logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಟಿ20 ಕ್ರಿಕೆಟ್‌ನಲ್ಲಿ 6ನೇ ಶತಕ ಸಿಡಿಸಿದ ಸೂರ್ಯಕುಮಾರ್‌ ಯಾದವ್‌; ವಿಶ್ವದ ನಂಬರ್‌ 1 ಬ್ಯಾಟರ್‌ ದಾಖಲೆ

ಟಿ20 ಕ್ರಿಕೆಟ್‌ನಲ್ಲಿ 6ನೇ ಶತಕ ಸಿಡಿಸಿದ ಸೂರ್ಯಕುಮಾರ್‌ ಯಾದವ್‌; ವಿಶ್ವದ ನಂಬರ್‌ 1 ಬ್ಯಾಟರ್‌ ದಾಖಲೆ

May 07, 2024 06:20 AM IST

ಸೂರ್ಯಕುಮಾರ್‌ ಯಾದವ್‌ ಸ್ಫೋಟಕ ಶತಕದ ನೆರವಿಂದ ಮುಂಬೈ ಇಂಡಿಯನ್ಸ್‌ ತಂಡವು ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆಕರ್ಷಕ ಬ್ಯಾಟಿಂಗ್‌ ನಡೆಸಿದ ವಿಶ್ವದ ನಂಬರ್‌ ವನ್‌ ಟಿ20 ಬ್ಯಾಟರ್‌, ಪ್ರಸಕ್ತ ಆವೃತ್ತಿಯಲ್ಲಿ ಮೊದಲ ಶತಕ ಹಾಗೂ ಐಪಿಎಲ್‌ನಲ್ಲಿ ಎರಡನೇ ಶತಕ ಬಾರಿಸಿದರು. ಇದರೊಂದಿಗೆ ಹಲವು ದಾಖಲೆ ನಿರ್ಮಿಸಿದರು.

