logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Breaking News: ಕಬ್ಬಿನ ಎಫ್‌ಆರ್‌ಪಿಯನ್ನು ಕ್ವಿಂಟಾಲ್‌ಗೆ 10 ರೂಪಾಯಿ ಹೆಚ್ಚಿಸಿದ ಕೇಂದ್ರ ಸರ್ಕಾರ

Breaking News: ಕಬ್ಬಿನ ಎಫ್‌ಆರ್‌ಪಿಯನ್ನು ಕ್ವಿಂಟಾಲ್‌ಗೆ 10 ರೂಪಾಯಿ ಹೆಚ್ಚಿಸಿದ ಕೇಂದ್ರ ಸರ್ಕಾರ

Umesh Kumar S HT Kannada

Jun 28, 2023 04:15 PM IST

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ (ಕಡತ ಚಿತ್ರ)

  • Sugarcane FRP: ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಯನ್ನು ಕ್ವಿಂಟಾಲ್‌ಗೆ 10 ರೂಪಾಯಿ ಹೆಚ್ಚಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ (ಕಡತ ಚಿತ್ರ)
ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ (ಕಡತ ಚಿತ್ರ) (PTI)

ನವದೆಹಲಿ: ದೇಶಾದ್ಯಂತ 2023-24 ನೇ ಸಾಲಿನಲ್ಲಿ ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಯನ್ನು ಕ್ವಿಂಟಾಲ್‌ಗೆ 10 ರೂಪಾಯಿ ಹೆಚ್ಚಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಟ್ರೆಂಡಿಂಗ್​ ಸುದ್ದಿ

ಪತಂಜಲಿಯ ಸೋನ್ ಪಾಪಡಿ ಗುಣಮಟ್ಟ ಪರೀಕ್ಷೆ ಫೇಲು; ಬಾಬಾ ರಾಮ್‌ದೇವ್ ಕಂಪನಿಯ ಇಬ್ಬರು ಅಧಿಕಾರಿಗಳ ಬಂಧನ

ತಿರುಮಲ ತಿರುಪತಿ ಶ್ರೀವಾರಿ ಆರ್ಜಿತ ಸೇವಾ ದರ್ಶನ ಟಿಕೆಟ್ ಬಿಡುಗಡೆ, ಆಗಸ್ಟ್‌ ತಿಂಗಳ ಕೋಟಾ ಹಂಚಿಕೆಗೆ ಅರ್ಜಿ ಸಲ್ಲಿಕೆ ಶುರು

Gold Rate Today: ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಸಭೆ ಈ ತೀರ್ಮಾನ ತೆಗೆದುಕೊಂಡಿದೆ. ಇದರೊಂದಿಗೆ ಕಬ್ಬಿನ ಎಫ್‌ಆರ್‌ಪಿ ಕ್ವಿಂಟಾಲ್‌ಗೆ 315 ರೂಪಾಯಿ ಆಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ಹೇಳಿದರು.

2023-24ನೇ ಹಂಗಾಮಿಗೆ ಕಬ್ಬಿನ ಎಫ್‌ಆರ್‌ಪಿಯನ್ನು ಕ್ವಿಂಟಲ್‌ಗೆ 315 ರೂ.ಗೆ ನಿಗದಿಪಡಿಸಲಾಗಿದೆ. ಕಳೆದ ವರ್ಷ ಕಬ್ಬಿನ ಎಫ್‌ಆರ್‌ಪಿ ಪ್ರತಿ ಕ್ವಿಂಟಲ್‌ಗೆ 305 ರೂಪಾಯಿ ಇತ್ತು ಎಂದು ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಪ್ರಧಾನಿಯವರು ಯಾವಾಗಲೂ “ಅನ್ನದಾತ” ಜತೆಗಿದ್ದಾರೆ. ಸರಕಾರ ಕೃಷಿ ಹಾಗೂ ರೈತರಿಗೆ ಆದ್ಯತೆ ನೀಡಿದೆ. 2014-15ನೇ ಸಾಲಿನಲ್ಲಿ ಪ್ರತಿ ಕ್ವಿಂಟಾಲ್‌ಗೆ 210 ರೂ ಇದ್ದ ಕಬ್ಬಿನ ಎಫ್‌ಆರ್‌ಪಿ ಈಗ 2023-24ನೇ ಸಾಲಿನಲ್ಲಿ ಕ್ವಿಂಟಲ್‌ಗೆ 315 ರೂ.ಗೆ ಏರಿಕೆಯಾಗಿದೆ ಎಂದರು.

ಎಥೆನಾಲ್ ಅನ್ನು ಕಚ್ಚಾ ತೈಲದೊಂದಿಗೆ ಬೆರೆಸುವ ಯೋಜನೆಯು ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ.ಇದು ಈಗ ಅವರ ಬಳಿ ಹೆಚ್ಚು ಹಣವನ್ನು ಹೊಂದಿದೆ ಎಂದು ತೋರಿಸುತ್ತದೆ ಎಂದು ಅವರು ಹೇಳಿದರು.

ಮೊದಲು ಅವರು ದಾಸ್ತಾನುಗಳಿಂದ ತುಂಬಿದ್ದರು ಮತ್ತು ರೈತರು ಪಾವತಿಗಳನ್ನು ಸ್ವೀಕರಿಸಲಿಲ್ಲ. ಇದು ನಮ್ಮ ಆತ್ಮನಿರ್ಭರ್ತವನ್ನು ಬಲಪಡಿಸಿದೆ. ವಿದೇಶಿ ವಿನಿಮಯದ ಬಳಕೆಯಲ್ಲಿ ಇಳಿಕೆಗೆ ಕಾರಣವಾಯಿತು ಮತ್ತು ಎಥೆನಾಲ್ ವಲಯದ ಬೆಳವಣಿಗೆಯನ್ನು ಉತ್ತೇಜಿಸಿತು" ಎಂದು ಠಾಕೂರ್ ಹೇಳಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