logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Mmhills Rathotsav2024:ಮಲೈಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಸಡಗರ, ತೇರು ಎಳೆದ ಭಕ್ತರು Photos

MMHills Rathotsav2024:ಮಲೈಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಸಡಗರ, ತೇರು ಎಳೆದ ಭಕ್ತರು Photos

Mar 11, 2024 11:13 AM IST

ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಶಿವರಾತ್ರಿ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಸಡಗರದಿಂದ ನಡೆಯಿತು. ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು,ಕೇರಳದಿಂದಲೂ ಆಗಮಿಸಿದ್ದ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗಿಯಾದರು. 

  • ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಶಿವರಾತ್ರಿ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಸಡಗರದಿಂದ ನಡೆಯಿತು. ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು,ಕೇರಳದಿಂದಲೂ ಆಗಮಿಸಿದ್ದ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗಿಯಾದರು. 
ಚಾಮರಾಜನಗರದಲ್ಲಿ ಶಿವರಾತ್ರಿ ರಥೋತ್ಸವ ಜನಜನಿತ. ಅಮಾವಾಸ್ಯೆಯ ಮರು ದಿನ ಮಲೈಮಹದೇಶ್ವರ ಮೂರ್ತಿಯನ್ನು ರಥದಲ್ಲಿ ಇಟ್ಟು ಎಳೆಯಲಾಗುತ್ತದೆ. ಈ ಬಾರಿ ಸೋಮವಾರ ಬೆಳಗ್ಗೆಯೇ ರಥೋತ್ಸವ ಸಡಗರ, ಸಂಭ್ರಮದಿಂದ ಜರುಗಿತು. 
(1 / 6)

ಮಲೈಮಹದೇಶ್ವರ ಬೆಟ್ಟದ ಶಿವರಾತ್ರಿ ರಥೋತ್ಸವಕ್ಕೆ ಮಕ್ಕಳೊಂದಿಗೆ ಬಂದಿದ್ದು ಸಹಸ್ರಾರು ಭಕ್ತರು ದೇವರ ದರ್ಶನ ಪಡೆದರು.
(2 / 6)

ಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ ಮಲೈಮಹದೇಶ್ವರ ಬೆಟ್ಟದ ಮಹದೇಶ್ವರ ದೇಗುಲದಲ್ಲಿ ದೇವರಿಗೆ ವಿಶೇಷ ಅಲಂಕಾರ ಹಾಗೂ ಪೂಜೆಗಳು ನಡೆದವು.
(3 / 6)

ಶಿವರಾತ್ರಿ ಜಾತ್ರಾ ಮಹೋತ್ಸವದ ಭಾಗವಾಗಿ ನಡೆದ ನಾನಾ ಧಾರ್ಮಿಕ ಚಟುವಟಿಕೆಗಳಲ್ಲಿ ಮಹದೇಶ್ವರ ಮುಖವಾಡದೊಂದಿಗಿನ ಮೆರವಣಿಗೆಯಲ್ಲಿ ಸಾಲೂರು ಮಠದ ಸ್ವಾಮೀಜಿ ಅವರು  ಪಾಲ್ಗೊಂಡರು.
(4 / 6)

ಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಮಲೈ ಮಹದೇಶ್ವರ ಬೆಟ್ಟದಲ್ಲಿ  ವಿವಿಧ ಪೂಜೆಗಳು ನಡೆದವು. ಈ ವೇಳೆ ಮಹದೇಶ್ವರ ಮೆರವಣಿಗೆಯೂ ವಿಜೃಂಭಣೆಯಿಂದ ನಡೆಯಿತು. ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು ಭಾಗಿಯಾಗಿದ್ದರು.
(5 / 6)

ಶಿವರಾತ್ರಿ ರಥೋತ್ಸವ ಅಂಗವಾಗಿ ಮಲೈಮಹದೇಶ್ವರ ಬೆಟ್ಟದ ದೇವಸ್ಥಾನಕ್ಕೆ ವಿಶೇಷ ದೀಪಾಲಂಕಾರವನ್ನು ಮಾಡಲಾಗಿದೆ. 
(6 / 6)

    ಹಂಚಿಕೊಳ್ಳಲು ಲೇಖನಗಳು