logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಐಪಿಎಲ್ 2024ರಲ್ಲಿ ಅಧಿಕ ಸಿಕ್ಸರ್: ಎರಡನೇ ಸ್ಥಾನದಲ್ಲಿ ಅನ್‌ಕ್ಯಾಪ್ಡ್‌ ಭಾರತೀಯ; ಅಗ್ರ 10ರೊಳಗೆ ರೋಹಿತ್, ವಿರಾಟ್

ಐಪಿಎಲ್ 2024ರಲ್ಲಿ ಅಧಿಕ ಸಿಕ್ಸರ್: ಎರಡನೇ ಸ್ಥಾನದಲ್ಲಿ ಅನ್‌ಕ್ಯಾಪ್ಡ್‌ ಭಾರತೀಯ; ಅಗ್ರ 10ರೊಳಗೆ ರೋಹಿತ್, ವಿರಾಟ್

Apr 15, 2024 03:44 PM IST

Most Sixes in IPL 2024: ಇಂಡಿಯನ್ ಪ್ರೀಮಿಯರ್ ಲೀಗ್ 2024ರಲ್ಲಿ ಲೀಗ್ ಹಂತದ 29 ಪಂದ್ಯಗಳು ನಡೆದಿವೆ. ಪಂದ್ಯಾವಳಿಯಲ್ಲಿ ಈವರೆಗೆ ಸಿಕ್ಸರ್‌ಗಳ ಸುರಿಮಳೆ ಸುರಿದಿದೆ. ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದವರು ಯಾರು? ಅಗ್ರ 10 ಆಟಗಾರರ ಪಟ್ಟಿ ಹೀಗಿದೆ.

  • Most Sixes in IPL 2024: ಇಂಡಿಯನ್ ಪ್ರೀಮಿಯರ್ ಲೀಗ್ 2024ರಲ್ಲಿ ಲೀಗ್ ಹಂತದ 29 ಪಂದ್ಯಗಳು ನಡೆದಿವೆ. ಪಂದ್ಯಾವಳಿಯಲ್ಲಿ ಈವರೆಗೆ ಸಿಕ್ಸರ್‌ಗಳ ಸುರಿಮಳೆ ಸುರಿದಿದೆ. ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದವರು ಯಾರು? ಅಗ್ರ 10 ಆಟಗಾರರ ಪಟ್ಟಿ ಹೀಗಿದೆ.
ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಆಟಗಾರ ನಿಕೋಲಸ್ ಪೂರನ್ ಪ್ರಸಕ್ತ ಐಪಿಎಲ್‌ನಲ್ಲಿ ಈವರೆಗೆ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ಹೊಂದಿದ್ದಾರೆ. ಐಪಿಎಲ್ 2024ರ 6 ಇನ್ನಿಂಗ್ಸ್‌ಗಳಲ್ಲಿ ಅವರು ಒಟ್ಟು 19 ಸಿಕ್ಸರ್ ಬಾರಿಸಿದ್ದಾರೆ.
