logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲು; ಆಸ್ಟ್ರೇಲಿಯಾ ಅಥವಾ ಇಂಗ್ಲೆಂಡ್ ಇಲ್ಲದೆ ನಡೆಯಲಿದೆ ಫೈನಲ್ ಪಂದ್ಯ

ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲು; ಆಸ್ಟ್ರೇಲಿಯಾ ಅಥವಾ ಇಂಗ್ಲೆಂಡ್ ಇಲ್ಲದೆ ನಡೆಯಲಿದೆ ಫೈನಲ್ ಪಂದ್ಯ

Oct 18, 2024 08:35 PM IST

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವನಿತೆಯರ ತಂಡವು ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಆಸಿಸ್ 5 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತು. ದಕ್ಷಿಣ ಆಫ್ರಿಕಾ 16 ಎಸೆತಗಳು ಬಾಕಿ ಚೇಸಿಂಗ್‌ ಮಾಡಿ ಫೈನಲ್ ಪ್ರವೇಶಿಸಿ ದಾಖಲೆ ಬರೆಯಿತು.

  • ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವನಿತೆಯರ ತಂಡವು ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಆಸಿಸ್ 5 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತು. ದಕ್ಷಿಣ ಆಫ್ರಿಕಾ 16 ಎಸೆತಗಳು ಬಾಕಿ ಚೇಸಿಂಗ್‌ ಮಾಡಿ ಫೈನಲ್ ಪ್ರವೇಶಿಸಿ ದಾಖಲೆ ಬರೆಯಿತು.
ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್ ತಲುಪಿತು. ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ಅಥವಾ ಇಂಗ್ಲೆಂಡ್ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಆಡುತ್ತಿಲ್ಲ. ಆಸ್ಟ್ರೇಲಿಯಾ ಸೆಮಿಫೈನಲ್‌ನಲ್ಲಿ ಸೋತು ಹೊರಬಿದ್ದಿತ್ತು. ಇಂಗ್ಲೆಂಡ್ ತಂಡ ಗುಂಪು ಹಂತವನ್ನು ದಾಟಲು ಸಾಧ್ಯವಾಗಲಿಲ್ಲ. ಈ ಹಿಂದಿನ ಸೀಸನ್‌ಗಳಲ್ಲಿ ಇಂಗ್ಲೆಂಡ್‌ ಅಥವಾ ಆಸೀಸ್‌ ತಂಡಗಳಲ್ಲಿ ಯಾವುದಾದರೂ ಒಂದು ಫೈನಲ್‌ ಪ್ರವೇಶಿಸಿತ್ತು.
(1 / 5)
ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್ ತಲುಪಿತು. ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ಅಥವಾ ಇಂಗ್ಲೆಂಡ್ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಆಡುತ್ತಿಲ್ಲ. ಆಸ್ಟ್ರೇಲಿಯಾ ಸೆಮಿಫೈನಲ್‌ನಲ್ಲಿ ಸೋತು ಹೊರಬಿದ್ದಿತ್ತು. ಇಂಗ್ಲೆಂಡ್ ತಂಡ ಗುಂಪು ಹಂತವನ್ನು ದಾಟಲು ಸಾಧ್ಯವಾಗಲಿಲ್ಲ. ಈ ಹಿಂದಿನ ಸೀಸನ್‌ಗಳಲ್ಲಿ ಇಂಗ್ಲೆಂಡ್‌ ಅಥವಾ ಆಸೀಸ್‌ ತಂಡಗಳಲ್ಲಿ ಯಾವುದಾದರೂ ಒಂದು ಫೈನಲ್‌ ಪ್ರವೇಶಿಸಿತ್ತು.(Reuters)
