ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸೋಲಿನ ನಡುವೆಯೂ ಬಾಬರ್ ಅಜಮ್ ವಿಶ್ವದಾಖಲೆ; ಕೊಹ್ಲಿ, ರೋಹಿತ್‌ ಮೀರಿಸಿ ಪಾಕಿಸ್ತಾನ ನಾಯಕನ ರೆಕಾರ್ಡ್

ಸೋಲಿನ ನಡುವೆಯೂ ಬಾಬರ್ ಅಜಮ್ ವಿಶ್ವದಾಖಲೆ; ಕೊಹ್ಲಿ, ರೋಹಿತ್‌ ಮೀರಿಸಿ ಪಾಕಿಸ್ತಾನ ನಾಯಕನ ರೆಕಾರ್ಡ್

Apr 23, 2024 06:40 PM IST

Babar Azam: ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾ ಮಾಜಿ ಆಟಗಾರ ಆರೋನ್ ಫಿಂಚ್ ಅವರ ವಿಶ್ವದಾಖಲೆಯನ್ನು ಮುರಿದಿದ್ದಾರೆ.

  • Babar Azam: ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾ ಮಾಜಿ ಆಟಗಾರ ಆರೋನ್ ಫಿಂಚ್ ಅವರ ವಿಶ್ವದಾಖಲೆಯನ್ನು ಮುರಿದಿದ್ದಾರೆ.
ರಾವಲ್ಪಿಂಡಿಯಲ್ಲಿ ಭಾನುವಾರ ನಡೆದ ಪಂದ್ಯದಲಿ ನ್ಯೂಜಿಲ್ಯಾಂಡ್ ವಿರುದ್ಧ ಬಾಬರ್ 29 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 37 ರನ್ ಗಳಿಸಿದರು. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಬಾಬರ್ ಪಾತ್ರರಾಗಿದ್ದಾರೆ. ಪಾಕಿಸ್ತಾನ ತಂಡವನ್ನು ಮುನ್ನಡೆಸಿರುವ ಬಾಬರ್ 67 ಇನ್ನಿಂಗ್ಸ್‌ಗಳಲ್ಲಿ 2246 ರನ್ ಗಳಿಸಿದ್ದಾರೆ. ಅವರು ಆಸ್ಟ್ರೇಲಿಯಾದ ಮಾಜಿ ನಾಯಕ ಆರೋನ್ ಫಿಂಚ್ ಅವರನ್ನು ಹಿಂದಿಕ್ಕಿದ್ದಾರೆ.
(1 / 7)
ರಾವಲ್ಪಿಂಡಿಯಲ್ಲಿ ಭಾನುವಾರ ನಡೆದ ಪಂದ್ಯದಲಿ ನ್ಯೂಜಿಲ್ಯಾಂಡ್ ವಿರುದ್ಧ ಬಾಬರ್ 29 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 37 ರನ್ ಗಳಿಸಿದರು. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಬಾಬರ್ ಪಾತ್ರರಾಗಿದ್ದಾರೆ. ಪಾಕಿಸ್ತಾನ ತಂಡವನ್ನು ಮುನ್ನಡೆಸಿರುವ ಬಾಬರ್ 67 ಇನ್ನಿಂಗ್ಸ್‌ಗಳಲ್ಲಿ 2246 ರನ್ ಗಳಿಸಿದ್ದಾರೆ. ಅವರು ಆಸ್ಟ್ರೇಲಿಯಾದ ಮಾಜಿ ನಾಯಕ ಆರೋನ್ ಫಿಂಚ್ ಅವರನ್ನು ಹಿಂದಿಕ್ಕಿದ್ದಾರೆ.(AP)
ನ್ಯೂಜಿಲ್ಯಾಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ ಸೋಲು ಕಂಡಿತು. ತಂಡದ ಸೋಲಿನ ಹೊರತಾಗಿಯೂ, ಪಾಕಿಸ್ತಾನ ನಾಯಕ ಬಾಬರ್ ಅಜಮ್ ರಾವಲ್ಪಿಂಡಿಯಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅಲ್ಲದೆ ಆರೋನ್ ಫಿಂಚ್ ಹೆಸರಲ್ಲಿದ್ದ ವಿಶ್ವದಾಖಲೆಯನ್ನು ಮುರಿದಿದ್ದಾರೆ. ಆದರೆ, ಈ ದಾಖಲೆಯ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬಹಳ ಹಿಂದುಳಿದಿದ್ದಾರೆ.
