logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ರಿಚಾ ಘೋಷ್ ವಿಶ್ವದಾಖಲೆ; ಟಿ20ಯಲ್ಲಿ ಜಂಟಿ ವೇಗದ ಅರ್ಧಶತಕ ಸಿಡಿಸಿದ ಆರ್‌ಸಿಬಿ ಆಟಗಾರ್ತಿ

ರಿಚಾ ಘೋಷ್ ವಿಶ್ವದಾಖಲೆ; ಟಿ20ಯಲ್ಲಿ ಜಂಟಿ ವೇಗದ ಅರ್ಧಶತಕ ಸಿಡಿಸಿದ ಆರ್‌ಸಿಬಿ ಆಟಗಾರ್ತಿ

Dec 20, 2024 06:25 AM IST

ವನಿತೆಯರ ಕ್ರಿಕೆಟ್‌ನಲ್ಲಿ ರಿಚಾ ಘೋಷ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕೇವಲ 18 ಎಸೆತಗಳಲ್ಲಿ ಐದು ಸಿಕ್ಸರ್ ಮತ್ತು ಮೂರು ಬೌಂಡರಿಗಳ ಸಹಾಯದಿಂದ ಅರ್ಧಶತಕ ಸಿಡಿಸಿದ್ದಾರೆ. ಇದರೊಂದಿಗೆ ವನಿತೆಯರ ಟಿ20 ಕ್ರಿಕೆಟ್‌ನಲ್ಲಿ ಜಂಟಿ ವೇಗದ ಅರ್ಧಶತಕ ಗಳಿಸಿದರು.

