logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Jallikattu: ಇಬ್ಬರ ಸಾವಿನ ಬಳಿಕವೂ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆಗೆ ಚಾಲನೆ ನೀಡಿದ ಉದಯನಿಧಿ ಸ್ಟಾಲಿನ್

Jallikattu: ಇಬ್ಬರ ಸಾವಿನ ಬಳಿಕವೂ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆಗೆ ಚಾಲನೆ ನೀಡಿದ ಉದಯನಿಧಿ ಸ್ಟಾಲಿನ್

HT Kannada Desk HT Kannada

Jan 17, 2023 03:21 PM IST

ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆಗೆ ಚಾಲನೆ ನೀಡಿದ ಉದಯನಿಧಿ ಸ್ಟಾಲಿನ್

    • ಪೊಂಗಲ್​ ಹಬ್ಬದ ವೇಳೆ ತಮಿಳುನಾಡಿನಲ್ಲಿ ಗೂಳಿ ಪಳಗಿಸುವ ಜಲ್ಲಿಕಟ್ಟು ಸ್ಪರ್ಧೆಯನ್ನು ನಡೆಸಲಾಗುತ್ತದೆ. ಸೋಮವಾರ ನಡೆದ ಎರಡು ಪ್ರತ್ಯೇಕ ಜಲ್ಲಿಕಟ್ಟು ಸ್ಫರ್ಧೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರು, ಆದರೂ ಕೂಡ ಇಂದು ಮಧುರೈನ ಅಲಂಗನಲ್ಲೂರಿನಲ್ಲಿ ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಚಾಲನೆ ನೀಡಿದ್ದಾರೆ.
ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆಗೆ ಚಾಲನೆ ನೀಡಿದ ಉದಯನಿಧಿ ಸ್ಟಾಲಿನ್
ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆಗೆ ಚಾಲನೆ ನೀಡಿದ ಉದಯನಿಧಿ ಸ್ಟಾಲಿನ್

ಮಧುರೈ (ತಮಿಳುನಾಡು): ಪೊಂಗಲ್​ ಹಬ್ಬದ ವೇಳೆ ತಮಿಳುನಾಡಿನಲ್ಲಿ ಗೂಳಿ ಪಳಗಿಸುವ ಜಲ್ಲಿಕಟ್ಟು ಸ್ಪರ್ಧೆಯನ್ನು ನಡೆಸಲಾಗುತ್ತದೆ. ಸೋಮವಾರ ನಡೆದ ಎರಡು ಪ್ರತ್ಯೇಕ ಜಲ್ಲಿಕಟ್ಟು ಸ್ಫರ್ಧೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರು, ಆದರೂ ಕೂಡ ಇಂದು ಮಧುರೈನ ಅಲಂಗನಲ್ಲೂರಿನಲ್ಲಿ ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಚಾಲನೆ ನೀಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಭಾನುವಾರ ಚಿನ್ನ, ಬೆಳ್ಳಿ ಎರಡರ ದರವೂ ಹೆಚ್ಚಳ; ಆಭರಣ ಖರೀದಿಸುವ ಯೋಚನೆ ಇದ್ದರೆ ಇಂದಿನ ಬೆಲೆ ಗಮನಿಸಿ

ಭಾರತದ ಅತಿದೊಡ್ಡ ಬಜಾಜ್ ಪಲ್ಸರ್‌ ಮಾರುಕಟ್ಟೆಗೆ; ಪಲ್ಸರ್ NS400Z ಬೈಕ್‌ ದರ 1.85 ಲಕ್ಷ ರೂ, ವಿನ್ಯಾಸ ವಿಶೇಷ ವಿವರ ಹೀಗಿದೆ

ತಿರುಮಲ ತಿರುಪತಿಯಲ್ಲಿ ನವದಂಪತಿಗೆ ವಿಶೇಷ ಶ್ರೀವಾರಿ ದರ್ಶನ ಟಿಕೆಟ್ ಪ್ರಕಟಿಸಿದ ಟಿಟಿಡಿ; ಎಷ್ಟಿವೆ ಕೋಟಾ, ದರ ಇತ್ಯಾದಿ ವಿವರ

Gold Rate Today: ಮತ್ತೆ ಆರಂಭವಾಯ್ತು ಚಿನ್ನ, ಬೆಳ್ಳಿ ದರದಲ್ಲಿನ ಏರಿಳಿತ; ಶನಿವಾರ ಚಿನ್ನದ ದರ ಇಳಿಕೆ, ಬೆಳ್ಳಿ ಏರಿಕೆ