(2 / 7)
ನ್ಯೂಜಿಲ್ಯಾಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ ಸೋಲು ಕಂಡಿತು. ತಂಡದ ಸೋಲಿನ ಹೊರತಾಗಿಯೂ, ಪಾಕಿಸ್ತಾನ ನಾಯಕ ಬಾಬರ್ ಅಜಮ್ ರಾವಲ್ಪಿಂಡಿಯಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅಲ್ಲದೆ ಆರೋನ್ ಫಿಂಚ್ ಹೆಸರಲ್ಲಿದ್ದ ವಿಶ್ವದಾಖಲೆಯನ್ನು ಮುರಿದಿದ್ದಾರೆ. ಆದರೆ, ಈ ದಾಖಲೆಯ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬಹಳ ಹಿಂದುಳಿದಿದ್ದಾರೆ.(AP)
ಆರೋನ್ ಫಿಂಚ್ ನಾಯಕನಾಗಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದಾಖಲೆ ಹೊಂದಿದ್ದಾರೆ. ಆಸ್ಟ್ರೇಲಿಯಾದ ಮಾಜಿ ಸ್ಟಾರ್ ಆಟಗಾರ 76 ಇನ್ನಿಂಗ್ಸ್‌ಗಳಲ್ಲಿ ಒಟ್ಟು 2236 ರನ್ ಗಳಿಸಿದ್ದಾರೆ. ಇದೀಗ ಅವರನ್ನು ಬಾಬರ್ ಅಜಮ್ ಹಿಂದಿಕ್ಕಿದ್ದಾರೆ.
(3 / 7)
ಆರೋನ್ ಫಿಂಚ್ ನಾಯಕನಾಗಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದಾಖಲೆ ಹೊಂದಿದ್ದಾರೆ. ಆಸ್ಟ್ರೇಲಿಯಾದ ಮಾಜಿ ಸ್ಟಾರ್ ಆಟಗಾರ 76 ಇನ್ನಿಂಗ್ಸ್‌ಗಳಲ್ಲಿ ಒಟ್ಟು 2236 ರನ್ ಗಳಿಸಿದ್ದಾರೆ. ಇದೀಗ ಅವರನ್ನು ಬಾಬರ್ ಅಜಮ್ ಹಿಂದಿಕ್ಕಿದ್ದಾರೆ.(AFP)
ಈ ಪಟ್ಟಿಯಲ್ಲಿ ಕೇನ್ ವಿಲಿಯಮ್ಸನ್ ಮೂರನೇ ಸ್ಥಾನದಲ್ಲಿದ್ದಾರೆ. ಅವರು ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಿ 71 ಇನ್ನಿಂಗ್ಸ್‌ಗಳಲ್ಲಿ 2125 ರನ್ ಗಳಿಸಿದ್ದಾರೆ. ವಿಲಿಯಮ್ಸನ್ ನಾಯಕನಾಗಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.
(4 / 7)
ಈ ಪಟ್ಟಿಯಲ್ಲಿ ಕೇನ್ ವಿಲಿಯಮ್ಸನ್ ಮೂರನೇ ಸ್ಥಾನದಲ್ಲಿದ್ದಾರೆ. ಅವರು ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಿ 71 ಇನ್ನಿಂಗ್ಸ್‌ಗಳಲ್ಲಿ 2125 ರನ್ ಗಳಿಸಿದ್ದಾರೆ. ವಿಲಿಯಮ್ಸನ್ ನಾಯಕನಾಗಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.(AFP)
