logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Modi In Dubai: ದುಬೈಗೆ ಪ್ರಧಾನಿ ಮೋದಿ ಭೇಟಿ; ಭಾರತದ ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ಬುರ್ಜ್ ಖಲೀಫಾ Video

Modi in Dubai: ದುಬೈಗೆ ಪ್ರಧಾನಿ ಮೋದಿ ಭೇಟಿ; ಭಾರತದ ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ಬುರ್ಜ್ ಖಲೀಫಾ VIDEO

Meghana B HT Kannada

Jul 15, 2023 03:47 PM IST

google News

ಭಾರತದ ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ಬುರ್ಜ್ ಖಲೀಫಾ

    • Dubai Burj Khalifa: ಮೋದಿ ಭೇಟಿ ಹಿನ್ನೆಲೆ ಶುಕ್ರವಾರ (ಜುಲೈ 14) ರಾತ್ರಿ ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ಬುರ್ಜ್ ಖಲೀಫಾವನ್ನು ಭಾರತದ ತ್ರಿವರ್ಣ ಧ್ವಜದ ಬಣ್ಣಗಳಾದ ಕೇಸರಿ, ಬಿಳಿ, ಹಸಿರು ಬಣ್ಣಗಳ ಬೆಳಕಿನಿಂದ ಅಲಂಕೃತಗೊಳಿಸಲಾಗಿತ್ತು.
ಭಾರತದ ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ಬುರ್ಜ್ ಖಲೀಫಾ
ಭಾರತದ ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ಬುರ್ಜ್ ಖಲೀಫಾ

ದುಬೈ (ಯುಎಇ): ಫ್ರಾನ್ಸ್​ ಪ್ರವಾಸದ ಬಳಿಕ ಭಾರತದ ಪ್ರಧಾನಿ ನರೇಂದ್ರ ಮೋದಿ ಗಲ್ಫ್​ ರಾಷ್ಟ್ರ ಯುನೈಟೆಡ್​ ಅರಬ್​ ಎಮಿರೇಟ್ಸ್​ಗೆ​ ಭೇಟಿ ನೀಡಿದ್ದಾರೆ. ಮೋದಿ ಭೇಟಿ ಹಿನ್ನೆಲೆ ಶುಕ್ರವಾರ (ಜುಲೈ 14) ರಾತ್ರಿ ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾವನ್ನು ಭಾರತದ ತ್ರಿವರ್ಣ ಧ್ವಜದ ಬಣ್ಣಗಳಾದ ಕೇಸರಿ, ಬಿಳಿ, ಹಸಿರು ಬಣ್ಣಗಳ ಬೆಳಕಿನಿಂದ ಅಲಂಕೃತಗೊಳಿಸಲಾಗಿತ್ತು.

ಹಾಗೆಯೇ ಗಗನಚುಂಬಿ ಕಟ್ಟಡ ಬುರ್ಜ್ ಖಲೀಫಾ ಮೇಲೆ ಪಿಎಂ ಮೋದಿ ಫೋಟೋ ಕೂಡ ರಾರಾಜಿಸಿದ್ದು, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಎಂದು ಬರೆಯಲಾಗಿತ್ತು.

ಇಂದು (ಜುಲೈ 15, ಶನಿವಾರ) ಬೆಳಗ್ಗೆ ಪ್ರಧಾನಿ ಮೋದಿ ಅಬುಧಾಬಿಗೆ ಬಂದಿಳಿಯುತ್ತಿದ್ದಂತೆಯೇ ವಿಮಾನ ನಿಲ್ದಾಣದಲ್ಲಿ ಅಬುಧಾಬಿಯ ಕ್ರೌನ್ ಪ್ರಿನ್ಸ್ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಬರಮಾಡಿಕೊಂಡಿದ್ದಾರೆ.

ಗಲ್ಫ್ ರಾಷ್ಟ್ರಕ್ಕೆ ಆತ್ಮೀಯ ಸ್ವಾಗತಕ್ಕಾಗಿ ಧನ್ಯವಾದಗಳನ್ನು ವ್ಯಕ್ತಪಡಿಸಿದ ಪ್ರಧಾನಿ ಮೋದಿ, "ಇಂದು ವಿಮಾನ ನಿಲ್ದಾಣದಲ್ಲಿ ನನ್ನನ್ನು ಸ್ವಾಗತಿಸಿದ್ದಕ್ಕಾಗಿ ಕ್ರೌನ್ ಪ್ರಿನ್ಸ್ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಕೃತಜ್ಞತೆಗಳು" ಎಂದು ಟ್ವೀಟ್​ ಮಾಡಿದ್ದಾರೆ.

ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ವಿಷಯಗಳ ಕುರಿತು ಚರ್ಚಿಸಲಿದ್ದಾರೆ. ಭಾರತದ G-20 ಪ್ರೆಸಿಡೆನ್ಸಿಗೆ ಯುನೈಟೆಡ್​ ಅರಬ್​ ಎಮಿರೇಟ್ಸ್ ದೇಶವನ್ನು ವಿಶೇಷವಾಗಿ ಆಹ್ವಾನಿಸಲು ಕೂಡ ಈ ಭೇಟಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದಿದೆ.

ಭಾರತ ಮತ್ತು ಯುಎಇ ನಡುವೆ ಫೆಬ್ರವರಿ 18, 2022 ರಂದು ಸಿಇಪಿಎ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಮೇ 1, 2022 ರಂದು ಇದು ಜಾರಿಗೆ ಬಂದಿತು. ಇದು ಯುಎಇ-ಭಾರತ ನಡುವಿನ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದವಾಗಿದೆ.

2030 ರ ವೇಳೆಗೆ ಯುಎಇ-ಭಾರತ ತೈಲೇತರ ವ್ಯಾಪಾರವು ವರ್ಷಕ್ಕೆ USD 100 ಶತಕೋಟಿಯನ್ನು ತಲುಪುವ ನಿರೀಕ್ಷೆಯಿದೆ ಎಂದು ಯುಎಇಯ ವಿದೇಶಿ ವ್ಯಾಪಾರದ ರಾಜ್ಯ ಸಚಿವ ಡಾ ಥಾನಿ ಬಿನ್ ಅಹ್ಮದ್ ಅಲ್ ಝೆಯೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