logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Most Runs In Mcg: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್-5 ಭಾರತೀಯರು, ಕೊಹ್ಲಿಗೆ 3ನೇ ಸ್ಥಾನ

Most Runs in MCG: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್-5 ಭಾರತೀಯರು, ಕೊಹ್ಲಿಗೆ 3ನೇ ಸ್ಥಾನ

Dec 21, 2024 02:30 PM IST

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಎಂಸಿಜಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯರು ಯಾರು ಎಂದು ತಿಳಿಯಿರಿ.

  • ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಎಂಸಿಜಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯರು ಯಾರು ಎಂದು ತಿಳಿಯಿರಿ.
ಬಾರ್ಡರ್ ಗವಾಸ್ಕರ್ ಟ್ರೋಫಿ-2024ರ ನಾಲ್ಕನೇ ಪಂದ್ಯ ಡಿಸೆಂಬರ್ 26 ರಿಂದ ಮೆಲ್ಬೋರ್ನ್‌ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಈವರೆಗೂ ಈ ಮೈದಾನದಲ್ಲಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರರು ಯಾರು ಎನ್ನುವುದನ್ನು ನೋಡೋಣ. ಈ ಪಟ್ಟಿಯಲ್ಲಿ ಪ್ರಸ್ತುತ ತಂಡದಲ್ಲಿರುವ ಒಬ್ಬ ಆಟಗಾರ ಮಾತ್ರ ಇದ್ದಾರೆ.
(1 / 6)

ಎಂಸಿಜಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯರ ಪಟ್ಟಿಯಲ್ಲಿ ಟೀಮ್ ಇಂಡಿಯಾ ಮಾಜಿ ಕೋಚ್ ಹಾಗೂ ಮಾಜಿ ನಾಯಕ ರಾಹುಲ್ ದ್ರಾವಿಡ್ 263 ರನ್ ಗಳಿಸಿ ಐದನೇ ಸ್ಥಾನದಲ್ಲಿದ್ದಾರೆ. 4 ಪಂದ್ಯಗಳ 8 ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದಾರೆ. 2 ಅರ್ಧಶತಕ ಸಿಡಿಸಿದ್ದಾರೆ.
(2 / 6)

ವೀರೇಂದ್ರ ಸೆಹ್ವಾಗ್ ಅವರು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ 4 ಇನ್ನಿಂಗ್ಸ್‌ಗಳಲ್ಲಿ 70 ಸರಾಸರಿಯಲ್ಲಿ 280 ರನ್ ಗಳಿಸಿದ್ದಾರೆ. 1 ಶತಕ, 1 ಅರ್ಧಶತಕ ಸಿಡಿಸಿದ್ದಾರೆ. ಗರಿಷ್ಠ ಸ್ಕೋರ್ 195 ರನ್. ಅವರು ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
(3 / 6)

ವಿರಾಟ್ ಕೊಹ್ಲಿ ಅವರು ಈ ಪಟ್ಟಿಯಲ್ಲಿ 3ನೇ ಸ್ಥಾನ ಗಳಿಸಿದ್ದಾರೆ. ಎಂಸಿಜಿಯಲ್ಲಿ ಆಡಿದ 3 ಟೆಸ್ಟ್‌ಗಳ 6 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ 52.66 ಸರಾಸರಿಯೊಂದಿಗೆ 316 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 1 ಶತಕ ಮತ್ತು 2 ಅರ್ಧಶತಕ ಸಿಡಿಸಿದ್ದಾರೆ. ಪ್ರಸ್ತುತ ತಂಡದಲ್ಲಿರುವ ಏಕೈಕ ಆಟಗಾರ ಕೊಹ್ಲಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
(4 / 6)
ವಿರಾಟ್ ಕೊಹ್ಲಿ ಅವರು ಈ ಪಟ್ಟಿಯಲ್ಲಿ 3ನೇ ಸ್ಥಾನ ಗಳಿಸಿದ್ದಾರೆ. ಎಂಸಿಜಿಯಲ್ಲಿ ಆಡಿದ 3 ಟೆಸ್ಟ್‌ಗಳ 6 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ 52.66 ಸರಾಸರಿಯೊಂದಿಗೆ 316 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 1 ಶತಕ ಮತ್ತು 2 ಅರ್ಧಶತಕ ಸಿಡಿಸಿದ್ದಾರೆ. ಪ್ರಸ್ತುತ ತಂಡದಲ್ಲಿರುವ ಏಕೈಕ ಆಟಗಾರ ಕೊಹ್ಲಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.(BCCI-X)
ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ನಾಯಕತ್ವದ ಜವಾಬ್ದಾರಿ ವಹಿಸಿದ್ದ ಅಜಿಂಕ್ಯ ರಹಾನೆ, ಎಂಸಿಜಿಯಲ್ಲಿ ಶತಕ ಬಾರಿಸಿದ್ದರು. ಈ ಮೈದಾನದಲ್ಲಿ 3 ಪಂದ್ಯಗಳ 6 ಇನ್ನಿಂಗ್ಸ್‌ಗಳಲ್ಲಿ 73.80 ಸರಾಸರಿಯೊಂದಿಗೆ 369 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿಗಿಂತ ಹೆಚ್ಚು.
(5 / 6)
ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ನಾಯಕತ್ವದ ಜವಾಬ್ದಾರಿ ವಹಿಸಿದ್ದ ಅಜಿಂಕ್ಯ ರಹಾನೆ, ಎಂಸಿಜಿಯಲ್ಲಿ ಶತಕ ಬಾರಿಸಿದ್ದರು. ಈ ಮೈದಾನದಲ್ಲಿ 3 ಪಂದ್ಯಗಳ 6 ಇನ್ನಿಂಗ್ಸ್‌ಗಳಲ್ಲಿ 73.80 ಸರಾಸರಿಯೊಂದಿಗೆ 369 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿಗಿಂತ ಹೆಚ್ಚು.(PTI)
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಇಲ್ಲಿ ಆಡಿದ 5 ಪಂದ್ಯಗಳ 10 ಇನ್ನಿಂಗ್ಸ್‌ಗಳಲ್ಲಿ 44.90 ಸರಾಸರಿಯಲ್ಲಿ 449 ರನ್‌ ಗಳಿಸಿದ್ದಾರೆ. 1 ಶತಕ, 3 ಅರ್ಧಶತಕ ಸಿಡಿಸಿದ್ದಾರೆ.
(6 / 6)

    ಹಂಚಿಕೊಳ್ಳಲು ಲೇಖನಗಳು