(1 / 10)
ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಆಟಗಾರ ನಿಕೋಲಸ್ ಪೂರನ್ ಪ್ರಸಕ್ತ ಐಪಿಎಲ್‌ನಲ್ಲಿ ಈವರೆಗೆ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ಹೊಂದಿದ್ದಾರೆ. ಐಪಿಎಲ್ 2024ರ 6 ಇನ್ನಿಂಗ್ಸ್‌ಗಳಲ್ಲಿ ಅವರು ಒಟ್ಟು 19 ಸಿಕ್ಸರ್ ಬಾರಿಸಿದ್ದಾರೆ.(IPL)
ರಾಜಸ್ಥಾನ್ ರಾಯಲ್ಸ್‌ ತಂಡದ ಸ್ಟಾರ್ ಆಟಗಾರ ರಿಯಾನ್ ಪರಾಗ್, ಪ್ರಸಕ್ತ ಐಪಿಎಲ್ ಆರಂಭದಿಂದಲೂ ಬ್ಯಾಟಿಂಗ್‌ನಲ್ಲಿ ಮಿಂಚುತ್ತಿದ್ದಾರೆ. ಟೂರ್ನಿಯ ಆರು ಇನ್ನಿಂಗ್ಸ್‌ಗಳಲ್ಲಿ ಅವರು ಒಟ್ಟು 18 ಸಿಕ್ಸರ್ ಬಾರಿಸಿದ್ದಾರೆ. ಹೀಗಾಗಿ ಅವರು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
(2 / 10)
ರಾಜಸ್ಥಾನ್ ರಾಯಲ್ಸ್‌ ತಂಡದ ಸ್ಟಾರ್ ಆಟಗಾರ ರಿಯಾನ್ ಪರಾಗ್, ಪ್ರಸಕ್ತ ಐಪಿಎಲ್ ಆರಂಭದಿಂದಲೂ ಬ್ಯಾಟಿಂಗ್‌ನಲ್ಲಿ ಮಿಂಚುತ್ತಿದ್ದಾರೆ. ಟೂರ್ನಿಯ ಆರು ಇನ್ನಿಂಗ್ಸ್‌ಗಳಲ್ಲಿ ಅವರು ಒಟ್ಟು 18 ಸಿಕ್ಸರ್ ಬಾರಿಸಿದ್ದಾರೆ. ಹೀಗಾಗಿ ಅವರು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.(AFP)
ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರ ಹೆನ್ರಿಚ್ ಕ್ಲಾಸೆನ್ ಮೊದಲ ಮೂರು ಪಂದ್ಯಗಳಲ್ಲಿ 17 ಸಿಕ್ಸರ್‌ಗಳನ್ನು ಬಾರಿಸಿದ್ದರು. ಆದಾರೆ, ಕೊನೆಯ ಎರಡು ಪಂದ್ಯಗಳಲ್ಲಿ ಕ್ಲಾಸೆನ್ ಬ್ಯಾಟ್ ಸದ್ದು ಮಾಡಿಲ್ಲ. ಹೀಗಾಗಿ ಇದುವರೆಗೆ ಅವರು ಪಂದ್ಯಾವಳಿಯಲ್ಲಿ ಆಡಿದ 5 ಇನ್ನಿಂಗ್ಸ್‌ಗಳಲ್ಲಿ ಒಟ್ಟು 17 ಸಿಕ್ಸರ್ ಬಾರಿಸಿದ್ದಾರೆ. ಹೀಗಾಗಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
(3 / 10)
ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರ ಹೆನ್ರಿಚ್ ಕ್ಲಾಸೆನ್ ಮೊದಲ ಮೂರು ಪಂದ್ಯಗಳಲ್ಲಿ 17 ಸಿಕ್ಸರ್‌ಗಳನ್ನು ಬಾರಿಸಿದ್ದರು. ಆದಾರೆ, ಕೊನೆಯ ಎರಡು ಪಂದ್ಯಗಳಲ್ಲಿ ಕ್ಲಾಸೆನ್ ಬ್ಯಾಟ್ ಸದ್ದು ಮಾಡಿಲ್ಲ. ಹೀಗಾಗಿ ಇದುವರೆಗೆ ಅವರು ಪಂದ್ಯಾವಳಿಯಲ್ಲಿ ಆಡಿದ 5 ಇನ್ನಿಂಗ್ಸ್‌ಗಳಲ್ಲಿ ಒಟ್ಟು 17 ಸಿಕ್ಸರ್ ಬಾರಿಸಿದ್ದಾರೆ. ಹೀಗಾಗಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.(PTI)
ಸನ್‌ರೈಸರ್ಸ್ ಹೈದರಾಬಾದ್ ಸ್ಟಾರ್ ಆಟಗಾರ ಅಭಿಷೇಕ್ ಶರ್ಮಾ ಐಪಿಎಲ್ 2024ರ ಐದು ಇನ್ನಿಂಗ್ಸ್‌ಗಳಲ್ಲಿ 16 ಸಿಕ್ಸರ್ ಬಾರಿಸಿದ್ದಾರೆ.‌ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಅವರು ನಾಲ್ಕನೇ ಸ್ಥಾನದಲ್ಲಿದ್ದಾರೆ.
