logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Karnataka Election: 14 ಕ್ಷೇತ್ರಗಳಲ್ಲಿ ಕಣದಲ್ಲಿದ್ದಾರೆ ಅಪ್ಪ ಮಕ್ಕಳು; ನಾಳೆ ಒಟ್ಟಿಗೆ ರಿಸಲ್ಟ್, ಇಲ್ಲಿವೆ ಅವರ ಫೋಟೋಸ್​

Karnataka Election: 14 ಕ್ಷೇತ್ರಗಳಲ್ಲಿ ಕಣದಲ್ಲಿದ್ದಾರೆ ಅಪ್ಪ ಮಕ್ಕಳು; ನಾಳೆ ಒಟ್ಟಿಗೆ ರಿಸಲ್ಟ್, ಇಲ್ಲಿವೆ ಅವರ ಫೋಟೋಸ್​

May 12, 2023 09:41 PM IST

Father and Children candidates: ಇಡೀ ದೇಶದ ಚಿತ್ತ ಕರ್ನಾಟಕ ವಿಧಾನಸಭೆ ಚುನಾವಣೆಯತ್ತ ಇದೆ. ನಾಳೆ ( ಮೇ 13) ಫಲಿತಾಂಶ ಪ್ರಕಟವಾಗುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಜಿದ್ದಾಜಿದ್ದಿ ಏರ್ಪಟ್ಟಿದೆ. ಈ ಬಾರಿ ಚುನಾವಣೆಯ ಮತ್ತೊಂದು ವಿಶೇಷವೇನೆಂದರೆ 14 ಕ್ಷೇತ್ರಗಳಲ್ಲಿ ಅಪ್ಪ-ಮಕ್ಕಳು ಕಣದಲ್ಲಿದ್ದಾರೆ. ಯಾರಿಗೆ ಸಿಹಿ-ಯಾರಿಗೆ ಕಹಿ ಎಂಬುದು ನಾಳೆ ತಿಳಿಯಲಿದೆ.

  • Father and Children candidates: ಇಡೀ ದೇಶದ ಚಿತ್ತ ಕರ್ನಾಟಕ ವಿಧಾನಸಭೆ ಚುನಾವಣೆಯತ್ತ ಇದೆ. ನಾಳೆ ( ಮೇ 13) ಫಲಿತಾಂಶ ಪ್ರಕಟವಾಗುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಜಿದ್ದಾಜಿದ್ದಿ ಏರ್ಪಟ್ಟಿದೆ. ಈ ಬಾರಿ ಚುನಾವಣೆಯ ಮತ್ತೊಂದು ವಿಶೇಷವೇನೆಂದರೆ 14 ಕ್ಷೇತ್ರಗಳಲ್ಲಿ ಅಪ್ಪ-ಮಕ್ಕಳು ಕಣದಲ್ಲಿದ್ದಾರೆ. ಯಾರಿಗೆ ಸಿಹಿ-ಯಾರಿಗೆ ಕಹಿ ಎಂಬುದು ನಾಳೆ ತಿಳಿಯಲಿದೆ.
ಜೆಡಿಎಸ್​ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್​ ಡಿ​ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದ ಹಾಗೂ ಅವರ ಪುತ್ರ ನಿಖಿಲ್​ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧಿಸಿದ್ದಾರೆ. 
(1 / 8)

ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕಿ ರೂಪಾ ಕಲಾ ಶಶಿಧರ್ ಅವರು ಸ್ಪರ್ಧಿಸುತ್ತಿದ್ದರೆ, ಅವರ ತಂದೆ ಕೆ.ಎಚ್‌.ಮುನಿಯಪ್ಪ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರದಿಂದ ಕಣಕ್ಕೆ ಧುಮುಕಿದ್ದಾರೆ. 
(2 / 8)

ಜಿ.ಟಿ.ದೇವೇಗೌಡ ಅವರು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿದ್ದರೆ, ಅವರ ಮಗ ಹರೀಶ್‌ಗೌಡ ಜಿ.ಡಿ ಅವರು ಹುಣಸೂರು ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. 
(3 / 8)

ದಾವಣಗೆರೆ ದಕ್ಷಿಣದಿಂದ ಕಾಂಗ್ರೆಸ್ ಹಿರಿಯ ಮುತ್ಸದ್ಧಿ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರದಿಂದ ಅವರ ಪುತ್ರ ಎಸ್‌.ಎಸ್‌. ಮಲ್ಲಿಕಾರ್ಜುನ್ ಅಖಾಡಕ್ಕೆ ಇಳಿದಿದ್ದಾರೆ. 
(4 / 8)

ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದಿಂದ ಅವರ ಪುತ್ರಿ ಸೌಮ್ಯ ರೆಡ್ಡಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದಾರೆ. 
(5 / 8)

ಮಡಿಕೇರಿಯಲ್ಲಿ ಕಾಂಗ್ರೆಸ್​​ನಿಂದ ಮಂಥರ್‌ಗೌಡ ಕಣದಲ್ಲಿದ್ದು, ಅವರ ತಂದೆ ಎ.ಮಂಜು ಅವರು ಜೆಡಿಎಸ್​ನಿಂದ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಅಖಾಡಕ್ಕೆ ಇಳಿದಿದ್ದಾರೆ. 
(6 / 8)

ಕಾಂಗ್ರೆಸ್‌ ಹಿರಿಯ ನಾಯಕ ಎಂ.ಕೃಷ್ಣಪ್ಪ ಅವರು ವಿಜಯನಗರ ಕ್ಷೇತ್ರದಿಂದ ಹಾಗೂ ಅವರ ಪುತ್ರ ಪ್ರಿಯಾಕೃಷ್ಣ ಅವರು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.  
(7 / 8)

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಣದಲ್ಲಿರುವ ಅಪ್ಪ-ಮಕ್ಕಳು
(8 / 8)
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಣದಲ್ಲಿರುವ ಅಪ್ಪ-ಮಕ್ಕಳು

    ಹಂಚಿಕೊಳ್ಳಲು ಲೇಖನಗಳು