  • ಸೂರ್ಯಕುಮಾರ್‌ ಯಾದವ್‌ ಸ್ಫೋಟಕ ಶತಕದ ನೆರವಿಂದ ಮುಂಬೈ ಇಂಡಿಯನ್ಸ್‌ ತಂಡವು ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆಕರ್ಷಕ ಬ್ಯಾಟಿಂಗ್‌ ನಡೆಸಿದ ವಿಶ್ವದ ನಂಬರ್‌ ವನ್‌ ಟಿ20 ಬ್ಯಾಟರ್‌, ಪ್ರಸಕ್ತ ಆವೃತ್ತಿಯಲ್ಲಿ ಮೊದಲ ಶತಕ ಹಾಗೂ ಐಪಿಎಲ್‌ನಲ್ಲಿ ಎರಡನೇ ಶತಕ ಬಾರಿಸಿದರು. ಇದರೊಂದಿಗೆ ಹಲವು ದಾಖಲೆ ನಿರ್ಮಿಸಿದರು.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಸನ್‌ರೈಸರ್ಸ್, 8 ವಿಕೆಟ್‌ ಕಳೆದುಕೊಂಡು 173 ರನ್‌ ಕಲೆ ಹಾಕಿತು. ಇದಕ್ಕೆ ಪ್ರತಿಯಾಗಿ 17.2 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ಕಳೆದುಕೊಂಡು 174 ರನ್‌ ಗಳಿಸಿದ ಮುಂಬೈ ಗೆದ್ದು ಬೀಗಿತು.
(1 / 6)
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಸನ್‌ರೈಸರ್ಸ್, 8 ವಿಕೆಟ್‌ ಕಳೆದುಕೊಂಡು 173 ರನ್‌ ಕಲೆ ಹಾಕಿತು. ಇದಕ್ಕೆ ಪ್ರತಿಯಾಗಿ 17.2 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ಕಳೆದುಕೊಂಡು 174 ರನ್‌ ಗಳಿಸಿದ ಮುಂಬೈ ಗೆದ್ದು ಬೀಗಿತು.(AFP)
ಪಂದ್ಯದಲ್ಲಿ ವಿಶ್ವದ ನಂಬರ್‌ ವನ್‌ ಟಿ20‌ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌, ಆಕರ್ಷಕ ಶತಕ ಸಿಡಿಸಿ ಮಿಂಚಿದರು. ಇದು ಐಪಿಎಲ್‌ನಲ್ಲಿ ಅವರ ಎರಡನೇ ಶತಕ. 
(2 / 6)
ಪಂದ್ಯದಲ್ಲಿ ವಿಶ್ವದ ನಂಬರ್‌ ವನ್‌ ಟಿ20‌ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌, ಆಕರ್ಷಕ ಶತಕ ಸಿಡಿಸಿ ಮಿಂಚಿದರು. ಇದು ಐಪಿಎಲ್‌ನಲ್ಲಿ ಅವರ ಎರಡನೇ ಶತಕ. (PTI)
200ರ ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸೂರ್ಯ, ಕೇವಲ 51 ಎಸೆತಗಳಲ್ಲಿ 12 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್‌ ಸಹಿತ 102 ರನ್‌ ಗಳಿಸಿದರು. ಸಿಕ್ಸರ್‌ನೊಂದಿಗೆ ಶತಕ ಪೂರೈಸುವುದಲ್ಲದೆ ತಂಡವನ್ನು ಗೆಲುವಿನ ದಡ ಸೇರಿಸಿದರು. ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಇದು ಅವರ ಆರನೇ ಶತಕ. 
(3 / 6)
200ರ ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸೂರ್ಯ, ಕೇವಲ 51 ಎಸೆತಗಳಲ್ಲಿ 12 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್‌ ಸಹಿತ 102 ರನ್‌ ಗಳಿಸಿದರು. ಸಿಕ್ಸರ್‌ನೊಂದಿಗೆ ಶತಕ ಪೂರೈಸುವುದಲ್ಲದೆ ತಂಡವನ್ನು ಗೆಲುವಿನ ದಡ ಸೇರಿಸಿದರು. ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಇದು ಅವರ ಆರನೇ ಶತಕ. (PTI)
ಸೂರ್ಯಕುಮಾರ್‌ ಯಾದವ್‌, ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಪರ ಎರಡು ಶತಕ ಸಿಡಿಸಿದ ಎರಡನೇ ಬ್ಯಾಟರ್‌ ಎನಿಸಿಕೊಂಡರು. ರೋಹಿತ್‌ ಶರ್ಮಾ ಮೊದಲ ಆಟಗಾರ.
(4 / 6)
ಸೂರ್ಯಕುಮಾರ್‌ ಯಾದವ್‌, ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಪರ ಎರಡು ಶತಕ ಸಿಡಿಸಿದ ಎರಡನೇ ಬ್ಯಾಟರ್‌ ಎನಿಸಿಕೊಂಡರು. ರೋಹಿತ್‌ ಶರ್ಮಾ ಮೊದಲ ಆಟಗಾರ.(PTI)
ಭಾರತೀಯರ ಪೈಕಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆ ವಿರಾಟ್‌ ಕೊಹ್ಲಿ ಹೆಸರಲ್ಲಿದೆ. ಕಿಂಗ್‌ 9 ಶತಕ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಸೂರ್ಯಕುಮಾರ್‌ ಯಾದವ್‌ 6 ಶತಕಗಳೊಂದಿಗೆ ಜಂಟಿಯಾಗಿ ಮೂರನೇ ಸ್ಥಾನದಲ್ಲಿದ್ದಾರೆ. ರೋಹಿತ್‌ 8 ಶತಕ ಸಹಿತ ಎರಡನೇ ಸ್ಥಾನದಲ್ಲಿದ್ದರೆ, ರುತುರಾಜ್‌ ಗಾಯಕ್ವಾಡ್‌ ಹಾಗೂ ಕೆಎಲ್‌ ರಾಹುಲ್‌ ತಲಾ 6 ಶತಕಗಳೊಂದಿಗೆ ಸೂರ್ಯ ಜೊತೆ ಮೂರನೇ ಸ್ಥಾನ ಪಡೆದಿದ್ದಾರೆ.
(5 / 6)
ಭಾರತೀಯರ ಪೈಕಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆ ವಿರಾಟ್‌ ಕೊಹ್ಲಿ ಹೆಸರಲ್ಲಿದೆ. ಕಿಂಗ್‌ 9 ಶತಕ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಸೂರ್ಯಕುಮಾರ್‌ ಯಾದವ್‌ 6 ಶತಕಗಳೊಂದಿಗೆ ಜಂಟಿಯಾಗಿ ಮೂರನೇ ಸ್ಥಾನದಲ್ಲಿದ್ದಾರೆ. ರೋಹಿತ್‌ 8 ಶತಕ ಸಹಿತ ಎರಡನೇ ಸ್ಥಾನದಲ್ಲಿದ್ದರೆ, ರುತುರಾಜ್‌ ಗಾಯಕ್ವಾಡ್‌ ಹಾಗೂ ಕೆಎಲ್‌ ರಾಹುಲ್‌ ತಲಾ 6 ಶತಕಗಳೊಂದಿಗೆ ಸೂರ್ಯ ಜೊತೆ ಮೂರನೇ ಸ್ಥಾನ ಪಡೆದಿದ್ದಾರೆ.(PTI)
ಪಂದ್ಯದಲ್ಲಿ ಸೂರ್ಯಕುಮಾರ್‌ ಯಾದವ್‌ ಹಾಗೂ ತಿಲಕ್‌ ವರ್ಮಾ ಅಜೇಯ 143 ರನ್‌ಗಳ ಜೊತೆಯಾಟವಾಡಿದರು. ಇದು ಪಂದ್ಯದಲ್ಲಿ ಮುಂಬೈ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿತು.
(6 / 6)
ಪಂದ್ಯದಲ್ಲಿ ಸೂರ್ಯಕುಮಾರ್‌ ಯಾದವ್‌ ಹಾಗೂ ತಿಲಕ್‌ ವರ್ಮಾ ಅಜೇಯ 143 ರನ್‌ಗಳ ಜೊತೆಯಾಟವಾಡಿದರು. ಇದು ಪಂದ್ಯದಲ್ಲಿ ಮುಂಬೈ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿತು.(PTI)

    ಹಂಚಿಕೊಳ್ಳಲು ಲೇಖನಗಳು