logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಭಾರತ-ಇಂಗ್ಲೆಂಡ್ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್‌ ಸಿಡಿಸಿದ ಅಗ್ರ 5 ಬ್ಯಾಟರ್‌ಗಳಿವರು

ಭಾರತ-ಇಂಗ್ಲೆಂಡ್ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್‌ ಸಿಡಿಸಿದ ಅಗ್ರ 5 ಬ್ಯಾಟರ್‌ಗಳಿವರು

Mar 09, 2024 05:09 PM IST

ಭಾರತ-ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರು ಯಾರು, ಎಷ್ಟು ರನ್ ಗಳಿಸಿದರು, ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದವರು ವಿವರ ಇಲ್ಲಿದೆ.

  • ಭಾರತ-ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರು ಯಾರು, ಎಷ್ಟು ರನ್ ಗಳಿಸಿದರು, ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದವರು ವಿವರ ಇಲ್ಲಿದೆ.
ಟೀಂ ಇಂಡಿಯಾದ ಆರಂಭಿಕ ಹಾಗೂ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ 9 ಇನ್ನಿಂಗ್ಸ್‌ಗಳಿಂದ 712 ರನ್ ಬಾರಿಸಿ ಅಗ್ರ ಸ್ಥಾನ ಪಡೆದರು. ಅಲ್ಲದೆ, ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.
(1 / 6)
ಟೀಂ ಇಂಡಿಯಾದ ಆರಂಭಿಕ ಹಾಗೂ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ 9 ಇನ್ನಿಂಗ್ಸ್‌ಗಳಿಂದ 712 ರನ್ ಬಾರಿಸಿ ಅಗ್ರ ಸ್ಥಾನ ಪಡೆದರು. ಅಲ್ಲದೆ, ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.(PTI)
ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಪರ ಆರಂಭಿಕ ಬ್ಯಾಟರ್ ಜೈಸ್ವಾಲ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು.
(2 / 6)
ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಪರ ಆರಂಭಿಕ ಬ್ಯಾಟರ್ ಜೈಸ್ವಾಲ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು.(AFP)
ಭಾರತ ತಂಡದ ಮತ್ತೊಬ್ಬ ಪ್ರಮುಖ ಬ್ಯಾಟರ್ ಶುಭ್ಮನ್ ಗಿಲ್ 5 ಪಂದ್ಯಗಳ 9 ಇನ್ನಿಂಗ್ಸ್‌ಗಳಿಂದ 452 ರನ್ ಬಾರಿಸಿ ಹೆಚ್ಚು ರನ್ ಪಡೆದವರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
(3 / 6)
ಭಾರತ ತಂಡದ ಮತ್ತೊಬ್ಬ ಪ್ರಮುಖ ಬ್ಯಾಟರ್ ಶುಭ್ಮನ್ ಗಿಲ್ 5 ಪಂದ್ಯಗಳ 9 ಇನ್ನಿಂಗ್ಸ್‌ಗಳಿಂದ 452 ರನ್ ಬಾರಿಸಿ ಹೆಚ್ಚು ರನ್ ಪಡೆದವರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.(ANI)
ಇಂಗ್ಲೆಂಡ್‌ ತಂಡದ ಆರಂಭಿಕ ಬ್ಯಾಟರ್ ಝಾಕ್ ಕ್ರಾಲಿ ಅವರು 10 ಇನ್ನಿಂಗ್ಸ್‌ಗಳಿಂದ 407 ರನ್ ಗಳಿಸಿ 3ನೇ ಸ್ಥಾನದಲ್ಲಿದ್ದಾರೆ. 
(4 / 6)
ಇಂಗ್ಲೆಂಡ್‌ ತಂಡದ ಆರಂಭಿಕ ಬ್ಯಾಟರ್ ಝಾಕ್ ಕ್ರಾಲಿ ಅವರು 10 ಇನ್ನಿಂಗ್ಸ್‌ಗಳಿಂದ 407 ರನ್ ಗಳಿಸಿ 3ನೇ ಸ್ಥಾನದಲ್ಲಿದ್ದಾರೆ. (REUTERS)
ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕೂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದರು. ಇವರು 9 ಇನ್ನಿಂಗ್ಸ್‌ಗಳಿಂದ 400 ರನ್ ಭಾರಿಸುವ ಮೂಲಕ 4ನೇ ಸ್ಥಾನ ಪಡೆದರು. 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ರೋಹಿತ್ ಶರ್ಮಾ ಬಿಸಿಸಿಐ ಕಾರ್ಯದರ್ಶಿ ಜೈಯ್‌ ಶಾ ಅವರಿಂದ ಟೋಫಿಯನ್ನು ಸ್ವೀಕರಿಸಿದರು.
(5 / 6)
ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕೂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದರು. ಇವರು 9 ಇನ್ನಿಂಗ್ಸ್‌ಗಳಿಂದ 400 ರನ್ ಭಾರಿಸುವ ಮೂಲಕ 4ನೇ ಸ್ಥಾನ ಪಡೆದರು. 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ರೋಹಿತ್ ಶರ್ಮಾ ಬಿಸಿಸಿಐ ಕಾರ್ಯದರ್ಶಿ ಜೈಯ್‌ ಶಾ ಅವರಿಂದ ಟೋಫಿಯನ್ನು ಸ್ವೀಕರಿಸಿದರು.(AFP)
ಇಂಗ್ಲೆಂಡ್ ತಂಡ ಮತ್ತೊಬ್ಬ ಆರಂಭಿಕ ಬ್ಯಾಟರ್ ಬೆನ್ ಡಕೆಟ್ ಅವರು 10 ಇನ್ನಿಂಗ್ಸ್‌ಗಳಿಂದ 343 ರನ್ ಬಾರಿಸಿದರು. ಅಗ್ರ 5 ಬ್ಯಾಟರ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.
(6 / 6)
ಇಂಗ್ಲೆಂಡ್ ತಂಡ ಮತ್ತೊಬ್ಬ ಆರಂಭಿಕ ಬ್ಯಾಟರ್ ಬೆನ್ ಡಕೆಟ್ ಅವರು 10 ಇನ್ನಿಂಗ್ಸ್‌ಗಳಿಂದ 343 ರನ್ ಬಾರಿಸಿದರು. ಅಗ್ರ 5 ಬ್ಯಾಟರ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.(AP)

    ಹಂಚಿಕೊಳ್ಳಲು ಲೇಖನಗಳು