logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Upsc Civil Services Exam 2023: ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಗೆ ಅಧಿಸೂಚನೆ ಪ್ರಕಟ; ಕೊನೆಯ ದಿನಾಂಕ, ಅರ್ಜಿ ಸಲ್ಲಿಸುವುದು ಹೇಗೆ?

UPSC Civil Services Exam 2023: ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಗೆ ಅಧಿಸೂಚನೆ ಪ್ರಕಟ; ಕೊನೆಯ ದಿನಾಂಕ, ಅರ್ಜಿ ಸಲ್ಲಿಸುವುದು ಹೇಗೆ?

HT Kannada Desk HT Kannada

Feb 03, 2023 06:14 AM IST

ಯುಪಿಎಸ್ ಸಿ ಪರೀಕ್ಷೆ 2023

    • UPSC Civil Services: UPSC ನಾಗರಿಕ ಸೇವೆಗಳ ಪರೀಕ್ಷೆಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಅಧಿಸೂಚನೆಯ ಮೂಲಕ ಒಟ್ಟು 1,105 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಐಎಎಸ್, ಐಪಿಎಸ್, ಐಎಫ್ಎಸ್ ಮುಂತಾದ ಉನ್ನತ ಸರ್ಕಾರಿ ಉದ್ಯೋಗಗಳಿಗಾಗಿ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.
ಯುಪಿಎಸ್ ಸಿ ಪರೀಕ್ಷೆ 2023
ಯುಪಿಎಸ್ ಸಿ ಪರೀಕ್ಷೆ 2023

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (Union Public Service Commission) ಯುಪಿಎಸ್ ಸಿ ಪ್ರತಿ ಜನವರಿಯಲ್ಲಿ ಅಥವಾ ಫೆಬ್ರವರಿಯಲ್ಲಿ ಐಎಎಸ್, ಐಪಿಎಸ್, ಐಎಫ್ಎಸ್ ಸೇರಿದಂತೆ ಇತರೆ ಉನ್ನತ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಿದೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಭಾನುವಾರ ಚಿನ್ನ, ಬೆಳ್ಳಿ ಎರಡರ ದರವೂ ಹೆಚ್ಚಳ; ಆಭರಣ ಖರೀದಿಸುವ ಯೋಚನೆ ಇದ್ದರೆ ಇಂದಿನ ಬೆಲೆ ಗಮನಿಸಿ

ಭಾರತದ ಅತಿದೊಡ್ಡ ಬಜಾಜ್ ಪಲ್ಸರ್‌ ಮಾರುಕಟ್ಟೆಗೆ; ಪಲ್ಸರ್ NS400Z ಬೈಕ್‌ ದರ 1.85 ಲಕ್ಷ ರೂ, ವಿನ್ಯಾಸ ವಿಶೇಷ ವಿವರ ಹೀಗಿದೆ

ತಿರುಮಲ ತಿರುಪತಿಯಲ್ಲಿ ನವದಂಪತಿಗೆ ವಿಶೇಷ ಶ್ರೀವಾರಿ ದರ್ಶನ ಟಿಕೆಟ್ ಪ್ರಕಟಿಸಿದ ಟಿಟಿಡಿ; ಎಷ್ಟಿವೆ ಕೋಟಾ, ದರ ಇತ್ಯಾದಿ ವಿವರ

Gold Rate Today: ಮತ್ತೆ ಆರಂಭವಾಯ್ತು ಚಿನ್ನ, ಬೆಳ್ಳಿ ದರದಲ್ಲಿನ ಏರಿಳಿತ; ಶನಿವಾರ ಚಿನ್ನದ ದರ ಇಳಿಕೆ, ಬೆಳ್ಳಿ ಏರಿಕೆ

ಈ ಬಾರಿ ಒಟ್ಟು 1,105 ಹುದ್ದೆಗಳನ್ನು ಭರ್ತಿ ಮಾಡಲು 2023ರ ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಯ (UPSC Civil Services Exam 2023) ಅಧಿಸೂಚನೆಯನ್ನು ಬಿಡುಗಡೆಯಾಗಿದೆ. ಇದರ ವಿವರ ಇಲ್ಲಿದೆ.

UPSC ನಾಗರಿಕ ಸೇವೆಗಳ ಪರೀಕ್ಷೆ 2023: ಕೊನೆಯ ದಿನಾಂಕ ಯಾವಾಗ?

UPSC ನಾಗರಿಕ ಸೇವೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 21. ಈ ನೋಂದಣಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ. ವಿವರವಾದ ಅಧಿಸೂಚನೆಯನ್ನು (UPSC Civil Services Exam 2023) UPSC ಅಧಿಕೃತ ವೆಬ್‌ಸೈಟ್ upsc.gov.in ನಲ್ಲಿ ಕಾಣಬಹುದು. ಅಲ್ಲದೆ, ಈ ನಾಗರಿಕ ಸೇವೆಗಳ ಪರೀಕ್ಷೆಗೆ ಅರ್ಜಿಯನ್ನು ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ upsc.gov.in ಮೂಲಕ ಅಥವಾ upsconline.nic.in ಮೂಲಕವೂ ಪಡೆಯಬಹುದು.

