logo
ಕನ್ನಡ ಸುದ್ದಿ  /  Nation And-world  /  Supreme Court Asks Centre And Rbi To Present Related Records On Demonetisation

SC on Note Ban: ಅಪನಗದೀಕರಣ ಕುರಿತ ಪೂರಕ ದಾಖಲೆ ಒದಗಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿದ ಸುಪ್ರೀಂಕೋರ್ಟ್‌!

HT Kannada Desk HT Kannada

Dec 08, 2022 10:17 AM IST

ಸುಪ್ರೀಂಕೋರ್ಟ್‌ (ಸಂಗ್ರಹ ಚಿತ್ರ)

    • 2016ರಲ್ಲಿ ಕೈಗೊಂಡ 1,000 ರೂ. ಮತ್ತು ರೂ. 500 ರೂ. ಮುಖಬೆಲೆಯ ನಗದು ಅಮಾನ್ಯೀಕರಣ ನಿರ್ಧಾರಕ್ಕೆ ಸಂಬಂಧಿಸಿದಂತೆ, ಪೂರಕ ದಾಖಲೆಗಳನ್ನು ಒದಗಿಸುವಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರ ಮತ್ತು ಆರ್‌ಬಿಐಗೆ ನಿರ್ದೇಶನ ನೀಡಿದೆ. ಅಪನಗದೀಕರಣ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತಾದ ತೀರ್ಪನ್ನು ಸುಪ್ರೀಂಕೋರ್ಟ್‌ ಕಾಯ್ದಿರಿಸಿದೆ.
ಸುಪ್ರೀಂಕೋರ್ಟ್‌ (ಸಂಗ್ರಹ ಚಿತ್ರ)
ಸುಪ್ರೀಂಕೋರ್ಟ್‌ (ಸಂಗ್ರಹ ಚಿತ್ರ) (HT_PRINT)

ನವದೆಹಲಿ: 2016ರಲ್ಲಿ ಕೈಗೊಂಡ 1,000 ರೂ. ಮತ್ತು ರೂ. 500 ರೂ. ಮುಖಬೆಲೆಯ ನಗದು ಅಮಾನ್ಯೀಕರಣ ನಿರ್ಧಾರಕ್ಕೆ ಸಂಬಂಧಿಸಿದಂತೆ, ಪೂರಕ ದಾಖಲೆಗಳನ್ನು ಒದಗಿಸುವಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರ ಮತ್ತು ಆರ್‌ಬಿಐಗೆ ನಿರ್ದೇಶನ ನೀಡಿದೆ.

ಟ್ರೆಂಡಿಂಗ್​ ಸುದ್ದಿ

Lok Sabha Elections: ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಸಂಸದ ಬದಲು ಮಗನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election 2024: ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸುತ್ತಿರುವ ಶ್ಯಾಮ್ ರಂಗೀಲ ಯಾರು; 10 ಪ್ರಮುಖ ಅಂಶಗಳಿವು

20 ವರ್ಷಗಳಲ್ಲಿ 115 ಐಐಟಿ ವಿದ್ಯಾರ್ಥಿಗಳ ಆತ್ಮಹತ್ಯೆ; ಅಗ್ರ ಸ್ಥಾನದಲ್ಲಿರುವ ಮದ್ರಾಸ್‌ನಲ್ಲಿ 26 ಸಾವು, ಆರ್‌ಟಿಐನಿಂದ ಮಾಹಿತಿ ಬಹಿರಂಗ

ತಿರುಮಲ ತಿರುಪತಿ ದೇವಸ್ಥಾನದಲ್ಲಿ ವಿಶೇಷ ಉತ್ಸವಗಳು, ಮೇ ತಿಂಗಳ ಉತ್ಸವ ವೇಳಾಪಟ್ಟಿ ಪ್ರಕಟಿಸಿದ ಟಿಟಿಡಿ

ಅಪನಗದೀಕರಣ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತಾದ ತೀರ್ಪನ್ನು ಕಾಯ್ದಿರಿಸಿರುವ ಸುಪ್ರೀಂಕೋರ್ಟ್‌, ನಗದು ಅಮಾನ್ಯೀಕರಣ ನಿರ್ಧಾರಕ್ಕೆ ಸಂಬಂಧಿಸಿದಂತೆ ಪೂರಕ ದಾಖಲೆಗಳನ್ನು ಪರಿಶೀಲಿಸುವುದಾಗಿ ಸ್ಪಷ್ಟಪಡಿಸಿದೆ.