(4 / 10)
ಸನ್‌ರೈಸರ್ಸ್ ಹೈದರಾಬಾದ್ ಸ್ಟಾರ್ ಆಟಗಾರ ಅಭಿಷೇಕ್ ಶರ್ಮಾ ಐಪಿಎಲ್ 2024ರ ಐದು ಇನ್ನಿಂಗ್ಸ್‌ಗಳಲ್ಲಿ 16 ಸಿಕ್ಸರ್ ಬಾರಿಸಿದ್ದಾರೆ.‌ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಅವರು ನಾಲ್ಕನೇ ಸ್ಥಾನದಲ್ಲಿದ್ದಾರೆ.(ANI)
ಐಪಿಎಲ್ 2024ರ ಆರು ಇನ್ನಿಂಗ್ಸ್‌ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಬ್ಯಾಟರ್ ಶಿವಂ ದುಬೆ 15 ಸಿಕ್ಸರ್ ಬಾರಿಸಿದ್ದಾರೆ. ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ದುಬೆ ಪ್ರಸ್ತುತ ಐದನೇ ಸ್ಥಾನದಲ್ಲಿದ್ದಾರೆ.
(5 / 10)
ಐಪಿಎಲ್ 2024ರ ಆರು ಇನ್ನಿಂಗ್ಸ್‌ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಬ್ಯಾಟರ್ ಶಿವಂ ದುಬೆ 15 ಸಿಕ್ಸರ್ ಬಾರಿಸಿದ್ದಾರೆ. ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ದುಬೆ ಪ್ರಸ್ತುತ ಐದನೇ ಸ್ಥಾನದಲ್ಲಿದ್ದಾರೆ.(PTI)
ವಾಂಖೆಡೆ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಐದು ಸಿಕ್ಸರ್ ಬಾರಿಸಿದ್ದಾರೆ. ಒಟ್ಟಾರೆಯಾಗಿ, ಅವರು ಪಂದ್ಯಾವಳಿಯ ಆರು ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿದರು 15 ಸಿಕ್ಸರ್ ಹೊಡೆದಿದ್ದಾರೆ. ಪಟ್ಟಿಯಲ್ಲಿ ರೋಹಿತ್ ಆರನೇ ಸ್ಥಾನದಲ್ಲಿದ್ದಾರೆ.
(6 / 10)
ವಾಂಖೆಡೆ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಐದು ಸಿಕ್ಸರ್ ಬಾರಿಸಿದ್ದಾರೆ. ಒಟ್ಟಾರೆಯಾಗಿ, ಅವರು ಪಂದ್ಯಾವಳಿಯ ಆರು ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿದರು 15 ಸಿಕ್ಸರ್ ಹೊಡೆದಿದ್ದಾರೆ. ಪಟ್ಟಿಯಲ್ಲಿ ರೋಹಿತ್ ಆರನೇ ಸ್ಥಾನದಲ್ಲಿದ್ದಾರೆ.(AFP)
ದುಬೆ ಮತ್ತು ರೋಹಿತ್ ಅವರಂತೆ ಡೆಲ್ಲಿ ಕ್ಯಾಪಿಟಲ್ಸ್‌ ಬ್ಯಾಟರ್ ಟ್ರಿಸ್ಟಾನ್ ಸ್ಟಬ್ಸ್ ಐಪಿಎಲ್ 2024ರ ಆರು ಇನ್ನಿಂಗ್ಸ್‌ಗಳಲ್ಲಿ ಒಟ್ಟು 15 ಸಿಕ್ಸರ್ ಬಾರಿಸಿದ್ದಾರೆ. ಅವರು ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದಾರೆ.
