logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Gujarat Assembly Elections 2022 Results: ಬಿಜೆಪಿ ಪಾಳೆಯದಲ್ಲಿ ಸಂಭ್ರಮ: ಐತಿಹಾಸಿಕ ಗೆಲುವಿನ ಸ್ವಾಗತಕ್ಕೆ ಕ್ಷಣಗಣನೆ

Gujarat Assembly Elections 2022 Results: ಬಿಜೆಪಿ ಪಾಳೆಯದಲ್ಲಿ ಸಂಭ್ರಮ: ಐತಿಹಾಸಿಕ ಗೆಲುವಿನ ಸ್ವಾಗತಕ್ಕೆ ಕ್ಷಣಗಣನೆ

Dec 08, 2022 11:53 AM IST

ಅಹಮದಾಬಾದ್:‌ ಗುಜರಾತ್‌ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ಪ್ರಕ್ರಿಯೆ ಜಾರಿಯಲ್ಲಿದ್ದು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿರುವುದು ಬಹುತೇಕ ಖಚಿತವಾಗಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಕ್ಷೇತ್ರಗಳಲ್ಲಿ ಜಯ ಸಾಧಿಸಲಿರುವುದು ಖಚಿತ. ಈ ಹಿನ್ನೆಲೆಯಲ್ಲಿ ಗುಜರಾತ್‌ ಬಿಜೆಪಿ ಘಟಕದಲ್ಲಿ ಸಂಭ್ರಮಾಚರಣೆ ಆರಂಭವಾಗಿದ್ದು, ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜಗಳೊಂದಿಗೆ ರಸ್ತೆಗಿಳಿದಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ..

