logo
ಕನ್ನಡ ಸುದ್ದಿ  /  Photo Gallery  /  Family Of Mangaluru Autorickshaw Blast Accuse Sharik Meets Him In Hospital

Mangaluru Auto Blast: ಶಾರೀಕ್‌ ಭೇಟಿ ಮಾಡಿದ ಕುಟುಂಬ ಸದಸ್ಯರ ವಿಚಾರಣೆ?: ಮಂಗಳೂರು ಪೊಲೀಸ್‌ ಆಯುಕ್ತರು ಹೇಳಿದ್ದೇನು?

Nov 21, 2022 01:50 PM IST

ಮಂಗಳೂರು: ಮಂಗಳೂರಿನಲ್ಲಿ ಆಟೋ ರಿಕ್ಷಾವೊಂದರಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣ ಇಡೀ ದೇಶದ ಗಮನ ಸೆಳೆದಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಶಾರೀಕ್‌ಗೆ ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕವಿದೆ ಎಂಬ ಪೊಲೀಸರ ಮಾಹಿತಿ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಈ ಮಧ್ಯೆ ಆರೋಪಿ ಶಾರೀಕ್‌ನ ಕುಟುಂಬ ವರ್ಗ ಆತನನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ..

  • ಮಂಗಳೂರು: ಮಂಗಳೂರಿನಲ್ಲಿ ಆಟೋ ರಿಕ್ಷಾವೊಂದರಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣ ಇಡೀ ದೇಶದ ಗಮನ ಸೆಳೆದಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಶಾರೀಕ್‌ಗೆ ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕವಿದೆ ಎಂಬ ಪೊಲೀಸರ ಮಾಹಿತಿ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಈ ಮಧ್ಯೆ ಆರೋಪಿ ಶಾರೀಕ್‌ನ ಕುಟುಂಬ ವರ್ಗ ಆತನನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ..
ಮಂಗಳೂರಿನ ಆಟೋರಿಕ್ಷಾ ಬಾಂಬ್ ಸ್ಫೋಟದ ಆರೋಪಿ ಶಾರೀಕ್‌ನ ಕುಟುಂಬ ವರ್ಗ, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ನನ್ನು ಭೇಟಿ ಮಾಡಿತು.
(1 / 5)
ಮಂಗಳೂರಿನ ಆಟೋರಿಕ್ಷಾ ಬಾಂಬ್ ಸ್ಫೋಟದ ಆರೋಪಿ ಶಾರೀಕ್‌ನ ಕುಟುಂಬ ವರ್ಗ, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ನನ್ನು ಭೇಟಿ ಮಾಡಿತು.(ANI)
ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಆಗಮನಿಸಿದ ಶಾರೀಕ್‌ ಕುಟುಂಬ, ತೀವ್ರ ಸುಟ್ಟ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ನ ಆರೋಗ್ಯ ವಿಚಾರಿಸಿತು.
(2 / 5)
ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಆಗಮನಿಸಿದ ಶಾರೀಕ್‌ ಕುಟುಂಬ, ತೀವ್ರ ಸುಟ್ಟ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ನ ಆರೋಗ್ಯ ವಿಚಾರಿಸಿತು.(ANI)
ಈ ಕುರಿತು ಮಾತನಾಡಿರುವ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್.‌ ಶಶಿಕುಮಾರ್‌, ನಾವು ಅನುಮಾನಿಸುತ್ತಿರುವ ವ್ಯಕ್ತಿ ಇದೇ ಎಂದು ಅವರು ಖಚಿತಪಡಿಸಿದರೆ, ಕುಟುಂಬ ಸದಸ್ಯರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
(3 / 5)
ಈ ಕುರಿತು ಮಾತನಾಡಿರುವ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್.‌ ಶಶಿಕುಮಾರ್‌, ನಾವು ಅನುಮಾನಿಸುತ್ತಿರುವ ವ್ಯಕ್ತಿ ಇದೇ ಎಂದು ಅವರು ಖಚಿತಪಡಿಸಿದರೆ, ಕುಟುಂಬ ಸದಸ್ಯರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.(ANI)
ಕುಟುಂಬದ ಓರ್ವ ಪುರುಷ ಮತ್ತು ಮೂವರು ಮಹಿಳೆ ಶಾರೀಕ್‌ನನ್ನು ಭೇಟಿ ಮಾಡಿದ್ದಾರೆ. ಇವರು ಶಾರೀಕ್‌ನ ಗುರುತು ಪತ್ತೆ ಮಾಡಿದರೆ, ಅವರನ್ನೂ ವಿಚಾರಣೆಗೆ ಗುರಿಪಡಿಸಲಾಗುವುದು ಎಂದು ಎನ್. ಶಶಿಕುಮಾರ್‌ ತಿಳಿಸಿದ್ದಾರೆ.
(4 / 5)
ಕುಟುಂಬದ ಓರ್ವ ಪುರುಷ ಮತ್ತು ಮೂವರು ಮಹಿಳೆ ಶಾರೀಕ್‌ನನ್ನು ಭೇಟಿ ಮಾಡಿದ್ದಾರೆ. ಇವರು ಶಾರೀಕ್‌ನ ಗುರುತು ಪತ್ತೆ ಮಾಡಿದರೆ, ಅವರನ್ನೂ ವಿಚಾರಣೆಗೆ ಗುರಿಪಡಿಸಲಾಗುವುದು ಎಂದು ಎನ್. ಶಶಿಕುಮಾರ್‌ ತಿಳಿಸಿದ್ದಾರೆ.(ANI)
ಮಂಗಳೂರು ಆಟೋರಿಕ್ಷಾ ಬಾಂಬ್ ಸ್ಫೋಟದ ಆರೋಪಿ ಶಾರೀಕ್‌, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶಾರೀಕ್‌ ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
(5 / 5)
ಮಂಗಳೂರು ಆಟೋರಿಕ್ಷಾ ಬಾಂಬ್ ಸ್ಫೋಟದ ಆರೋಪಿ ಶಾರೀಕ್‌, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶಾರೀಕ್‌ ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.(ANI)

    ಹಂಚಿಕೊಳ್ಳಲು ಲೇಖನಗಳು