logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Test Ranking: ಶ್ರೇಯಾಂಕದಲ್ಲಿ ರೋಹಿತ್ ಹಿಂದಿಕ್ಕಿದ ಜೈಸ್ವಾಲ್-ಪಂತ್; ಅಗ್ರ 10ರಿಂದ ಹೊರಬಿದ್ದ ವಿರಾಟ್ ಕೊಹ್ಲಿ

Test Ranking: ಶ್ರೇಯಾಂಕದಲ್ಲಿ ರೋಹಿತ್ ಹಿಂದಿಕ್ಕಿದ ಜೈಸ್ವಾಲ್-ಪಂತ್; ಅಗ್ರ 10ರಿಂದ ಹೊರಬಿದ್ದ ವಿರಾಟ್ ಕೊಹ್ಲಿ

Sep 25, 2024 03:20 PM IST

ಐಸಿಸಿ ಟೆಸ್ಟ್ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಯಶಸ್ವಿ ಜೈಸ್ವಾಲ್ ಬಡ್ತಿ ಪಡೆದಿದ್ದು, ಭಾರತೀಯರ ಪೈಕಿ ಅತ್ಯುತ್ತಮ ಶ್ರೇಯಾಂಕ ಪಡೆದಿದ್ದಾರೆ. ಇದೇ ವೇಳೆ ಕಳಪೆ ಫಾರ್ಮ್‌ನಲ್ಲಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಶ್ರೇಯಾಂಕ ಕುಸಿದಿದೆ. ವರ್ಷದ ಬಳಿಕ ಟೆಸ್ಟ್‌ ಕಂಬ್ಯಾಕ್‌ ಮಾಡಿರುವ ರಿಷಭ್ ಪಂತ್ ಮತ್ತೆ ಅಗ್ರ ಹತ್ತರೊಳಗೆ ಕಾಲಿಟ್ಟಿದ್ದಾರೆ.