  • ವನಿತೆಯರ ಕ್ರಿಕೆಟ್‌ನಲ್ಲಿ ರಿಚಾ ಘೋಷ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕೇವಲ 18 ಎಸೆತಗಳಲ್ಲಿ ಐದು ಸಿಕ್ಸರ್ ಮತ್ತು ಮೂರು ಬೌಂಡರಿಗಳ ಸಹಾಯದಿಂದ ಅರ್ಧಶತಕ ಸಿಡಿಸಿದ್ದಾರೆ. ಇದರೊಂದಿಗೆ ವನಿತೆಯರ ಟಿ20 ಕ್ರಿಕೆಟ್‌ನಲ್ಲಿ ಜಂಟಿ ವೇಗದ ಅರ್ಧಶತಕ ಗಳಿಸಿದರು.
ರಿಚಾ ಘೋಷ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಮಹಿಳಾ ಟಿ20ಯಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಆ ಪಟ್ಟಿಯಲ್ಲಿ ಅವರು ಒಬ್ಬರೇ ಅಲ್ಲ. ಈಗಾಗಲೇ ನ್ಯೂಜಿಲೆಂಡ್‌ನ ಸೋಫಿ ಡಿವೈನ್ ಮತ್ತು ಆಸ್ಟ್ರೇಲಿಯಾದ ಫೋಬ್ ಲಿಚ್‌ಫೀಲ್ಡ್ ಕೂಡ ಈ ಪಟ್ಟಿಯಲ್ಲಿ ಇದ್ದಾರೆ. ನವೀ ಮುಂಬೈನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ರಿಚಾ ಈ ದಾಖಲೆ ನಿರ್ಮಿಸಿದ್ದಾರೆ. ಅಂತಿಮವಾಗಿ ಅವರು 21 ಎಸೆತಗಳಲ್ಲಿ 54 ರನ್ ಗಳಿಸಿದ್ದಾರೆ.
(1 / 5)
ರಿಚಾ ಘೋಷ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಮಹಿಳಾ ಟಿ20ಯಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಆ ಪಟ್ಟಿಯಲ್ಲಿ ಅವರು ಒಬ್ಬರೇ ಅಲ್ಲ. ಈಗಾಗಲೇ ನ್ಯೂಜಿಲೆಂಡ್‌ನ ಸೋಫಿ ಡಿವೈನ್ ಮತ್ತು ಆಸ್ಟ್ರೇಲಿಯಾದ ಫೋಬ್ ಲಿಚ್‌ಫೀಲ್ಡ್ ಕೂಡ ಈ ಪಟ್ಟಿಯಲ್ಲಿ ಇದ್ದಾರೆ. ನವೀ ಮುಂಬೈನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ರಿಚಾ ಈ ದಾಖಲೆ ನಿರ್ಮಿಸಿದ್ದಾರೆ. ಅಂತಿಮವಾಗಿ ಅವರು 21 ಎಸೆತಗಳಲ್ಲಿ 54 ರನ್ ಗಳಿಸಿದ್ದಾರೆ.(X)
ಸಹಜವಾಗಿಯೇ ಭಾರತದ ಪರ ವೇಗದ ಅರ್ಧಶತಕದ ದಾಖಲೆ ರಿಚಾ ಅವರ ಹೆಸರಲ್ಲಿ ದಾಖಲಾಯ್ತು. ಭಾರತದ ಪರ ಏಕದಿನ ಪಂದ್ಯಗಳಲ್ಲಿಯೂ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆಯೂ ರಿಚಾ ಹೆಸರಿನಲ್ಲಿದೆ. ಫೆಬ್ರವರಿ 2022ರಲ್ಲಿ ಕ್ವೀನ್ಸ್‌ಲ್ಯಾಂಡ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅವರು 22 ಎಸೆತಗಳನ್ನು ಅರ್ಧಶತಕ ಗಳಿಸಿದ್ದರು.
(2 / 5)
ಸಹಜವಾಗಿಯೇ ಭಾರತದ ಪರ ವೇಗದ ಅರ್ಧಶತಕದ ದಾಖಲೆ ರಿಚಾ ಅವರ ಹೆಸರಲ್ಲಿ ದಾಖಲಾಯ್ತು. ಭಾರತದ ಪರ ಏಕದಿನ ಪಂದ್ಯಗಳಲ್ಲಿಯೂ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆಯೂ ರಿಚಾ ಹೆಸರಿನಲ್ಲಿದೆ. ಫೆಬ್ರವರಿ 2022ರಲ್ಲಿ ಕ್ವೀನ್ಸ್‌ಲ್ಯಾಂಡ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅವರು 22 ಎಸೆತಗಳನ್ನು ಅರ್ಧಶತಕ ಗಳಿಸಿದ್ದರು.(PTI)
ವೆಸ್ಟ್‌ ಇಂಡೀಸ್‌ ವಿರುದ್ಧ ರಿಚಾ ಕಣಕ್ಕಿಳಿದಾಗ, ಭಾರತದ ಮೊತ್ತ 14.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 143 ರನ್ ಆಗಿತ್ತು. ಹೀಗಾಗಿ ರಿಚಾ ವಿನಾಶಕಾರಿ ಇನ್ನಿಂಗ್ಸ್ ಆಡಿದರು. ಅವರು 21 ಎಸೆತಗಳಲ್ಲಿ 54 ರನ್ ಗಳಿಸಿದರು. ಅದರಲ್ಲಿ 3 ಬೌಂಡರಿ ಮತ್ತು 5 ಸಿಕ್ಸರ್ ಸೇರಿದೆ. 257.14ರ ಸ್ಟ್ರೈಕ್ ರೇಟ್‌ನಲ್ಲಿ ಅಬ್ಬರಿಸಿದರು.
(3 / 5)
ವೆಸ್ಟ್‌ ಇಂಡೀಸ್‌ ವಿರುದ್ಧ ರಿಚಾ ಕಣಕ್ಕಿಳಿದಾಗ, ಭಾರತದ ಮೊತ್ತ 14.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 143 ರನ್ ಆಗಿತ್ತು. ಹೀಗಾಗಿ ರಿಚಾ ವಿನಾಶಕಾರಿ ಇನ್ನಿಂಗ್ಸ್ ಆಡಿದರು. ಅವರು 21 ಎಸೆತಗಳಲ್ಲಿ 54 ರನ್ ಗಳಿಸಿದರು. ಅದರಲ್ಲಿ 3 ಬೌಂಡರಿ ಮತ್ತು 5 ಸಿಕ್ಸರ್ ಸೇರಿದೆ. 257.14ರ ಸ್ಟ್ರೈಕ್ ರೇಟ್‌ನಲ್ಲಿ ಅಬ್ಬರಿಸಿದರು.(X)
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತು. ನಾಯಕಿ ಸ್ಮೃತಿ 47 ಎಸೆತಗಳಲ್ಲಿ 77 ರನ್ ಸಿಡಿಸಿದರು. ಜೆಮಿಮಾ 28 ಎಸೆತಗಳಲ್ಲಿ 39 ರನ್ ಗಳಿಸಿದರು. ರಾಘವಿ ಬಿಶ್ತ್ 22 ಎಸೆತಗಳಲ್ಲಿ 31 ರನ್ ಗಳಿಸಿದರು.
(4 / 5)
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತು. ನಾಯಕಿ ಸ್ಮೃತಿ 47 ಎಸೆತಗಳಲ್ಲಿ 77 ರನ್ ಸಿಡಿಸಿದರು. ಜೆಮಿಮಾ 28 ಎಸೆತಗಳಲ್ಲಿ 39 ರನ್ ಗಳಿಸಿದರು. ರಾಘವಿ ಬಿಶ್ತ್ 22 ಎಸೆತಗಳಲ್ಲಿ 31 ರನ್ ಗಳಿಸಿದರು.(X)
ಭಾರತ ಗಳಿಸಿದ 217 ರನ್‌ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ತನ್ನ ಈವರೆಗಿನ ಗರಿಷ್ಠ ಮೊತ್ತವಾಗಿದೆ. ಪಂದ್ಯದಲ್ಲಿ ಭಾರತವು 60 ರನ್‌ಗಳ ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿತು.
(5 / 5)
ಭಾರತ ಗಳಿಸಿದ 217 ರನ್‌ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ತನ್ನ ಈವರೆಗಿನ ಗರಿಷ್ಠ ಮೊತ್ತವಾಗಿದೆ. ಪಂದ್ಯದಲ್ಲಿ ಭಾರತವು 60 ರನ್‌ಗಳ ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿತು.

    ಹಂಚಿಕೊಳ್ಳಲು ಲೇಖನಗಳು