logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Gruha Lakshmi: ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ಸ್ತೀ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ; ಸಿಎಂ ಸಿದ್ದರಾಮಯ್ಯ

Gruha Lakshmi: ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ಸ್ತೀ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ; ಸಿಎಂ ಸಿದ್ದರಾಮಯ್ಯ

Jul 19, 2023 11:09 PM IST

Gruha Lakshmi: ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿಯ ಗೃಹಲಕ್ಷ್ಮಿ ಯೋಜನೆ ಬುಧವಾರ ಜಾರಿಯಾಯಿತು. ಈ ಮೂಲಕ ಕಾಂಗ್ರೆಸ್‌ ನೀಡಿದ ಐದು ಭರವಸೆಗಳಲ್ಲಿ ನಾಲ್ಕನೇ ಯೋಜನೆಗೂ ಚಾಲನೆ ಸಿಕ್ಕಂತಾಗಿದೆ.

  • Gruha Lakshmi: ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿಯ ಗೃಹಲಕ್ಷ್ಮಿ ಯೋಜನೆ ಬುಧವಾರ ಜಾರಿಯಾಯಿತು. ಈ ಮೂಲಕ ಕಾಂಗ್ರೆಸ್‌ ನೀಡಿದ ಐದು ಭರವಸೆಗಳಲ್ಲಿ ನಾಲ್ಕನೇ ಯೋಜನೆಗೂ ಚಾಲನೆ ಸಿಕ್ಕಂತಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಮಹಿಳಾ ಮತ್ತು ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹಾಗೂ ಪ್ರಮುಖರ ಉಪಸ್ಥಿತಿಯಲ್ಲಿ ವಿಧಾನಸೌಧದಲ್ಲಿ ಬುಧವಾರ ಸಂಜೆ ಚಾಲನೆ ದೊರೆಯಿತು. ಅಲ್ಲದೇ ಈ ಯೋಜನೆಗೆ ಸಹಕರಿಸಲು ಪ್ರಜಾಪ್ರತಿನಿಧಿಗಳ ನೇಮಕವನ್ನೂ ಅಧಿಕೃತವಾಗಿ ಘೋಷಿಸಲಾಯಿತು.
(1 / 10)

ನಮ್ಮ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಈಗ ಚಾಲನೆ ನೀಡಲಾಗಿದೆ. ಆಗಸ್ಟ್ 16ರಿಂದ ಯೋಜನೆ ಜಾರಿಗೊಳ್ಳಲಿದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯ ಹಣಕಾಸಿನ ಸಂಕಷ್ಟಕ್ಕೆ ಸಿಲುಕಲಿದೆ ಎಂಬ  ಮಾತುಗಳನ್ನು ಕೆಲವರು ಆಡುತ್ತಿದ್ದಾರೆ ಅಂತಹ ಮಾತುಗಳಿಗೆ ಯಾವುದೇ ಬೆಲೆ ಇಲ್ಲ.ಕೊಟ್ಟ ಮಾತಿನಂತೆ ನಡೆದಿದ್ದೇವೆ. ಇಂದಿನ ದಿನ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ದಿನ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
(2 / 10)

ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗಬೇಕು ಎಂಬುದು ನಮ್ಮ ಆಶಯವಾಗಿದೆ. ಈ ಸೌಲಭ್ಯ ನೀಡಲು ಕೇಂದ್ರ ಸರ್ಕಾರಕ್ಕೆ ಅವಕಾಶವಿದೆ ಅವರು ಜಾರಿಗೊಳಿಸಲು  ದಿಟ್ಟ ಹೆಜ್ಜೆ ಇಟ್ಟರೆ, ನಾವು ಬೆಂಬಲಿಸಲು ಸಿದ್ಧ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
(3 / 10)

ನಮ್ಮ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಈಗ ಚಾಲನೆ ನೀಡಲಾಗಿದೆ. ಆಗಸ್ಟ್ 16ರಿಂದ ಯೋಜನೆ ಜಾರಿಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
(4 / 10)

ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯ ಹಣಕಾಸಿನ ಸಂಕಷ್ಟಕ್ಕೆ ಸಿಲುಕಲಿದೆ ಎಂಬ  ಮಾತುಗಳನ್ನು ಕೆಲವರು ಆಡುತ್ತಿದ್ದಾರೆ ಅಂತಹ ಮಾತುಗಳಿಗೆ ಯಾವುದೇ ಬೆಲೆ ಇಲ್ಲ.ಕೊಟ್ಟ ಮಾತಿನಂತೆ ನಡೆದಿದ್ದೇವೆ. ಇಂದಿನ ದಿನ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ದಿನ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
(5 / 10)