  • ಐಸಿಸಿ ಟೆಸ್ಟ್ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಯಶಸ್ವಿ ಜೈಸ್ವಾಲ್ ಬಡ್ತಿ ಪಡೆದಿದ್ದು, ಭಾರತೀಯರ ಪೈಕಿ ಅತ್ಯುತ್ತಮ ಶ್ರೇಯಾಂಕ ಪಡೆದಿದ್ದಾರೆ. ಇದೇ ವೇಳೆ ಕಳಪೆ ಫಾರ್ಮ್‌ನಲ್ಲಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಶ್ರೇಯಾಂಕ ಕುಸಿದಿದೆ. ವರ್ಷದ ಬಳಿಕ ಟೆಸ್ಟ್‌ ಕಂಬ್ಯಾಕ್‌ ಮಾಡಿರುವ ರಿಷಭ್ ಪಂತ್ ಮತ್ತೆ ಅಗ್ರ ಹತ್ತರೊಳಗೆ ಕಾಲಿಟ್ಟಿದ್ದಾರೆ.
ಐಸಿಸಿಯು ಅಪ್ಡೇಟೆಡ್‌ ಟೆಸ್ಟ್ ಶ್ರೇಯಾಂಕ ಪ್ರಕಟಿಸಿದೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದ ಭಾರತದ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಶ್ರೇಯಾಂಕದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಯಶಸ್ವಿ ಜೈಸ್ವಾಲ್ ಒಂದು ಸ್ಥಾನ ಮೇಲೇರಿದ್ದಾರೆ.
(1 / 6)
ಐಸಿಸಿಯು ಅಪ್ಡೇಟೆಡ್‌ ಟೆಸ್ಟ್ ಶ್ರೇಯಾಂಕ ಪ್ರಕಟಿಸಿದೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದ ಭಾರತದ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಶ್ರೇಯಾಂಕದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಯಶಸ್ವಿ ಜೈಸ್ವಾಲ್ ಒಂದು ಸ್ಥಾನ ಮೇಲೇರಿದ್ದಾರೆ.(PTI)
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಅರ್ಧಶತಕ ಗಳಿಸಿದ ಭಾರತದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಒಂದು ಸ್ಥಾನ ಮೇಲಕ್ಕೇರಿ ಐದನೇ ಸ್ಥಾನಕ್ಕೆ ತಲುಪಿದ್ದಾರೆ. ರೋಹಿತ್ ಶರ್ಮಾ 5ನೇ ಸ್ಥಾನದಿಂದ 10ನೇ ಸ್ಥಾನಕ್ಕೆ ಕುಸಿದಿದ್ದಾರೆ. ಸದ್ಯ ಜೈಸ್ವಾಲ್ ಭಾರತದ ಅತ್ಯುತ್ತಮ ಶ್ರೇಯಾಂಕದ ಆಟಗಾರ. 
(2 / 6)
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಅರ್ಧಶತಕ ಗಳಿಸಿದ ಭಾರತದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಒಂದು ಸ್ಥಾನ ಮೇಲಕ್ಕೇರಿ ಐದನೇ ಸ್ಥಾನಕ್ಕೆ ತಲುಪಿದ್ದಾರೆ. ರೋಹಿತ್ ಶರ್ಮಾ 5ನೇ ಸ್ಥಾನದಿಂದ 10ನೇ ಸ್ಥಾನಕ್ಕೆ ಕುಸಿದಿದ್ದಾರೆ. ಸದ್ಯ ಜೈಸ್ವಾಲ್ ಭಾರತದ ಅತ್ಯುತ್ತಮ ಶ್ರೇಯಾಂಕದ ಆಟಗಾರ. (PTI)
ಭಾರತದ ವಿಕೆಟ್ ಕೀಪರ್ ಹಾಗೂ ಬ್ಯಾಟರ್‌ ರಿಷಭ್ ಪಂತ್ ಬಾಂಗ್ಲಾದೇಶ ವಿರುದ್ಧದ ಪಂದ್ಯದ ಮೂಲಕ 21 ತಿಂಗಳ ನಂತರ ಟೆಸ್ಟ್ ಕ್ರಿಕೆಟ್‌ಗೆ ಮರಳಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅವರು ಶತಕ ಸಿಡಿಸಿದರು.  ಅದರೊಂದಿಗೆ ಶ್ರೇಯಾಂಕದಲ್ಲಿ ಆರನೇ ಸ್ಥಾನಕ್ಕೆ ಜಿಗಿದರು. ಜೈಸ್ವಾಲ್ ಮತ್ತು ಪಂತ್ ಮುನ್ನಡೆ ಸಾಧಿಸಿದರೆ, ರೋಹಿತ್ ಮತ್ತು ಕೊಹ್ಲಿ ಕೆಳಗಿಳಿದಿದ್ದಾರೆ. 
(3 / 6)
ಭಾರತದ ವಿಕೆಟ್ ಕೀಪರ್ ಹಾಗೂ ಬ್ಯಾಟರ್‌ ರಿಷಭ್ ಪಂತ್ ಬಾಂಗ್ಲಾದೇಶ ವಿರುದ್ಧದ ಪಂದ್ಯದ ಮೂಲಕ 21 ತಿಂಗಳ ನಂತರ ಟೆಸ್ಟ್ ಕ್ರಿಕೆಟ್‌ಗೆ ಮರಳಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅವರು ಶತಕ ಸಿಡಿಸಿದರು.  ಅದರೊಂದಿಗೆ ಶ್ರೇಯಾಂಕದಲ್ಲಿ ಆರನೇ ಸ್ಥಾನಕ್ಕೆ ಜಿಗಿದರು. ಜೈಸ್ವಾಲ್ ಮತ್ತು ಪಂತ್ ಮುನ್ನಡೆ ಸಾಧಿಸಿದರೆ, ರೋಹಿತ್ ಮತ್ತು ಕೊಹ್ಲಿ ಕೆಳಗಿಳಿದಿದ್ದಾರೆ. (PTI)
ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಅಗ್ರ 10ರಿಂದ ಹೊರಗುಳಿದಿದ್ದಾರೆ. ಅವರು ಐದು ಸ್ಥಾನ ಕುಸಿದು 12ನೇ ಸ್ಥಾನಕ್ಕೆ ಬಂದಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ವಿಫಲರಾಗಿದ್ದರು.
(4 / 6)
ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಅಗ್ರ 10ರಿಂದ ಹೊರಗುಳಿದಿದ್ದಾರೆ. ಅವರು ಐದು ಸ್ಥಾನ ಕುಸಿದು 12ನೇ ಸ್ಥಾನಕ್ಕೆ ಬಂದಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ವಿಫಲರಾಗಿದ್ದರು.(PTI)
ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಇಂಗ್ಲೆಂಡ್‌ನ ಜೋ ರೂಟ್ ಅಗ್ರಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಮತ್ತು ಡ್ಯಾರಿಲ್ ಮಿಚೆಲ್ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ನಾಲ್ಕನೇ ಸ್ಥಾನದಲ್ಲಿದ್ದರೆ, ಜೈಸ್ವಾಲ್ ಮತ್ತು ಪಂತ್ ಕ್ರಮವಾಗಿ ಐದು ಮತ್ತು ಆರನೇ ಸ್ಥಾನದಲ್ಲಿದ್ದಾರೆ.
(5 / 6)
ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಇಂಗ್ಲೆಂಡ್‌ನ ಜೋ ರೂಟ್ ಅಗ್ರಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಮತ್ತು ಡ್ಯಾರಿಲ್ ಮಿಚೆಲ್ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ನಾಲ್ಕನೇ ಸ್ಥಾನದಲ್ಲಿದ್ದರೆ, ಜೈಸ್ವಾಲ್ ಮತ್ತು ಪಂತ್ ಕ್ರಮವಾಗಿ ಐದು ಮತ್ತು ಆರನೇ ಸ್ಥಾನದಲ್ಲಿದ್ದಾರೆ.(AFP)
ಐಸಿಸಿ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್ವುಡ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಟೆಸ್ಟ್ ಆಲ್ರೌಂಡರ್ ರ್ಯಾಂಕಿಂಗ್ನಲ್ಲಿ ಜಡೇಜಾ ಮತ್ತು ಅಶ್ವಿನ್ ಮೊದಲ ಎರಡು ಸ್ಥಾನಗಳಲ್ಲಿ ಮುಂದುವರೆದಿದ್ದಾರೆ. ಟೆಸ್ಟ್ ತಂಡಗಳ ಶ್ರೇಯಾಂಕದಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ.
(6 / 6)
ಐಸಿಸಿ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್ವುಡ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಟೆಸ್ಟ್ ಆಲ್ರೌಂಡರ್ ರ್ಯಾಂಕಿಂಗ್ನಲ್ಲಿ ಜಡೇಜಾ ಮತ್ತು ಅಶ್ವಿನ್ ಮೊದಲ ಎರಡು ಸ್ಥಾನಗಳಲ್ಲಿ ಮುಂದುವರೆದಿದ್ದಾರೆ. ಟೆಸ್ಟ್ ತಂಡಗಳ ಶ್ರೇಯಾಂಕದಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ.(AFP)

    ಹಂಚಿಕೊಳ್ಳಲು ಲೇಖನಗಳು