logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Uttarakhand: ನಿರ್ಮಾಣ ಹಂತದ ಸುರಂಗ ಕುಸಿತ; ಅವಶೇಷಗಳಡಿ ಸಿಲುಕಿದ 40 ಕಾರ್ಮಿಕರು

Uttarakhand: ನಿರ್ಮಾಣ ಹಂತದ ಸುರಂಗ ಕುಸಿತ; ಅವಶೇಷಗಳಡಿ ಸಿಲುಕಿದ 40 ಕಾರ್ಮಿಕರು

Meghana B HT Kannada

Nov 12, 2023 02:34 PM IST

ನಿರ್ಮಾಣ ಹಂತದ ಸುರಂಗ ಕುಸಿತ

    • ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಇಂದು ಮುಂಜಾನೆ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದು ಸುಮಾರು 40 ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ. 
ನಿರ್ಮಾಣ ಹಂತದ ಸುರಂಗ ಕುಸಿತ
ನಿರ್ಮಾಣ ಹಂತದ ಸುರಂಗ ಕುಸಿತ

ಉತ್ತರಕಾಶಿ (ಉತ್ತರಾಖಂಡ): ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದು ಸುಮಾರು 40 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಇಂದು ಮುಂಜಾನೆ (ನ.12, ಭಾನುವಾರ) ನಡೆದಿದೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಎರಡು ದಿನಗಳ ಇಳಿಕೆಯ ಬಳಿಕ ಮತ್ತೆ ಏರಿಕೆ ಕಂಡ ಚಿನ್ನದ ದರ; ಶನಿವಾರವೂ ಬೆಳ್ಳಿ ದರ ಹೆಚ್ಚಳ

ಹವಾಮಾನ ಬದಲಾವಣೆ ಎಫೆಕ್ಟ್; ತನ್ನ ಎಲ್ಲಾ ಹಿಮನದಿಗಳನ್ನು ಕಳೆದುಕೊಂಡ ಮೊದಲ ದೇಶ ವೆನೆಜುವೆಲಾ; ಏನಿದು ಬೆಳವಣಿಗೆ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು; ಚುನಾವಣಾ ಪ್ರಚಾರಕ್ಕೆ ಮಾತ್ರ ಸೀಮಿತ

2024 ರ ಮಾರುತಿ ಸುಜುಕಿ ಸ್ವಿಫ್ಟ್ ಭಾರತದಲ್ಲಿ ಬಿಡುಗಡೆ; ಕಾರಿನ ಬೆಲೆ, ಫೀಚರ್ಸ್ ಸೇರಿ ತಿಳಿಯಬೇಕಾದ 5 ಅಂಶಗಳ ವಿವರ ಇಲ್ಲಿದೆ

ಉತ್ತರಕಾಶಿ ಜಿಲ್ಲೆಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ಸುರಂಗವನ್ನು ನಿರ್ಮಿಸಲಾಗುತ್ತಿತ್ತು. ನಾಲ್ಕೂವರೆ ಕಿಲೋ ಮೀಟರ್ ಉದ್ದದ ಸುರಂಗದಲ್ಲಿ 150 ಮೀಟರ್ ಉದ್ದದ ಭಾಗ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕುಸಿದು ಬಿದ್ದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ ಅರ್ಪಣ್ ಯದುವಂಶಿ ಅವರು ರಕ್ಷಣಾ ತಂಡದೊಂದಿದೆ ತಕ್ಷಣ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಇದುವರೆಗೂ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಶೀಘ್ರದಲ್ಲೇ ಎಲ್ಲ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ ಮತ್ತು ಸುರಂಗವನ್ನು ನಿರ್ಮಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (ಎನ್‌ಎಚ್‌ಐಡಿಸಿಎಲ್) ನೌಕರರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಚಾರ್ ಧಾಮ್ ರಸ್ತೆ ಯೋಜನೆಯಡಿಯಲ್ಲಿ ಈ ಸರ್ವಋತು ಸುರಂಗವನ್ನು ನಿರ್ಮಿಸಲಾಗುತ್ತಿದ್ದು, ಇದು ಉತ್ತರಕಾಶಿಯಿಂದ ಯಮುನೋತ್ರಿ ಧಾಮಕ್ಕೆ 26 ಕಿಲೋ ಮೀಟರ್​​ಗಳಷ್ಟು ಪ್ರಯಾಣ ಕಡಿಮೆ ಮಾಡುತ್ತದೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