logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಬಿಸಿಲು, ಮೋಡದ ನಡುವೆ ದಕ್ಷಿಣ ಕನ್ನಡದಲ್ಲಿ ಗಣೇಶೋತ್ಸವದ ಸಡಗರದ ಫೋಟೋಸ್‌

ಬಿಸಿಲು, ಮೋಡದ ನಡುವೆ ದಕ್ಷಿಣ ಕನ್ನಡದಲ್ಲಿ ಗಣೇಶೋತ್ಸವದ ಸಡಗರದ ಫೋಟೋಸ್‌

Sep 21, 2023 05:12 PM IST

ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ, ಮೂಡುಬಿದಿರೆ, ಬೆಳ್ತಂಗಡಿ, ಉಳ್ಳಾಲಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಕೆಲವೆಡೆ ಒಂದೇ ದಿನದಲ್ಲಿ ಶೋಭಾಯಾತ್ರೆ ನಡೆಸಿದರೆ ಇನ್ನು ಕೆಲವೆಡೆ 5 ದಿನಗಳ ಉತ್ಸವವು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಭೆ, ವಿಶೇಷ ಪೂಜೆಗಳೊಂದಿಗೆ ನಡೆಯುತ್ತವೆ.

  • ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ, ಮೂಡುಬಿದಿರೆ, ಬೆಳ್ತಂಗಡಿ, ಉಳ್ಳಾಲಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಕೆಲವೆಡೆ ಒಂದೇ ದಿನದಲ್ಲಿ ಶೋಭಾಯಾತ್ರೆ ನಡೆಸಿದರೆ ಇನ್ನು ಕೆಲವೆಡೆ 5 ದಿನಗಳ ಉತ್ಸವವು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಭೆ, ವಿಶೇಷ ಪೂಜೆಗಳೊಂದಿಗೆ ನಡೆಯುತ್ತವೆ.
ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ನಡೆದ ಗಣೇಶೋತ್ಸವದಲ್ಲಿ ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ನೇತೃತ್ವದಲ್ಲಿ ಶ್ರೀ ಗಣೇಶನಿಗೆ ಪೂಜೆ ಸಲ್ಲಿಕೆಯಾಯಿತು.
(1 / 10)

ಮಂಗಳೂರಿನ ಹಿಂದು ಯುವಸೇನೆ ವತಿಯಿಂದ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಮೂವತ್ತನೇ ವರ್ಷದ ಗಣೇಶೋತ್ಸವದಲ್ಲಿ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿದರು.
(2 / 10)

ಬಂಟ್ವಾಳದ ಜಕ್ರಿಬೆಟ್ಟುವಿನಲ್ಲಿ ಗಣಪತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಇಲ್ಲಿ 20ನೇ ವರ್ಷದ ಗಣೇಶೋತ್ಸವ ನಡೆಯುತ್ತಿದೆ.
(3 / 10)

ಬಂಟ್ವಾಳದ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಮುಂಭಾಗ ನಡೆಯುತ್ತಿರುವ ಹಿಂದು ಸೇವಾ ಸಮಿತಿಯ ಗಣೇಶೋತ್ಸವ ಸಾಂಪ್ರದಾಯಿಕ ಮೆರುಗನ್ನು ನೀಡಿತ್ತು
(4 / 10)

ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಳ ವಠಾರದಲ್ಲಿ 57 ವರ್ಷದ ಗಣೇಶೋತ್ಸವದಲ್ಲಿ ವಿನಾಯಕನ ಪೂಜೆ ನಡೆಯಿತು.
(5 / 10)

ಪುತ್ತೂರಿನ ಕಿಲ್ಲೆ ಮೈದಾನದಲ್ಲಿ 66ನೇ ವರ್ಷದ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ.
(6 / 10)
ಪುತ್ತೂರಿನ ಕಿಲ್ಲೆ ಮೈದಾನದಲ್ಲಿ 66ನೇ ವರ್ಷದ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ.
ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಐವತ್ತನೇ ವರ್ಷದ ಗಣೇಶೋತ್ಸವದಲ್ಲಿ ಪೂಜಿಸಲ್ಪಡ್ಟ ಗಣಪತಿ
(7 / 10)

 ಉಳ್ಳಾಲ ತಾಲೂಕಿನ ಅಸೈಗೋಳಿಯಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವ 
(8 / 10)
 ಉಳ್ಳಾಲ ತಾಲೂಕಿನ ಅಸೈಗೋಳಿಯಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವ 
ಉಳ್ಳಾಲ ತಾಲೂಕಿನ ಕೋಟೆಕಾರು ಬೀರಿಯಲ್ಲಿ ನಡೆದ ಶೋಭಾಯಾತ್ರೆ.
(9 / 10)
ಉಳ್ಳಾಲ ತಾಲೂಕಿನ ಕೋಟೆಕಾರು ಬೀರಿಯಲ್ಲಿ ನಡೆದ ಶೋಭಾಯಾತ್ರೆ.
 ಸುಳ್ಯದ ಚೆನ್ನಕೇಶವ ದೇವಸ್ಥಾನದ ಎದುರು ಪ್ರತಿಷ್ಠಾಪಿಸಲಾದ ಗಣೇಶೋತ್ಸವ. ಇದು 55ನೇ ವರ್ಷದ ಆಚರಣೆ
(10 / 10)
 ಸುಳ್ಯದ ಚೆನ್ನಕೇಶವ ದೇವಸ್ಥಾನದ ಎದುರು ಪ್ರತಿಷ್ಠಾಪಿಸಲಾದ ಗಣೇಶೋತ್ಸವ. ಇದು 55ನೇ ವರ್ಷದ ಆಚರಣೆ

    ಹಂಚಿಕೊಳ್ಳಲು ಲೇಖನಗಳು