ಮಹಿಳಾ ವಿಶ್ವಕಪ್ 1973ರಿಂದ ನಡೆಯುತ್ತಿದೆ. ಅಂದಿನಿಂದ 12 ವಿಶ್ವಕಪ್‌ಗಳು ನಡೆದಿವೆ. ಆಸ್ಟ್ರೇಲಿಯಾ ಅಥವಾ ಇಂಗ್ಲೆಂಡ್ ತಂಡಗಳಲ್ಲಿ ಕನಿಷ್ಠ ಒಂದು ತಂಡ ಪ್ರತಿ ವಿಶ್ವಕಪ್ ಫೈನಲ್‌ನಲ್ಲೂ ಆಡಿವೆ. ಕೆಲವು ವಿಶ್ವಕಪ್ ಫೈನಲ್‌ಗಳಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿವೆ. 2009ರಿಂದ ಟಿ20 ವಿಶ್ವಕಪ್ ನಡೆಯುತ್ತಿದೆ. ಆಸ್ಟ್ರೇಲಿಯಾ ಅಥವಾ ಇಂಗ್ಲೆಂಡ್ 2023ರವರೆಗೆ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಆಡಿವೆ. ಇದೀಗ ಐವತ್ತೊಂದು ವರ್ಷಗಳ ನಂತರ, ಆ ಪ್ರವೃತ್ತಿ ಮುರಿದುಬಿದ್ದಿದೆ.
(2 / 5)
ಮಹಿಳಾ ವಿಶ್ವಕಪ್ 1973ರಿಂದ ನಡೆಯುತ್ತಿದೆ. ಅಂದಿನಿಂದ 12 ವಿಶ್ವಕಪ್‌ಗಳು ನಡೆದಿವೆ. ಆಸ್ಟ್ರೇಲಿಯಾ ಅಥವಾ ಇಂಗ್ಲೆಂಡ್ ತಂಡಗಳಲ್ಲಿ ಕನಿಷ್ಠ ಒಂದು ತಂಡ ಪ್ರತಿ ವಿಶ್ವಕಪ್ ಫೈನಲ್‌ನಲ್ಲೂ ಆಡಿವೆ. ಕೆಲವು ವಿಶ್ವಕಪ್ ಫೈನಲ್‌ಗಳಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿವೆ. 2009ರಿಂದ ಟಿ20 ವಿಶ್ವಕಪ್ ನಡೆಯುತ್ತಿದೆ. ಆಸ್ಟ್ರೇಲಿಯಾ ಅಥವಾ ಇಂಗ್ಲೆಂಡ್ 2023ರವರೆಗೆ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಆಡಿವೆ. ಇದೀಗ ಐವತ್ತೊಂದು ವರ್ಷಗಳ ನಂತರ, ಆ ಪ್ರವೃತ್ತಿ ಮುರಿದುಬಿದ್ದಿದೆ.(Reuters)
ಮತ್ತೊಂದೆಡೆ, 2009ರ ನಂತರ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ಟಿ20 ವಿಶ್ವಕಪ್‌ ಫೈನಲ್ ತಲುಪಿಲ್ಲ. ಮೊದಲ ಟಿ20 ವಿಶ್ವಕಪ್ 2009ರಲ್ಲಿ ನಡೆಯಿತು. ಉದ್ಘಾಟನಾ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಫೈನಲ್ ತಲುಪಲು ಸಾಧ್ಯವಾಗಲಿಲ್ಲ. 2010ರಿಂದ 2023ರವರೆಗೆ ಸತತ ಏಳು ಬಾರಿ ಆಸೀಸ್‌ ಟಿ20 ವಿಶ್ವಕಪ್ ಫೈನಲ್ ತಲುಪಿತ್ತು. ಇದೀಗ ದಕ್ಷಿಣ ಆಫ್ರಿಕಾ 2024ರಲ್ಲಿ ಆ ಪ್ರವೃತ್ತಿಯನ್ನು ಕೊನೆಗೊಳಿಸಿತು.
(3 / 5)
