logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Chennai Rain News: ಚೆನ್ನೈನಲ್ಲಿ ಮುಂದುವರೆದ ಭಾರಿ ಮಳೆ; ಕೆಲ ಜಿಲ್ಲೆಗಳಲ್ಲಿ ಇಂದು ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Chennai Rain News: ಚೆನ್ನೈನಲ್ಲಿ ಮುಂದುವರೆದ ಭಾರಿ ಮಳೆ; ಕೆಲ ಜಿಲ್ಲೆಗಳಲ್ಲಿ ಇಂದು ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Jan 09, 2024 08:10 PM IST

chennai rain news :  ತಮಿಳುನಾಡಿನ ಚೆನ್ನೈನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಕೂಡ ಕೆಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವ ವರದಿಯಾಗಿದೆ.

chennai rain news :  ತಮಿಳುನಾಡಿನ ಚೆನ್ನೈನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಕೂಡ ಕೆಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವ ವರದಿಯಾಗಿದೆ.
ಭಾರಿ ಮಳೆಯಿಂದಾಗಿ ಚೆನ್ನೈ ನಗರದ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡುವಂತಾಗಿದೆ. 
(1 / 5)
ಭಾರಿ ಮಳೆಯಿಂದಾಗಿ ಚೆನ್ನೈ ನಗರದ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡುವಂತಾಗಿದೆ. (HT_PRINT)
ತಮಿಳುನಾಡಿನ ಹಲವೆಡೆ ಸೋಮವಾರ ಧಾರಾಕಾರ ಮಳೆಯಾಗಿದೆ. ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರ, ವೆಲ್ಲೂರು, ರಾಣಿಪೇಟ್ ಹಾಗೂ ತಿರುವಳ್ಳೂರು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಈ ಪ್ರದೇಶಗಳಲ್ಲಿ ಮಂಗಳವಾರವೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
(2 / 5)
ತಮಿಳುನಾಡಿನ ಹಲವೆಡೆ ಸೋಮವಾರ ಧಾರಾಕಾರ ಮಳೆಯಾಗಿದೆ. ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರ, ವೆಲ್ಲೂರು, ರಾಣಿಪೇಟ್ ಹಾಗೂ ತಿರುವಳ್ಳೂರು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಈ ಪ್ರದೇಶಗಳಲ್ಲಿ ಮಂಗಳವಾರವೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.(Anantha Krishnan)
ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅನೇಕ ಕಡೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಕೆಲವೆಡೆ ಮರಗಳು ಧರೆಗುರುಳಿದ್ದು, ಕೆರೆಗಳು, ಜಲಾಶಯಗಳು ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
(3 / 5)
ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅನೇಕ ಕಡೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಕೆಲವೆಡೆ ಮರಗಳು ಧರೆಗುರುಳಿದ್ದು, ಕೆರೆಗಳು, ಜಲಾಶಯಗಳು ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.(Anantha Krishnan)
ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ ಜನರು ಎಚ್ಚರಿಕೆಯಿಂದಿರಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚೆನ್ನೈನಲ್ಲಿ ಭಾನುವಾರ ವರುಣ ಆರ್ಭಟಿಸಿದ್ದು, ಅದು ಸೋಮವಾರಕ್ಕೂ ಮುಂದುವರಿದಿತ್ತು.
(4 / 5)
ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ ಜನರು ಎಚ್ಚರಿಕೆಯಿಂದಿರಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚೆನ್ನೈನಲ್ಲಿ ಭಾನುವಾರ ವರುಣ ಆರ್ಭಟಿಸಿದ್ದು, ಅದು ಸೋಮವಾರಕ್ಕೂ ಮುಂದುವರಿದಿತ್ತು.(Anantha Krishnan)
ರಸ್ತೆಗಳು ಜಲಾವೃತಗೊಂಡ ಹಿನ್ನೆಲೆಯಲ್ಲಿ ಯುವಕನೊರ್ವ ಪಕ್ಕದಲ್ಲೇ ಇದ್ದ ಸಿಮೆಂಟ್ ಪೈಪ್‌ನಲ್ಲಿ ಆಶ್ರಯ ಪಡೆದಿದ್ದಾನೆ. (ANI)
(5 / 5)
ರಸ್ತೆಗಳು ಜಲಾವೃತಗೊಂಡ ಹಿನ್ನೆಲೆಯಲ್ಲಿ ಯುವಕನೊರ್ವ ಪಕ್ಕದಲ್ಲೇ ಇದ್ದ ಸಿಮೆಂಟ್ ಪೈಪ್‌ನಲ್ಲಿ ಆಶ್ರಯ ಪಡೆದಿದ್ದಾನೆ. (ANI)(Anantha Krishnan)

    ಹಂಚಿಕೊಳ್ಳಲು ಲೇಖನಗಳು