(7 / 10)
ದುಬೆ ಮತ್ತು ರೋಹಿತ್ ಅವರಂತೆ ಡೆಲ್ಲಿ ಕ್ಯಾಪಿಟಲ್ಸ್‌ ಬ್ಯಾಟರ್ ಟ್ರಿಸ್ಟಾನ್ ಸ್ಟಬ್ಸ್ ಐಪಿಎಲ್ 2024ರ ಆರು ಇನ್ನಿಂಗ್ಸ್‌ಗಳಲ್ಲಿ ಒಟ್ಟು 15 ಸಿಕ್ಸರ್ ಬಾರಿಸಿದ್ದಾರೆ. ಅವರು ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದಾರೆ.(PTI)
ಕೋಲ್ಕತಾ ನೈಟ್ ರೈಡರ್ಸ್ ತಂಡದ ಸುನಿಲ್ ನರೈನ್ ಐಪಿಎಲ್‌ನ ಐದು ಇನ್ನಿಂಗ್ಸ್‌ಗಳಲ್ಲಿ 14 ಸಿಕ್ಸರ್ ಬಾರಿಸಿದ್ದಾರೆ. ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದಾರೆ.
(8 / 10)
ಕೋಲ್ಕತಾ ನೈಟ್ ರೈಡರ್ಸ್ ತಂಡದ ಸುನಿಲ್ ನರೈನ್ ಐಪಿಎಲ್‌ನ ಐದು ಇನ್ನಿಂಗ್ಸ್‌ಗಳಲ್ಲಿ 14 ಸಿಕ್ಸರ್ ಬಾರಿಸಿದ್ದಾರೆ. ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದಾರೆ.(AP)
ಮುಂಬೈ ಇಂಡಿಯನ್ಸ್‌ ಆರಂಭಿಕ ಆಟಗಾರ ಇಶಾನ್ ಕಿಶನ್ 6 ಇನ್ನಿಂಗ್ಸ್‌ಗಳಲ್ಲಿ 13 ಸಿಕ್ಸರ್ ಬಾರಿಸಿದ್ದಾರೆ.‌ ಐಪಿಎಲ್ 2024ರಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಇಶಾನ್ ಒಂಬತ್ತನೇ ಸ್ಥಾನದಲ್ಲಿದ್ದಾರೆ.
(9 / 10)
ಮುಂಬೈ ಇಂಡಿಯನ್ಸ್‌ ಆರಂಭಿಕ ಆಟಗಾರ ಇಶಾನ್ ಕಿಶನ್ 6 ಇನ್ನಿಂಗ್ಸ್‌ಗಳಲ್ಲಿ 13 ಸಿಕ್ಸರ್ ಬಾರಿಸಿದ್ದಾರೆ.‌ ಐಪಿಎಲ್ 2024ರಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಇಶಾನ್ ಒಂಬತ್ತನೇ ಸ್ಥಾನದಲ್ಲಿದ್ದಾರೆ.(AFP)
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಆಡಿದ 6 ಇನ್ನಿಂಗ್ಸ್‌ಗಳಲ್ಲಿ 12 ಸಿಕ್ಸರ್ ಬಾರಿಸಿದ್ದಾರೆ. ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕೊಹ್ಲಿ 10ನೇ ಸ್ಥಾನದಲ್ಲಿದ್ದಾರೆ.
(10 / 10)
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಆಡಿದ 6 ಇನ್ನಿಂಗ್ಸ್‌ಗಳಲ್ಲಿ 12 ಸಿಕ್ಸರ್ ಬಾರಿಸಿದ್ದಾರೆ. ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕೊಹ್ಲಿ 10ನೇ ಸ್ಥಾನದಲ್ಲಿದ್ದಾರೆ.(AFP)

    ಹಂಚಿಕೊಳ್ಳಲು ಲೇಖನಗಳು