ನಾಗರಿಕ ಸೇವೆಗಳ ಪರೀಕ್ಷೆ2023 ರ ಅರ್ಜಿ ಪ್ರಕ್ರಿಯೆಯು ಫೆಬ್ರವರಿ 1 ರಿಂದ ಪ್ರಾರಂಭವಾಗಿದ್ದು, ಫೆಬ್ರವರಿ 21 ರಂದು ಕೊನೆಗೊಳ್ಳುತ್ತದೆ. ನಂತರ, ನೀವು ಅರ್ಜಿ ನಮೂನೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲು ಬಯಸಿದರೆ, ಆ ಅವಕಾಶವು ಫೆಬ್ರವರಿ 22 ರಿಂದ ಫೆಬ್ರವರಿ 28 ರವರೆಗೆ ಇರುತ್ತದೆ.

UPSC ನಾಗರಿಕ ಸೇವೆಗಳ ಪರೀಕ್ಷೆ 2023: ಮೇನಲ್ಲಿ ಪ್ರಿಲಿಮ್ಸ್

ಯುಪಿಎಸ್ಸಿಯ ಉದ್ಯೋಗಿಗಳ ಆಯ್ಕೆಯನ್ನು ಮೂರು ಹಂತಗಳಲ್ಲಿ ಮಾಡಲಾಗುತ್ತದೆ. ಮೊದಲು ಆಬ್ಜೆಕ್ಟಿವ್ ಮೋಡ್‌ನಲ್ಲಿ ಪ್ರಿಲಿಮ್ಸ್ ಪರೀಕ್ಷೆ ಇರುತ್ತದೆ. ಇದರಲ್ಲಿ ಅರ್ಹತೆ ಪಡೆದವರಿಗೆ ನಂತರ ವಿವರಣಾತ್ಮಕ ಕ್ರಮದಲ್ಲಿ ಮುಖ್ಯ ಪರೀಕ್ಷೆ ಇರುತ್ತದೆ.

ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ವೈಯಕ್ತಿಕ ಸಂದರ್ಶನ ನಡೆಯಲಿದೆ. 2023 ರ ಪೂರ್ವಭಾವಿ ಪರೀಕ್ಷೆಯನ್ನು ಮೇ 28 ರಂದು ನಡೆಸಲಾಗುವುದು. 2023ರ ಯುಪಿಎಸ್ಸಿ ಸಿವಿಲ್ ಸರ್ವೀಸಸ್ ಪರೀಕ್ಷೆ ಬರೆಯಲು ಅಭ್ಯರ್ಥಿಗಳು ಕನಿಷ್ಠ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅಲ್ಲದೆ, ಅವರ ವಯಸ್ಸು ಆಗಸ್ಟ್ 1, 2023ಕ್ಕೆ ಅನ್ವಯವಾಗುವಂತೆ 21 ವರ್ಷದಿಂದ 32 ವರ್ಷಗಳ ನಡುವೆ ಇರಬೇಕು. ಅರ್ಜಿಯೊಂದಿಗೆ 100 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ. ಮಹಿಳೆಯರು, ಎಸ್‌ಸಿ, ಎಸ್‌ಟಿ, ಅಂಗವಿಕಲರು ಶುಲ್ಕ ಪಾವತಿಸಬೇಕಾಗಿಲ್ಲ.

ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಯುಪಿಐ ಮೋಡ್‌ಗಳ ಮೂಲಕ ಪಾವತಿಸಬಹುದು. ವಿವರಗಳು upsconline.nic.in. ವೆಬ್‌ಸೈಟ್‌ನಲ್ಲಿವೆ.

UPSC ನಾಗರಿಕ ಸೇವೆಗಳ ಪರೀಕ್ಷೆ 2023: ಅರ್ಜಿ ಸಲ್ಲಿಸುವುದು ಹೇಗೆ?

ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ upsc.gov.in ಗೆ ಹೋಗಿ. ಮುಖಪುಟದಲ್ಲಿ Whats New ವಿಭಾಗದಲ್ಲಿ UPSC ನಾಗರಿಕ ಸೇವೆಗಳ ಪರೀಕ್ಷೆ 2023 ಲಿಂಕ್ ಅನ್ನು ಕ್ಲಿಕ್ ಮಾಡಿ.

ಆಗ ನೇರ ಲಿಂಕ್ ಓಪನ್ ಆಗುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಅರ್ಜಿ ನಮೂನೆಯ ಪುಟ ತೆರೆಯುತ್ತದೆ. ವಿವರಗಳನ್ನು ಭರ್ತಿ ಮಾಡಿ ಮತ್ತು ನೋಂದಾಯಿಸಿ. ನೀವು ಈಗಾಗಲೇ ನೋಂದಾಯಿಸಿದ್ದರೆ, ಲಾಗಿನ್ ವಿವರಗಳನ್ನು ಭರ್ತಿ ಮಾಡಿ ಮತ್ತು ಸಬ್ಮಿಟ್ ಬಟನ್ ಒತ್ತಿರಿ.

ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಶುಲ್ಕವನ್ನು ಪಾವತಿಸಿ. ವಿನಾಯಿತಿ ಪಡೆದ ವ್ಯಕ್ತಿಗಳು ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ. ಸಲ್ಲಿಸುವ (ಸಬ್ಮಿಟ್) ಬಟನ್ ಮೇಲೆ ಕ್ಲಿಕ್ ಮಾಡಿ. ಅದರ ನಂತರ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಮುಂದಿನ ಪ್ರಕ್ರಿಯೆಗಳಿಗಾಗಿ ಅರ್ಜಿ ನಮೂನೆಯ ಪ್ರಿಂಟ್ ವೊಂದನ್ನು ತೆಗೆದುಕೊಳ್ಳಿ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು