logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಡಬ್ಲ್ಯುಟಿಸಿ ಅಂಕಪಟ್ಟಿ: ವೆಸ್ಟ್ ಇಂಡೀಸ್‌ ವಿರುದ್ಧ ಗೆದ್ದು 6ನೇ ಸ್ಥಾನಕ್ಕೆ ಜಿಗಿದ ಇಂಗ್ಲೆಂಡ್; ಭಾರತ ಅಗ್ರಸ್ಥಾನದಲ್ಲೇ ಭದ್ರ

ಡಬ್ಲ್ಯುಟಿಸಿ ಅಂಕಪಟ್ಟಿ: ವೆಸ್ಟ್ ಇಂಡೀಸ್‌ ವಿರುದ್ಧ ಗೆದ್ದು 6ನೇ ಸ್ಥಾನಕ್ಕೆ ಜಿಗಿದ ಇಂಗ್ಲೆಂಡ್; ಭಾರತ ಅಗ್ರಸ್ಥಾನದಲ್ಲೇ ಭದ್ರ

Jul 22, 2024 06:28 PM IST

ವೆಸ್ಟ್‌ ಇಂಡೀಸ್‌ ವಿರುದ್ಧದ 2ನೇ ಟೆಸ್ಟ್‌ ಪಂದ್ಯದಲ್ಲೂ ಇಂಗ್ಲೆಂಡ್ ಜಯ ಸಾಧಿಸಿದೆ. ಇದರೊಂದಿಗೆ ಪ್ರಸಕ್ತ ಡಬ್ಲ್ಯುಟಿಸಿ ಆವೃತ್ತಿಯಲ್ಲಿ ಆಡಿದ 12 ಪಂದ್ಯಗಳಲ್ಲಿ 5ರಲ್ಲಿ ಇಂಗ್ಲೆಂಡ್ ಗೆದ್ದಂತಾಗಿದೆ. ಉಳಿದ 6 ಟೆಸ್ಟ್ ಪಂದ್ಯಗಳಲ್ಲಿ ಆಂಗ್ಲರು ಸೋತಿದ್ದು, 1 ಪಂದ್ಯ ಡ್ರಾ ಆಗಿದೆ. ಅತ್ತ ವೆಸ್ಟ್ ಇಂಡೀಸ್ ಆಡಿರುವ 6  ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಮಾತ್ರ ಗೆದ್ದಿದೆ.

  • ವೆಸ್ಟ್‌ ಇಂಡೀಸ್‌ ವಿರುದ್ಧದ 2ನೇ ಟೆಸ್ಟ್‌ ಪಂದ್ಯದಲ್ಲೂ ಇಂಗ್ಲೆಂಡ್ ಜಯ ಸಾಧಿಸಿದೆ. ಇದರೊಂದಿಗೆ ಪ್ರಸಕ್ತ ಡಬ್ಲ್ಯುಟಿಸಿ ಆವೃತ್ತಿಯಲ್ಲಿ ಆಡಿದ 12 ಪಂದ್ಯಗಳಲ್ಲಿ 5ರಲ್ಲಿ ಇಂಗ್ಲೆಂಡ್ ಗೆದ್ದಂತಾಗಿದೆ. ಉಳಿದ 6 ಟೆಸ್ಟ್ ಪಂದ್ಯಗಳಲ್ಲಿ ಆಂಗ್ಲರು ಸೋತಿದ್ದು, 1 ಪಂದ್ಯ ಡ್ರಾ ಆಗಿದೆ. ಅತ್ತ ವೆಸ್ಟ್ ಇಂಡೀಸ್ ಆಡಿರುವ 6  ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಮಾತ್ರ ಗೆದ್ದಿದೆ.
ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 241 ರನ್‌ಗಳಿಂದ ಸೋಲಿಸಿದ ಇಂಗ್ಲೆಂಡ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ಸ್ ಟೇಬಲ್‌ನಲ್ಲಿ ಒಂಬತ್ತನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಏರಿದೆ. ಇದೇ ವೇಳೆ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸತತ ಎರಡನೇ ಸೋಲು ಕಂಡ ವೆಸ್ಟ್ ಇಂಡೀಸ್ ಆರನೇ ಸ್ಥಾನದಿಂದ ಕೊನೆಯ ಸ್ಥಾನಕ್ಕಿಳಿದಿದೆ.
(1 / 5)
ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 241 ರನ್‌ಗಳಿಂದ ಸೋಲಿಸಿದ ಇಂಗ್ಲೆಂಡ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ಸ್ ಟೇಬಲ್‌ನಲ್ಲಿ ಒಂಬತ್ತನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಏರಿದೆ. ಇದೇ ವೇಳೆ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸತತ ಎರಡನೇ ಸೋಲು ಕಂಡ ವೆಸ್ಟ್ ಇಂಡೀಸ್ ಆರನೇ ಸ್ಥಾನದಿಂದ ಕೊನೆಯ ಸ್ಥಾನಕ್ಕಿಳಿದಿದೆ.(AFP)
ಇಂಗ್ಲೆಂಡ್ 12 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ ಆರು ಟೆಸ್ಟ್ ಪಂದ್ಯಗಳನ್ನು ಸೋತರೆ, ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದಾರೆ. ಆಂಗ್ಲರ ಶೇಕಡಾವಾರು ಪಾಯಿಂಟ್ 31.25 ಆಗಿದೆ. ಅತ್ತ ವೆಸ್ಟ್ ಇಂಡೀಸ್ ತಂಡ ಇದುವರೆಗೆ ಆಡಿದ ಆರು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿದೆ. ಉಳಿದಂತೆ ನಾಲ್ಕರಲ್ಲಿ ಸೋತು ಒಂದನ್ನು ಡ್ರಾ ಮಾಡಿಕೊಂಡಿದ್ದಾರೆ. ತಂಡದ ಬಳಿ 22.22 ಶೇಕಡಾ ಅಂಕಗಳಿವೆ.
(2 / 5)
ಇಂಗ್ಲೆಂಡ್ 12 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ ಆರು ಟೆಸ್ಟ್ ಪಂದ್ಯಗಳನ್ನು ಸೋತರೆ, ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದಾರೆ. ಆಂಗ್ಲರ ಶೇಕಡಾವಾರು ಪಾಯಿಂಟ್ 31.25 ಆಗಿದೆ. ಅತ್ತ ವೆಸ್ಟ್ ಇಂಡೀಸ್ ತಂಡ ಇದುವರೆಗೆ ಆಡಿದ ಆರು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿದೆ. ಉಳಿದಂತೆ ನಾಲ್ಕರಲ್ಲಿ ಸೋತು ಒಂದನ್ನು ಡ್ರಾ ಮಾಡಿಕೊಂಡಿದ್ದಾರೆ. ತಂಡದ ಬಳಿ 22.22 ಶೇಕಡಾ ಅಂಕಗಳಿವೆ.(AFP)
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಕೊನೆಯ ಪಂದ್ಯದ ನಂತರ, ಇಂಗ್ಲೆಂಡ್ ಮುಂದಿನ ತಿಂಗಳ ಕೊನೆಯಲ್ಲಿ ಶ್ರೀಲಂಕಾ ವಿರುದ್ಧ ತವರಿನಲ್ಲಿ ಮೂರು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ನಂತರ ಅಕ್ಟೋಬರ್‌ನಲ್ಲಿ ಪಾಕಿಸ್ತಾನ ಮತ್ತು ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಹೀಗಾಗಿ ಇಂಗ್ಲೆಂಡ್ ಅಂಕಪಟ್ಟಿಯಲ್ಲಿ ಮೇಲಕ್ಕೇರುವ ಅವಕಾಶ ಪಡೆದುಕೊಂಡಿದೆ.
(3 / 5)
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಕೊನೆಯ ಪಂದ್ಯದ ನಂತರ, ಇಂಗ್ಲೆಂಡ್ ಮುಂದಿನ ತಿಂಗಳ ಕೊನೆಯಲ್ಲಿ ಶ್ರೀಲಂಕಾ ವಿರುದ್ಧ ತವರಿನಲ್ಲಿ ಮೂರು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ನಂತರ ಅಕ್ಟೋಬರ್‌ನಲ್ಲಿ ಪಾಕಿಸ್ತಾನ ಮತ್ತು ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಹೀಗಾಗಿ ಇಂಗ್ಲೆಂಡ್ ಅಂಕಪಟ್ಟಿಯಲ್ಲಿ ಮೇಲಕ್ಕೇರುವ ಅವಕಾಶ ಪಡೆದುಕೊಂಡಿದೆ.(AP)
ಪಾಯಿಂಟ್ಸ್ ಟೇಬಲ್‌ನ ಇತರ ಸ್ಥಾನಗಳಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಭಾರತ ತಂಡ ಶೇ.68.51 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಶೇ.62.50 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಮೂರನೇ ಸ್ಥಾನದಲ್ಲಿದ್ದರೆ, ಶ್ರೀಲಂಕಾ ನಾಲ್ಕನೇ ಸ್ಥಾನದಲ್ಲಿದೆ. ಎರಡೂ ತಂಡಗಳು 50 ಪ್ರತಿಶತ ಅಂಕಗಳನ್ನು ಹೊಂದಿವೆ.
(4 / 5)
ಪಾಯಿಂಟ್ಸ್ ಟೇಬಲ್‌ನ ಇತರ ಸ್ಥಾನಗಳಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಭಾರತ ತಂಡ ಶೇ.68.51 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಶೇ.62.50 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಮೂರನೇ ಸ್ಥಾನದಲ್ಲಿದ್ದರೆ, ಶ್ರೀಲಂಕಾ ನಾಲ್ಕನೇ ಸ್ಥಾನದಲ್ಲಿದೆ. ಎರಡೂ ತಂಡಗಳು 50 ಪ್ರತಿಶತ ಅಂಕಗಳನ್ನು ಹೊಂದಿವೆ.(Reuters)
ಪಾಕಿಸ್ತಾನ ಶೇ.36.66 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ಕ್ರಮವಾಗಿ ಏಳು ಮತ್ತು ಎಂಟನೇ ಸ್ಥಾನದಲ್ಲಿವೆ. ಉಭಯ ತಂಡಗಳು ಪಾಯಿಂಟ್ ಶೇಕಡಾ 25 ಆಗಿದೆ. ಮುಂದೆ ಇನ್ನಷ್ಟು ಟೆಸ್ಟ್ ಸರಣಿಗಳು ನಡೆಯಲಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ಸಾಕಷ್ಟು ಬದಲಾಗಳಾಗಲಿವೆ.
(5 / 5)
ಪಾಕಿಸ್ತಾನ ಶೇ.36.66 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ಕ್ರಮವಾಗಿ ಏಳು ಮತ್ತು ಎಂಟನೇ ಸ್ಥಾನದಲ್ಲಿವೆ. ಉಭಯ ತಂಡಗಳು ಪಾಯಿಂಟ್ ಶೇಕಡಾ 25 ಆಗಿದೆ. ಮುಂದೆ ಇನ್ನಷ್ಟು ಟೆಸ್ಟ್ ಸರಣಿಗಳು ನಡೆಯಲಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ಸಾಕಷ್ಟು ಬದಲಾಗಳಾಗಲಿವೆ.(Reuters)

    ಹಂಚಿಕೊಳ್ಳಲು ಲೇಖನಗಳು