ಅರ್ಜಿಗಲ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್‌.ಎ.ನಜೀರ್‌ ನೇತೃತ್ವದ ಪಂಚ ಸದಸ್ಯ ಸಂವಿಧಾನ ಪೀಠ, ಹಿರಿಯ ವಕೀಲರಾದ ಪಿ. ಚಿದಂಬರಂ, ಶ್ಯಾಮ್‌ ದಿವಾನ್‌, ಅಟಾರ್ನಿ ಜನರಲ್‌ ಆರ್‌. ವೆಂಕಟರಮಣಿ ಸೇರಿದಂತೆ, ಸರ್ಕಾರ ಮತ್ತು ಆರ್‌ಬಿಐ ಹಾಗೂ ಅರ್ಜಿದಾರರ ಪರ ವಕೀಲರ ವಾದಗಳನ್ನು ಆಲಿಸಿತು.

ಅಪನಗದೀಕರಣವನ್ನು ಬೆಂಬಲಿಸಿರುವ ಆರ್‌ಬಿಐ, ಕೇಂದ್ರವು ಈ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಂಡಿರಲಿಲ್ಲ ಎಂದು ಪ್ರತಿಪಾದಿಸಿದೆ. ಅಲ್ಲದೇ ಆರ್ಥಿಕ ನೀತಿಯ ಒಂದು ಭಾಗವಾಗಿ ಅಪನಗದೀಕರಣ ನಿರ್ಧಾರ ಕೈಗೊಳ್ಳಲಾಗಿತ್ತು ಎಂದೂ ಆರ್‌ಬಿಐ ವಾದಿಸಿದೆ.

ವಾದ-ವಿವಾದಗಳನ್ನು ಆಲಿಸಿದ ಸುಪ್ರೀಂಕೋರ್ಟ್‌ ಸದ್ಯ ತೀರ್ಪು ಕಾಯ್ದಿರಿಸಿದೆ. ಅಲ್ಲದೇ ನೋಟು ಅಮಾನ್ಯೀಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರ ಹಾಗೂ ಆರ್‌ಬಿಐಗೆ ನಿರ್ದೇಶಿಸಿದೆ. ಮೊಹರಾದ ಲಕೋಟೆಯಲ್ಲಿ ದಾಖಲೆಗಳನ್ನು ಸಲ್ಲಿಸುವುದಾಗಿ ಅಟಾರ್ನಿ ಜನರಲ್‌ ವೆಂಕಟರಮಣಿ ಅವರು ಸುಪ್ರೀಂಕೋರ್ಟ್‌ ಪಂಚಪೀಠ ಸದಸ್ಯಕ್ಕೆ ತಿಳಿಸಿದ್ದಾರೆ.

2016ರ ನವೆಂಬರ್‌ 8ರಂದು ಕೇಂದ್ರ ಸರ್ಕಾರ ಘೋಷಿಸಿದ ನೋಟು ಅಮಾನ್ಯೀಕರಣ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ, ಒಟ್ಟು 58 ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ಪಂಚ ಸದಸ್ಯ ಸಂವಿಧಾನ ಪೀಠ ವಿಚಾರಣೆ ನಡೆಸುತ್ತಿದೆ. ಚಲಾವಣೆಯಲ್ಲಿದ್ದ ಶೇ.86ಕ್ಕೂ ಅಧಿಕ ಪ್ರಮಾಣದ ನೋಟುಗಳನ್ನು ಏಕಾಏಕಿ ಹಿಂದಕ್ಕೆ ಪಡೆಯುವ ಮೊದಲು, ಆರ್‌ಬಿಐ ಕಾಯ್ದೆ ಅಡಿಯಲ್ಲಿನ ಅಗತ್ಯ ಪ್ರಕ್ರಿಯೆಗಳನ್ನು ಸರ್ಕಾರ ಪಾಲಿಸಿದೆಯೇ ಎಂದು ಅರ್ಜಿದಾರರು ಪ್ರಶ್ನಿಸಿದ್ದರು.