ಇಂದು ಬೆಳಗಿದ ಗೃಹಲಕ್ಷ್ಮಿಯ ಜ್ಯೋತಿಯು ರಾಜ್ಯದ ಕೋಟ್ಯಂತರ ಕುಟುಂಬಗಳನ್ನು ಬೆಳಗಿಸುವ ಹಣತೆಯಾಗಿದೆ.ಆರ್ಥಿಕವಾಗಿ ಹೆಣ್ಣು ಕುಟುಂಬದ ಕಣ್ಣು ಎಂಬ ಸಬಲತೆಯನ್ನು ಸಾಕಾರಗೊಳಿಸುವ ಐತಿಹಾಸಿಕ ಹೆಜ್ಜೆಯಾಗಿದೆ.ಕೊಟ್ಟ ಮಾತನ್ನು ಉಳಿಸಿಕೊಂಡು ನುಡಿದಂತೆ ನಡೆದಿದ್ದೇವೆ.ಮಹಿಳೆಯರ ಕೈಯಲ್ಲಿನ ದುಡ್ಡು ಸಮಾಜದ ಆರ್ಥಿಕತೆಗೆ ಚಲನಶೀಲತೆ ತರಲಿದೆ. ಮೈಸೂರಿನಲ್ಲಿ ಅನ್ನಭಾಗ್ಯ,ಕಲಬುರ್ಗಿಯಲ್ಲಿ ಗೃಹಜ್ಯೋತಿ ಹಾಗೂ ಬೆಳಗಾವಿಯಲ್ಲಿ ಗೃಹಲಕ್ಷಿ ಯೋಜನೆಗಳನ್ನು ಉದ್ಘಾಟಿಸಲಾಗುವುದು ಎಂದು ಡಿಕೆ ಶಿವಕುಮಾರ್‌ ಹೇಳಿದರು.
(6 / 10)

ಸಾಂಕೇತಿಕವಾಗಿ ಆನಂದಿ ಲಿಂಗಯ್ಯ, ಸುಮಾ ಪ್ರಭಾಕರ್‌, ಸತ್ಯಭರತ್‌ ಅವರಿಗೆ ಮಹಿಳೆಯರ ಪರವಾಗಿ ಗೃಹಲಕ್ಷ್ಮಿಯೋಜನೆ ಪತ್ರಗಳನ್ನು ಹಸ್ತಾಂತರಿಸಲಾಯಿತು.
(7 / 10)

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಬಸವಣ್ಣ, ಡಾ.ಬಿಆರ್ ಅಂಬೇಡ್ಕರ್, ಶಿವಾಜಿ ಮಹಾರಾಜರಂತಹ ಮಹಾನ್ ಚೇತನಗಳು ತೋರಿದ ಹಾದಿಯಲ್ಲಿ ವಿಶೇಷವಾಗಿ ಮಹಿಳೆಯರನ್ನು ಕೇಂದ್ರವಾಗಿಟ್ಟುಕೊಂಡು ಸ್ತ್ರೀಶಕ್ತಿ ಹೆಚ್ಚಿಸುವ ಅರ್ಥಪೂರ್ಣ ಕಾರ್ಯಕ್ರಮ ಇದಾಗಿದೆ. ಪ್ರಿಯದರ್ಶಿನಿ ಇಂದಿರಾಗಾಂಧಿಯವರು ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿ ದೇಶದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿದ ದಿನದಂದೇ ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯುತ್ತಿರುವುದು ಸಂತಸ ತಂದಿದೆ ಎಂದರು.
(8 / 10)

ಹಳ್ಳಿಯ ರೈತ ಕುಟುಂಬದ ಹಿನ್ನೆಲೆಯಿಂದ ಬಂದಿರುವ ನನಗೆ ಗ್ರಾಮೀಣ ಬದುಕಿನ ಸಂಕಷ್ಟಗಳು ಗೊತ್ತಿವೆ. ಸರ್ಕಾರದಿಂದ ಸಿಗುವ ಗೃಹಲಕ್ಷ್ಮಿಯ ಮಾಸಿಕ 2 ಸಾವಿರ ರೂಪಾಯಿ ನೆರವು, ರಾಜ್ಯದ 1.28 ಕೋಟಿ ಕುಟುಂಬಗಳಲ್ಲಿ ನೆಮ್ಮದಿ ಮೂಡಿಸಲಿದೆ. ಆ ಕುಟುಂಬಗಳ ಹಾರೈಕೆ, ಸಮಾಧಾನ ಸರ್ಕಾರಕ್ಕೆ  ಸಿಗುವ ಆಶೀರ್ವಾದವಾಗಿದೆ ಎಂದರು.
(9 / 10)

ವಿಧಾನಸಭೆ,ಲೋಕಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗಬೇಕು ಎಂಬುದು ನಮ್ಮ ಆಶಯವಾಗಿದೆ.ಈ ಸೌಲಭ್ಯ ನೀಡಲು ಕೇಂದ್ರ ಸರ್ಕಾರಕ್ಕೆ  ಅವಕಾಶವಿದೆ ಅವರು ಜಾರಿಗೊಳಿಸಲು  ದಿಟ್ಟ ಹೆಜ್ಜೆ ಇಟ್ಟರೆ,ನಾವು ಬೆಂಬಲಿಸಲು ಸಿದ್ಧ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
(10 / 10)

    ಹಂಚಿಕೊಳ್ಳಲು ಲೇಖನಗಳು