logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Ipl Finals: ಐಪಿಎಲ್ ಫೈನಲ್ ಪಂದ್ಯದಲ್ಲಿ ಅತಿ ಹೆಚ್ಚು ರನ್‌ ಸಿಡಿಸಿದ ಆಟಗಾರರಿವರು

IPL Finals: ಐಪಿಎಲ್ ಫೈನಲ್ ಪಂದ್ಯದಲ್ಲಿ ಅತಿ ಹೆಚ್ಚು ರನ್‌ ಸಿಡಿಸಿದ ಆಟಗಾರರಿವರು

May 29, 2023 11:04 AM IST

IPL finals: ಐಪಿಎಲ್ 2023ರ ಫೈನಲ್ ಪಂದ್ಯವು ಮೀಸಲು ದಿನವಾದ ಸೋಮವಾರ ನಡೆಯಲಿದೆ. ಇದುವರೆಗೆ ನಡೆದ 15 ಐಪಿಎಲ್ ಆವೃತ್ತಿಗಳಲ್ಲಿ ಇದೇ ಮೊದಲ ಬಾರಿ ಈ ರೀತಿ ಸಂಭವಿಸಿದೆ. ಇದುವರೆಗೆ ನಡೆದ ಐಪಿಎಲ್ ಫೈನಲ್‌ ಪಂದ್ಯಗಳಲ್ಲಿ ಯಾವ ಬ್ಯಾಟರ್‌ ಅತಿ ಹೆಚ್ಚು ರನ್ ಗಳಿಸಿದ್ದಾರೆ ಎಂಬ ವಿವರ ಇಲ್ಲಿದೆ.