ವಿಚಾರಣೆ ವೇಳೆ ಅಪನಗದೀಕರಣ ಮತ್ತು ಅದರ ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ ಮತ್ತು ಆರ್‌ಬಿಐ, ನಿಯಮಗಳಿಗೆ ಅನುನಾಸರವಾಗಿಯೇ ಅಪನಗದೀಕರಣ ಪ್ರಕ್ರಿಯೆಯನ್ನು ಜಾರಿಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿವೆ. ಆರ್‌ಬಿಐ ಕಾಯ್ದೆಯಡಿ ಬರುವ ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ಪಾಲಿಸಲಾಗಿದೆ ಎಂದೂ ಕೇಂದ್ರ ಸರ್ಕಾರ ವಾದಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪಿ.ಚಿದಂಬರಂ, ಅಪನಗದೀಕರಣವು ದೇಶದ ಜನಸಾಮಾನ್ಯರ ಜೀವನದ ಮೇಲೆ ಭಾರೀ ದುಷ್ಪರಿಣಾಮ ಬೀರಿದೆ ಎಂದು ಹೇಳಿದ್ದರು. ನಿಯಮಗಳ ಪಾಲನೆಗೆ ಒತ್ತು ನೀಡದೇ, ತರಾತುರಿಯಲ್ಲಿ ಅಪನಗದೀಕರಣ ಪ್ರಕ್ರಿಯೆಯನ್ನು ಜಾರಿಗೊಳಿಸಲಾಗಿತ್ತು ಎಂದೂ ಪಿ.ಚಿದಂಬರಂ ಅಸಮಾಧಾನ ವ್ಯಕ್ತಪಡಿಸಿದ್ದರು.

ಇಂದಿನ ಪ್ರಮುಖ ಸುದ್ದಿಗಳು

Himachal Pradesh poll 2022 results: ಇಂದು ಹಿಮಾಚಲ ಚುನಾವಣೆ ಫಲಿತಾಂಶ; ಗಮನಿಸಬಹುದಾದ ಪ್ರಮುಖ ಕ್ಷೇತ್ರಗಳಿವು!

ಹಿಮಾಚಲ ಪ್ರದೇಶದಲ್ಲಿ 2017 ರ ವಿಧಾನಸಭಾ ಚುನಾವಣೆಯಲ್ಲಿ 68 ಸದಸ್ಯ ಬಲದಲ್ಲಿ, ಬಿಜೆಪಿ 44 ಮತ್ತು ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದುಕೊಂಡಿತು, ಒಂದು ಸ್ಥಾನ ಸಿಪಿಐ-ಎಂ ಮತ್ತು ಎರಡು ಸ್ವತಂತ್ರ ಅಭ್ಯರ್ಥಿಗಳಿಗೆ ಸಿಕ್ಕಿತ್ತು. ಈ ಸಲ ಬಲಾಬಲ ಹೇಗೆ ಬದಲಾಗಬಹುದು ಎಂಬ ಕುತೂಹಲ ಇಂದೇ ತಣಿಯಲಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

CM Bommai on Congress: ರಾಜ್ಯ ಬಿಜೆಪಿ ಸುನಾಮಿಯ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಲಿದೆ: ಸಿಎಂ ಬೊಮ್ಮಾಯಿ ಭವಿಷ್ಯ

ಕಾಂಗ್ರೆಸ್ ಪಕ್ಷ ಇಡೀ ರಾಷ್ಟ್ರದಲ್ಲಿ ನಿರ್ನಾಮವಾಗಿದೆ. ಇಲ್ಲಿಯೂ ನಿರ್ನಾಮವಾಗಲಿದೆ. ಕಾಂಗ್ರೆಸ್ ಮುಳುಗುತ್ತಿರವ ಹಡಗು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು