logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Mallikarjun Kharge: ಸಿಎಂ ಬದಲಾವಣೆ ಬಿಟ್ಟರೆ ಗುಜರಾತ್‌ಗೆ ಬಿಜೆಪಿ ಕೊಡುಗೆ ಶೂನ್ಯ: ಮಲ್ಲಿಕಾರ್ಜುನ ಖರ್ಗೆ!

Mallikarjun Kharge: ಸಿಎಂ ಬದಲಾವಣೆ ಬಿಟ್ಟರೆ ಗುಜರಾತ್‌ಗೆ ಬಿಜೆಪಿ ಕೊಡುಗೆ ಶೂನ್ಯ: ಮಲ್ಲಿಕಾರ್ಜುನ ಖರ್ಗೆ!

Nov 28, 2022 12:30 PM IST

ಅಹಮದಾಬಾದ್:‌ ಗುಜರಾತ್‌ನಲ್ಲಿ ಮುಖ್ಯಮಂತ್ರಿಗಳನ್ನು ಮನಬಂದಂತೆ ಬದಲಾವಣೆ ಮಾಡಿದ್ದನ್ನು ಹೊರತುಪಡಿಸಿದರೆ, ಬಿಜೆಪಿಯು ರಾಜ್ಯಕ್ಕೆ ನೀಡಿದ ಕೊಡುಗೆ ಶೂನ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಗುಜರಾತ್‌ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್‌ನ ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ಕುರಿತಾದ ಮಾಹಿತಿ ಇಲ್ಲಿದೆ..

