logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Tripura Elections Updates: ತ್ರಿಪುರಾದಲ್ಲಿ ಟೈಟ್‌ ಫೈಟ್:‌ ಅಧಿಕಾರ ಮರಳಿ ಪಡೆಯುವ ಭರವಸೆಯಲ್ಲಿ ಕಮಲ ಪಾಳೆಯ

Tripura Elections Updates: ತ್ರಿಪುರಾದಲ್ಲಿ ಟೈಟ್‌ ಫೈಟ್:‌ ಅಧಿಕಾರ ಮರಳಿ ಪಡೆಯುವ ಭರವಸೆಯಲ್ಲಿ ಕಮಲ ಪಾಳೆಯ

Mar 02, 2023 01:41 PM IST

ತ್ರಿಪುರಾ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಆಡಳಿತಾರೂಢ ಬಿಜೆಪಿ, ಪ್ರಾದೇಶಿಕ ಪಕ್ಷ TIPRA ಹಾಗೂ ಸಿಪಿಎಂ-ಕಾಂಗ್ರೆಸ್‌ ಮೈತ್ರಿಕೂಟದ ಮಧ್ಯೆ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ. ಸದ್ಯ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದರೂ, ಕ್ಷಣಕ್ಷಣಕ್ಕೂ ಈ ಅಂಕಿಅಂಶಗಳು ಬದಲಾಗುತ್ತಿವೆ. ಈ ಕುರಿತು ಇಲ್ಲಿದೆ ಮಾಹಿತಿ..

