logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕ್ರೀಡಾಪಟುಗಳಿಗೆ ಸಿಹಿ ಸುದ್ದಿ, ಪದಕ ಗೆಲ್ಲಿ ಸರ್ಕಾರಿ ಉದ್ಯೋಗ ಪಡೆಯಿರಿ; ಹೊಸ ಕ್ರೀಡಾ ನೀತಿ ಜಾರಿಗೆ ತಂದ ಸರ್ಕಾರ

ಕ್ರೀಡಾಪಟುಗಳಿಗೆ ಸಿಹಿ ಸುದ್ದಿ, ಪದಕ ಗೆಲ್ಲಿ ಸರ್ಕಾರಿ ಉದ್ಯೋಗ ಪಡೆಯಿರಿ; ಹೊಸ ಕ್ರೀಡಾ ನೀತಿ ಜಾರಿಗೆ ತಂದ ಸರ್ಕಾರ

Feb 09, 2024 09:22 AM IST

West Bengal Budget 2024: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕ್ರೀಡಾಪಟುಗಳಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ನೀಡಲಾಗುತ್ತದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ರಾಜ್ಯ ಬಜೆಟ್​​ನಲ್ಲಿ ಪ್ರಕಟಿಸಿದೆ.

  • West Bengal Budget 2024: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕ್ರೀಡಾಪಟುಗಳಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ನೀಡಲಾಗುತ್ತದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ರಾಜ್ಯ ಬಜೆಟ್​​ನಲ್ಲಿ ಪ್ರಕಟಿಸಿದೆ.
ಪಶ್ಚಿಮ ಬಂಗಾಳದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಗುರುವಾರ (ಫೆ.8) ಮಂಡಿಸಿದ ಬಜೆಟ್​ನಲ್ಲಿ ದೊಡ್ಡ ಘೋಷಣೆ ಹೊರಡಿಸಲಾಗಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದರೆ, ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಾವಕಾಶ ಸಿಗಲಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ತಿಳಿಸಿದೆ.
(1 / 5)

ಒಲಿಂಪಿಕ್ಸ್, ಕಾಮನ್ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಸೇರಿದಂತೆ ಎಲ್ಲಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕ್ರೀಡಾಪಟುಗಳಿಗೆ ಅವರ ಶೈಕ್ಷಣಿಕ ವಿದ್ಯಾರ್ಹತೆಗೆ ಅನುಗುಣವಾಗಿ ಪೊಲೀಸ್ ಸಂಸ್ಥೆಗಳು ಅಥವಾ ಇತರ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶವಿದೆ ಎಂದು ಘೋಷಿಸಲಾಗಿದೆ.
(2 / 5)

ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಈ ಬಜೆಟ್ ಮಂಡಿಸಿದರು. ಸದ್ಯ ಪಶ್ಚಿಮ ಬಂಗಾಳ ಕೈಗೊಂಡ ನಿರ್ಧಾರ ಎಲ್ಲರಿಗೂ ಮಾದರಿಯಾಗಿದೆ. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಕ್ಷೇತ್ರದಲ್ಲಿ ಈ ರೀತಿಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ.
(3 / 5)

ಈ ಹಿಂದಿನಿಂದಲೂ ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವ ಬಂಗಾಳ ಸರ್ಕಾರ, ಮತ್ತೊಮ್ಮೆ ಮಹತ್ವದ ನಿರ್ಧಾರ ಕೈಗೊಂಡಿದೆ. ಈಗಾಗಲೇ ಆಟಗಾರರನ್ನು ವಿವಿಧ ಸಮಯಗಳಲ್ಲಿ ಬೆಂಬಲಿಸುವ ಮೂಲಕ ಅಥವಾ ಆಟದ ಮೈದಾನವನ್ನು ಅಭಿವೃದ್ಧಿಪಡಿಸುವ ಕೆಲಸಗಳಲ್ಲಿ ತೊಡಗಿದೆ. ಮಾಜಿ ಕ್ರಿಕೆಟಿಗ ಕ್ರಿಕೆಟಿಗ ಮನೋಜ್ ತಿವಾರಿ ಕ್ರೀಡಾ ಸಚಿವರಾಗಿದ್ದಾರೆ.
(4 / 5)

ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಹಲವು ಅಚ್ಚರಿಗಳನ್ನು ನೀಡಿದೆ. ಈ ಪೈಕಿ ಲಕ್ಷ್ಮೀ ಭಂಡಾರ್ ಯೋಜನೆಯ ಹಂಚಿಕೆಯಲ್ಲಿನ ರಾಜ್ಯ ಸರ್ಕಾರಿ ನೌಕರರ ಡಿಎಯಲ್ಲಿ ಶೇಕಡಾ 4ರಷ್ಟು ಹೆಚ್ಚಿಸಿದೆ.
(5 / 5)

    ಹಂಚಿಕೊಳ್ಳಲು ಲೇಖನಗಳು