  • ಅಹಮದಾಬಾದ್:‌ ಗುಜರಾತ್‌ನಲ್ಲಿ ಮುಖ್ಯಮಂತ್ರಿಗಳನ್ನು ಮನಬಂದಂತೆ ಬದಲಾವಣೆ ಮಾಡಿದ್ದನ್ನು ಹೊರತುಪಡಿಸಿದರೆ, ಬಿಜೆಪಿಯು ರಾಜ್ಯಕ್ಕೆ ನೀಡಿದ ಕೊಡುಗೆ ಶೂನ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಗುಜರಾತ್‌ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್‌ನ ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ಕುರಿತಾದ ಮಾಹಿತಿ ಇಲ್ಲಿದೆ..
ರಾಜ್ಯದಲ್ಲಿ ಬದಲಾವಣೆ ತರುವ ಬದಲು ಬಿಜೆಪಿಯಬರು ಪದೇ ಪದೇ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿದರು. ಗುಜರಾತ್‌ಗೆ ಆರು ವರ್ಷದಲ್ಲಿ ಮೂರು ಸಿಎಂಗಳನ್ನು ಕೊಟ್ಟಿರುವ ಬಿಜೆಪಿ, ರಾಜ್ಯದ ಅಭಿವೃದ್ಧಿಗಾಗಿ ಯಾವ ಕೆಲಸವನ್ನೂ ಮಾಡಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹರಿಹಾಯ್ದರು.
(1 / 5)
ರಾಜ್ಯದಲ್ಲಿ ಬದಲಾವಣೆ ತರುವ ಬದಲು ಬಿಜೆಪಿಯಬರು ಪದೇ ಪದೇ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿದರು. ಗುಜರಾತ್‌ಗೆ ಆರು ವರ್ಷದಲ್ಲಿ ಮೂರು ಸಿಎಂಗಳನ್ನು ಕೊಟ್ಟಿರುವ ಬಿಜೆಪಿ, ರಾಜ್ಯದ ಅಭಿವೃದ್ಧಿಗಾಗಿ ಯಾವ ಕೆಲಸವನ್ನೂ ಮಾಡಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹರಿಹಾಯ್ದರು.(ANI)
ಬಿಜೆಪಿಯ ರಾಷ್ಟ್ರೀಯ ನಾಯಕರು ಗುಜರಾತ್‌ನಲ್ಲಿ ವಾರ್ಡ್‌ನಿಂದ ವಾರ್ಡ್‌ಗೆ ತಿರುಗಾಡುತ್ತಿದ್ದಾರೆ. 27 ವರ್ಷಗಳ ಆಡಳಿತದ ನಂತರವೂ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳು ಇಲ್ಲಿಗೆ ಬಂದು ಜನರನ್ನು ದಾರಿ ತಪ್ಪಿಸುವ ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಿದ್ದಾರೆ. ಇದು ಬಿಜೆಪಿಯ ಸೋಲಿನ ಭೀತಿಯನ್ನು ಪ್ರದರ್ಶಿಸುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು. (ಸಂಗ್ರಹ ಚಿತ್ರ)
(2 / 5)
ಬಿಜೆಪಿಯ ರಾಷ್ಟ್ರೀಯ ನಾಯಕರು ಗುಜರಾತ್‌ನಲ್ಲಿ ವಾರ್ಡ್‌ನಿಂದ ವಾರ್ಡ್‌ಗೆ ತಿರುಗಾಡುತ್ತಿದ್ದಾರೆ. 27 ವರ್ಷಗಳ ಆಡಳಿತದ ನಂತರವೂ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳು ಇಲ್ಲಿಗೆ ಬಂದು ಜನರನ್ನು ದಾರಿ ತಪ್ಪಿಸುವ ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಿದ್ದಾರೆ. ಇದು ಬಿಜೆಪಿಯ ಸೋಲಿನ ಭೀತಿಯನ್ನು ಪ್ರದರ್ಶಿಸುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು. (ಸಂಗ್ರಹ ಚಿತ್ರ)(HT_PRINT)
ಗುಜರಾತ್‌ನಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ಮರೆಯಾಗಿದೆ. ಹೆಚ್ಚು ಕಡಿಮೆ ಮೂರು ದಶಕಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ, ಭ್ರಷ್ಟಾಚಾರ ಹಾಗೂ ಅಧಿಕಾರದ ಮದದಿಂದ ಜನರಿಂದ ದೂರವಾಗಿದೆ. ರಾಜ್ಯದ ಜನರು ಈ ಬಾರಿ ಬದಲಾವಣೆ ಬಯಸಿದ್ದು, ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಭರವಸೆ ವ್ಯಕ್ತಪಡಿಸಿದರು. (ಸಂಗ್ರಹ ಚಿತ್ರ)
(3 / 5)
ಗುಜರಾತ್‌ನಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ಮರೆಯಾಗಿದೆ. ಹೆಚ್ಚು ಕಡಿಮೆ ಮೂರು ದಶಕಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ, ಭ್ರಷ್ಟಾಚಾರ ಹಾಗೂ ಅಧಿಕಾರದ ಮದದಿಂದ ಜನರಿಂದ ದೂರವಾಗಿದೆ. ರಾಜ್ಯದ ಜನರು ಈ ಬಾರಿ ಬದಲಾವಣೆ ಬಯಸಿದ್ದು, ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಭರವಸೆ ವ್ಯಕ್ತಪಡಿಸಿದರು. (ಸಂಗ್ರಹ ಚಿತ್ರ)(HT_PRINT)
ರಾಜ್ಯದಲ್ಲಿ ಕಾಂಗ್ರೆಸ್‌ನ ಅಸ್ತಿತ್ವದ ಬಗ್ಗೆ ಬಿಜೆಪಿ ಹಾಗೂ ಆಪ್‌ ಅತ್ಯಂತ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಪ್ರಬಲವಾಗಿದ್ದು, ಪಕ್ಷದ ತಾಕತ್ತು ಏನು ಎಂಬುದು ಈ ಬಾರಿಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಇವರಿಗೆ ತಿಳಿಯಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಹೊರಹಾಕಿದರು.
(4 / 5)
ರಾಜ್ಯದಲ್ಲಿ ಕಾಂಗ್ರೆಸ್‌ನ ಅಸ್ತಿತ್ವದ ಬಗ್ಗೆ ಬಿಜೆಪಿ ಹಾಗೂ ಆಪ್‌ ಅತ್ಯಂತ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಪ್ರಬಲವಾಗಿದ್ದು, ಪಕ್ಷದ ತಾಕತ್ತು ಏನು ಎಂಬುದು ಈ ಬಾರಿಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಇವರಿಗೆ ತಿಳಿಯಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಹೊರಹಾಕಿದರು.(ANI)
ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಅದೇ ದಿನದಂದು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣಾ ಫಲಿತಾಂಶ ಕೂಡ ಪ್ರಕಟವಾಗಲಿದೆ ಎಂಬುದು ವಿಶೇಷ. (ಸಂಗ್ರಹ ಚಿತ್ರ)
(5 / 5)
ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಅದೇ ದಿನದಂದು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣಾ ಫಲಿತಾಂಶ ಕೂಡ ಪ್ರಕಟವಾಗಲಿದೆ ಎಂಬುದು ವಿಶೇಷ. (ಸಂಗ್ರಹ ಚಿತ್ರ)(BJP Gujarat Twitter)

    ಹಂಚಿಕೊಳ್ಳಲು ಲೇಖನಗಳು