ಮತ್ತೊಂದೆಡೆ, 2009ರ ನಂತರ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ಟಿ20 ವಿಶ್ವಕಪ್‌ ಫೈನಲ್ ತಲುಪಿಲ್ಲ. ಮೊದಲ ಟಿ20 ವಿಶ್ವಕಪ್ 2009ರಲ್ಲಿ ನಡೆಯಿತು. ಉದ್ಘಾಟನಾ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಫೈನಲ್ ತಲುಪಲು ಸಾಧ್ಯವಾಗಲಿಲ್ಲ. 2010ರಿಂದ 2023ರವರೆಗೆ ಸತತ ಏಳು ಬಾರಿ ಆಸೀಸ್‌ ಟಿ20 ವಿಶ್ವಕಪ್ ಫೈನಲ್ ತಲುಪಿತ್ತು. ಇದೀಗ ದಕ್ಷಿಣ ಆಫ್ರಿಕಾ 2024ರಲ್ಲಿ ಆ ಪ್ರವೃತ್ತಿಯನ್ನು ಕೊನೆಗೊಳಿಸಿತು.(Reuters)
2009ರಲ್ಲಿ ಇಂಗ್ಲೆಂಡ್ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿತ್ತು. ಆಸ್ಟ್ರೇಲಿಯಾ 2010, 2012 ಮತ್ತು 2014ರಲ್ಲಿ ವಿಶ್ವಕಪ್ ಗೆದ್ದಿತ್ತು. ವೆಸ್ಟ್ ಇಂಡೀಸ್ 2016ರಲ್ಲಿ ಆಸ್ಟ್ರೇಲಿಯಾದಲ್ಲಿ ವಿಶ್ವಕಪ್ ಗೆದ್ದಿತ್ತು. ನಂತರ ಆಸ್ಟ್ರೇಲಿಯಾ ಮತ್ತೆ ವಿಶ್ವಕಪ್ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧಿಸಿತು. 2018, 2020 ಮತ್ತು 2023ರಲ್ಲಿ ಆಸೀಸ್ ವಿಶ್ವಕಪ್ ಗೆದ್ದಿತ್ತು.
(4 / 5)
2009ರಲ್ಲಿ ಇಂಗ್ಲೆಂಡ್ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿತ್ತು. ಆಸ್ಟ್ರೇಲಿಯಾ 2010, 2012 ಮತ್ತು 2014ರಲ್ಲಿ ವಿಶ್ವಕಪ್ ಗೆದ್ದಿತ್ತು. ವೆಸ್ಟ್ ಇಂಡೀಸ್ 2016ರಲ್ಲಿ ಆಸ್ಟ್ರೇಲಿಯಾದಲ್ಲಿ ವಿಶ್ವಕಪ್ ಗೆದ್ದಿತ್ತು. ನಂತರ ಆಸ್ಟ್ರೇಲಿಯಾ ಮತ್ತೆ ವಿಶ್ವಕಪ್ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧಿಸಿತು. 2018, 2020 ಮತ್ತು 2023ರಲ್ಲಿ ಆಸೀಸ್ ವಿಶ್ವಕಪ್ ಗೆದ್ದಿತ್ತು.(AFP)
2024ರ ಮಹಿಳಾ ಟಿ20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಲಿರುವ ತಂಡವು ಶುಕ್ರವಾರ ಅಂತಿಮವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್‌ ಪ್ರವೇಶಿಸಲಿದೆ. ಒಂದು ವೇಳೆ ಕಿವೀಸ್‌ ಫೈನಲ್‌ಗೇರಿದರೆ, ಹೊಸ ತಂಡವೊಂದು ಚಾಂಪಿಯನ್‌ ಪಟ್ಟಕ್ಕೇರಲಿದೆ.
(5 / 5)
2024ರ ಮಹಿಳಾ ಟಿ20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಲಿರುವ ತಂಡವು ಶುಕ್ರವಾರ ಅಂತಿಮವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್‌ ಪ್ರವೇಶಿಸಲಿದೆ. ಒಂದು ವೇಳೆ ಕಿವೀಸ್‌ ಫೈನಲ್‌ಗೇರಿದರೆ, ಹೊಸ ತಂಡವೊಂದು ಚಾಂಪಿಯನ್‌ ಪಟ್ಟಕ್ಕೇರಲಿದೆ.

    ಹಂಚಿಕೊಳ್ಳಲು ಲೇಖನಗಳು