  • IPL finals: ಐಪಿಎಲ್ 2023ರ ಫೈನಲ್ ಪಂದ್ಯವು ಮೀಸಲು ದಿನವಾದ ಸೋಮವಾರ ನಡೆಯಲಿದೆ. ಇದುವರೆಗೆ ನಡೆದ 15 ಐಪಿಎಲ್ ಆವೃತ್ತಿಗಳಲ್ಲಿ ಇದೇ ಮೊದಲ ಬಾರಿ ಈ ರೀತಿ ಸಂಭವಿಸಿದೆ. ಇದುವರೆಗೆ ನಡೆದ ಐಪಿಎಲ್ ಫೈನಲ್‌ ಪಂದ್ಯಗಳಲ್ಲಿ ಯಾವ ಬ್ಯಾಟರ್‌ ಅತಿ ಹೆಚ್ಚು ರನ್ ಗಳಿಸಿದ್ದಾರೆ ಎಂಬ ವಿವರ ಇಲ್ಲಿದೆ.
16ನೇ ಆವೃತ್ತಿಯ ಐಪಿಎಲ್‌ನ ಫೈನಲ್‌ ಪಂದ್ಯ ಇಂದು ನಡೆಯಲಿದೆ. ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಗುಜರಾತ್‌ ಟೈಟಾನ್ಸ್‌ ತಂಡಗಳು ಇಂದು ಮುಖಾಮುಖಿಯಾಗಲಿವೆ.
(1 / 6)
16ನೇ ಆವೃತ್ತಿಯ ಐಪಿಎಲ್‌ನ ಫೈನಲ್‌ ಪಂದ್ಯ ಇಂದು ನಡೆಯಲಿದೆ. ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಗುಜರಾತ್‌ ಟೈಟಾನ್ಸ್‌ ತಂಡಗಳು ಇಂದು ಮುಖಾಮುಖಿಯಾಗಲಿವೆ.
ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಮಾಜಿ ಆಟಗಾರ ಶೇನ್ ವ್ಯಾಟ್ಸನ್, ಐಪಿಎಲ್ ಫೈನಲ್‌ನಲ್ಲಿ ವೈಕ್ತಿಕ ಅತಿ ಹೆಚ್ಚು ರನ್ ಗಳಿಸಿದ  ದಾಖಲೆ ಹೊಂದಿದ್ದಾರೆ. ಅವರು 2018ರ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 57 ಎಸೆತಗಳಲ್ಲಿ ಅಜೇಯ 117 ರನ್‌ ಸಿಡಿಸಿದ್ದರು. ಆ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ 8 ವಿಕೆಟ್‌ಗಳಿಂದ ಗೆದ್ದುಕೊಂಡಿತು. 
(2 / 6)
ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಮಾಜಿ ಆಟಗಾರ ಶೇನ್ ವ್ಯಾಟ್ಸನ್, ಐಪಿಎಲ್ ಫೈನಲ್‌ನಲ್ಲಿ ವೈಕ್ತಿಕ ಅತಿ ಹೆಚ್ಚು ರನ್ ಗಳಿಸಿದ  ದಾಖಲೆ ಹೊಂದಿದ್ದಾರೆ. ಅವರು 2018ರ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 57 ಎಸೆತಗಳಲ್ಲಿ ಅಜೇಯ 117 ರನ್‌ ಸಿಡಿಸಿದ್ದರು. ಆ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ 8 ವಿಕೆಟ್‌ಗಳಿಂದ ಗೆದ್ದುಕೊಂಡಿತು. (Twitter)
ವೃದ್ಧಿಮಾನ್ ಸಹಾ 2014ರ ಐಪಿಎಲ್ ಫೈನಲ್‌ ಪಂದ್ಯದಲ್ಲಿ 55 ಎಸೆತಗಳಲ್ಲಿ 115 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದ್ದರು. ಈ ಇನ್ನಿಂಗ್ಸ್ ಹೊರತಾಗಿಯೂ ಪಂಜಾಬ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯ ಗೆಲ್ಲಲು ಸಾಧ್ಯವಾಗಲಿಲ್ಲ. ಆದಾಗ್ಯೂ, ವೃದ್ಧಿಮಾನ್ ಸಹಾ ಐಪಿಎಲ್ ಫೈನಲ್‌ ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರರಾಗಿದ್ದಾರೆ.
(3 / 6)
ವೃದ್ಧಿಮಾನ್ ಸಹಾ 2014ರ ಐಪಿಎಲ್ ಫೈನಲ್‌ ಪಂದ್ಯದಲ್ಲಿ 55 ಎಸೆತಗಳಲ್ಲಿ 115 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದ್ದರು. ಈ ಇನ್ನಿಂಗ್ಸ್ ಹೊರತಾಗಿಯೂ ಪಂಜಾಬ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯ ಗೆಲ್ಲಲು ಸಾಧ್ಯವಾಗಲಿಲ್ಲ. ಆದಾಗ್ಯೂ, ವೃದ್ಧಿಮಾನ್ ಸಹಾ ಐಪಿಎಲ್ ಫೈನಲ್‌ ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರರಾಗಿದ್ದಾರೆ.(Twitter)
ಮುರಳಿ ವಿಜಯ್ 2011ರಂದು ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 95 ರನ್‌ ಗಳಿಸಿದರು. 
(4 / 6)
ಮುರಳಿ ವಿಜಯ್ 2011ರಂದು ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 95 ರನ್‌ ಗಳಿಸಿದರು. (Twitter)
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಈ ಹಿಂದೆ ಆಡುತ್ತಿದ್ದ ಬ್ಯಾಟ್ಸ್‌ಮನ್ ಮನೀಶ್ ಪಾಂಡೆ, 2014ರ ಫೈನಲ್‌ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 50 ಎಸೆತಗಳಲ್ಲಿ 94 ರನ್ ಗಳಿಸಿದ್ದರು. ಆ ಪಂದ್ಯದಲ್ಲಿ ಕೋಲ್ಕತ್ತಾ ಗೆದ್ದಿತ್ತು.
(5 / 6)
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಈ ಹಿಂದೆ ಆಡುತ್ತಿದ್ದ ಬ್ಯಾಟ್ಸ್‌ಮನ್ ಮನೀಶ್ ಪಾಂಡೆ, 2014ರ ಫೈನಲ್‌ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 50 ಎಸೆತಗಳಲ್ಲಿ 94 ರನ್ ಗಳಿಸಿದ್ದರು. ಆ ಪಂದ್ಯದಲ್ಲಿ ಕೋಲ್ಕತ್ತಾ ಗೆದ್ದಿತ್ತು.(Twitter)
ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡದ ಮನ್ವಿಂದರ್ ಸಿಂಗ್ ಬಿಸ್ಲಾ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. 2012ರ ಆವೃತ್ತಿಯಲ್ಲಿ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಫೈನಲ್‌ನಲ್ಲಿ 48 ಎಸೆತಗಳಲ್ಲಿ 89 ರನ್ ಗಳಿಸಿದ್ದರು. ಆ ಪಂದ್ಯವನ್ನು ಕೆಕೆಆರ್ ಐದು ವಿಕೆಟ್‌ಗಳಿಂದ ಗೆದ್ದುಕೊಂಡಿತು.
(6 / 6)
ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡದ ಮನ್ವಿಂದರ್ ಸಿಂಗ್ ಬಿಸ್ಲಾ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. 2012ರ ಆವೃತ್ತಿಯಲ್ಲಿ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಫೈನಲ್‌ನಲ್ಲಿ 48 ಎಸೆತಗಳಲ್ಲಿ 89 ರನ್ ಗಳಿಸಿದ್ದರು. ಆ ಪಂದ್ಯವನ್ನು ಕೆಕೆಆರ್ ಐದು ವಿಕೆಟ್‌ಗಳಿಂದ ಗೆದ್ದುಕೊಂಡಿತು.(Twitter)

    ಹಂಚಿಕೊಳ್ಳಲು ಲೇಖನಗಳು