logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Mamata Banerjee Helicopter: ಹವಾಮಾನ ವೈಪರೀತ್ಯ; ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Mamata Banerjee Helicopter: ಹವಾಮಾನ ವೈಪರೀತ್ಯ; ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Meghana B HT Kannada

Jun 27, 2023 04:52 PM IST

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (ಸಂಗ್ರಹ ಚಿತ್ರ)

    • West Bengal news: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಸೆವೋಕ್ ಏರ್‌ಬೇಸ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಅವರು ಜಲ್ಪೈಗುರಿಯ ಕ್ರಿಂತಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ ಬಾಗ್ಡೋಗ್ರಾಕ್ಕೆ ಹೋಗುತ್ತಿದ್ದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (ಸಂಗ್ರಹ ಚಿತ್ರ)
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (ಸಂಗ್ರಹ ಚಿತ್ರ)

ಜಲ್ಪೈಗುರಿ (ಪಶ್ಚಿಮ ಬಂಗಾಳ): ಹವಾಮಾನ ವೈಪರೀತ್ಯದಿಂದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (West Bengal CM Mamata Banerjee) ಅವರಿದ್ದ ಹೆಲಿಕಾಪ್ಟರ್ ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಟ್ರೆಂಡಿಂಗ್​ ಸುದ್ದಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

SBI FD Rate Hike: ಸ್ಥಿರ ಠೇವಣಿಗಳ ಬಡ್ಡಿದರ ಹೆಚ್ಚಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ; ಎಸ್‌ಬಿಐ ಎಫ್‌ಡಿಗಳ ಬಡ್ಡಿದರ ವಿವರ ಹೀಗಿದೆ

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಕ್ರಿಂತಿ ಎಂಬಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಸಿಎಂ ಮಮತಾ ಬ್ಯಾನರ್ಜಿ ಮಾತನಾಡಿ ಅಲ್ಲಿಂದ ಬಾಗ್ಡೋಗ್ರಾ ಎಂಬಲ್ಲಿಗೆ ಹೆಲಿಕಾಪ್ಟರ್ ಮೂಲಕ ಹೋಗುತ್ತಿದ್ದರು. ಆದರೆ ಕಡಿಮೆ ಗೋಚರತೆಯಿಂದಾಗಿ ಸೆವೋಕ್ ಏರ್‌ಬೇಸ್‌ನಲ್ಲಿ ತುರ್ತು ಭೂಸ್ಪರ್ಶ (helicopter emergency landing) ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿಎಂಸಿ ನಾಯಕ ರಾಜೀಬ್ ಬ್ಯಾನರ್ಜಿ, "ಕಡಿಮೆ ಗೋಚರತೆಯಿಂದಾಗಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಸೆವೋಕ್ ಏರ್‌ಬೇಸ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಅವರು ಜಲ್ಪೈಗುರಿಯ ಕ್ರಿಂತಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ ಬಾಗ್ಡೋಗ್ರಾಕ್ಕೆ ಹೋಗುತ್ತಿದ್ದರು. ಅವರು ಸುರಕ್ಷಿತವಾಗಿದ್ದಾರೆ" ಎಂದು ಹೇಳಿದ್ದಾರೆ.

"ಹೆಲಿಗೋ ಚಾರ್ಟರ್ಸ್ ಪ್ರೈವೇಟ್ ಲಿಮಿಟೆಡ್‌ನ EC-145 ಹೆಲಿಕಾಪ್ಟರ್‌ನಲ್ಲಿ ಪಶ್ಚಿಮ ಬಂಗಾಳ ಸಿಎಂ ಇದ್ದರು. ಭಾರಿ ಮಳೆ ಮತ್ತು ಬಾಗ್ಡೋಗ್ರಾದಲ್ಲಿ ಕಡಿಮೆ ಗೋಚರತೆ ಕಾರಣ ಸೇನಾ ಹೆಲಿಕಾಪ್ಟರ್ ಬೇಸ್ (ಸೆವೋಕ್) ರಸ್ತೆಗೆ ಅವರಿದ್ದ ಹೆಲಿಕಾಪ್ಟರ್​ ಮಾರ್ಗವನ್ನು ಬದಲಿಸಿದೆ. ಹೆಲಿಕಾಪ್ಟರ್ ಹವಾಮಾನ ಕ್ಲಿಯರ್ ಆಗಲು ಕಾಯುತ್ತಿದೆ. ಇದು ಮುನ್ನೆಚ್ಚರಿಕೆಯ ಲ್ಯಾಂಡಿಂಗ್ ಆಗಿದೆ" ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಹೇಳಿದೆ.

ಆರೋಪಿಗಳ ವಿರುದ್ಧ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ಬುಲ್ಡೋಜರ್​ ಕ್ರಮ (Yogi Adityanath Bulldozer action) ಮುಂದುವರೆದಿದೆ. ಉತ್ತರ ಪ್ರದೇಶದ ಫತೇಪುರ್‌ನ ಆಡಳಿತವು ಅತ್ಯಾಚಾರ ಮತ್ತು ಕೊಲೆ ಆರೋಪಿಯ ಮನೆಯನ್ನು ನೆಲಸಮಗೊಳಿಸಿದೆ. ಏನಿದು ಬುಲ್ಡೋಜರ್ ರಾಜಕಾರಣ? ವಿವರ ಓದಿಗೆ ಇಲ್ಲಿ ಕ್ಲಿಕ್ ಮಾಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