ರೋಹಿತ್ ಶರ್ಮಾ ಭಾರತದ ಟಿ20 ನಾಯಕನಾಗಿ 1648 ರನ್ ಗಳಿಸಿದ್ದಾರೆ. ಅವರು ಭಾರತದ ನಾಯಕನಾಗಿ ಇದುವರೆಗೆ 54 ಇನ್ನಿಂಗ್ಸ್‌ಗಳಲ್ಲಿ ಆಡಿದ್ದಾರೆ. ಈ ಪಟ್ಟಿಯಲ್ಲಿ ಪ್ರಸ್ತುತ ಹಿಟ್‌ಮ್ಯಾನ್ ನಾಲ್ಕನೇ ಸ್ಥಾನದಲ್ಲಿದ್ದಾರೆ.
(5 / 7)
ರೋಹಿತ್ ಶರ್ಮಾ ಭಾರತದ ಟಿ20 ನಾಯಕನಾಗಿ 1648 ರನ್ ಗಳಿಸಿದ್ದಾರೆ. ಅವರು ಭಾರತದ ನಾಯಕನಾಗಿ ಇದುವರೆಗೆ 54 ಇನ್ನಿಂಗ್ಸ್‌ಗಳಲ್ಲಿ ಆಡಿದ್ದಾರೆ. ಈ ಪಟ್ಟಿಯಲ್ಲಿ ಪ್ರಸ್ತುತ ಹಿಟ್‌ಮ್ಯಾನ್ ನಾಲ್ಕನೇ ಸ್ಥಾನದಲ್ಲಿದ್ದಾರೆ.(AFP)
ವಿರಾಟ್ ಕೊಹ್ಲಿ ಭಾರತದ ಟಿ20 ನಾಯಕನಾಗಿ 46 ಇನ್ನಿಂಗ್ಸ್‌ಗಳಲ್ಲಿ 1570 ರನ್ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕೊಹ್ಲಿ ಐದನೇ ಸ್ಥಾನದಲ್ಲಿದ್ದಾರೆ.
(6 / 7)
ವಿರಾಟ್ ಕೊಹ್ಲಿ ಭಾರತದ ಟಿ20 ನಾಯಕನಾಗಿ 46 ಇನ್ನಿಂಗ್ಸ್‌ಗಳಲ್ಲಿ 1570 ರನ್ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕೊಹ್ಲಿ ಐದನೇ ಸ್ಥಾನದಲ್ಲಿದ್ದಾರೆ.(PTI)
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಬಾಬರ್ ಅಜಮ್ ಮೂರನೇ ಸ್ಥಾನದಲ್ಲಿದ್ದಾರೆ. ಅವರು 112 ಪಂದ್ಯಗಳಲ್ಲಿ 105 ಇನ್ನಿಂಗ್ಸ್‌ಗಳಲ್ಲಿ 3749 ರನ್ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಅವರು 117 ಪಂದ್ಯಗಳಲ್ಲಿ 109 ಇನ್ನಿಂಗ್ಸ್‌ಗಳಲ್ಲಿ 4037 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಅವರು 151 ಪಂದ್ಯಗಳಲ್ಲಿ 143 ಇನ್ನಿಂಗ್ಸ್‌ಗಳಲ್ಲಿ 3974 ರನ್ ಗಳಿಸಿದ್ದಾರೆ.
(7 / 7)
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಬಾಬರ್ ಅಜಮ್ ಮೂರನೇ ಸ್ಥಾನದಲ್ಲಿದ್ದಾರೆ. ಅವರು 112 ಪಂದ್ಯಗಳಲ್ಲಿ 105 ಇನ್ನಿಂಗ್ಸ್‌ಗಳಲ್ಲಿ 3749 ರನ್ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಅವರು 117 ಪಂದ್ಯಗಳಲ್ಲಿ 109 ಇನ್ನಿಂಗ್ಸ್‌ಗಳಲ್ಲಿ 4037 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಅವರು 151 ಪಂದ್ಯಗಳಲ್ಲಿ 143 ಇನ್ನಿಂಗ್ಸ್‌ಗಳಲ್ಲಿ 3974 ರನ್ ಗಳಿಸಿದ್ದಾರೆ.(AP)

    ಹಂಚಿಕೊಳ್ಳಲು ಲೇಖನಗಳು