  • ತ್ರಿಪುರಾ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಆಡಳಿತಾರೂಢ ಬಿಜೆಪಿ, ಪ್ರಾದೇಶಿಕ ಪಕ್ಷ TIPRA ಹಾಗೂ ಸಿಪಿಎಂ-ಕಾಂಗ್ರೆಸ್‌ ಮೈತ್ರಿಕೂಟದ ಮಧ್ಯೆ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ. ಸದ್ಯ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದರೂ, ಕ್ಷಣಕ್ಷಣಕ್ಕೂ ಈ ಅಂಕಿಅಂಶಗಳು ಬದಲಾಗುತ್ತಿವೆ. ಈ ಕುರಿತು ಇಲ್ಲಿದೆ ಮಾಹಿತಿ..
ತ್ರಿಪುರಾದಲ್ಲಿ ನಡೆಯುತ್ತಿರುವ ಮತ ಎಣಿಕೆಯ ಮಧ್ಯೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಇತ್ತೀಚಿನ ಟ್ರೆಂಡ್‌ಗಳಲ್ಲಿ  ಮುನ್ನಡೆ ಕಾಯ್ದುಕೊಂಡಿದೆ.
(1 / 11)
ತ್ರಿಪುರಾದಲ್ಲಿ ನಡೆಯುತ್ತಿರುವ ಮತ ಎಣಿಕೆಯ ಮಧ್ಯೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಇತ್ತೀಚಿನ ಟ್ರೆಂಡ್‌ಗಳಲ್ಲಿ  ಮುನ್ನಡೆ ಕಾಯ್ದುಕೊಂಡಿದೆ.(PTI)
ಚುನಾವಣಾ ಆಯೋಗವು ಹಂಚಿಕೊಂಡ ಇತ್ತೀಚಿನ ಮಾಹಿತಿಯ ಪ್ರಕಾರ, ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ತ್ರಿಪುರಾದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆ ಇದೆ.
(2 / 11)
ಚುನಾವಣಾ ಆಯೋಗವು ಹಂಚಿಕೊಂಡ ಇತ್ತೀಚಿನ ಮಾಹಿತಿಯ ಪ್ರಕಾರ, ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ತ್ರಿಪುರಾದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆ ಇದೆ.(ANI)
ಸದ್ಯದ ಅಂಕಿಅಂಶಗಳ ಪ್ರಕಾರ ತ್ರಿಪುರಾದಲ್ಲಿ ಬಿಜೆಪಿ 34 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.  ಆದಾಗ್ಯೂ ಕಳೆದ ಬಾರಿಗಿಂತ ಬಿಜೆಪಿ 11 ಕ್ಷೇತ್ರಗಳಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದೆ. (ಸಂಗ್ರಹ ಚಿತ್ರ)
(3 / 11)
ಸದ್ಯದ ಅಂಕಿಅಂಶಗಳ ಪ್ರಕಾರ ತ್ರಿಪುರಾದಲ್ಲಿ ಬಿಜೆಪಿ 34 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.  ಆದಾಗ್ಯೂ ಕಳೆದ ಬಾರಿಗಿಂತ ಬಿಜೆಪಿ 11 ಕ್ಷೇತ್ರಗಳಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದೆ. (ಸಂಗ್ರಹ ಚಿತ್ರ)(ANI)
ಸಿಪಿಎಂ-ಕಾಂಗ್ರೆಸ್‌ ಮೈತ್ರಿಕೂಟ 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಳೆದ ಬಾರಿಗಿಂತ ಒಂದು ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದೆ (ಸಂಗ್ರಹ ಚಿತ್ರ)
(4 / 11)
ಸಿಪಿಎಂ-ಕಾಂಗ್ರೆಸ್‌ ಮೈತ್ರಿಕೂಟ 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಳೆದ ಬಾರಿಗಿಂತ ಒಂದು ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದೆ (ಸಂಗ್ರಹ ಚಿತ್ರ)(ANI)
ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, 2018ರಲ್ಲಿ ರಾಜ್ಯವನ್ನು ಎಡಪಕ್ಷಗಳಿಂದ ಕಿತ್ತುಕೊಳ್ಳುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ ಬಿಜೆಪಿ, ತನ್ನ ಪ್ರತಿಸ್ಪರ್ಧಿಗಳಿಗಿಂತ ಮುಂದಿದೆ.
(5 / 11)
ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, 2018ರಲ್ಲಿ ರಾಜ್ಯವನ್ನು ಎಡಪಕ್ಷಗಳಿಂದ ಕಿತ್ತುಕೊಳ್ಳುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ ಬಿಜೆಪಿ, ತನ್ನ ಪ್ರತಿಸ್ಪರ್ಧಿಗಳಿಗಿಂತ ಮುಂದಿದೆ.(ANI)
ಮತ ಎಣಿಕೆಯ ಮಧ್ಯೆ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ತ್ರಿಪುರ ಸುಂದರಿ ಮಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. (ಸಂಗ್ರಹ ಚಿತ್ರ)
(6 / 11)
ಮತ ಎಣಿಕೆಯ ಮಧ್ಯೆ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ತ್ರಿಪುರ ಸುಂದರಿ ಮಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. (ಸಂಗ್ರಹ ಚಿತ್ರ)(PTI)
60 ಸದಸ್ಯ ಬಲದ ತ್ರಿಪುರಾ ವಿಧಾನಸಭೆಯಲ್ಲಿ ಬಹುಮತದ ಅಂಕ 30 ಆಗಿದೆ. (ಸಂಗ್ರಹ ಚಿತ್ರ)
(7 / 11)
60 ಸದಸ್ಯ ಬಲದ ತ್ರಿಪುರಾ ವಿಧಾನಸಭೆಯಲ್ಲಿ ಬಹುಮತದ ಅಂಕ 30 ಆಗಿದೆ. (ಸಂಗ್ರಹ ಚಿತ್ರ)(ANI)
ಬಿಜೆಪಿ 55 ಸ್ಥಾನಗಳಲ್ಲಿ ಮತ್ತು ಅದರ ಮಿತ್ರ ಪಕ್ಷವಾದ ಐಪಿಎಫ್‌ಟಿ ಆರು ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಆದರೆ ಗೋಮತಿ ಜಿಲ್ಲೆಯ ಅಂಪಿನಗರ ಕ್ಷೇತ್ರದಲ್ಲಿ ಎರಡೂ ಮಿತ್ರಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. (ಸಂಗ್ರಹ ಚಿತ್ರ)
(8 / 11)
ಬಿಜೆಪಿ 55 ಸ್ಥಾನಗಳಲ್ಲಿ ಮತ್ತು ಅದರ ಮಿತ್ರ ಪಕ್ಷವಾದ ಐಪಿಎಫ್‌ಟಿ ಆರು ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಆದರೆ ಗೋಮತಿ ಜಿಲ್ಲೆಯ ಅಂಪಿನಗರ ಕ್ಷೇತ್ರದಲ್ಲಿ ಎರಡೂ ಮಿತ್ರಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. (ಸಂಗ್ರಹ ಚಿತ್ರ)(ANI)
ಈನ್ನುತ್ರಿಪುರಾ ಪ್ರಾದೇಶಿಕ ಪಕ್ಷವಾದ ತಿಪ್ರಾ ಮೋಥಾ, 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. (ಸಂಗ್ರಹ ಚಿತ್ರ)
(9 / 11)
ಈನ್ನುತ್ರಿಪುರಾ ಪ್ರಾದೇಶಿಕ ಪಕ್ಷವಾದ ತಿಪ್ರಾ ಮೋಥಾ, 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. (ಸಂಗ್ರಹ ಚಿತ್ರ)(File Image)
ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ ಅದರ ಮಿತ್ರಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್‌ಟಿ) ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. (ಸಂಗ್ರಹ ಚಿತ್ರ )
(10 / 11)
ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ ಅದರ ಮಿತ್ರಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್‌ಟಿ) ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. (ಸಂಗ್ರಹ ಚಿತ್ರ )(ANI)
ಮೂರು ಈಶಾನ್ಯ ರಾಜ್ಯಗಳಾದ ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಗಿ ಭದ್ರತೆಯ ನಡುವೆ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಯಿತು. ತ್ರಿಪುರಾದಲ್ಲಿ ಫೆಬ್ರವರಿ 16 ರಂದು ಮತದಾನ ನಡೆದಿತ್ತು. ಒಟ್ಟು 28.12 ಲಕ್ಷ ಮತದಾರರಲ್ಲಿ ಶೇಕಡಾ 89.98 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. (ಸಂಗ್ರಹ ಚಿತ್ರ)
(11 / 11)
ಮೂರು ಈಶಾನ್ಯ ರಾಜ್ಯಗಳಾದ ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಗಿ ಭದ್ರತೆಯ ನಡುವೆ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಯಿತು. ತ್ರಿಪುರಾದಲ್ಲಿ ಫೆಬ್ರವರಿ 16 ರಂದು ಮತದಾನ ನಡೆದಿತ್ತು. ಒಟ್ಟು 28.12 ಲಕ್ಷ ಮತದಾರರಲ್ಲಿ ಶೇಕಡಾ 89.98 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. (ಸಂಗ್ರಹ ಚಿತ್ರ)(File Photo)

    ಹಂಚಿಕೊಳ್ಳಲು ಲೇಖನಗಳು