ಉದಯನಿಧಿ ಸ್ಟಾಲಿನ್ ಅವರು ಮೊದಲು ಗೂಳಿಗೆ ಪ್ರಾರ್ಥನೆ ಸಲ್ಲಿಸಿದರು ಮತ್ತು ಚಾಲನೆ ನೀಡುವ ಮೊದಲು ಗೂಳಿ ಪಳಗಿಸುವವರಿಗೆ ಪ್ರಮಾಣ ವಚನ ಬೋಧಿಸಿದರು. ಶಿಕ್ಷಣ ಸಚಿವ ಅನ್ಪಿಲ್ ಮಹೇಶ್ ಪೊಯ್ಯಮೊಳಿ ಮತ್ತು ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸೋಮವಾರ ಇಬ್ಬರು ಸಾವನ್ನಪ್ಪಿದ ನಂತರ ಜಲ್ಲಿಕಟ್ಟು ಸುಗಮ ಮತ್ತು ಸುರಕ್ಷಿತವಾಗಿ ನಡೆಸಲು ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಶ್ ಶೇಖರ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ನಿನ್ನೆ ಪಾಲಮೇಡುವಿನಲ್ಲಿ ನಡೆದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಮೂರು ಸುತ್ತುಗಳಲ್ಲಿ ಒಂಬತ್ತು ಹೋರಿಗಳನ್ನು ಪಳಗಿಸಿದ ಅರವಿಂದ್ ರಾಜ್ (26) ಎಂಬವರು ಹೋರಿ ತಿವಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದರು.

ತಿರುಚಿರಾಪಲ್ಲಿ ಜಿಲ್ಲೆಯ ಸುರಿಯೂರ್ ಗ್ರಾಮದಲ್ಲಿ ಜಲ್ಲಿಕಟ್ಟು ಪಂದ್ಯಾವಳಿಯನ್ನು ವೀಕ್ಷಿಸುತ್ತಿದ್ದ ಎಂ ಅರವಿಂದ್ (25) ಎಂಬವರು ಗೂಳಿಯೊಂದರ ದಾಳಿಗೆ ಬಲಿಯಾದರು. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸಾವಿಗೆ ಸಂತಾಪ ಸೂಚಿಸಿದ್ದು, ಅರವಿಂದ್ ರಾಜ್ ಮತ್ತು ಎಂ ಅರವಿಂದ್ ಅವರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಭಾನುವಾರ ಅವನಿಯಪುರಂನಲ್ಲಿ ನಡೆದ ವರ್ಷದ ಮೊದಲ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಕನಿಷ್ಠ 75 ಜನರು ಗಾಯಗೊಂಡಿದ್ದರು. ಇದರಲ್ಲಿ 737 ಹೋರಿಗಳು ಮತ್ತು 257 ಮಂದಿ ಹೋರಿ ಪಳಗಿಸುವವರು ಭಾಗವಹಿಸಿದ್ದರು.

ಮಧುರೈನ ಅವನಿಯಪುರಂ, ಪಾಲಮೇಡು ಮತ್ತು ಅಲಂಗನಲ್ಲೂರಿನಲ್ಲಿ ಸುಮಾರು 9,700 ಹೋರಿಗಳನ್ನು ಅವುಗಳ ಮಾಲೀಕರು ನೋಂದಾಯಿಸಿದ್ದಾರೆ. 5,400 ಮಂದಿ ಹೋರಿ ಪಳಗಿಸುವವರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

Kite string deaths: ಜೀವಕ್ಕೆ ಕುತ್ತು ತಂದ ಸಂಕ್ರಾಂತಿ ಸಂಭ್ರಮ.. ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ ಮೂವರು ಮಕ್ಕಳು ಸೇರಿ ನಾಲ್ವರು ಸಾವು

ಅನೇಕ ರಾಜ್ಯಗಳಲ್ಲಿ ಸಂಕ್ರಾಂತಿ ಹಬ್ಬದಂದು ಗಾಳಿಪಟ ಹಾರಿಸುವ ಸಂಪ್ರದಾಯವಿದೆ. ಆದರೆ ಗಾಳಿಪಟ ಹಾರಿಸುವ ನಿಮ್ಮ ಸಂಭ್ರಮ ಎಷ್ಟೋ ಬಾರಿ ಇತರರ ಜೀವಗಳನ್ನು ಬಲಿ ಪಡೆಯುತ್ತದೆ ಎಂದರೆ ನೀವು ನಂಬಲೇ ಬೇಕು. ಹೌದು,, ನಿಷೇಧಿತ ಪ್ಲಾಸ್ಟಿಕ್ ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ ಜನರು ಮೃತಪಟ್ಟಿರುವ ಅನೇಕ ಘಟನೆಗಳು ಈ ಹಿಂದೆ ನಮ್ಮ ದೇಶದಲ್ಲಿ ನಡೆದಿವೆ. ಈ ಬಾರಿಯ ಸಂಕ್ರಾಂತಿಯಲ್ಲಿ ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಗುಜರಾತ್​ನಲ್ಲಿ ಹಾಗೂ ಒಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ವಿವರ ಓದಿಗೆ ಇಲ್ಲಿ ಕ್ಲಿಕ್​ ಮಾಡಿ

ವಿಭಾಗ

    ಹಂಚಿಕೊಳ್ಳಲು ಲೇಖನಗಳು