logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Kannada Rajyotsava: 5 ತಿಂಗಳ ಮಗುವಿಗೂ ಕನ್ನಡ ಸಡಗರ: ಕರ್ನಾಟಕದಲ್ಲಿ ರಾಜ್ಯೋತ್ಸವದ ಖುಷಿ

Kannada Rajyotsava: 5 ತಿಂಗಳ ಮಗುವಿಗೂ ಕನ್ನಡ ಸಡಗರ: ಕರ್ನಾಟಕದಲ್ಲಿ ರಾಜ್ಯೋತ್ಸವದ ಖುಷಿ

Nov 01, 2023 01:46 PM IST

ಇದು ಕರ್ನಾಟಕದ ದಿನ. 68 ನೇ ಕನ್ನಡ ರಾಜ್ಯೋತ್ಸವದ ಸಡಗರ. ಕರ್ನಾಟಕದ ಬಹಳಷ್ಟು ಕಡೆ ರಾಜ್ಯೋತ್ಸವನ್ನು ವಿಭಿನ್ನವಾಗಿ ಆಚರಿಸಲಾಗಿದೆ. ಬೆಂಗಳೂರು, ಮೈಸೂರು, ಮಂಗಳೂರು, ಬೀದರ್‌, ಮಂಡ್ಯ ಸಹಿತ ನಾನಾ ಕಡೆಗಳಲ್ಲಿ ಮಕ್ಕಳಿಂದ ಮೊದಲ್ಗೊಂಡು ಹಿರಿಯರೂ ಕನ್ನಡ ಮನಸಿನೊಂದಿಗೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹೀಗಿತ್ತು ಕನ್ನಡ ಹಬ್ಬದ ಸಡಗರ, ಸಂಭ್ರಮ…

  • ಇದು ಕರ್ನಾಟಕದ ದಿನ. 68 ನೇ ಕನ್ನಡ ರಾಜ್ಯೋತ್ಸವದ ಸಡಗರ. ಕರ್ನಾಟಕದ ಬಹಳಷ್ಟು ಕಡೆ ರಾಜ್ಯೋತ್ಸವನ್ನು ವಿಭಿನ್ನವಾಗಿ ಆಚರಿಸಲಾಗಿದೆ. ಬೆಂಗಳೂರು, ಮೈಸೂರು, ಮಂಗಳೂರು, ಬೀದರ್‌, ಮಂಡ್ಯ ಸಹಿತ ನಾನಾ ಕಡೆಗಳಲ್ಲಿ ಮಕ್ಕಳಿಂದ ಮೊದಲ್ಗೊಂಡು ಹಿರಿಯರೂ ಕನ್ನಡ ಮನಸಿನೊಂದಿಗೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹೀಗಿತ್ತು ಕನ್ನಡ ಹಬ್ಬದ ಸಡಗರ, ಸಂಭ್ರಮ…
ಮೈಸೂರಿನಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದ ಬಣ್ಣದ ಉಡುಪಿನೊಂದಿಗೆ ಬಂದಿದ್ದ ಐದು ತಿಂಗಳ ಮಗುವಿನ ಸಂತಸದ ಕ್ಷಣ.
(1 / 10)

ಹೊಸದುರ್ಗ ಪಟ್ಟಣದ ಎಸ್.ನಿಜಲಿಂಗಪ್ಪ ಅಂತರಾಷ್ಟ್ರೀಯ ಶಾಲೆ ಆವರಣದಲ್ಲಿ ರಾಜ್ಯೋತ್ಸವಕ್ಕೆ ಹಾಕಿದ್ದ ಭುವನೇಶ್ವರಿ ರಂಗೋಲಿ ಗಮನ ಸೆಳೆಯಿತು.
(2 / 10)

ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಡೊಳ್ಳು ತಂಡಗಳು ಮೆರಗು ತಂದವು
(3 / 10)

ಬೀದರ್‌ನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಡಗರದಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಡಿಸಿ ಗೋವಿಂದರೆಡ್ಡಿ, ಎಸ್ಪಿ ಚನ್ನಬಸವಣ್ಣ ಲಂಗೋಟಿ, ಸಿಇಒ ಶಿಲ್ಪ ಅವರೊಂದಿಗೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.
(4 / 10)

ಬೆಂಗಳೂರು ಬೃಹತ್‌ ಮಹಾನಗರ ಪಾಲಿಕೆ ಆವರಣದಲ್ಲಿ ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌, ಆಯುಕ್ತ ತುಷಾರ್‌ ಗಿರಿನಾಥ್‌ ಮತ್ತಿತತರು ಧ್ವಜಾರೋಹಣ ನೆರವೇರಿಸಿದರು.
(5 / 10)

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ದರ್ಬೆ ಬಳಿಯಿಂದ ಹೊರಟ ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ಶಾಸಕ ಅಶೋಕಕುಮಾರ್‌ ರೈ ಚಾಲನೆ ಕೊಟ್ಟರು.
(6 / 10)

ಮೈಸೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯೋತ್ಸವದಲ್ಲಿ ಮೈಸೂರು ಅರಮನೆ ಆವರಣದಿಂದ ಭುವನೇಶ್ವರಿ ಮೆರವಣಿಗೆ ನಡೆಯಿತು. 
(7 / 10)

ಬೆಳಗಾವಿ ಜಿಲ್ಲೆ ಮೂಡಲಗಿ ಪಟ್ಟಣದ ಮುಖ್ಯ ವೃತ್ತದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕನ್ನಡ ಪರ ಹೋರಾಟಗಾರರು ಭಾಗಿಯಾದರು.
(8 / 10)

ಉಡುಪಿಯಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳರ್‌ ಕಲಾ ತಂಡಗಳೊಂದಿಗೆ ಹೆಜ್ಜೆ ಹಾಕಿದರು
(9 / 10)

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜೈೋತ್ಸವದಲ್ಲಿ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿ ಗಮನ ಸೆಳೆದರು.
(10 / 10)

    ಹಂಚಿಕೊಳ್ಳಲು ಲೇಖನಗಳು