ಗಢ ರಾಜಧಾನಿ ರಾಯ್‌ಪುರ್‌ದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಪಕ್ಷದ 85ನೇ ಸರ್ವಸದಸ್ಯರ ಅಧಿವೇಶನ ಉದ್ದೇಶಿಸಿ ಮಾತನಾಡಿದ್ದ ಸೋನಿಯಾ ಗಾಂಧಿ, ಭಾರತ್‌ ಜೋಡೋ ಯಾತ್ರೆಯೊಂದಿಗೆ ತಮ್ಮ ರಾಜಕೀಯ ಪಯಣ ಅಂತ್ಯವಾಗುತ್ತಿರುವುದು ತಮಗೆ ಸಂತಸ ತಂದಿದೆ ಎಂದು ಹೇಳಿದ್ದರು.

ಸೋನಿಯಾ ಗಾಂಧಿ ಅವರ ಈ ಹೇಳಿಕೆ ಕಾಂಗ್ರೆಸ್‌ ಪಕ್ಷದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಸೋನಿಯಾ ಅವರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧೆ ಮಾಡುವರೇ ಎಂಬ ಪ್ರಶ್ನೆ ಎಲ್ಲರಲ್ಲಿ ಮೂಡಿತ್ತು. ತಾವು ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸೋನಿಯಾ ಗಾಂಧಿ ಯಾವುದೇ ಸ್ಪಷ್ಟನೆಯನ್ನು ನೀಡದಿರುವುದು ವಿಶೇಷ.

ಇನ್ನು ಸೋನಿಯಾ ಗಾಂಧಿ ಅವರು ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡುತ್ತಿದ್ದಂತೇ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಮ್ಮ ರಾಯ್‌ಬರೇಲಿ ಕ್ಷೇತ್ರವನ್ನು ಪುತ್ರಿ ಪ್ರಿಯಾಂಕಾ ಗಾಂಧಿ ಅವರಿಗೆ ಬಿಟ್ಟು ಕೊಡಲಿದ್ದಾರೆ ಎಂಬ ಚರ್ಚೆಗಳು ಕಾಂಗ್ರೆಸ್‌ ಆಂತರಿಕ ವಲಯದಲ್ಲಿ ಆರಂಭವಾಗಿದ್ದವು.

ಜನಸಂಪರ್ಕ ಕಾರ್ಯಕ್ರಮಗಳ ಮೂಲಕ ನಮ್ಮ ಪಕ್ಷ ಮತ್ತು ಜನರ ನಡುವಿನ ಸಂವಾದದ ಶ್ರೀಮಂತ ಪರಂಪರೆಯನ್ನು, ಭಾರತ್‌ ಜೋಡೋ ಯಾತ್ರೆಯು ನವೀಕರಿಸಿದೆ. ಕಾಂಗ್ರೆಸ್ ಪಕ್ಷ ಜನರೊಂದಿಗೆ ನಿಂತಿದೆ ಮತ್ತು ಅವರಿಗಾಗಿ ಹೋರಾಡಲು ಸಿದ್ಧವಾಗಿದೆ ಎಂಬುದನ್ನು ಭಾರತ್‌ಜೋಡೋ ಯಾತ್ರೆ ಸಾರಿ ಹೇಳಿದೆ ಎಂದು ಸೋನಿಯಾ ಗಾಂಧಿ ಅಧಿವೇಶನದ ಎರಡನೇ ದಿನದ ತಮ್ಮ ಭಾಷಣದಲ್ಲಿ ಹೇಳಿದ್ದರು.

"ಯಾತ್ರೆಗಾಗಿ ಶ್ರಮಿಸಿದ ಎಲ್ಲಾ ಪಕ್ಷದ ಕಾರ್ಯಕರ್ತರನ್ನು ನಾನು ಅಭಿನಂದಿಸುತ್ತೇನೆ... ಯಾತ್ರೆಯ ಯಶಸ್ಸಿನಲ್ಲಿ ಅವರ ಸಂಕಲ್ಪ ಮತ್ತು ನಾಯಕತ್ವವು ನಿರ್ಣಾಯಕವಾಗಿದ್ದ ರಾಹುಲ್‌ ಗಾಂಧಿ ಅವರಿಗೂ ನಾನೂ ವಿಶೇಷವಾಗಿ ಧನ್ಯವಾದ ಹೇಳುತ್ತೇನೆ.." ಎಂದು ಸೋನಿಯಾ ಗಾಂಧಿ ಹೇಳಿದ್ದರು.

ತಮ್ಮ ಭಾಷಣದಲ್ಲಿ ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಸೋನಿಯಾ ಗಾಂಧಿ, ಮೋದಿ ಸರ್ಕಾರ ಚುನಾವಣಾ ಆಯೋಗವನ್ನೂ ಒಳಗೊಂಡಂತೆ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ವಶಪಡಿಸಿಕೊಂಡಿದೆ ಎಂದು ಆರೋಪಿಸಿದ್ದರು.

ಸೋನಿಯಾ ಗಾಂಧಿ ಅವರ ಈ ಆರೋಪವನ್ನು ಸ್ಪಷ್ಟವಾಗಿ ಅಲ್ಲಗಳೆದಿದ್ದ ಬಿಜೆಪಿ, ಜನರಿಂದ ತಿರಸ್ಕೃತಗೊಂಡಿರುವ ಕಠಿಣ ಸತ್ಯವನ್ನು ಒಪ್ಪಿಕೊಳ್ಳಲು ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್‌ ಸಿದ್ಧವಿಲ್ಲ ಎಂದು ತಿರುಗೇಟು ನೀಡಿತ್ತು.

ದೇಶದ ಜನರು ಕಾಂಗ್ರೆಸ್‌ಗೆ ಮತ ಹಾಕದ ಕಾರಣಕ್ಕೆ ಸೋನಿಯಾ ಗಾಂಧಿ ಅವರು ಚುನಾವಣಾ ಆಯೋಗವನ್ನು ಏಕೆ ದೂಷಿಸುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಸೋನಿಯಾ ಗಾಂಧಿ ಈ ಸಂಸ್ಥೆಗಳ ಸ್ವಾಯತ್ತತೆ ಮತ್ತು ಸಾಂಸ್ಥಿಕ ಗೌರವದ ಮೇಲಿನ ದಾಳಿ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ರವಿಶಂಕರ್‌ ಪ್ರಸಾದ್‌ ತೀವ್ರ ವಾಗ್ದಾಳಿ ನಡೆಸಿದ್ದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