  • ಅಹಮದಾಬಾದ್:‌ ಗುಜರಾತ್‌ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ಪ್ರಕ್ರಿಯೆ ಜಾರಿಯಲ್ಲಿದ್ದು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿರುವುದು ಬಹುತೇಕ ಖಚಿತವಾಗಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಕ್ಷೇತ್ರಗಳಲ್ಲಿ ಜಯ ಸಾಧಿಸಲಿರುವುದು ಖಚಿತ. ಈ ಹಿನ್ನೆಲೆಯಲ್ಲಿ ಗುಜರಾತ್‌ ಬಿಜೆಪಿ ಘಟಕದಲ್ಲಿ ಸಂಭ್ರಮಾಚರಣೆ ಆರಂಭವಾಗಿದ್ದು, ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜಗಳೊಂದಿಗೆ ರಸ್ತೆಗಿಳಿದಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ..
ಗಾಂಧಿನಗರದಲ್ಲಿರುವ ಪಕ್ಷದ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ. ಪಕ್ಷ ರಾಜ್ಯದಲ್ಲಿ ಸತತ ಏಳನೇ ಬಾರಿಗೆ ಅಧಿಕಾರಕ್ಕೇರಲಿರುವುದು ಖಚಿತವಾಗುತ್ತಿದ್ದಂತೇ, ಕೇಸರಿ ಕಾರ್ಯಕರ್ತರು ನೃತ್ಯ ಮಾಡಿ, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
(1 / 5)
ಗಾಂಧಿನಗರದಲ್ಲಿರುವ ಪಕ್ಷದ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ. ಪಕ್ಷ ರಾಜ್ಯದಲ್ಲಿ ಸತತ ಏಳನೇ ಬಾರಿಗೆ ಅಧಿಕಾರಕ್ಕೇರಲಿರುವುದು ಖಚಿತವಾಗುತ್ತಿದ್ದಂತೇ, ಕೇಸರಿ ಕಾರ್ಯಕರ್ತರು ನೃತ್ಯ ಮಾಡಿ, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಅದೇ ರೀತಿ ಅಹಮದಾಬಾದ್ ಪಕ್ಷದ ಕಚೇರಿಯಲ್ಲೂ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದು, ಡೊಳ್ಳು ಬಾರಿಸುವ ಮೂಲಕ, ನೃತ್ಯ ಮಾಡುವ ಮೂಲಕ ಪಕ್ಷದ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದರು.
(2 / 5)
ಅದೇ ರೀತಿ ಅಹಮದಾಬಾದ್ ಪಕ್ಷದ ಕಚೇರಿಯಲ್ಲೂ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದು, ಡೊಳ್ಳು ಬಾರಿಸುವ ಮೂಲಕ, ನೃತ್ಯ ಮಾಡುವ ಮೂಲಕ ಪಕ್ಷದ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದರು.(PTI)
ಹಾಗೆಯೇ ಅಹಮದಾಬಾದ್‌ನ ಪಕ್ಷದ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಬಿಜೆಪಿ ಮಹಿಳಾ ಕಾರ್ಯಕರ್ತೆಯರು, ಗುಜರಾತ್‌ನ ಸಾಂಪ್ರದಾಯಿಕ ನೃತ್ಯ ಮಾಡಿ ಗೆಲುವನ್ನು ಸಂಭ್ರಮಿಸಿದರು.
(3 / 5)
ಹಾಗೆಯೇ ಅಹಮದಾಬಾದ್‌ನ ಪಕ್ಷದ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಬಿಜೆಪಿ ಮಹಿಳಾ ಕಾರ್ಯಕರ್ತೆಯರು, ಗುಜರಾತ್‌ನ ಸಾಂಪ್ರದಾಯಿಕ ನೃತ್ಯ ಮಾಡಿ ಗೆಲುವನ್ನು ಸಂಭ್ರಮಿಸಿದರು.(PTI)
ಈ ವೇಳೆ ಗಾಂಧಿನಗರದ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಗುಜರಾತ್‌ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಸಿಂಗ್‌ ವಘೇಲಾ, ಪ್ರಧಾನಿ ಮೋದಿಯವರ ಅಭಿವೃದ್ಧಿಯ ರಾಜಕಾರಣ ಗುಜರಾತ್‌ನಲ್ಲಿ ಮತ್ತೊಮ್ಮೆ ಗೆದ್ದಿದೆ. ನಾನು ರಾಜ್ಯದ ಜನತೆಗೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು.
(4 / 5)
ಈ ವೇಳೆ ಗಾಂಧಿನಗರದ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಗುಜರಾತ್‌ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಸಿಂಗ್‌ ವಘೇಲಾ, ಪ್ರಧಾನಿ ಮೋದಿಯವರ ಅಭಿವೃದ್ಧಿಯ ರಾಜಕಾರಣ ಗುಜರಾತ್‌ನಲ್ಲಿ ಮತ್ತೊಮ್ಮೆ ಗೆದ್ದಿದೆ. ನಾನು ರಾಜ್ಯದ ಜನತೆಗೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು.
ಸದ್ಯದ ಅಂಕಿ ಅಂಶಗಳ ಪ್ರಕಾರ ಗುಜರಾತ್‌ನಲ್ಲಿ ಬಿಜೆಪಿಯು 154 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಕಳೆದ ಬಾರಿಗಿಂತ 55 ಹೆಚ್ಚಿನ ಕ್ಷೇತ್ರಗಳನ್ನು ಒಳಗೊಂಡಿದೆ ಎಂಬುದು ವಿಶೇಷ. ಮಧ್ಯಾಹ್ನದ ವೇಳೆ ಗುಜರಾತ್‌ ವಿಧಾನಸಭೆ ಚುನಾವಣೆ ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯಲಿದೆ.
(5 / 5)
ಸದ್ಯದ ಅಂಕಿ ಅಂಶಗಳ ಪ್ರಕಾರ ಗುಜರಾತ್‌ನಲ್ಲಿ ಬಿಜೆಪಿಯು 154 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಕಳೆದ ಬಾರಿಗಿಂತ 55 ಹೆಚ್ಚಿನ ಕ್ಷೇತ್ರಗಳನ್ನು ಒಳಗೊಂಡಿದೆ ಎಂಬುದು ವಿಶೇಷ. ಮಧ್ಯಾಹ್ನದ ವೇಳೆ ಗುಜರಾತ್‌ ವಿಧಾನಸಭೆ ಚುನಾವಣೆ ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯಲಿದೆ.(PTI)

    ಹಂಚಿಕೊಳ್ಳಲು ಲೇಖನಗಳು