IAF fighter jets crash: ಮಧ್ಯಪ್ರದೇಶದಲ್ಲಿ ಭಾರತೀಯ ವಾಯು ಸೇನೆಯ ಎರಡು ಯುದ್ಧ ವಿಮಾನಗಳ ನಡುವೆ ಡಿಕ್ಕಿ; ಕ್ಷಣಾರ್ಧದಲ್ಲಿ ಪತನ
Jan 28, 2023 01:45 PM IST
ಮಧ್ಯಪ್ರದೇಶದ ಮೊರೆನಾ ಎಂಬಲ್ಲಿ ವಾಯು ಸೇನೆಗೆ ಸೇರಿದ ಎರಡು ಯುದ್ಧ ವಿಮಾನಗಳು ಪರಸ್ಪರ ಡಿಕ್ಕಿ ಬಳಿಕ ಪತನವಾಗಿವೆ.
- ಐಎಎಫ್‌ನ ಎರಡು ಯುದ್ಧ ವಿಮಾನಗಳು ಪತನಗೊಂಡಿರುವ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ.
ಮೊರೆನಾ(ಮಧ್ಯಪ್ರದೇಶ): ಭಾರತೀಯ ವಾಯುಪಡೆಗೆ ಸೇರಿದ ಎರಡು ಯುದ್ಧ ವಿಮಾನಗಳು ಆಗಸದಲ್ಲಿ ಡಿಕ್ಕಿಯಾದ ಬಳಿಕ ಪತನಗೊಂಡಿರುವ ದುರಂತ ಮಧ್ಯಪ್ರದೇಶದಲ್ಲಿ ನಡೆದಿದೆ.
ಮೊರೆನಾ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದೆ.
ಏನಿದು ದುರಂತ?
ಗ್ವಾಲಿಯರ್ ವಾಯುನೆಲೆಯು ವಾಯುಪಡೆಗೆ ಸೇರಿದ ವಿಮಾನಗಳು ಸಾಮಾನ್ಯ ತರಬೇತಿ ನಡೆಸುತ್ತವೆ. ಈ ಕ್ರಮದಲ್ಲಿ ಎರಡು ಯುದ್ಧವಿಮಾನಗಳಾಗ ಸುಖೋಯ್-30 ಮತ್ತು ಮಿರಾಜ್ 2000 ಗ್ವಾಲಿಯರ್ ವಾಯುನೆಲೆಯಿಂದ ಟೇಕಾಫ್ ಆಗಿವೆ.
ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಮೊರೆನಾ ಪ್ರದೇಶದಲ್ಲಿ ಪತನಗೊಂಡಿವೆ. ಸರಿಯಾದ ಸಮಯಕ್ಕೆ ಪೈಲಟ್‌ಗಳು ವಿಮಾನಗಳಿಂದ ಜಿಗಿದಿದ್ದಾರೆ. ಪರಿಣಾಮವಾಗಿ ಇಬ್ಬರು ಪೈಲಟ್ ಗಳು ಗಾಯಗೊಂಡಿದ್ದಾರೆ. ಇದುವರೆಗೆ ಇಬ್ಬರು ಪೈಲಟ್‌ಗಳನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳು ಪೈಲಟ್ ಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮೂರನೇ ಪೈಲಟ್ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಆತಂಕ ಮೂಡಿಸಿದೆ. ಇಂದು (ನ.28, ಶನಿವಾರ) ಬೆಳಗ್ಗೆ 5:30ಕ್ಕೆ ಅಪಘಾತ ಸಂಭವಿಸಿದೆ ಎಂದು ಮೊರೆನಾ ಜಿಲ್ಲಾಧಿಕಾರಿ ಬಹಿರಂಗಪಡಿಸಿದ್ದಾರೆ. ವಿಮಾನಗಳು ಪತನವಾದ ಕೆಲವೇ ಸೆಕೆಂಡುಗಳಲ್ಲಿ ಬೆಂಕಿ ವ್ಯಾಪಿಸಿ ಸುಟ್ಟು ಕರಕಲಾಗಿವೆ. ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ವಿಭಾಗ